ಕಾವ್ಯಯಾನ

ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ ದೈವ ಬುವಿಗೆ ಕಳಿಸಿದ ಕೊಡುಗೆ ನೀನು ಮಗುವೇ… ಎಲ್ಲ ಚಿಂತೆಗಳ ಇಲ್ಲವಾಗಿಸುವ ಮೋಡಿಯಿದೆ ನಿನ್ನ ನಗುವಿನಲ್ಲಿ ಕಾಲದ ಪರಿವೆಯಿಲ್ಲದೇ ಕಾದೆ ಬರಿದಾದ ಮಡಿಲು ತುಂಬಲೆಂದು ಎಲ್ಲೆಡೆಯೂ ಮುದ ಹರಡುವ ಮುಗ್ಧತೆಯಿದೆ ನಿನ್ನ ನಗುವಿನಲ್ಲಿ ಹೆಣ್ತನಕೆ ಹಿರಿಮೆ ತಂದ ತಾಯ್ತನದ ಭಾಗ್ಯ ನನ್ನದಾಗಿದೆ ಇಂದು ಅಶಾಂತಿಯ ತೊಡೆವ ಶಾಂತಿಯ ನೆಲೆಯಿದೆ ನಿನ್ನ ನಗುವಿನಲ್ಲಿ ಕಿವಿಗಳ ತಣಿಸುತಿವೆ ನಿನ್ನ … Continue reading ಕಾವ್ಯಯಾನ