ಗಜಲ್
ಅವನೊಲವೇ ಉಚ್ಛ್ವಾಸ ನಿಶ್ವಾಸಕೆ ಪ್ರಾಣವಾಯುವಾಗಿತ್ತು
ಪ್ರಶ್ನೆಗಳ ಬಲೆಯಲ್ಲಿ ಉಸಿರುಗಟ್ಟಿಸಿದ ಕಾರಣ ತಿಳಿಯಲಿಲ್ಲ
ಕಾಫಿಯಾನ ಗಝಲ್ ಜಬೀವುಲ್ಲಾ ಎಂ. ಅಸದ್ ಇರುಳಲ್ಲಿ ಹಚ್ಚಿಟ್ಟ ದೀಪಗಳ ಬೆಳಗು ಹಗಲಲ್ಲಿ ಮಾಯವಾಗಿದೆಹೃದಯದಲ್ಲಿ ಹುದುಗಿದ್ದ ಪ್ರೇಮದ ಬೀಜ ಈಗ ಮೊಳಕೆಯಾಗಿದೆ ಕಾಣದ ಭರವಸೆಯ ಕರಪಿಡಿದು ನಡೆದಿರುವೆ ಸುಮ್ಮನೆ ಎಲ್ಲಿಗೋನೆನಪಿನಾಗಸ ಗುಡುಗಿ ಧೋಗುಟ್ಟಿ ಸುರಿದು ಮನಸ್ಸು ಹಸಿಯಾಗಿದೆ ಹೃದಯದ ಹಾದಿಯಲ್ಲಿದೆ ನಿನ್ನ ಹೆಜ್ಜೆ ಗುರುತುಗಳ ಕಾಡುವ ಸದ್ದುಮದ್ದಿಲ್ಲದ ಮನದ ನೋವಿಗೆ ಕಣ್ಣ ಕಂಬನಿ ಸಾಂತ್ವನವಾಗಿದೆ ನಶ್ವರದ ಬಾಳಿದು ಸಾರ್ಥಕವಾಗಿಸಬೇಕು ಶಾಶ್ವತೆಯ ಅರಸದಿರುಮುಂಜಾವಿಗೆ ಅರಳಿ ಘಮಘಮಿಸಿದ ಸುಮ ಸಂಜೆಗೆ ಸಾವಾಗಿದೆ ಕಾಣದ ಕಿಚ್ಚು ಹುಚ್ಚೆದ್ದು ಹಬ್ಬಿ ಸುಡುತ್ತಿಹುದು ಸಂಬಂಧಗಳನ್ನುಒಡಲ ಕಾವು ಜೀವದ ಹಾಡಾಗಿ ಕಲ್ಲು ಕರಗುವ ಸಮಯವಾಗಿದೆ ಚಿಗುರುವ ಲತೆಗೆ ಬಳಸಿ ಹಬ್ಬಲು ಮರವೊಂದು ಅಸರೆ ಬೇಕಿದೆಯಮುನಲೆಗಳ ಮೇಲೆ ನಾವೆಯೊಂದು ತೇಲುವ ಶವವಾಗಿದೆ ನನ್ನ ನಿನ್ನ ನಡುವಿನ ಮೌನ ಅಲಾಪಗೊಂಡು ಕಡಲಾಗಿ ಮೊರೆಯುತ್ತಿದೆಅಸದ್ ಹೆಪ್ಪುಗಟ್ಟಿದ ನೋವು ತಾಜ್ ಮಹಾಲಿನ ದಟ್ಟ ನೆರಳಾಗಿದೆ
ಗಜಲ್ ವಾಯ್.ಜೆ.ಮಹಿಬೂಬ ಹೃದಯದಲಿ ಪ್ರೀತಿ ಅಂಕುರಿಸಿದೆ ಸಸಿಯಾಗಿಸಲು ಬಾ ಸಖಿಹದವಾಗಿ ಮನಬೆರೆಸಿ ಉದಯರಾಗದಿ ನೀರೆರೆಯಲು ಬಾಸಖಿ ಅನುಮಾನ ಸಂಶಯದ ಶೆಕೆ ಬಡಿಯದಿರಲಿ ಎಲ್ಲಿಯೂ ಇದಕೆನಂಬುಗೆ ವಿಶ್ವಾಸಗಳ ರೆಕ್ಕೆ-ಪುಕ್ಕಗಳಾಗಿ ವಿಹರಿಸಲು ಬಾ ಸಖಿ ಅನುವು-ತನುವುಗಳೆ ದಿನಮಂತ್ರಗಳಾಗಲಿ ನಮ್ಮಿಬ್ಬರ ಬಾಳ್ಗೆನೀನಿರುವಾಗ ಹಂಗ್ಯಾತರದು ಸತ್ಕಾಲಕೆ ಹಿತವಾಗಲು ಬಾ ಸಖಿ ಹರಾಮಿನ ಅರಮನೆ ತೊರೆದುಬಿಡು,ಕಂಬಳಿ-ದಿನದಂಬಲಿ ಸಾಕುತಮಕೆ ಬೆಳಕು-ಅಹಂಗೆ ವಿರಾಮ,ನಾನು ಸಂಭ್ರಮಿಸಲು ಬಾಸಖಿ ‘ಅಜಾದ್’ಬಯಸುವುದೇನಿದೆ,ಬಯಕೆಯೂ ಅರಾಮಿನಲ್ಲಿದೆಸತ್ಕರಿಸಿದವನೇ ಜಗದೊಡೆಯನಿಗೆ ಕರಮುಗಿಯಲು ಬಾಸಖಿ ***********************************************************
ಗಜಲ್ ಪ್ರಭಾವತಿ ಎಸ್ ದೇಸಾಯಿ ಮಲ್ಲಿಗೆಯಿಲ್ಲ ಮುಡಿಯಲಿ ಘಮವಾದರೂ ಇರುಳಿಗೆ ಇರಲಿಶಶಿಯಿಲ್ಲ ನಭದಲಿ ನಕ್ಷತ್ರ ವಾದರೂ ಇರುಳಿಗೆ ಇರಲಿ ಬತ್ತಿ ಎಣ್ಣೆ ಕುಡಿದು ಖುಷಿಯಲಿ ಹರಡಿತು ಬೆಳಕು ಕೋಣೆಯಲಿಅಮಲೇರಲು ಪ್ರೀತಿಯ ಮಧುವಾದರೂ ಇರುಳಿಗೆ ಇರಲಿ ಮೌನ ಚೂರಿಯಿಂದ ಇರಿದು ಗಾಯಗೊಳಿಸಿದೆ ಒಲಿದ ಹೃದಯಎದೆಯ ಉರಿ ಆರಲು ಲಾಲಿ ಹಾಡಾದರೂ ಇರುಳಿಗೆ ಇರಲಿ ಬಯಕೆಯ ಮೃಗಜಲದ ಬೆನ್ನಹಿಂದೆ ಓಡಿ ಓಡಿ ಬಳಲಿದೆಅನುರಾಗದ ಬದುಕಾಗಲು ಕನಸಾದರೂ ಇರುಳಿಗೆ ಇರಲಿ ಏಕಾಂಗಿಯ ಬೇಸರದ ಉಸಿರು ಎಣಿಸುತಿದೆ ತಾರೆಗಳನೊಂದ ಜೀವಿಗೆ ಸುಖದ “ಪ್ರಭೆ” ಯಾದರೂ ಇರುಳಿಗೆ ಇರಲಿ ******************************************************
ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************
ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ *******************************************
ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ ಹೊಂಬೆಳಕ ಸೂರ್ಯನೂ ಕೆಂಡದಂತೆ ಸುಡುವನು ನಿಷ್ಕರುಣಿಯಾಗಿಕುದಿಎಸರಿನಂತೆ ಮನಸು ಕುದಿಯುತಿದೆ ತೊರೆದು ಹೋಗದಿರು ನನ್ನ ಭಾವ ಸಂವಹನಕೆ ಬರಿಯ ಕಂಗಳೇ ಸಾಕು ಮಾತಿನ ಹಂಗಿಲ್ಲ ನನಗೆಎದೆಗೂಡಲಿ ಪ್ರೀತಿದೀಪವಿನ್ನೂ ಬೆಳಗುತಿದೆ ತೊರೆದು ಹೋಗದಿರು ನನ್ನ ಸುಖವೆಲ್ಲಿದೆ ಒಂಟಿ ಬಾಳಲ್ಲಿ ನಿನ್ನ ಕೂಡಿ ಒಡನಾಡದ ಹೊರತು ?ಮಧುಪಾನಕೆ ಅಧರ ಹಂಬಲಿಸುತಿದೆ ತೊರೆದು ಹೋಗದಿರು ನನ್ನ ತನುವಿಂದು ಕೊರಡಾಗಿ ಬಾಡಿದೆ ಹಿತ ಸಂವೇದನೆಯ ಸ್ಪರ್ಶವಿರದೇಅಪ್ಪುಗೆಯ ಬಿಸುಪು ನೆನಪಾಗಿ ಕಾಡುತಿದೆ ತೊರೆದು ಹೋಗದಿರು ನನ್ನ ನನ್ನ ಮರೆತು ಬದುಕುವುದು ಬದುಕೇ ಅಲ್ಲವೆಂದು ಹಳಹಳಿಸಿದ್ದೆಜೀವ ಸಹಿಸಲಾಗದ ನೋವ ಸಹಿಸುತಿದೆ ತೊರೆದು ಹೋಗದಿರು ನನ್ನ ಬುವಿಯೊಂದು ಗೋಲ ಮರಳಲೇಬೇಕು ‘ಹೇಮ’ ಳೆಡೆಗೆ ಕೊನೆಗೊಮ್ಮೆಹೊಸಬದುಕು ನಮಗಾಗಿ ಕಾಯುತಿದೆ ತೊರೆದು ಹೋಗದಿರು ನನ್ನ ******************************
ಗಜಲ್ ರತ್ನರಾಯಮಲ್ಲ ಚಳಿಯ ನಿನ್ನಯ ಆಲಿಂಗವನ್ನು ಬಯಸುತಿದೆಒಂಟಿತನ ನಿನ್ನಯ ಜೊತೆಯನ್ನು ಬಯಸುತಿದೆ ಬದುಕಿನಲ್ಲಿ ಬಹು ದೂರ ಸಾಗಬೇಕಾಗಿದೆ ನಾನುಜೀವನವು ನಿನ್ನಯ ಸನಿಹವನ್ನು ಬಯಸುತಿದೆ ನನ್ನೆದೆಯ ಗೂಡು ಹಾಳುಬಿದ್ದ ಕೊಂಪೆಯಾಗಿದೆನನ್ನ ಹೃದಯವು ನಿನ್ನ ಬಡಿತವನ್ನು ಬಯಸುತಿದೆ ತಿಂದ ಅನ್ನ ರುಚಿಯೆನಿಸುತಿಲ್ಲ ಮುದ್ದು ಬಂಗಾರಿಜೀವವು ನಿನ್ನ ಪ್ರೀತಿಯ ಕೈತುತ್ತನ್ನು ಬಯಸುತಿದೆ ‘ಮಲ್ಲಿ’ಯ ಮೈ-ಮನವು ಮರೆತಿದೆ ಬದುಕುವುದನ್ನುಬರಡಾದ ಬಾಳು ನಿನ್ನ ಸಾಂಗತ್ಯವನ್ನು ಬಯಸುತಿದೆ
ಗಜಲ್ ಅಶೋಕ ಬಾಬು ಟೇಕಲ್. ನೀ ಮಾಡಿದ ಒಲವಿನ ಗಾಯ ಮಾಗಿಸಿತು ಈ ಮಧು ಬಟ್ಟಲುದೂರ ತೊರೆದ ಭಾವಗಳಿಗೆ ವಿದಾಯ ಹೇಳಿಸಿತು ಈ ಮಧು ಬಟ್ಟಲು ಕ್ಷಣ ಕ್ಷಣದ ರೋದನವನ್ನು ಸಂತೈಸಿ ಲಾಲಿಸಿ ಪಾಲಿಸಿದೆಪ್ರತಿ ದಿನವೂ ಮಮತೆಯ ಮಡಿಲಾಗಿ ಆರಾಧಿಸಿತು ಈ ಮಧು ಬಟ್ಟಲು ಬಾಂದಳದಿ ಕೆಂಪ್ಹರಡುವ ರವಿಯೂ ನಾಚಿ ನಿಬ್ಬೆರಗಾಗುತಿದ್ದಇಳಿಸಂಜೆಗೂ ರಮಿಸಿ ಅಭ್ಯಂಜನ ಮಾಡಿಸಿತು ಈ ಮಧು ಬಟ್ಟಲು ಸುಯ್ ಗುಡುವ ಗಾಳಿಯೂ ಸದ್ದಡಗಿ ಪಲ್ಲಂಗದಲಿ ಮಲಗಿದೆನಿನ್ನ ಭಾವ ಭಂಗಿಯ ಕ್ಷಣ ಹೊತ್ತು ಮರೆಸಿತು ಈ ಮಧು ಬಟ್ಟಲು ಜರಿವ ಜಗಕೂ ಅರಿವಿದೆ ಅಬಾಟೇ ನೊಂದ ಜೀವವೆಂದುಮೋಹದ ಮದರಂಗಿಯ ಶಪಿಸಿತು ಈ ಮಧು ಬಟ್ಟಲು ************************************
ಗಜಲ್ ಅರುಣಾ ನರೇಂದ್ರ ಮತ್ತೇರಿಸುವ ಮಧು ಇಂದು ನೆತ್ತರಿನ ಬಣ್ಣವಾಯಿತೇಕೆತುಟಿ ಸೋಕುವ ಮುಂಚೆ ಬಟ್ಟಲು ಉರುಳಿ ಹೋಯಿತೇಕೆ ಹೃದಯ ಒಡೆದು ಚೂರಾದರಾಗಲಿ ಮಧುಶಾಲೆ ಕೈ ಮಾಡಿ ಕರೆದಿದೆತುಂಬಿ ತುಳುಕುವ ಹೂಜಿ ಎದುರಿಗಿದೆ ಮುಖದ ನಗು ಮಾಯವಾಯಿತೇಕೆ ಯಾರೇನೇ ಅಡಿಕೊಳ್ಳಲಿ ಬಿಡು ನೋವು ಮರೆಸುವ ಔಷಧಿ ಜೊತೆಗಿದೆ ಗಾಲಿಬ್ಸಾಕಿ ಸುರಿದು ಕೊಟ್ಟ ಸಂಜೀವಿನಿ ಕೈ ಸೇರುವ ಮುನ್ನ ನೆಲದ ಪಾಲಾಯಿತೇಕೆ ಎಲ್ಲರೂ ನನ್ನ ನೋಡಿ ದೂರ ಸರಿಯುತ್ತಾರೆ ಸಜನಿ ಎದೆಯ ಬೇನೆ ನಿನಗಷ್ಟೇ ಗೊತ್ತುದರ್ದಿಗೆ ಮುಲಾಮು ಸವರಿ ಕೈಗಿತ್ತ ತುತ್ತು ಬಾಯಿಗೆ ಬರದಾಯಿತೇಕೆ ಮಸೀದಿಯಲಿ ಮುಲ್ಲಾ ಅಜಾ ಕೊಟ್ಟಾಗಲೇ ಇವರಿಗೆ ಬೆಳಗಾಗುತ್ತದೆ ಅರುಣಾಮೈಖಾನಾದೊಳಗೆ ನಾನಿರುವಾಗ ಕತ್ತಲೆಯಲ್ಲೂ ಒಳಗೆ ಬೆಳಕಾಯಿತೇಕೆ ***************************************************
You cannot copy content of this page