ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ ನರಳಿ ಅನಾಮತ್ತಾಗಿ ಹರಡಿಬೆದರುಬೊಂಬೆಗಳಾಗಿ ನಿಲ್ಲುತ್ತವೆ ಭಾವಗಳು !!ದಿಕ್ಕೆಟ್ಟು, ಸೋತು ಹೆಜ್ಜೆ ಮೂಡಿಸಲಾಗದ ಕೊರಗು ತುಂಬಿ ನಿಂತಈ ಭಾವಗಳ ತಬ್ಬಿದರೆಬರೀ ನಿಟ್ಟುಸಿರ ಮೇಳಗಳು !!ಧೂಳು ಹೊದ್ದು ಮಸುಕಾದ ಗೋಡೆಗಂಟಿದ ನಮ್ಮೀವಿವಾಹದ ಜೋಡಿ ಪಟದಿಂದ ಒಳಗೊಳಗೇ ನಕ್ಕು ಸೂಸುವ ಹಳವಂಡಗಳು!ಜೇಡ ನೇಯ್ದ ಬಲೆಯೊಳಗೆ ಬಿದ್ದು ಹೊರಳಾಡುವ ಪಟದ ಬಗ್ಗೆ ನಮಗೇಕೆ ಚಿಂತೆ?ಬದುಕೇ ಚೌಕಟ್ಟು ಮೀರಿ ಮೂರಾಬಟ್ಟೆಯಾದ ಮೇಲೆ ಇನ್ನೇನಂತೆ … Continue reading ವಾರದ ಕವಿತೆ