ಅನುವಾದ

ಮೂರು ಅನುವಾದಿತ ಗಜಲುಗಳು. ಉತ್ತಮ ಯಲಿಗಾರ ಗಜಲ್-ಒಂದು ಹೆಜ್ಜೆ ಶಬ್ದವೊಂದು ಕೇಳಿಸಿದರೆ ಅನಿಸುವದು ನೀನೆಂದು ನೆರಳೊಂದು ಬಳಿ ಸುಳಿದರೆ ಅನಿಸುವದು ನೀನೆಂದು ಹೂದೋಟದಲಿ ರೆಂಬೆಯೊಂದನು ಮುಟ್ಟಲು ನಾಚಿ ನಲಿದಾಡಿದರೆ ಅನಿಸುವದು ನೀನೆಂದು ಚಂದನದಿ ಸುವಾಸಿತ ಮದಭರಿತ ಗಾಳಿಯು ಅನಂದದಿ ಮೈಸೋಕಲು ಅನಿಸುವದು ನೀನೆಂದು ತಾರೆಗಳ ಮಿನುಗುವ ಹೊದಿಕೆ ಹೊದ್ದುಕೊಂಡು ನದಿಯೊಂದು ಹರಿದಾಡಿದರೆ ಅನಿಸುವದು ನೀನೆಂದು ಸರಿರಾತ್ರಿಯಲಿ ಬಂದು ಒಂದು ಹೊನ್ನ ರಶ್ಮಿ ನನ್ನೊಂದಿಗೆ ಉರುಳಾಡಿದರೆ ಅನಿಸುವದು ನೀನೆಂದು. ಮೂಲ: ಜಾನ್ ನಿಸ್ಸಾರ್ ಅಖತರ್ (ಉರ್ದು) ============================== ಗಜಲ್ … Continue reading ಅನುವಾದ