ಇಂದಿರಾ ಕೆ ಅವರ ಗಜಲ್
ಕಾವ್ಯ ಸಂಗಾತಿ ಇಂದಿರಾ ಕೆ ಗಜಲ್ ದೇಶ – ದೇಶ ನಡುವೆ ದ್ವೇಷ ಜ್ವಾಲೆ ಆರಿಸುವವರು ಯಾರಿಲ್ಲಿಮುಗಿಲು ಮುಟ್ಟಿದ ಅಳಲು ಆಕ್ರಂದನ ಆಲಿಸುವವರು ಯಾರಿಲ್ಲಿ ಯುದ್ಧ ರಣಾರ್ಭಟಕೆ ಬೆಚ್ಚಿ ಬಿದ್ದಿದೆ ಮನುಕುಲವುಜಗದಗಲ ಹರಡಿದ ಅಶಾಂತಿಯ ಅಳಿಸುವವರು ಯಾರಿಲ್ಲಿ ಬಲಿಷ್ಠತೆ ಮೆರೆದು ದೀನರಿಲ್ಲಿ ಬಲಿಪಶುಗಳಾದರುರಕ್ತ- ಸಿಕ್ತದಲಿ ಸಿಕ್ಕ ಹೆಣಗಳ ಎಣಿಸುವವರು ಯಾರಿಲ್ಲಿ ಅಸೂಯೆ ಅಹಂನ ಪ್ರದರ್ಶನ ಕರಾಮತ್ತೋಅಮಾಯಕರ ಜೀವ ಬೆಲೆ ತಿಳಿಸುವವರು ಯಾರಿಲ್ಲಿ ಕ್ರಾಂತಿ ಕಹಳೆ ಹೊತ್ತಿಸಿ ಕ್ಷಿಪಣಿಗಳ ಮಳೆಗೈಯುತಿವೆಹಲ್ಲೋಲ- ಕಲ್ಲೋಲ ಜಗತ್ತು ದಂಡಿಸುವವರು ಯಾರಿಲ್ಲಿ ಭಯದ ಭೀತಿ ಆವರಿಸಿದೆ ಅಳಿದುಳಿದ ಮನಗಳಲಿ ವಿರಾಮವಿಲ್ಲದೆ ವಿರಾಜಿಸುತಿದೆ ವಿನಾಶ ಕದನ ತ್ಯಜಿಸುವವರು ಯಾರಿಲ್ಲಿ ವಿಶ್ವದಾದ್ಯಂತ ಶಾಂತಿ ಸ್ನೇಹ – ಭಾತೃತ್ವ ನೆಲೆಸಲೆಂದು ಪ್ರಾರ್ಥಿಸಿಬೇಕಿದೆ ಇಂದಿರೆದಾಳಿ – ಪ್ರತಿದಾಳಿಗೆ ನಲುಗಿದವರ ರಕ್ಷಿಸುವವರು ಯಾರಿಲ್ಲಿ ಇಂದಿರಾ ಕೆ
ಇಂದಿರಾ ಕೆ ಅವರ ಗಜಲ್ Read Post »









