ಗೆರೆಬರೆ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಕಳೆದ ಸಂಚಿಕೆಯಿಂದ…       ಅಕ್ಕ ಕೂಡಲ ಸಂಗಮವನ್ನು ಪ್ರವೇಶಿಸುತ್ತಲೇ ಮತ್ತೊಂದು ಅಗ್ನಿ ಪರೀಕ್ಷೆ ಅವಳಿಗೆ ಕಾದಿತ್ತು. ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಯಾರೇ ಬರಲಿ ಪರೀಕ್ಷಿಸದೇ ಅನುಮತಿಯನ್ನು ಕೊಡುತ್ತಿರಲಿಲ್ಲ. ಶರಣೆ ಅಕ್ಕಮಹಾದೇವಿಯನ್ನು ಕಂಡು ದಿಗ್ಭ್ರಮೆಗೊಂಡ ಅಲ್ಲಮ ಅವಳನ್ನು ಪರೀಕ್ಷಿಸಲು ಮುಂದಾಗಿ                              “ಸತಿ ನೀನು ಇತ್ತಲೇಕೆ ಬಂದೆಯವ್ವಾ ಸತಿಯೆಂದರೆ ಮುನಿವರು   ನಮ್ಮ ಶರಣರು ನಿನ್ನ ಪತಿಯ ಕುರುಹು ಹೇಳಿದರೆ ಬಂದು ಕುಳ್ಳಿರು     ಇಲ್ಲದಿದ್ದರೆ ತೊಲಗು ತಾಯಿ” ಅಕ್ಕ; “ಹರನೇ ನೀನೆನಗೆ ಗಂಡನಾಗಬೇಕೆಂದು […]

ಕವಿತೆ ಕಾರ್ನರ್

ಮತ್ತೆಂದೂ ಮಂಡಿಗೆ ಮೆಲ್ಲಲಿಲ್ಲ ಕತ್ತಲಾಗಲೆಂದೆ ಬೆಳಗಾಗುವುದು ಆರಲೆಂದೇ ದೀಪ ಉರಿಯುವುದು ಬಾಡಲೆಂದೇ ಹೂವು ಅರಳುವುದು ಕಮರಲೆಂದೆ ಕನಸು ಹುಟ್ಟುವುದು ಗೊತ್ತಿದ್ದರೂ  ಹಣತೆ ಹಚ್ಚಿಟ್ಟಳು ಬರಲಿರುವ ಸಖನಿಗಾಗಿ. ಮಲ್ಲೆ ಮೊಗ್ಗ ಮಾಲೆ ಹೆರಳಿಗೆ ಮುಡಿದು ನಿಂತಳು ಬರಲಿರುವ ಸಖನ ಮೂಗಿಗೆ ಘಮಿಸಲೆಂದು ಬರಡು ಎದೆಗೆ ವಸಂತನ ಕನವರಿಸಿ ಹೊಸ ಕನಸು ಚಿಗುರಿಸಿಕೊಂಡಳು ಬರುವ ಸಖನಿಗೊಂದಿಗೆ ಹಂಚಿಕೊಳ್ಳಲೆಂದು ಮುಸ್ಸಂಜೆಗೆ ಬಂದ ಸಖ ಹಚ್ಚಿಟ್ಟ ಹಣತೆ ಆರಿಸಿದ ಮಲ್ಲೆ ಮಾಲೆಯ ಹೊಸಕಿಹಾಕಿದ ಅದಾಗತಾನೆ ಚಿಗುರೊಡೆದಿದ್ದ ಕನಸುಗಳ ಚಿಗುರ  ಚಿವುಟಿ ಹಸಿಯೆದೆಯ ಮತ್ತೆ ಬರಡಾಗಿಸಿ ನಡೆದ ಮತ್ತೊಂದು ಎದೆಬಯಲ ಅರಸಿ ಅದೇ ಕಡೆ ಮತ್ತವಳೆಂದು ಹಣತೆ ಹಚ್ಚಿಡಲಿಲ್ಲ ಗಿಡದಿಂದ ಮಲ್ಲಿಗೆಯ ಬಿಡಿಸಿ ತರಲಿಲ್ಲ ಒಣಗಿದೆದೆಗೆ ನೀರು ಹಾಯಿಸಲಿಲ್ಲ ಕನಸಿರಲಿ ಮನಸಲ್ಲೂ ಮಂಡಿಗೆ ತಿನ್ನಲಿಲ್ಲ

ಕಾವ್ಯಯಾನ

ನಾನು ನಿನ್ನಾತ್ಮದ ಗುರುತಾಗಿದ್ದೆ ಬಿದಲೋಟಿ ರಂಗನಾಥ್ ಹೌದು ನಾನು ನಿನ್ನಾತ್ಮದ ಗುರುತಾಗಿದ್ದೆ ಆ ನಿನ್ನ ನೋಡುವ ನೋಟದ ಬಿಸುಪಿಗೆ ಚಳಿಯಾಗಿದ್ದೆ ಮಳೆಯಾಗಿದ್ದೆ ಮುಗಿಲೇ ಆಗಿದ್ದೆ ನಿನ್ನ ಮೈಯೊಳಗಿನ ಬಿಸಿಗೆ ಬೆರೆತ ಜೀವವಾಗಿದ್ದೆ ನೀನು ನಡೆದ ದಾರಿಯ ಮೇಲಿನ ಹೆಜ್ಜೆಯನು ಮುಟ್ಟಿ ಬೆಳಕಿನ ಕಿರಣಗಳ ಮುಡಿಸಿದ್ದೆ ಉಳಿದ ಮಾತುಗಳ ನಿಟ್ಟುಸಿರ ಮೌನಕೆ ಕಾಲದ ಸವಾರ ಕುಂಟಾಗಿ ಬಿದ್ದಿದ್ದ ಎದೆಯೊಳಗಿನ ಗಿಲಕಿಗೆ ಕೀ ಕೊಡುವ ನಿನ್ನ ಹೃದಯದ ಕೋಮಲ ಕೈಗಳು ನನ್ನಿಂದ ಜಾರಿಹೋದಾಗಿನ ಶೂನ್ಯತೆಯಲಿ ಕತ್ತಲ ಮನೆಯಲಿ ದಿನಗಳ ಎಣಿಸುತ್ತ […]

ಕಾಡುವ ಹಾಡು

ಮೈಸೂರು ದಸರಾ ಚಿತ್ರ-ಕರುಳಿನ ಕರೆ ಗೀತರಚನೆ- ಆರ್.ಎನ್.ಜಯಗೋಪಾಲ್ ಸಂಗೀತ-ಎಂ.ರಂಗರಾವ್ ಗಾಯಕರು-ಪಿ.ಬಿ.ಶ್ರೀನಿವಾಸ್ ಸುಜಾತ ರವೀಶ್ ಕಾಡುವ ಹಾಡು ಮೈಸೂರು ದಸರಾ ಮೈಸೂರು ಎಂದರೆ ದಸರಾ ಜಂಬೂ ಸವಾರಿ ಮೊದಲು ನೆನಪು ಬರುವುದು. ನಂತರ ಮೈಸೂರು ಪಾಕ್ ಮೈಸೂರು ಮಲ್ಲಿಗೆ ಮೈಸೂರು ರೇಷ್ಮೆ ಸೀರೆ ಮೈಸೂರು ಚಿಗುರು ವೀಳ್ಯದೆಲೆ ಹಾಗೂ ಶ್ರೀಗಂಧದ ಉತ್ಪನ್ನಗಳು ಮೈಸೂರು ವೀರನಗೆರೆ ಬದನೆಕಾಯಿ. ಅಂದಿನಿಂದ ಇಂದಿನವರೆಗೂ ಚುನಾವಣೆಯಲ್ಲಿ ಕೈಗೆ ಹಚ್ಚುವ ಮಸಿ ತಯಾರಾಗುವುದು ಮೈಸೂರಿನ ಬಣ್ಣ ಮತ್ತು ಅರಗು ಕಾರ್ಖಾನೆಯಲ್ಲೇ. ರಾಜ್ಯದ ರಾಜಧಾನಿ ಬೆಂಗಳೂರು ಆದರೂ […]

ಹೊತ್ತಾರೆ

ಅಮ್ಮನೂರಿನನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಹೋರಿ ಕಣ್ಣು ಮೊನ್ನೆ ರಾತ್ರಿ ಊಟ ಮುಗಿಸಿ ಮಲಗಿದ ನಿದ್ರೆ ಹತ್ತಿದ ಸ್ವಲ್ಪ ಹೊತ್ತಿನಲ್ಲೇ ಯಾಕೋ ಇದ್ದಕ್ಕಿದ್ದ ಹಾಗೆ ಕಲ್ಹಳ್ಳಿ ಎತ್ತು ಎದುರಲ್ಲಿ ಬಂದು ನಿಂತಂತೆ ಇತ್ತು!  ಸುತ್ತ ನೋಡಿದೆ, ಯಾರಿದಾರೆ ಜೊತೆಯಲ್ಲಿ,  ಬರೀ ಕಲ್ಹಳ್ಳಿ ಎತ್ತು… ಮನೆ ಎತ್ತು ಯಾವ್ ಕಡೆ ಹೋಯ್ತು? ಮತ್ತೆ ಇನ್ನೊಂದು ಸಲ ಪರಿಶೀಲಿಸಲೇ, ಎಲ್ಲಿದಿವಿ, ಕಲ್ಹಳ್ಳಿ ಎತ್ತು ಮತ್ತು ನಾನು ಇಬ್ಬರೇ. ಯಾರಿಗೆ ಹೇಳೋದು ಈಗ, ಗಾಬರಿಯಾಯ್ತು. ಆ ಗಾಬರಿಗೆ ಕಾರಣ,  ಮನೆ ಎತ್ತು ಜೊತೆಯಲ್ಲಿದ್ದರೆ ಮಾತ್ರ  ಕಲ್ಹಳ್ಳಿ […]

ಪುಸ್ತಕ ಸಂಗಾತಿ

ನಾನು ಕಸ್ತೂರ್ ಇತ್ತೀಚೆಗೆ ಲೋಕಾರ್ಪಣೆಗೊಂಡ ಡಾ. ಎಚ್.ಎಸ್.ಅನುಪಮಾ ಕೃತಿ. ಲಡಾಯಿ ಪ್ರಕಾಶನದಿಂದ ಪ್ರಕಟಿತ.. ಚಂದ್ರಪ್ರಭಾ ಬಿ. ಒಂದು ಒಳನೋಟು ಭಿನ್ನ ಆಲೋಚನೆ, ಭಿನ್ನ ನಿಲುವಿನ ಡಾ. ಎಚ್.ಎಸ್.ಅನುಪಮಾ ಏನು ಮಾಡಿದರೂ ಅದು ವಿಭಿನ್ನವೇ ಆಗಿರುತ್ತದೆ ಎಂಬ ಮಾತಿಗೆ ಕಸ್ತೂರ್ ಜೀವನ ಕಥನ ಒಂದು ಉದಾಹರಣೆ. ಮೈಸೂರಿನಲ್ಲಿ ಪುಸ್ತಕ ಲೋಕಾರ್ಪಣೆ ಮಾಡುತ್ತ ಮಮತಾ ಸಾಗರ್ ಹೇಳಿದ ಹಾಗೆ ಅನುಪಮಾ ಸ್ವತಃ ನಿವೇದಿಸಿದ ಪ್ರಸ್ತಾವನೆ ರೂಪದ ಬರಹವನ್ನು ಓದಿಯೇ ಪ್ರತಿ ಓದುಗ ಮುಂದೆ ಸಾಗಬೇಕು. ಕೃತಿ ರಚನೆಯ ಹಿನ್ನೆಲೆಯ ಜೊತೆಗೇ […]

ಅಭಿನಂದನೆ

ಅಕ್ಕಿತಂ ಅಚ್ಯುತನ್ ನಂಬೂದಿರಿ ಮಲಯಾಳಂ ಕವಿ ಮಲಯಾಳಂ ಕವಿ ಅಕ್ಕಿತಂ ಅಚ್ಯುತನ್ ನಂಬೂದರಿಯವರಿಗೆ 2019ರ ಜ್ಞಾನ ಪೀಠ ಪ್ರಶಸ್ತಿ

ಲೇಖನ

ಆಧ್ಯಾತ್ಮಕ್ಕೂ, ಅರ್ಥಶಾಸ್ತ್ರಕ್ಕೂ ಬಿಡಲಾರದ ನಂಟು….. ಗಣೇಶ ಭಟ್ ಶಿರಸಿ . ಆಧ್ಯಾತ್ಮದ ವಿಚಾರಗಳನ್ನು ಚರ್ಚಿಸುವಾಗ ದೈನಂದಿನ ಬದುಕಿನ ವಿಚಾರಗಳ ಕುರಿತು ಹೇಳುವದು, ಅರ್ಥಶಾಸ್ತ್ರದೊಡನೆ ಸಂಬಂಧ ಜೋಡಿಸುವದು ಸರಿಯಲ್ಲವೆಂದು ಹಲವರು ಅಭಿಪ್ರಾಯ ಪಡುತ್ತಾರೆ. ಭಾರತದ ದರ್ಶನಶಾಸ್ತ್ರದ, ಬದುಕಿನ ರೀತಿನೀತಿಗಳ ರಕ್ಷಣೆಯ ಗುತ್ತಿಗೆ ಪಡೆದವರಂತೆ ವರ್ತಿಸುವ ಹಲವರು ಆಧ್ಯಾತ್ಮಕ್ಕೂ , ಅರ್ಥಶಾಸ್ತ್ರಕ್ಕೂ ಸಂಬಂಧವೇ ಇಲ್ಲವೆಂದು ಬೊಬ್ಬೆ ಹೊಡೆಯುತ್ತಾರೆ. ಅವರ ಅರಿವಿನ ವ್ಯಾಪ್ತಿಯ ಸೀಮಿತತೆಯೇ ಇದಕ್ಕೆ ಕಾರಣ. ಮಾನವನ ಬದುಕಿನ ಗುರಿಯನ್ನು ಧರ್ಮ, ಅರ್ಥ, ಕಾಮ , ಮೋಕ್ಷಗಳೆಂಬ ಚತುರ್ವರ್ಗಗಳಾಗಿ ಗುರ್ತಿಸುತ್ತಾರೆ. […]

ಕಾವ್ಯಯಾನ

ನಾಲ್ಕಾರು ಮಳೆ ಹನಿಗಳು: ದೇವು ಮಾಕೊಂಡ ಸಿಂದ್ಗಿ ನನಗೆ ನಾನೇ ಬಂಧಿಯಾಗಿರುವೆ ಎರಡು ಕಳ್ಳ ಹುದುಲಗಳ ನಡುವೆ ಸಿಲುಕಿ ಬೇರೆರಡರ ಇಕ್ಕಟಿನಲಿ ಬೆಳೆದ ಈಚಲು ಸಸಿಯ ಹಾಗೆ ವಿಶಾಲ ಭೂಮಿ ಬಾನುಗಳ ನಡುವೆ ತಳಕು ಹಾಕಿಕೊಂಡಿರುವೆ ಪರೀಧಿಯೊಳಗಿನ ಕೇಂದ್ರದ ಹಾಗೆ ಬೆಳಗು ಬೈಗು ಪ್ರೀತಿ ಇಮ್ಮಡಿಗೊಳ್ಳುತ್ತದೆ ಸೂರ್ಯ ಬಿಸಲ ಪ್ರಖರ ಶಾಖಗೆ ಕಾಮ ಕಸ್ತೂರಿ ಅರಳಿದ ಹಾಗೆ ಎಲ್ಲೋ ಎಸೆದ ಬೀಜ ಮೊಳಕೆಯೊಡೆದು ನನ್ನೊಳಗೆ ಹೂವು ಬಿಡುತ್ತಿದೆ ತಿಂಗಳ ಚಂದಿರ ಮೂಡಿದ ಹಾಗೆ ಇರುಳ ರಾತ್ರಿ ಪುಟಿದೇಳುತ್ತಿದೆ […]

Back To Top