ಬದರ್
ಪುಸ್ತಕ ಸಂಗಾತಿ ಬದರ್ (ಅಬಾಬಿಗಳ ಸಂಕಲನ) ಮೂಲ ಲೇಖಕರ ಪರಿಚಯ ಇವರ ಪೂರ್ಣ ಹೆಸರು ಷೇಕ್ ಕರೀಮುಲ್ಲಾ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವಿನುಕೊಂಡ ಪಟ್ಟಣದಲ್ಲಿ ಜೂನ್ 01, 1964ರಲ್ಲಿ ಜನಿಸಿದರು. ವೃತ್ತಿಯಿಂದ ಶಿಕ್ಷಕರಾಗಿದ್ದಾರೆ. ಕಾವ್ಯವೇ ಇವರ ಅಚ್ಚುಮೆಚ್ಚಿನ ಸಾಹಿತ್ಯ ಪ್ರಕಾರ. 2006ನೇ ಇಸವಿಯಲ್ಲಿ ಮುಸ್ಲಿಂ ಬರಹಗಾರರ ಸಂಘವನ್ನು ಸ್ಥಾಪಿಸಿ ವ್ಯವಸ್ಥಾಪಕರಾಗಿ ಮುಸ್ಲಿಂ ಸಾಹಿತಿಗಳನ್ನು ಒಂದೇ ವೇದಿಕೆಗೆ ಕರೆದುತರುವ ಮಹತ್ವವಾದ ಕಾರ್ಯಕ್ಕೆ ನಾಂದಿ ಹಾಡಿದರು. ಪ್ರಗತಿಪರ ಮುಸ್ಲಿಂ ಬರಹಗಾರರಾಗಿ ಇವರು ಜನಮಾನಸವನ್ನು ಸೂರೆಗೊಂಡಿದ್ದಾರೆ. ಕೆಳ ಮತ್ತು ಮಧ್ಯಮ ವರ್ಗದ ಮುಸಲ್ಮಾನರ ಬದುಕಿನ ಬವಣೆಗಳೇ ಇವರ ಬರಹಗಳಲ್ಲಿರುವ ಜೀವಸೆಲೆ. . ಅನುವಾದಕರ ಪರಿಚಯ ಪೂರ್ಣ ಹೆಸರು ಧನಪಾಲ ನಾಗರಾಜಪ್ಪ. ಜೂನ್ 20, 1987ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಹುಟ್ಟಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನೆಲವಾಗಿಲು ಗ್ರಾಮದ ನಿವಾಸಿಗಳು. ವೈದ್ಯಕೀಯ ಪ್ರಯೋಗಾಲಯದ ಡಿಪ್ಲೊಮಾ ಮಾಡಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ವೈದ್ಯಕೀಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ================ ಅಬಾಬಿಗಳನ್ನು ಯಾಕೆ ಅವಿಷ್ಕರಿಸಿದೇನೆಂದರೆ (ಮೂಲ ಲೇಖಕರು ಮಾತುಗಳು) ವರ್ತಮಾನ ತೆಲುಗು ಸಾಹಿತ್ಯ ವಿಸ್ತೃತವಾದುದ್ದಾಗಿದೆ. ಅಸ್ತಿತ್ವದಲ್ಲಿರುವ ಅನೇಕಾನೇಕ ಹೋರಾಟಗಳ ನಿಲಯವಿದು. ಈ ಕ್ರಮದಲ್ಲಿ ಭಾಷೆಯಲ್ಲಿನ ಸಂಕ್ಲಿಷ್ಟತೆಯನ್ನು ದೂರ ಮಾಡುತ್ತ ಜನ ಸಾಮಾನ್ಯರಿಗೆ ಹತ್ತಿರವಾಗುವಂತೆ ಕಾವ್ಯ ಸಂಕ್ಷಿಪ್ತ ರೂಪವನ್ನು ಪಡೆದುಕೊಳ್ಳುತ್ತಿರುವ ದೆಶೆಯಿದು. ಇಂತಹ ಸಂದರ್ಭದಲ್ಲಿ ಮುಸ್ಲಿಂ ಕವಿಗಳಿಗೆ ತಮ್ಮ ಸಾಮಾಜಿಕ, ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತ ಚೈತನ್ಯವನ್ನು ತುಂಬುವ ಒಂದು ಹೊಸ ರೀತಿಯ ವಚನಾ ಪ್ರಕ್ರಿಯೆಯ ಅಗತ್ಯವಿದೆ ಎಂದು ನನಗನಿಸಿತು. ಈ ಆಲೋಚನೆ ಬಂದಿದ್ದೇ ತಡ ʼಅಬಾಬಿಗಳು’ ಎಂಬ ಹೊಸ ರೀತಿಯ ವಚನಾ ಪ್ರಕ್ರಿಯೆಯನ್ನು ಅವಿಷ್ಕರಿಸುವ ಉದ್ದೇಶದಿಂದ ಈ ʼಬದರ್ʼ ಅನ್ನು ನಿಮ್ಮ ಮುಂದೆ ತರುತ್ತಿದ್ದೇನೆ. “ಅಬಾಬಿಗಳು’’ ಎಂಬ ಈ ಹೊಸ ರೀತಿಯ ಕಾವ್ಯ ಪ್ರಕಾರಕ್ಕೆ ನಾನು ಪಂಚಪದಿಗಳನ್ನು ಆರಿಸಿಕೊಂಡಿದ್ದೇನೆ. ಮುಸಲ್ಮಾನರ ನಡವಳಿಕೆಗೆ ಪಂಚಸೂತ್ರಗಳು ಇರುವಂತೆಯೇ ಪ್ರತಿ ಅಬಾಬಿಯೂ ಐದು ಸಾಲುಗಳಿಂದ ಮುಗಿಯುತ್ತದೆ. ಸಮಸ್ಯೆ, ವಿಷಯ ವಿಶ್ಲೇಷಣೆ, ವಿವರಣೆ, ಆತ್ಮಾವಲೋಕನ, ಸಂದೇಶ ಇಲ್ಲವೆ ವ್ಯಂಗ್ಯವಾದ ವಿಡಂಬನೆಯಿಂದ ಅಬಾಬಿಗಳು ಮುಗಿಯುತ್ತವೆ. ಅಬಾಬಿಗಳು ಎಂಬ ಈ ಹೊಸ ಕಾವ್ಯ ಪ್ರಕಾರವನ್ನು ಕೇವಲ ಮುಸ್ಲಿಂ ಕವಿಗಳೇ ಮಾತ್ರವಲ್ಲದೆ ಶೋಷಿತ ವರ್ಗಕ್ಕೆ ಸೇರಿದ ಕವಿಗಳೆಲ್ಲರೂ ಅನುಸರಿಸಬೇಕು ಎಂಬುದು ನನ್ನ ಆಕಾಂಕ್ಷೆ. ಇಂದಿನ ಕವಿಗಳಷ್ಟೇ ಅಲ್ಲದೆ ಮುಂಬರುವ ಕವಿಗಳೂ ಸಹ ಈ ಪ್ರಕ್ರಿಯೆಯನ್ನು ಮುಂದುವರೆಸಿಕೊಂಡು ಹೋಗುತ್ತಾರೆ ಎಂದು ವಿನಮ್ರತೆಯಿಂದ ಆಶಿಸುತ್ತೇನೆಷೇಕ್ ಕರೀಮುಲ್ಲಾ 1.ಈ ಭೂಮಿಯ ಸುತ್ತಲೂಕಗ್ಗತಲು ಕವಿದಿದೆಸೂರ್ಯೋದಯ ಆಗುವುದೋ? ಇಲ್ಲವೋ?ಕರೀಮ್!ಇನ್ನು ಬೆಳದಿಂಗಳ ರಾತ್ರಿಗಳಿಲ್ಲ. 2.ದುಃಖದ ಮಳೆಯಲ್ಲಿತೋಯ್ದು ಮುದ್ದೆ ಆಗುತ್ತಿದ್ದೇನೆ.ಕುರುಡು ಬಸ್ತಿಗೆ ಕನಿಕರವಿಲ್ಲ.ಕರೀಮ್!ಈ ನೆಲವಿಡೀ ನನ್ನ ಸಮಾಧಿಯಂತೆ ಭಾಸವಾಗುತ್ತಿದೆ. 3.ಕುರ್ತಾದ ಮೇಲೆ ಅತ್ತರು ವಾಸನೆಕುಕ್ಷಿಯಲ್ಲಿ ಕರಕಲು ಕಮಟು ವಾಸನೆಹಸಿವಿಗೂ ಮಿಗಿಲಾದ ಗೆಳೆಯನಿಲ್ಲ.ಕರೀಮ್!ರಾತ್ರಿ ಯಾಕೋ ಗಹಗಹಿಸಿ ನಗುತ್ತಿದೆ. 4.ರಿಕ್ಟರ್ ಮಾಪಕದ ಮೇಲೆ ದೇಶಭಕ್ತಿಬೀಳುತ್ತ ಏಳುತ್ತ ಪರದಾಡುತ್ತಿದೆ.ಗುಂಡಿಗೆಯನ್ನು ಸೀಳಿ ತೋರಿಸಂತಾನೆ.ಕರೀಮ್!ಕಾಷಾಯದ ಮೊಸಳೆ ಕಚ್ಚಿಹಿಡಿದಿದೆ ಅಂತ ಹೇಳು! 5.ಅವನ ಅಂಬುಮಹಾಟವಿಯನ್ನು ಸುಡುತ್ತಲೇ ಇದೆ.ಮೊಹಲ್ಲಾಗಳೆಲ್ಲಾ ಖಾಂಡವ ವನಗಳೇ!ಕರೀಮ್!ನಾಗಾಸ್ತ್ರದಂತೆ ಗುರಿ ತಪ್ಪದಿರಲಿ. 6.ಎದೆಯಲ್ಲಿ ಧಮನಿಗಳುಮುದುಡಿಕೊಳ್ಳುತ್ತಿವೆಭಯದಿಂದಲೋ, ಉದ್ವೇಗದಿಂದಲೋಕರೀಮ್!ಈ ರಾಜ್ಯ ಎಷ್ಟು ಮಂದಿಯ ಉಸಿರು ಕಸಿದಿದೆಯೋ! 7.ಹಕ್ಕಿಗಳೇ ಅಲ್ಲವೆ ಅಂತಬಾಣಗಳ ಬಿಡಬೇಡಅಬಾಬಿಲ್ ಪಕ್ಷಿಗಳಾಗಿ ದಂಡು ಕಟ್ಟುತ್ತವೆಕರೀಮ್!ಅಬ್ರಹಾ ಸೇನೆಯ ಗತಿ ಹೇಳು. 8.ಅವನ ಕಾರಿನ ಅಡಿಯಲ್ಲಿನಾವು ನಾಯಿಯ ಮರಿಗಳಂತೆಅವಕ್ಕೂ ಕೋರೆಗಳಿರುತ್ತವೆ ಅಂತ ಹೇಳು.ಕರೀಮ್!ಕರ್ಬಲಾ ವಿಸ್ತರಿಸುತ್ತಿದೆ ನೋಡು. 9.ಅವನು ನಮ್ಮನ್ನುಎದುರುಮತದವರು ಅಂತಾನೆತಲೆಗೆ ಮೆಟ್ಟುಕೊಂಡಿರುವ ಜೋಡುಗಳನ್ನು ನೋಡಿಕೊಳ್ಳುವುದಿಲ್ಲಕರೀಮ್!ನೀನು ಕಾಲುಗಳಿಂದಲೇ ನಡೆ. 10.ನನ್ನ ವರ್ಣಮಾಲೆಯ ಮೇಲೆಅವರು ಸಂಕೋಲೆಗಳ ಬಲೆ ಬೀಸಿದ್ದಾರೆ.ಅವು ಪರಿವಾಳಗಳಾಗಿ ಅಂಬರಕ್ಕೆ ಹಾರಿದವು.ಕರೀಮ್!ಹುರಿಯನ್ನು ಕತ್ತರಿಸುವ ಇಲಿ ಎಲ್ಲಿ?! 12.ಎದೆಯ ವೇದನೆಹಳೆಯ ಕಬ್ಬಿಣದ ಪೆಟ್ಟಿಗೆಯಂತಲ್ಲದೆಹೊಸ ಅಂಗಿಯಂತೆ ಹೊಳೆಯುತ್ತಿದೆಕರೀಮ್!ಹೊಲಿದ ಚಿಂದಿಗಳನ್ನು ಉಡುವುದರಲ್ಲಿ ನೀನು ದಿಟ್ಟನೇ. ====== ತೆಲುಗು ಮೂಲ: ಷೇಕ್ ಕರೀಮುಲ್ಲಾಕನ್ನಡಕ್ಕೆ : ಧನಪಾಲ ನಾಗರಾಜಪ್ಪ









