ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸ್ವಾತಂತ್ರ್ಯ ಸೇನಾನಿ ದೇಶ ಭಕ್ತ ಲಿಂಗೈಕ್ಯ ಶ್ರೀ ರತ್ನಪ್ಪಣ್ಣ ಕುಂಬಾರ ರತ್ನಪ್ಪ ಭರಮಪ್ಪ ಕುಂಬಾರ (ದೇಶಭಕ್ತ ರತ್ನಪ್ಪಣ್ಣ ಕುಂಬಾರ) ಅವರು ಮಹಾರಾಷ್ಟ್ರದ ಇಚಲಕರಂಜಿಯ ಪ್ರಸಿದ್ಧ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಜಕಾರಣಿಯಾಗಿದ್ದರು. ದಕ್ಷಿಣ ಭಾರತದ ಹಲವು ಸಂಸ್ಥಾನಗಳ ವಿಲೀನಕ್ಕಾಗಿ ಶ್ರಮಿಸಿದ ಇವರನ್ನು “ದಕ್ಷಿಣ ಭಾರತದ ವಲ್ಲಭಭಾಯಿ ಪಟೇಲ್” ಎಂದೂ ಕರೆಯಲಾಗುತ್ತದೆ.  ಡಾ. ರತ್ನಪ್ಪ ಕುಂಬಾರ ಅವರ ಜೀವನದ   ಪ್ರಮುಖ ವಿವರಗಳು .ಜನನ: 15 ಸೆಪ್ಟೆಂಬರ್ 1909, ನಿಮ್ಶಿರ್ಗಾಂವ್ (ಮಹಾರಾಷ್ಟ್ರ).ನಿಧನ: 23 ಡಿಸೆಂಬರ್ 1998 (ವಯಸ್ಸು 89). ಬಿರುದು: ದೇಶಭಕ್ತ. ರಾಜಕೀಯ ಪಕ್ಷ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್.   ಸಾಧನೆಗಳು ಮತ್ತು ಕೊಡುಗೆಗಳು ಸಂವಿಧಾನಕ್ಕೆ ಸಹಿ: ಡಾ. ಬಿ. ಆರ್. ಅಂಬೇಡ್ಕರ್ ಅವರೊಂದಿಗೆ ಭಾರತದ ಸಂವಿಧಾನದ ಅಂತಿಮ ಕರಡಿಗೆ ಸಹಿ ಹಾಕಿದ ಮಹನೀಯರಲ್ಲಿ ಇವರೂ ಒಬ್ಬರು. ಸ್ವಾತಂತ್ರ್ಯ ಹೋರಾಟ: 1942 ರ ಆಗಸ್ಟ್ 9 ರಂದು ಮಹಾತ್ಮ ಗಾಂಧೀಜಿಯವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಸಹಕಾರಿ ರಂಗ:  ಮಹಾರಾಷ್ಟ್ರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸಹಕಾರಿ ರಂಗದ ನಕ್ಷತ್ರವಾಗಿ ಬೆಳಗಿದ ಇವರು, ಸಕ್ಕರೆ ಕಾರ್ಖಾನೆ ಸೇರಿದಂತೆ ಹಲವು ಸಹಕಾರಿ ಸಂಸ್ಥೆಗಳ ಸ್ಥಾಪನೆಗೆ ಕಾರಣರಾದರು. ಪದ್ಮಶ್ರೀ ಪ್ರಶಸ್ತಿ: ಇವರ ಸಮಾಜ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು 1985 ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ರಾಜಕೀಯ ಸೇವೆ: ಇವರು ಸಂಸತ್ ಸದಸ್ಯರಾಗಿ (MP) ಹಾಗೂ ಮಹಾರಾಷ್ಟ್ರ ಸರ್ಕಾರದ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.  ಸ್ವಾತಂತ್ರ್ಯಹೋರಾಟ ಡಾ. ರತ್ನಪ್ಪಣ್ಣ ಕುಂಬಾರ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ, ವಿಶೇಷವಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಅತ್ಯಂತ ಸಕ್ರಿಯ ಮತ್ತು ಪ್ರಭಾವಶಾಲಿ ಪಾತ್ರ ವಹಿಸಿದ್ದರು. ಅವರ ಪ್ರಮುಖ ಸ್ವಾತಂತ್ರ್ಯ ಹೋರಾಟದ ವಿವರಗಳು : 1. ಬ್ರಿಟಿಷ್ ಮತ್ತು ರಾಜಪ್ರಭುತ್ವದ ವಿರುದ್ಧ ಹೋರಾಟ 2. ಕೊಲ್ಹಾಪುರ ಪ್ರಜಾ ಪರಿಷತ್: ರತ್ನಪ್ಪಣ್ಣನವರು ಕೊಲ್ಹಾಪುರ ಸಂಸ್ಥಾನದಲ್ಲಿ ರಾಜಪ್ರಭುತ್ವ ಮತ್ತು ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಲು ‘ಕೊಲ್ಹಾಪುರ ರಾಜ್ಯ ಪ್ರಜಾ ಪರಿಷತ್’ ಅನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 3. ಪ್ರಜಾಪ್ರಭುತ್ವಕ್ಕಾಗಿ ಆಗ್ರಹ: ಸಂಸ್ಥಾನದ ಜನರಿಗೆ ಮೂಲಭೂತ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಮಾದರಿಯ ಆಡಳಿತ ಸಿಗಬೇಕೆಂದು ಅವರು ನಿರಂತರ ಚಳವಳಿ ನಡೆಸಿದರು. 4. . ಕ್ವಿಟ್ ಇಂಡಿಯಾ ಚಳವಳಿ (1942)ಭೂಗತ ಹೋರಾಟ: 1942ರಲ್ಲಿ ಮಹಾತ್ಮ ಗಾಂಧೀಜಿಯವರು ಕ್ವಿಟ್ ಇಂಡಿಯಾ ಚಳವಳಿ ಘೋಷಿಸಿದಾಗ, ರತ್ನಪ್ಪಣ್ಣನವರು ಅದರಲ್ಲಿ ಸಕ್ರಿಯವಾಗಿ ಧುಮುಕಿದರು. ಬ್ರಿಟಿಷ್ ಸರ್ಕಾರ ಇವರನ್ನು ಬಂಧಿಸಲು ಆದೇಶ ಹೊರಡಿಸಿದಾಗ, ಇವರು ಸುಮಾರು 6 ವರ್ಷಗಳ ಕಾಲ ಭೂಗತರಾಗಿ (Underground) ಹೋರಾಟ ಮುಂದುವರಿಸಿದರು. 5. ಸಶಸ್ತ್ರ ಮತ್ತು ಸೈದ್ಧಾಂತಿಕ ಪ್ರತಿರೋಧ: ಭೂಗತರಾಗಿದ್ದ ಅವಧಿಯಲ್ಲಿ ಬ್ರಿಟಿಷ್ ಅಧಿಕಾರಿಗಳ ಕಣ್ಣು ತಪ್ಪಿಸಿ ಯುವಕರನ್ನು ಸಂಘಟಿಸುವುದು, ಕ್ರಾಂತಿಕಾರಿ ಪತ್ರಿಕೆಗಳನ್ನು ಹಂಚುವುದು ಮತ್ತು ಸರ್ಕಾರದ ಖಜಾನೆಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟಿಸುವುದರಲ್ಲಿ ಇವರು ಮುಂಚೂಣಿಯಲ್ಲಿದ್ದರು. ಇವರನ್ನು ಹಿಡಿದುಕೊಟ್ಟವರಿಗೆ ಬ್ರಿಟಿಷ್ ಸರ್ಕಾರ ದೊಡ್ಡ ಮೊತ್ತದ ಬಹುಮಾನವನ್ನೂ ಘೋಷಿಸಿತ್ತು. 6. ಸಂಸ್ಥಾನಗಳ ವಿಲೀನ ಮತ್ತು “ದಕ್ಷಿಣ ಭಾರತದ ಪಟೇಲ್” ಎಂದು ಜನರಿಂದ ಅಭಿಮಾನದಿಂದ ಕರೆಯಿಸಿ ಕೊಂಡರು. 7. ಭಾರತ ಒಕ್ಕೂಟಕ್ಕೆ ಸೇರ್ಪಡೆ:  ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ (1947) ಕೊಲ್ಹಾಪುರ, ಸಾಂಗ್ಲಿ ಸೇರಿದಂತೆ ದಕ್ಷಿಣದ ಹಲವು ದೇಶಿ ಸಂಸ್ಥಾನಗಳು ಭಾರತ ಒಕ್ಕೂಟದೊಂದಿಗೆ ವಿಲೀನಗೊಳ್ಳಲು ನಿರಾಕರಿಸುತ್ತಿದ್ದವು. 8 ಕಠಿಣ ನಿರ್ಧಾರ: ರತ್ನಪ್ಪಣ್ಣನವರು ಈ ಸಂಸ್ಥಾನಗಳ ರಾಜರ ವಿರುದ್ಧ ಪ್ರಬಲ ಜನಪ್ರತಿಭಟನೆಗಳನ್ನು ಸಂಘಟಿಸಿ, ಅವರು ಭಾರತದೊಂದಿಗೆ ವಿಲೀನವಾಗುವಂತೆ ಒತ್ತಡ ಹೇರಿದರು. ಈ ಅದ್ಭುತ ಚಾಕಚಕ್ಯತೆ ಮತ್ತು ಸಾಹಸಕ್ಕಾಗಿ ಇವರನ್ನು “ದಕ್ಷಿಣ ಭಾರತದ ವಲ್ಲಭಭಾಯಿ ಪಟೇಲ್” ಎಂದು ಕರೆಯಲಾಗುತ್ತದೆ. ಸ್ವಾತಂತ್ರ್ಯ ನಂತರದಲ್ಲಿನ ಕೊಡುಗೆಗಳು ಸಂವಿಧಾನ ರಚನೆಯಲ್ಲಿನ ಪಾತ್ರದ ವಿವರಗಳು ಭಾರತದ ಸಂವಿಧಾನ ರಚನೆಯಲ್ಲಿ ಡಾ. ರತ್ನಪ್ಪಣ್ಣ ಕುಂಬಾರ ಅವರು ಅತ್ಯಂತ ಗೌರವಾನ್ವಿತ ಮತ್ತು ಐತಿಹಾಸಿಕ ಪಾತ್ರವನ್ನು ವಹಿಸಿದ್ದರು.  ದೇಶಿ ಸಂಸ್ಥಾನಗಳನ್ನು ಭಾರತ ಒಕ್ಕೂಟಕ್ಕೆ ಸೇರಿಸುವಲ್ಲಿ ಅವರು ತೋರಿದ ನಾಯಕತ್ವವನ್ನು ಗುರುತಿಸಿ, ಅವರನ್ನು ಸಂವಿಧಾನ ರಚನಾ ಸಭೆಯ (Constituent Assembly) ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು.  ಸಂವಿಧಾನ ರಚನೆಯಲ್ಲಿ ಅವರ ಪ್ರಮುಖ ಕೊಡುಗೆಗಳು ಮತ್ತು ಪಾತ್ರದ ವಿವರಗಳು  1. ಸಂವಿಧಾನದ ಮೂಲ ಪ್ರತಿಯ ಸಹಿ ಒಕ್ಕೂಟದ ಸದಸ್ಯರುಭಾರತದ ಸಂವಿಧಾನದ ರಚನೆ ಪೂರ್ಣಗೊಂಡ ನಂತರ, 24 ಜನವರಿ 1950 ರಂದು ಸಂವಿಧಾನದ ಅಂತಿಮ ಕರಡು (Final Draft) ಮತ್ತು ಮೂಲ ಪ್ರತಿಯ ಮೇಲೆ ಸಹಿ ಹಾಕಿದ ಭಾರತದ ಪ್ರಮುಖ ನಾಯಕರಲ್ಲಿ ರತ್ನಪ್ಪಣ್ಣ ಕುಂಬಾರ ಅವರೂ ಒಬ್ಬರು. ಡಾ. ಬಿ. ಆರ್. ಅಂಬೇಡ್ಕರ್ ಅವರೊಂದಿಗೆ ದೇಶದ ಅತ್ಯುನ್ನತ ಕಾನೂನು ಗ್ರಂಥಕ್ಕೆ ಸಹಿ ಹಾಕಿದ ಹೆಮ್ಮೆ ಇವರದ್ದಾಗಿದೆ.  ದೇಶಿ ಸಂಸ್ಥಾನಗಳ ಜನರ ಧ್ವನಿಯಾಗಿ ಪ್ರಾತಿನಿಧ್ಯಸಂಸ್ಥಾನಗಳ ಜನರ ಹಕ್ಕುಗಳು:  ಸಂವಿಧಾನ ರಚನಾ ಸಭೆಯಲ್ಲಿ ಬ್ರಿಟಿಷ್ ಭಾರತದ ಪ್ರಾಂತ್ಯಗಳ ಪ್ರತಿನಿಧಿಗಳ ಜೊತೆಗೆ ದೇಶಿ ಸಂಸ್ಥಾನಗಳ (Princely States) ಪ್ರತಿನಿಧಿಗಳೂ ಇದ್ದರು.  ರತ್ನಪ್ಪಣ್ಣನವರು ಕೊಲ್ಹಾಪುರ ಮತ್ತು ದಕ್ಷಿಣದ ಇತರ ಸಂಸ್ಥಾನಗಳ ಲಕ್ಷಾಂತರ ಸಾಮಾನ್ಯ ಜನರ ಧ್ವನಿಯಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಜಾಪ್ರಭುತ್ವದ ವಿಕೇಂದ್ರೀಕರಣ:  ರಾಜಪ್ರಭುತ್ವದ ಆಡಳಿತದಲ್ಲಿದ್ದ ಜನರಿಗೆ ಸಮಾನ ಹಕ್ಕುಗಳು, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಸೌಲಭ್ಯಗಳು ಸಿಗಬೇಕೆಂದು ಅವರು ಪ್ರತಿಪಾದಿಸಿದರು. .ಕರಡು ಪರಿಶೀಲನೆ ಮತ್ತು ಚರ್ಚೆಗಳಲ್ಲಿ ಭಾಗವಹಿಸುವಿಕೆ ಸಂವಿಧಾನ ರಚನಾ ಸಭೆಯ ವಿವಿಧ ಸಮಿತಿಗಳ ಚರ್ಚೆಗಳಲ್ಲಿ ಭಾಗವಹಿಸಿದ ಇವರು, ಭಾರತದಂತಹ ವೈವಿಧ್ಯಮಯ ದೇಶಕ್ಕೆ ಬಲಿಷ್ಠ ಒಕ್ಕೂಟ ವ್ಯವಸ್ಥೆ (Federal Structure) ಎಷ್ಟು ಮುಖ್ಯ ಎಂಬುದರ ಕುರಿತು ತಮ್ಮ ನುಡಿಗಟ್ಟುಗಳನ್ನು ಹಂಚಿಕೊಂಡಿದ್ದರು. ಹಿಂದುಳಿದ ವರ್ಗಗಳು, ರೈತರು ಮತ್ತು ಶ್ರಮಿಕ ವರ್ಗದವರ ಆರ್ಥಿಕ ಸಬಲೀಕರಣಕ್ಕೆ ಸಂವಿಧಾನದಲ್ಲಿ ಸೂಕ್ತ ಅವಕಾಶಗಳಿರಬೇಕು ಎಂದು ಅವರು ಆಗ್ರಹಿಸಿದ್ದರು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವುದು ಕೇವಲ ಸಂವಿಧಾನ ಬರೆಯುವುದಷ್ಟೇ ಅಲ್ಲದೆ, ಸ್ವಾತಂತ್ರ್ಯದ ನಂತರ ದೇಶದ ಮೊದಲ ಲೋಕಸಭೆಯ (1952-1957) ಸಂಸದರಾಗಿ (MP) ಆಯ್ಕೆಯಾಗಿ, ಸಂವಿಧಾನದ ಆಶಯಗಳನ್ನು ಕಾನೂನು ರೂಪದಲ್ಲಿ ಜಾರಿಗೆ ತರಲು ಶ್ರಮಿಸಿದರು.   ರತ್ನಪ್ಪಣ್ಣ ಕುಂಬಾರ ಅವರು ಸಂವಿಧಾನ ಸಭೆಯ ನಂತರ ದೇಶದ ಮೊದಲ ಲೋಕಸಭೆ ಸದಸ್ಯರಾಗಿ (MP) ಮಾಡಿದ ಅನೇಕ ಕೆಲಸಗಳ  ಲೆಕ್ಕ ಇಡಲು ಸಾಧ್ಯವಿಲ್ಲ. ಮಹಾರಾಷ್ಟ್ರದ ಇಚಲಕರಂಜಿಯನ್ನು “ಮ್ಯಾಂಚೆಸ್ಟರ್ ಆಫ್ ಮಹಾರಾಷ್ಟ್ರ” ಆಗಿ ಬದಲಾಯಿಸಿದ ಅವರ ಸಹಕಾರಿ ಚಳವಳಿಯ  ದೂರದೃಷ್ಟಿ ರತ್ನಪ್ಪಣ್ಣನವರು ಸಹಕಾರಿ ರಂಗದಲ್ಲಿ ಕ್ರಾಂತಿ ಉಂಟು ಮಾಡಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಇಚಲಕರಂಜಿಯ (ಗಂಗಾನಗರ) ಕಬ್ನೂರ್‌ನಲ್ಲಿ ಈ ಬೃಹತ್ ಕಾರ್ಖಾನೆಯನ್ನು 1954 ರಲ್ಲಿ ಸ್ಥಾಪಿಸಿದರು.  ವಾಣಿಜ್ಯ ಕಾಲೇಜು ಸ್ಥಾಪನೆ. ಇಂತಹ ಅಪರೂಪದ ಅಪ್ಪಟ ಬಸವ ಭಕ್ತ ಸ್ವತಂತ್ರ ಸೇನಾನಿ ದೇಶಭಕ್ತ ಶ್ರೀ ರತ್ನಪ್ಪಣ್ಣ ಕುಂಬಾರ ಸಾವಿಲ್ಲದ ಶರಣರು  ಡಾಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್ ಪಟ್ಟಣ ರಾವ್ ಬಹಾದ್ದೂರ ಶ್ರೀ ಗಿಲಗಂಚಿ ಗುರುಸಿದ್ದಪ್ಪನವರು ಶಿಕ್ಷಣ ಪ್ರವರ್ತಕ ರಾವ್ ಬಹಾದ್ದೂರ್ ಗಿಲಗಂಚಿ ಗುರುಸಿದ್ದಪ್ಪನವರು ರಾವ್ ಬಹಾದ್ದೂರ ಶ್ರೀ ಗಿಲಗಂಚಿ ಗುರುಸಿದ್ದಪ್ಪನವರು ಎಂಬ ಉತ್ತರ ಕರ್ನಾಟಕದ ಧ್ರುವತಾರೆ ಸಮಾಜಸೇವಕ ಅಪ್ರತಿಮ ಸಮಾಜ ಚಿಂತಕರು.  ಇವರ ಸಂಕ್ಷಿಪ್ತ ಪರಿಚಯ ಸಾವಿಲ್ಲದ ಶರಣರು ಮಾಲಿಕೆಯಲ್ಲಿ ಪ್ರಕಟ ಮಾಡುತ್ತಿದ್ದೇನೆ.  (1841–1891) ಉತ್ತರ ಕರ್ನಾಟಕದ ಪ್ರಮುಖ ಶಿಕ್ಷಣ ಪ್ರವರ್ತಕರು, ಲಿಂಗಾಯತ ಧರ್ಮದ ಸಂಘಟಿಕರು, ಸಮಾಜ ಸುಧಾರಕರು ಮತ್ತು ಬ್ರಿಟಿಷ್ ಆಡಳಿತಾವಧಿಯಲ್ಲಿ ಧಾರವಾಡದ ಡೆಪ್ಯೂಟಿ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಯಾಗಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯ ಮತ್ತು ಶೋಷಿತ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಇವರು ನೀಡಿದ ಕೊಡುಗೆ ಅನನ್ಯವಾದದ್ದು. ಜನನ ಮತ್ತು ಶಿಕ್ಷಣ ಗಿಲಗಂಚಿ ಗುರುಸಿದ್ದಪ್ಪನವರು 1841 ರಂದು ಧಾರವಾಡದ ಲಿಂಗಾಯತ ನೇಕಾರ( ಹಟಗಾರ ) ಕುಟುಂಬದಲ್ಲಿ ಜನಿಸಿದರು. ಬಾಲಕ  ಗುರುಸಿದ್ದಪ್ಪನವರು ತುಂಬಾ ಚತುರ ಮತ್ತು ಬುದ್ಧಿವಂತನಾಗಿದ್ದನು. ಹೀಗಾಗಿ ಇವರ ತಂದೆ ವೀರಬಸಪ್ಪ ಇವರ ಶಿಕ್ಷಣಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಂಡರು. ಅವರ ಪ್ರಮುಖ ಸಾಧನೆಗಳು ಮತ್ತು ಜೀವನದ ಮುಖ್ಯಾಂಶಗಳು : 1. ಶೈಕ್ಷಣಿಕ ಕ್ರಾಂತಿ ಮತ್ತು ಸಂಸ್ಥೆಗಳ ಸ್ಥಾಪನೆ ಲಿಂಗಾಯತ ಎಜುಕೇಶನ್ ಅಸೋಸಿಯೇಷನ್ (LEA): ಒಂದು ದಿನ ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು ತಮ್ಮ ಆಪ್ತ ಮಿತ್ರರು ಇವರ ಜೊತೆಗೆ ಕೆಲಸ ನಿರ್ವಹಿಸುವ ಶ್ರೀ ಅರಟಾಳ ರುದ್ರಗೌಡರು ಮತ್ತು ಇತರ ಸ್ನೇಹಿತರೊಂದಿಗೆ ಒಂದು ದಿನ ಸಂಜೆ ಮೈಲಾರ ಗುಡ್ಡಕ್ಕೆ   ವಾಕಿಂಗ್ ವಸ್ತು ವಿಹಾರಕ್ಕೆ ಹೋಗುವಾಗ ಬೇರೆ ಬೇರೆ ವಿಷಯ ಮಾತನಾಡುತ್ತಾ ಲಿಂಗಾಯತರು ಏಕೆ ಹಿಂದುಳಿದಿದ್ದಾರೆ ಎಂದು ಚರ್ಚಿಸ ತೊಡಗಿದರು. ಇದಕ್ಕೆ ಮುಖ್ಯ ಕಾರಣ ಬಡತನ ಶಿಕ್ಷಣ ಇಲ್ಲದಿರುವುದು.   ಶೈಕ್ಷಣಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಎಲ್ ಇ ಎ ಲಿಂಗಾಯತ ಎಜ್ಯುಕೇಶನ್ ಅಸೋಸಿಯೇಷನ್ ಎಂಬ ಸಂಸ್ಥೆಯನ್ನು 1883 ರಲ್ಲಿ 215500 ರೂಪಾಯಿ ಹಣವನ್ನು ಡಿಪಾಸಿಟ್ ಮಾಡಿ ಅದರ ಬಡ್ಡಿಯಲ್ಲಿ ಲಾಕ್ ಲಿಂಗಾಯತ ಶಿಷ್ಯ ವೇತನ ಸ್ಕಾಲರ್ಶಿಪ್ ಫಂಡ್ ಬರುವಂತೆ ಯೋಜನೆಯನ್ನು ಜಾರಿಗೆ ತಂದರು.  ಗಿಲಗಂಚಿ ಗುರುಸಿದ್ದಪ್ಪನವರು ಮತ್ತು ಅರಟಾಳ ರುದ್ರಗೌಡರು ಸೇರಿ 1883 ರಲ್ಲಿ ಧಾರವಾಡದಲ್ಲಿ Lingayat Education Association ಸಂಸ್ಥೆಯನ್ನು ಸ್ಥಾಪಿಸಿದರು. ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಇದು ಪ್ರಮುಖ ಆಧಾರವಾಯಿತು. ಉತ್ತರ ಕರ್ನಾಟಕದ ಡಾ ಫ ಗು ಹಳಕಟ್ಟಿ ಅವರನ್ನೂ ಸೇರಿ ಅನೇಕ ಮಹನೀಯರು ಈ ಸಂಸ್ಥೆಯಿಂದ ಶಿಷ್ಯ ವೇತನ ಪಡೆದು ಬೆಳೆದವರು.  ಬಿ ಎಲ್ ಡಿ ಇ ಶಿಕ್ಷಣ ಸಂಸ್ಥೆಯ ಮುಖ್ಯ ಶಿಲ್ಪಿ ಡಾ ಫ ಗು ಹಳಕಟ್ಟಿ ಇವರೂ ಸಹಿತ ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು ಸ್ಥಾಪಿಸಿದ ಲಿಂಗಾಯತ ಫಂಡ್’ ನೆರವು ಮತ್ತು ಶಿಷ್ಯವೇತನದಿಂದಲೇ ತಮ್ಮ ಪದವಿ ಮತ್ತು ವಕೀಲಿ ಕೋರ್ಸ್ ಮಾಡಿದ್ದು. ಕೆ.ಎಲ್.ಇ ಸಂಸ್ಥೆಗೆ ಮುನ್ನುಡಿ:  ಇವರು ಸ್ಥಾಪಿಸಿದ್ದ ‘ಲಿಂಗಾಯತ ಫಂಡ್’ ನೆರವು ಮತ್ತು ಶಿಷ್ಯವೇತನದಿಂದಲೇ ಅಂದಿನ ಪ್ರಮುಖ ಸಪ್ತರ್ಷಿಗಳು ಪ್ರೊ ಶಿ ಶಿ ಬಸವನಾಳ ಪ್ರೊ ಎಂ ಆರ್ ಸಾಖರೆ ಬಿ ಎಸ್ ಹಂಚಿನಾಳ ಏಚ್ ಎಫ ಕಟ್ಟಿಮನಿ ಬಿ ಬಿ ಮಮದಾಪೂರ ಪಂಡಿತಪ್ಪ ಚಿಕ್ಕೋಡಿ  ಸರ್ದಾರ್ ವೀರನಗೌಡ ಪಾಟೀಲ   (ಏಳು ಜನ ಶಿಕ್ಷಕರು) ಉನ್ನತ ಶಿಕ್ಷಣ ಪಡೆದಿದ್ದರು. ಇದೇ ಪ್ರೇರಣೆಯಿಂದ ಮುಂದೆ ಪ್ರಸಿದ್ಧ KLE ಶಿಕ್ಷಣ ಸಂಸ್ಥೆ 1916 ರಲ್ಲಿ ಉದಯಿಸಲು ಸಾಧ್ಯವಾಯಿತು. 2. ಸಾಮಾಜಿಕ ಸೇವೆ ಮತ್ತು ಸಂಘಟನೆ ಅಖಿಲ ಭಾರತ ವೀರಶೈವ ಮಹಾಸಭೆ: ಸಮಾಜದ ಸುಧಾರಣೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಸಾಧಿಸುವ ಉದ್ದೇಶದಿಂದ ಸ್ಥಾಪನೆಯಾದ ವೀರಶೈವ ಮಹಾಸಭೆಯ ಆರಂಭಿಕ ದಿನಗಳಲ್ಲಿ ಅರಟಾಳ ರುದ್ರಗೌಡರು, ಸರ್ದಾರ್ ಬುಳ್ಳಪ್ಪ ಮಾಮಲೆದೇಸಾಯಿ ಮುಂತಾದ ಧೀಮಂತರು  ಸೇರಿ  ಸಮಾಜ ಸಂಘಟನೆಗೆ ಇವರು ಸ್ಪೂರ್ತಿಯಾದರು. ದೂರದೃಷ್ಟಿಯ ನಾಯಕತ್ವ: ಲಿಂಗಾಯತ  ಸಮಾಜ ಸುಶಿಕ್ಷಿತವಾಗಬೇಕೆಂಬ ಹಂಬಲದಿಂದ ತಮ್ಮ ಇಡೀ ಜೀವನ ಹಾಗೂ ಸಂಪತ್ತನ್ನು ಧಾರೆ ಎರೆದ ಇವರನ್ನು ಉತ್ತರ ಕರ್ನಾಟಕದ ಶೈಕ್ಷಣಿಕ ರಂಗದ ಪ್ರಾತಃಸ್ಮರಣೀಯರೆಂದು ಗೌರವಿಸಲಾಗುತ್ತದೆ. ಲಿಂಗಾಯತ ಸಮಾಜದಲ್ಲಿ ಮೊಟ್ಟ ಮೊದಲ ಡೆಪ್ಯುಟಿ ಕಮಿಷನರ್ ಆಗಿ ನೇಮಕ ಗೊಂಡ ಪ್ರಥಮರು  ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು. ಉದಾರತ್ವತನಕ್ಕೆ ಮಾದರಿ. 1884 ರಲ್ಲಿ ಪುಣೆಯಲ್ಲಿ ಓದುವ ನಾಲ್ಕು ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೂ ತಿಂಗಳಿಗೆ  80 ರೂಪಾಯಿಯಂತೆ ತಿಂಗಳಿಗೆ 320 ರೂಪಾಯಿಯನ್ನು ಐದು  ತಿಂಗಳು  ತಮ್ಮ ಸ್ವಂತ  ಹಣ ಕೊಡುತ್ತಿದ್ದರು.ಕಾರಣ ಲಿಂಗಾಯತ ವೆಲ್ ಫೇರ್ ಫಂಡ್ ಬಡ್ಡಿ ಜಮಾ ಆಗಿರದ ಕಾರಣ ತಮ್ಮ ಹಣವನ್ನು ಕೊಟ್ಟು ವಿದ್ಯಾರ್ಥಿಗಳನ್ನು ಕಲಿಸಿದರು.  ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು 1890 ರಲ್ಲಿ ಒಂದು ದಿನ ಮಧ್ಯಾನ್ಹ ಊಟ ಮಾಡಿ ಪ್ರಾಂಗಣದಲ್ಲಿ ಕುರ್ಚಿಯ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಸಂದರ್ಭದಲ್ಲಿ ಒಬ್ಬ ಬಡ ವಿದ್ಯಾರ್ಥಿ ಬಂದು ತನ್ನ ಕಾಲೇಜಿಗೆ ಫೀ ಕಟ್ಟಲು ಹಣ ಬೇಕೆಂದು ಕೇಳಿಕೊಂಡಾಗ  ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು ಎದ್ದು ಗೂಟಕ್ಕೆ ನೇತು ಹಾಕಿದ್ದ ತಮ್ಮ ಕೋಟ್ ನ ಕಿಸೆಯಲ್ಲಿ ಕೈಹಾಕಿದಾಗ ಅಲ್ಲಿ ಒಂದು ಅಣೆ ಪೈಸೆ ದೊರೆಯಲಿಲ್ಲ . ಕಣ್ಣೀರು ಕೆನ್ನೆಯ ಮೇಲೆ ಹರಿದವು. ಅಸಹಾಯಕನಾಗಿ ದುಡ್ಡಿಲ್ಲ ಕ್ಷಮಿಸು ಎಂದು ಹೇಳಿ ಕಳುಹಿಸಿದರು. ವಿದ್ಯಾರ್ಥಿ ಮನೆಯ ಕಾಂಪೌಂಡ್ ದಾಟುವ ಮುನ್ನ ತಮ್ಮ ಎದೆಯ ಮೇಲಿನ ಬಂಗಾರದ  ಗುಂಡಗಡಗಿ ಕರಡಿಗೆ ತೆಗೆದು ಇಷ್ಟ ಲಿಂಗವನ್ನು ಕೈಯಲ್ಲಿ ಹಿಡಿದು ಬಿಳಿ ಬಟ್ಟೆಯಲ್ಲಿ ಕಟ್ಟಿ ಬಂಗಾರದ ಗುಂಡಗಡಗಿಯನ್ನು ಬಡ ವಿದ್ಯಾರ್ಥಿಗೆ ಕೊಟ್ಟು. ” ನೋಡು ಇದನ್ನು ಮಾರಿ ನಿನ್ನ ಇಡೀ ಶಿಕ್ಷಣವನ್ನು ಮುಗಿಸು ಎಂದು ಹರಸಿ ಕಳುಹಿಸಿದ ಮಹಾ ಮಾನವತಾವಾದಿ ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು. ಕೊನೆಯ ಸಂದೇಶ ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು ತಮ್ಮ ಐವತ್ತನೆಯ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಅವರನ್ನು ನೋಡಲು ಇವರ ಆಪ್ತ ಮಿತ್ರರು ಶ್ರೀ  ಅರಟಾಳ ರುದ್ರಗೌಡರು ಭೇಟಿಗೆ ಬಂದರು ” ರಾವ್ ಸಾಹೇಬ್ ಶ್ರೀ ಗುರುಸಿದ್ದಪ್ಪನವರೇ ನಮಗೆ ಏನಾದರೂ ತಮ್ಮ ಸಂದೇಶ ಮಾರ್ಗದರ್ಶನ ನೀಡುತ್ತೀರಾ ಎಂದು ಕೇಳಿದಾಗ ಮುಗುಳು ನಕ್ಕು. ರುದ್ರಗೌಡರೆ ನಾವಿಬ್ಬರೂ ಆರಂಭಿಸಿದ ಲಿಂಗಾಯತ ಶಿಕ್ಷಣ ಅಭಿವೃದ್ಧಿ ಸಂಸ್ಥೆ ಲಿಂಗಾಯತ ಎಜುಕೇಶನ್ ಅಸೋಸಿಯೇಷನ್ (LEA) ಎಲ್ಲಾ ಬಡ ಮಕ್ಕಳ ಶಿಕ್ಷಣಕ್ಕೆ ನಿರಂತರವಾಗಿ ಶಿಷ್ಯವೇತನ ನೀಡಿ. ಯಾರೂ ಶಿಕ್ಷಣ ವಂಚಿತರಾಗಬಾರದು. ಬಸವಾದಿ ಶರಣರ ಕಾಯಕ ದಾಸೋಹ ನಿಲ್ಲ ಬಾರದು ಎಂದು ಅವರಿಂದ ಪ್ರಮಾಣ ಮಾಡಿಸಿಕೊಂಡರು.  22ಜೂನ್ 1891 ರಂದು ಅವರು ಬಯಲಲ್ಲಿ ಬಯಲಾದರು. ಇಂತಹ ಅಪರೂಪದ ಮಹಾಶರಣ ರಾವ್ ಬಹದ್ದೂರ ಗಿಲಗಂಚಿ ಗುರುಸಿದ್ದಪ್ಪನವರು ನಾಗರಿಕ ಸಮಾಜಕ್ಕೆ  ಲಿಂಗಾಯತ ಸಮಾಜದವರಿಗೆ ನಿತ್ಯ ಸ್ಮರಣೀಯರು ಸಾವಿಲ್ಲದ ಶರಣರು. _______________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ವಿಶ್ವ ಮಾನವ ಕವಿ ಪಂಪ ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಕನ್ನಡ ಸಾಹಿತ್ಯ ಸಾರಸ್ವತ ಲೋಕದ ಮಹಾಮಾನವತಾವಾದಿ ಶ್ರೇಷ್ಠ ಜೀವ ಪರ ಕವಿ ಪಂಪ. ಕನ್ನಡ ಸಾಹಿತ್ಯ ಲೋಕದಲ್ಲಿ ಪಂಪನ ಯುಗವೆಂದೇ ಗುರುತಿಸಲ್ಪಟ್ಟ ಅಪರೂಪದ  ಪ್ರಬುದ್ಧ ಪ್ರಾಮಾಣಿಕ ವೈಚಾರಿಕ ನೆಲೆಯಲ್ಲಿ ರೂಪಗೊಂಡ ಕವಿ ಶ್ರೀಮಂತ.  ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ. ಆದಿಕವಿ ಎಂದು ಹೆಸರು ಪಡೆದ ಪಂಪನು ಕನ್ನಡದ ರತ್ನತ್ರಯರಲ್ಲಿ (ಪಂಪ, ಪೊನ್ನ ಮತ್ತು ರನ್ನ) ಒಬ್ಬನು. ಪಂಪನನ್ನು ಯುಗ ಪ್ರವರ್ತಕನೆಂದು ಕನ್ನಡಿಗರು ಗೌರವಿಸಿ ಅವನ ಕಾಲವನ್ನು ‘ಪಂಪಯುಗ’ ವೆಂದು ಕರೆದಿದ್ದಾರೆ. “ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ” ಇವೆರಡೂ, ಪಂಪನ ಎರಡು ಮೇರು ಕೃತಿಗಳು. ಹಿನ್ನೆಲೆ ಪಂಪನು ಗದಗ ಜಿಲ್ಲೆಯ ಅಣ್ಣಿಗೇರಿಯಲ್ಲಿ ಜನಿಸಿದನು. ಇವನ ತಂದೆ ಭೀಮಪ್ಪಯ್ಯ ಮತ್ತು ತಾಯಿ ಅಬ್ಬಣಬ್ಬೆ. ಕ್ರಿ.ಶ.ಸುಮಾರು ೯೦೨ ರಿಂದ ೯೫೫ರ ವರೆಗೆ ಆಳಿದ ವೇಮುಲವಾಡ ಚಾಲುಕ್ಯ ವಂಶದ ಅರಸ ಇಮ್ಮಡಿ ಅರಿಕೇಸರಿಯ ಆಶ್ರಯದಲ್ಲಿದ್ದ. ಪಂಪನ ಪೂರ್ವಜರು ವೆಂಗಿ ಮಂಡಲದವರು. ವೆಂಗಿಮಂಡಲವು ಕೃಷ್ಣಾ ಮತ್ತು ಗೋದಾವರಿ ನದಿಗಳ ನಡುವೆ ಇದ್ದ ಪ್ರದೇಶ. ಇದು ಇಂದಿನ ತೆಲಂಗಾಣ ರಾಜ್ಯದ ಕರೀಂ ನಗರ ಜಿಲ್ಲೆಯ ವೇಮುಲವಾಡ ಎಂಬ ಊರು. ಇದರಲ್ಲಿದ್ದ ಏಳು ಗ್ರಾಮಗಳಲ್ಲಿ ವೆಂಗಿಪಳು ಎಂಬುದು ಪ್ರಸಿದ್ಧ ಅಗ್ರಹಾರ. ಅಲ್ಲಿದ್ದ ಜಮದಗ್ನಿ ಪಂಚಾರ್ಷೇಯ ಪ್ರವರದ ಶ್ರೀವತ್ಸ ಗೋತ್ರಕ್ಕೆ ಸೇರಿದ ಕುಟುಂಬಕ್ಕೆ ಸೇರಿದವನು ಪಂಪ. ಮಾಧವ ಸೋಮಯಾಜಿ ಎಂಬಾತನನ್ನು ಪಂಪನ ಮನೆತನದ ಹಿರಿಯನೆಂದು ಗುರುತಿಸಲಾಗಿದೆ. ಈತ ಪಂಪನ ಮುತ್ತಜ್ಜನ ತಂದೆ. ಮಾಧವ ಸೋಮಯಾಜಿಯ ಮಗ ಅಭಿಮಾನ ಚಂದ್ರ. ಈತ ಈಗಿನ ಗುಂಟೂರು ಸಮೀಪದ ಗುಂಡಿಕಾಕ್ಕೆ ಸೇರಿದ ನಿಡುಗುಂದಿ ಎಂಬ ಅಗ್ರಹಾರದಲ್ಲಿದ್ದ. ಈತ ಪಂಪನ ಮುತ್ತಜ್ಜ. ಅಭಿಮಾನ ಚಂದ್ರನ ಮಗ ಕೊಮರಯ್ಯ. ಈತನ ಕಾಲದಲ್ಲಿ ಈ ಕುಟುಂಬದವರು ಬನವಾಸಿ, ಅಂದರೆ ಕರ್ನಾಟಕದ ಉತ್ತರ ಕನ್ನಡ/ಧಾರವಾಡ ಪ್ರದೇಶಕ್ಕೆ ವಲಸೆ ಬಂದರು. ಕೊಮರಯ್ಯ ಪಂಪನ ಅಜ್ಜ. ಇವನ ಮಗ ಭೀಮಪಯ್ಯ. ಭೀಮಪಯ್ಯನ ಹೆಂಡತಿ ಅಣ್ಣಿಗೇರಿಯ ಜೋಯಿಸ ಸಿಂಘನ ಮೊಮ್ಮಗಳು. ಪಂಪ ಇವರ ಮಗ. ಜಿನವಲ್ಲಭ ಪಂಪನ ತಮ್ಮ. ಪಂಪನ ತಂದೆ ಭೀಮಪ್ಪಯ್ಯ ಯಜ್ಞಯಾಗಾದಿಗಳಲ್ಲಿನ ಹಿಂಸೆಯನ್ನು ವಿರೋಧಿಸಿದ ಜೈನ ಮತವನ್ನು ಸ್ವೀಕರಿಸಿದನು. ದೇವೇಂದ್ರಮುನಿ ಎಂಬಾತ ಪಂಪನ ಗುರು. ಜೀವನ ಪಂಪನು(ಪಂಪ ಅವರ ನಿಜವಾದ ಹೆಸರು ಜಯಂತ) ದೇಶೀ ಮತ್ತು ಮಾರ್ಗ ಇವುಗಳನ್ನು ಸೇರಿಸಿಕೊಂಡು ಕೃತಿಯನ್ನು ರಚಿಸಿದನು. ಸಂಸ್ಕೃತ ಸಾಹಿತ್ಯದಂತಿರುವುದು ‘ಮಾರ್ಗ’, ಅಚ್ಚಕನ್ನಡದ ಶೈಲಿಯು ’ದೇಶೀ’ ಎನಿಸಿತ್ತು. ತನ್ನ ಕೃತಿಗಳ ರಚನೆಯ ಕಾಲಕ್ಕೆ ಪಂಪ ಅರಿಕೇಸರಿಯ ಆಶ್ರಯದಲ್ಲಿದ್ದ. ಪಂಪ ಅರಿಕೇಸರಿಯ ಯೋಧನಾಗಿ ಅಥವಾ ದಂಡನಾಯಕನಾಗಿದ್ದ ಎಂಬ ಮಾತು ಇದೆ. ಖಡ್ಗವನ್ನು ಹಿಡಿದು ಪರಾಕ್ರಮಿಯಾಗಿ ಯುದ್ಧ ಮಾಡಬಲ್ಲ ಪಂಪನು ಕನ್ನಡ ಭಾಷೆಯಲ್ಲಿ ಅತ್ಯಂತ ಹಿಡಿತ ಉಳ್ಳವನು, ಪ್ರೀತಿಯಿದ್ದವನು. ತನ್ನ ದೇಶಪ್ರೇಮವನ್ನು,  “ಆರಂಕುಶವಿಟ್ಟೊಡಂ ನೆನವುದೆನ್ನ ಮನಂ ಬನವಾಸಿ ದೇಶಮಂ”  ಎಂದು ಬಣ್ಣಿಸಿ ಪಂಪ ತನ್ನ ತಾಯ್ನಾಡನ್ನು ಹೊಗಳಿದ್ದಾನೆ. ಪಂಪನು ಪುಲಿಗೆರೆಯ ‘ತಿರುಳ್ ಗನ್ನಡ’ದಲ್ಲಿ ಕಾವ್ಯ ರಚಿಸಿದ್ದೇನೆ ಎಂದಿದ್ದಾನೆ. ಪಂಪನು ಆದಿಪುರಾಣವನ್ನು ಕ್ರಿ.ಶ. ೯೪೧-೪೨ರಲ್ಲಿ ರಚಿಸಿದ. ಇದು ಗುಣಸೇನಾಚಾರ್ಯನ ಪೂರ್ವಪುರಾಣದಲ್ಲಿ ಬಂದಿರುವ ಪ್ರಥಮ ಜೈನ ತೀರ್ಥಂಕರ ವೃಷಭನಾಥನ ಕಥೆಯನ್ನು ಹೇಳುತ್ತದೆ. ಪಂಪನು ಆದಿಪುರಾಣವನ್ನು ಮೂರು ತಿಂಗಳಿನಲ್ಲಿ ರಚಿಸಿರುವೆನೆಂದು ಹೇಳಿಕೊಂಡಿದ್ದಾನೆ. ಪಂಪನ ಇನ್ನೊಂದು ಕೃತಿ ‘ವಿಕ್ರಮಾರ್ಜುನ ವಿಜಯ’ವು ಮಹಾಭಾರತದ ಕಥೆಯನ್ನು ನಿರೂಪಿಸುತ್ತದೆ. ವ್ಯಾಸರ ಮಹಾಭಾರತ ಕತೆಯನ್ನು ಪ್ರಾದೇಶಿಕ ಭಾಷೆಯಲ್ಲಿ, ದೇಶೀಯ ಗುಣಗಳನ್ನು ಮೇಳವಿಸಿ ಬರೆದ ಮೊದಲ ಕೃತಿ. ವ್ಯಾಸ ಮುನೀಂದ್ರರುಂದ್ರ ವಚನಾಮೃತವಾರ್ದಿಯನೀಸುವೆಂ ಕವಿ ವ್ಯಾಸನೆಂಬ ಗರ್ವಮೆನಗಿಲ್ಲ ಎಂದು ವಿನಯದಿಂದ ನುಡಿದಿದ್ದಾನೆ. ತನಗೆ ಆಶ್ರಯ ನೀಡಿದ್ದ ಅರಿಕೇಸರಿಯನ್ನು ಅರ್ಜುನನಿಗೆ ಹೋಲಿಸಿ, ಅವನನ್ನೇ ಕಥಾನಾಯಕನನ್ನಾಗಿ ಮಾಡಿಕೊಂಡಿದ್ದಾನೆ. ಪಂಪನು ವಿಕ್ರಮಾರ್ಜುನ ವಿಜಯವನ್ನು ಆರು ತಿಂಗಳಿನಲ್ಲಿ ಬರೆದನಂತೆ. ಇದು ೧೪ ಆಶ್ವಾಸಗಳನ್ನು, ೧೬೦೯ ಪದ್ಯಗಳನ್ನು ಒಳಗೊಂಡಿದೆ. ಪಂಪ ತನ್ನ ಕೃತಿಗಳಲ್ಲಿ ಹೇಳಿಕೊಂಡಿರುವ ವಿಚಾರಗಳಿಂದ ಮತ್ತು ಅವನ ತಮ್ಮ ಕೂರ್ಕ್ಯಾಲ ಎಂಬ ಗ್ರಾಮದಲ್ಲಿ ನೆಡಿಸಿದ ಶಾಸನದಿಂದ ಈ ವಿವರಗಳು ತಿಳಿದು ಬಂದಿವೆ. ಪಂಪನನ್ನು “ಪಸರಿಪ ಕನ್ನಡಕ್ಕೊಡೆಯನೊರ್ವನೆ ಸತ್ಕವಿ ಪಂಪನಾವಗಂ” ಎಂದು ಪುಣ್ಯಾಸ್ರವದ ಕವಿ ನಾಗರಾಜನೆಂಬುವನ ನುಡಿ ಕನ್ನಡ ಕವಿಗಳು ಪಂಪನಿಗೆ ಸಲ್ಲಿಸಿರುವ ಕಾವ್ಯ ಗೌರವದ ಪ್ರಾತಿನಿಧಿಕ ವಾಣಿಯಾಗಿದೆ. ಅಲ್ಲದೆ ಮುಂದುವರೆದು “ಏಂ ಕಲಿಯೋ, ಸತ್ಕವಿಯೋ? ಕವಿತಾಗುಣಾರ್ಣಭವಂ” ಎಂದು ಕೂಡ ಪಂಪನನ್ನು ಹೊಗಳಿದ್ದಾರೆ. ಪಂಪ ಬರೆದ ಎರಡು ಕೃತಿಗಳು ಹಳಗನ್ನಡದ ಕಾವ್ಯ ರಚನೆಯ ಮೇಲೆ ಅತಿ ಹೆಚ್ಚಿನ ಪ್ರಭಾವವನ್ನು ಬೀರಿದವು. ಪುರಾಣ ಮತ್ತು ಇತಿಹಾಸಗಳನ್ನು ಕಾವ್ಯಕ್ಕೆ ಅಳವಡಿಸಿಕೊಳ್ಳುವ ಮಾದರಿಯೊಂದನ್ನು ನಿರ್ಮಿಸಿದವು. ‘ಹಿತಮಿತ ಮೃದುವಚನ’ ಎಂದು ಪಂಪ ತನ್ನ ಭಾಷೆಯ ಬಗ್ಗೆ ಹೇಳಿಕೊಂಡಿದ್ದಾನೆ. ಈ ಶಾಸ್ತ್ರೀಯ ಕವಿ ತನ್ನ ಕೃತಿಗಳಲ್ಲಿ ಪರಿಶೀಲಿಸಿದ ಆಶಯಗಳು, ಬಳಸಿದ ರೂಪಕಗಳು ಆಧುನಿಕ ಕನ್ನಡ ಸಾಹಿತ್ಯದ ಕೃತಿಗಳ ಮೇಲೂ ಪರಿಣಾಮ ಬೀರಿವೆ. ವಿಶೇಷವಾಗಿ ಕುವೆಂಪು ಅವರು ಪಂಪನ ಎರಡು ಕಾವ್ಯಗಳ ಆಶಯವನ್ನು ತಮ್ಮ ಕಾದಂಬರಿಗಳಲ್ಲಿ ಹೊಸಬಗೆಯಲ್ಲಿ ಅನ್ವೇಷಿಸಿರುವುದನ್ನು ಕಾಣಬಹುದು. ಕೃತಿಗಳು ಆದಿಪುರಾಣ ವಿಕ್ರಮಾರ್ಜುನ ವಿಜಯ  ಪಂಪ ಭಾರತ ಅರಿಕೇಸರಿಯ ಆಸ್ಥಾನ ಬನವಾಸಿ ವರ್ಣನೆಯ ಪದ್ಯ ಪಂಪನ ಭಾರತಕಾವ್ಯದಲ್ಲಿ ಬರುವ ಬನವಾಸಿಯ ವರ್ಣನೆಯನ್ನು ನೀಡುವು ಪದ್ಯಗಳು ಸೊಗಯಿಸಿ ಬಂದ ಮಾಮರನೆ ತಳ್ತೆಲೆವಳ್ಳಿಯೆ ಪೂತ ಜಾತಿ ಸಂ- ಪಗೆಯೆ ಕುಕಿಲ್ವ ಕೋಗಿಲೆಯೆ ಪಾಡುವ ತುಂಬಿಯೆ ನಲ್ಲರೊಳ್ಮೊಗಂ| ನಗೆಮೊಗದೊಳ್ ಪಳಂಚಲೆಯೆ ಕೂಡುವ ನಲ್ಲರೆ ನೋೞ್ಪೊಡಾವ ಬೆ- ಟ್ಟುಗಳೊಳಮಾವ ನಂದನವನಂಗಳೊಳಂ ಬನವಾಸಿ ದೇಶದೊಳ್|| ೨೮ (ಚಂಪಕಮಾಲೆ) ಗದ್ಯ ಭಾಗ : ಬನವಾಸಿ ದೇಶದ ಯಾವ ಬೆಟ್ಟಗಳಲ್ಲಿಯೂ ಉದ್ಯಾನವನಗಳಲ್ಲಿಯೂ ನೋಡುವುದಾದರೆ ಸೊಗಸಾಗಿ ಫಲ ಬಿಟ್ಟಿರುವ ಮಾವಿನ ಮರಗಳೇ; ದಟ್ಟವಾಗಿ ಸೇರಿಕೊಂಡಿರುವ ವಿಳ್ಳೆಯದೆಲೆಯ ಬಳ್ಳಿಗಳೇ, ಹೂವನ್ನು ಬಿಟ್ಟಿರುವ ಜಾಜಿ ಮತ್ತು ಸಂಪಗೆ ಗಿಡಗಳೇ; ಸುಸ್ವರವಾಗಿ ಧ್ವನಿಮಾಡುವ ಕೋಗಿಲೆ, ಝೇಂಕರಿಸುವ ದುಂಬಿಗಳೇ, ಪ್ರೇಯಸಿಯರ ಒಳ್ಳೆಯ ಮುಖಗಳೇ, ನಗುಮುಖದಲ್ಲಿ ಪ್ರತಿಭಟಿಸಿ ಕೂಡುವ ನಲ್ಲರೇ. ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿನಿಂಪುಗ- ಳ್ಗಾಗರವಾದ ಮಾನಸರೆ ಮಾನಸರಂತವರಾಗಿ ಪುಟ್ಟಲೇ-| ನಾಗಿಯುಮೇನೊ ತೀರ್ದಪುದೆ ತೀರದೊಡಂ ಮಱಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ವನವಾಸಿ ದೇಶದೊಳ್||   (ಉತ್ಪಲಮಾಲೆ) ಗದ್ಯಭಾಗ : ಆ ಬನವಾಸಿ ದೇಶದಲ್ಲಿ ತ್ಯಾಗ, ಭೋಗ, ವಿದ್ಯೆ, ಸಂಗೀತ-ಗೋಷ್ಠಿಗಳ ಸಂತೋಷ ಸೌಖ್ಯಕ್ಕೆ ಅನರಾಗಿರುವ ಮನುಷ್ಯರೇ ಮನುಷ್ಯರು. ಅಂತಹ ಅದೃಷ್ಟಶಾಲಿಗಳಾದ ಮನುಷ್ಯರಾಗಿ ಹುಟ್ಟಲು ಏನಾದರೂ ತಾನೇ ಸಾಧ್ಯವೇ? ಹಾಗೆ ಸಾಧ್ಯವಾಗದಿದ್ದರೂ ಆ ಬನವಾಸಿ ದೇಶದ ನಂದನವನಗಳಲ್ಲಿ ಮರಿದುಂಬಿಯಾಗಿಯೋ ಅಥವಾ ಕೋಗಿಲೆಯಾಗಿಯೋ ಹುಟ್ಟಬೇಕು. ತೆಂಕಣ ಗಾಳಿ ಸೋಂಕಿದೊಡಮೊಳ್ನುಡಿಗೇಳ್ದೊಡಮಿಂಪನಾಳ್ದ ಗೇ- ಯಂ ಕಿವಿವೊಕ್ಕೊಡಂ ಬಿರಿದ ಮಲ್ಲಿಗೆಗಂಡೊಡಮಾದ ಕೆಂದಲಂ-| ಪಂಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ- ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿ ದೇಶಮಂ||  (ಉತ್ಪಲಮಾಲೆ) ಗದ್ಯಭಾಗ – ದಕ್ಷಿಣ ದಿಕ್ಕಿನ ತಂಪಾದ ಗಾಳಿಯ ಸ್ಪರ್ಶವಾದರೂ ಒಳ್ಳೆಯ ಮಾತನ್ನು ಕೇಳಿದರೂ ಇಂಪಾದ ಗಾನವು ಕಿವಿಯನ್ನು ಪ್ರವೇಶಿಸಿದರೂ ಅರಳಿದ ಮಲ್ಲಿಗೆಯ ಹೂವನ್ನು ಕಂಡರೂ ನಿದ್ರಾಮುದ್ರಿತವಾದ ರತಿಸೌಖ್ಯಕ್ಕೆ ಪಾತ್ರವಾದರೂ ವಸಂತೋತ್ಸವ ಪ್ರಾಪ್ತವಾದರೂ ಏನು ಹೇಳಲಿ ಯಾರು (ಬೇಡವೆಂದು ತಡೆದು) ಅಂಕುಶದಿಂದ ತಿವಿದರೂ ನನ್ನ ಮನಸ್ಸು ಬನವಾಸಿ ದೇಶವನ್ನು ನೆನೆಯುತ್ತದೆ.  ಪಂಪ ಭಾರತದಲ್ಲಿ ಕರ್ಣನಿಗೆ ನಾಯಕತ್ವವನ್ನು ಪಟ್ಟವನ್ನು ಕಟ್ಟುವ ಪಂಪ ಮಹಾಭಾರತದಲ್ಲಿ ನೆನೆದೊಡೆ ನೆನೆ ಕರ್ಣಂ ನೆನೆ ಎಂದಿದ್ದಾನೆ.  ಆಕರಗಳು “ಆರ್ಕೈವ್ ನಕಲು”. Archived from the original on 2022-10-09. Retrieved 2020-03-26. ಪಂಪ, ಮೈಸೂರು ವಿಶ್ವವಿದ್ಯಾಲಯ, ೧೯೫೭ ಈ-ಭೋಗದ-ಜಗತ್ತೇ-ಬೇರೆ-ಆದಿಪುರ/ ಪಂಪಭಾರತ : ಗದ್ಯಾನುವಾದ – ಚತುರ್ದಶಾಶ್ವಾಸಂ ಪದ್ಯ ೪೩-೫೨ ______________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಅಂಕಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಹಾಮಾನವತಾವಾದಿ ಶರಣೆ ಮದರ್ ಥೆರೇಸಾ ಬಡವರ ನಿರ್ಗತಿಕರ ರೋಗಿಗಳ ಪಾಲಿನ ದೇವತೆ ಮಾನವತಾವಾದಿ ಮದರ್ ಥೆರೇಸಾ ಅವರ ಜೀವನವೇ ಒಂದು ದಿವ್ಯಾವದರ್ಶನ. ಮದರ್ ಥೆರೇಸಾ ಅವರು ಜಗತ್ತಿನಾದ್ಯಂತ ದಯೆ, ಕರುಣೆ ಮತ್ತು ನಿಸ್ವಾರ್ಥ ಸೇವೆಗೆ ಹೆಸರಾದ ಒಬ್ಬ ಮಹಾನ್ ಮಾನವತಾವಾದಿ. ಅವರು ತಮ್ಮ ಇಡೀ ಜೀವನವನ್ನು ಅನಾಥರು, ರೋಗಿಗಳು ಮತ್ತು ಸಮಾಜದಿಂದ ನಿರ್ಲಕ್ಷಿಸಲ್ಪಟ್ಟ ಬಡವರ ಸೇವೆಗಾಗಿ ಮುಡಿಪಾಗಿಟ್ಟರು. ೧. ಆರಂಭಿಕ ಜೀವನ ಮತ್ತು ಬಾಲ್ಯ ನಿಜವಾದ ಹೆಸರು: ಆಗ್ನೆಸ್ ಗೊಂಕ್ಷಾ ಬೊಜಾಕ್ಸಿಯು.ಜನನ: ಆಗಸ್ಟ್ ೨೬, ೧೯೧೦ ರಂದು ಉತ್ತರ ಮ್ಯಾಸಿಡೋನಿಯಾದ ಸ್ಕೋಪ್ಜೆಯಲ್ಲಿ ಜನಿಸಿದರು. ಅಲ್ಬೇನಿಯಾ ಕುಟುಂಬ:  ಇವರ ಪೋಷಕರು ನಿಕೊಲಾ ಮತ್ತು ಡ್ರಾನಾಫಿಲ್ ಬೊಜಾಕ್ಸಿಯು ಅಲ್ಬೇನಿಯಾ.  ಇವರ ಕುಟುಂಬವು ಬಡವರ ಬಗ್ಗೆ ಅಪಾರ ದಯೆ ಹೊಂದಿತ್ತು. ಧಾರ್ಮಿಕ ಕರೆ:  ಆಗ್ನೆಸ್ ಅವರಿಗೆ ಕೇವಲ ೧೨ನೇ ವಯಸ್ಸಿನಲ್ಲಿಯೇ ಧಾರ್ಮಿಕ ಜೀವನವನ್ನು ನಡೆಸುವ ಮತ್ತು ಬಡವರ ಸೇವೆ ಮಾಡುವ ಬಯಕೆ ಮೂಡಿತ. ೨. ಭಾರತಕ್ಕೆ ಆಗಮನ ಮತ್ತು ಶಿಕ್ಷಕಿಯಾಗಿ ಸೇವೆ ೧೮ನೇ ವಯಸ್ಸಿನಲ್ಲಿ ಅವರು ‘ಸಿಸ್ಟರ್ಸ್ ಆಫ್ ಲೊರೆಟೊ’ ಸಂಸ್ಥೆಯನ್ನು ಸೇರಿದರು.೧೯೨೯ರಲ್ಲಿ ಭಾರತಕ್ಕೆ ಬಂದ ಅವರು, ಕೋಲ್ಕೊತ್ತಾದ (ಕಲ್ಕತ್ತಾ) ಸೇಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಭೂಗೋಳಶಾಸ್ತ್ರ ಶಿಕ್ಷಕಿಯಾಗಿ ಸೇವೆ ಆರಂಭಿಸಿದರು. ನಂತರ ಅಲ್ಲಿಯೇ ಮುಖ್ಯೋಪಾಧ್ಯಾಯಿನಿಯಾಗಿಯೂ ಕಾರ್ಯನಿರ್ವಹಿಸಿದರು ೩. ಮಿಷನರೀಸ್ ಆಫ್ ಚಾರಿಟಿ ಸ್ಥಾಪನೆ ೧೯೪೬ರಲ್ಲಿ ಕೋಲ್ಕೊತ್ತಾದ ಕೊಳೆಗೇರಿಗಳಲ್ಲಿದ್ದ ಬಡವರ ಕಷ್ಟಗಳನ್ನು ಕಂಡು, ಅವರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಡಲು ತೀರ್ಮಾನಿಸಿದರು. ೧೯೫೦ರಲ್ಲಿ ವ್ಯಾಟಿಕನ್‌ನ ಅನುಮತಿಯೊಂದಿಗೆ “ಮಿಷನರೀಸ್ ಆಫ್ ಚಾರಿಟಿ” ಎಂಬ ಸೇವಾ ಸಂಸ್ಥೆಯನ್ನು ಸ್ಥಾಪಿಸಿದರು.ಈ ಸಂಸ್ಥೆಯ ಸನ್ಯಾಸಿನಿಯರು ನೀಲಿ ಅಂಚಿನ ಸರಳ ಬಿಳಿ ಸೀರೆಯನ್ನು ತಮ್ಮ ಸಮವಸ್ತ್ರವಾಗಿ ಧರಿಸತೊಡಗಿದರು. ೧೯೫೨ರಲ್ಲಿ ಸಾಯುವ ಸ್ಥಿತಿಯಲ್ಲಿದ್ದವರಿಗಾಗಿ ‘ನಿರ್ಮಲ್ ಹೃದಯ’ ಎಂಬ ಧರ್ಮಶಾಲೆಯನ್ನು ಆರಂಭಿಸಿದರು. ಇಲ್ಲಿ ನಿರಾಶ್ರಿತರು ಘನತೆಯಿಂದ ಕೊನೆಯುಸಿರೆಳೆಯಲು ಆಸರೆಯಾಗುತ್ತಿದ್ದರು. ೪. ಪ್ರಶಸ್ತಿ ಮತ್ತು ಗೌರವಗಳು ಅವರ ನಿಸ್ವಾರ್ಥ ಮಾನವೀಯ ಸೇವೆಯನ್ನು ಗುರುತಿಸಿ ಜಗತ್ತಿನಾದ್ಯಂತ ನೂರಾರು ಪ್ರಶಸ್ತಿಗಳನ್ನು ನೀಡಲಾಯಿತು: ನೊಬೆಲ್ ಶಾಂತಿ ಪ್ರಶಸ್ತಿ  (೧೯೭೯). ಭಾರತ ರತ್ನ ಪ್ರಶಸ್ತಿ (೧೯೮೦)  – ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ. ರೇಮನ್ ಮ್ಯಾಗ್ಸೇಸೆ ಪ್ರಶಸ್ತಿ (೧೯೬೨) ೫. ಕೊನೆಯ ದಿನಗಳು ಮತ್ತು ಸಂತ ಪದವಿ ನಿರಂತರ ಕಠಿಣ ಶ್ರಮ ಮತ್ತು ವಯೋಸಹಜ ಕಾಯಿಲೆಗಳಿಂದಾಗಿ ಮದರ್ ಥೆರೇಸಾ ಅವರು ಸೆಪ್ಟೆಂಬರ್ ೫, ೧೯೯೭ ರಂದು ಕೋಲ್ಕೊತ್ತಾದಲ್ಲಿ ನಿಧನರಾದರು.ಭಾರತ ಸರ್ಕಾರವು ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಿತು. ಸೆಪ್ಟೆಂಬರ್ ೪, ೨೦೧೬ ರಂದು ವ್ಯಾಟಿಕನ್‌ನ ಪೋಪ್ ಫ್ರಾನ್ಸಿಸ್ ಅವರು ಮದರ್ ಥೆರೇಸಾ ಅವರಿಗೆ ‘ಸಂತ’ (Saint Teresa of Calcutta) ಪದವಿಯನ್ನು ನೀಡಿ ಗೌರವಿಸಿದರು. ಮದರ್ ಥೆರೇಸಾ ಅವರ ನಿಸ್ವಾರ್ಥ ಸೇವೆ, ಕರುಣೆ ಮತ್ತು ಮಾನವೀಯತೆಯನ್ನು ಭಾರತದ ರಾಷ್ಟ್ರೀಯ ನಾಯಕರು, ಕವಿಗಳು ಮತ್ತು ವಿಮರ್ಶಕರು ವಿಭಿನ್ನ ಹಾಗೂ ಗೌರವಾನ್ವಿತ ದೃಷ್ಟಿಕೋನಗಳಿಂದ ಕಂಡಿದ್ದಾರೆ. ಅವರ ಬಗ್ಗೆ ಪ್ರಮುಖರ ಅಭಿಪ್ರಾಯಗಳು ನೋಡೋಣ: 1. ರಾಷ್ಟ್ರೀಯ ನಾಯಕರ ಅಭಿಪ್ರಾಯ ಭಾರತದ ರಾಜಕೀಯ ನಾಯಕರು ಮದರ್ ಥೆರೇಸಾ ಅವರನ್ನು ಭಾರತದ ಸಾಂಸ್ಕೃತಿಕ ರಾಯಭಾರಿ ಮತ್ತು ಕರುಣೆಯ ಸಾಕಾರ ರೂಪವಾಗಿ ನೋಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ತತ್ವಗಳ ಹೋಲಿಕೆ:  ಅನೇಕ ನಾಯಕರು ಮದರ್ ಥೆರೇಸಾ ಅವರ ಸೇವೆಯನ್ನು ಗಾಂಧೀಜಿಯವರ “ದರಿದ್ರ ನಾರಾಯಣ” (ಬಡವರಲ್ಲಿ ದೇವರನ್ನು ಕಾಣುವುದು) ತತ್ವಕ್ಕೆ ಹೋಲಿಸಿದ್ದಾರೆ. ಇಂದಿರಾ ಗಾಂಧಿ: “ಮದರ್ ಥೆರೇಸಾ ಅವರನ್ನು ಭೇಟಿಯಾಗುವುದೆಂದರೆ ನಂಬಿಕೆ, ಕರುಣೆ ಮತ್ತು ದೈವಿಕ ಶಕ್ತಿಯನ್ನು ಹತ್ತಿರದಿಂದ ಅನುಭವಿಸಿದಂತೆ. ಅವರು ಮಾತನಾಡುವುದು ಕಡಿಮೆ, ಮಾಡುವುದು ಹೆಚ್ಚು” ಎಂದು ಹೇಳಿದ್ದರು. ಡಾ. ಎಸ್. ರಾಧಾಕೃಷ್ಣನ್: “ಅವರು ಜಗತ್ತಿನ ಅತ್ಯಂತ ದೀನ ದಲಿತರಲ್ಲಿ ದೇವರನ್ನು ಕಂಡರು. ಅವರ ಸೇವೆ ಯಾವುದೇ ಧರ್ಮ ಅಥವಾ ದೇಶಕ್ಕೆ ಸೀಮಿತವಾಗಿರಲಿಲ್ಲ, ಅದು ಜಾಗತಿಕವಾಗಿತ್ತು” ಎಂದು ಶ್ಲಾಘಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ: ಮದರ್ ಥೆರೇಸಾ ನಿಧನರಾದಾಗ, “ಭಾರತವು ತನ್ನ ಅತ್ಯಂತ ಪ್ರೀತಿಯ ಮಗಳನ್ನು ಕಳೆದುಕೊಂಡಿದೆ. ಅವರು ಕತ್ತಲೆಯಲ್ಲಿದ್ದ ಕೋಟಿಗಟ್ಟಲೆ ಜನರ ಜೀವನದಲ್ಲಿ ಬೆಳಕಾಗಿದ್ದರು” ಎಂದು ಕಂಬನಿ ಮಿಡಿದಿದ್ದರು. 2. ಕವಿಗಳ ದೃಷ್ಟಿಕೋನ ಕವಿಗಳು ಮದರ್ ಥೆರೇಸಾ ಅವರನ್ನು ಶಾಂತಿ, ಪ್ರೀತಿ ಮತ್ತು ದೈವಿಕ ಕೃಪೆಯ ಸಂಕೇತವಾಗಿ ತಮ್ಮ ಕಾವ್ಯಗಳಲ್ಲಿ ಚಿತ್ರಿಸಿದ್ದಾರೆ.ನಡೆದಾಡುವ ದೇವತೆ: ಕವಿಗಳು ಅವರನ್ನು ಕಲ್ಕತ್ತಾದ ಬೀದಿಗಳಲ್ಲಿ ನಡೆದಾಡಿದ “ಕರುಣೆಯ ದೇವತೆ” ಎಂದು ವರ್ಣಿಸಿದ್ದಾರೆ. ಅಹಿಂಸೆ ಮತ್ತು ಪ್ರೀತಿಯ ಭಾಷೆ:  ಕಾವ್ಯಗಳಲ್ಲಿ ಅವರ ಬಿಳಿ ಮತ್ತು ನೀಲಿ ಅಂಚಿನ ಸೀರೆಯನ್ನು ಶಾಂತಿಯ ಧ್ವಜಕ್ಕೆ ಹೋಲಿಸಲಾಗಿದೆ. ಭಾಷೆ ತಿಳಿಯದ ದೇಶಕ್ಕೆ ಬಂದು ಕೇವಲ ‘ಪ್ರೀತಿಯ ಭಾಷೆ’ಯ ಮೂಲಕವೇ ಎಲ್ಲರ ಹೃದಯ ಗೆದ್ದರೆಂದು ಕವಿಗಳು ಕೊಂಡಾಡಿದ್ದಾರೆ. ತ್ಯಾಗದ ಮೂರ್ತಿ: ಸ್ವಂತ ಸಂಸಾರ, ದೇಶವನ್ನು ತೊರೆದು ಪರರ ಕಣ್ಣೀರು ಒರೆಸುವುದನ್ನೇ ಧರ್ಮವಾಗಿಸಿಕೊಂಡ ಅವರ ತ್ಯಾಗವನ್ನು ಕವಿಗಳು ದೈವಿಕ ಮಟ್ಟಕ್ಕೆ ಏರಿಸಿದ್ದಾರೆ. 3. ವಿಮರ್ಶಕರು ಕಂಡಂತೆ ವಿಮರ್ಶಕರು ಮದರ್ ಥೆರೇಸಾ ಅವರ ಕಾರ್ಯವನ್ನು ಸಾಮಾಜಿಕ ಮತ್ತು ತಾತ್ವಿಕ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದಾರೆ. ಸಾಂಸ್ಥಿಕ ಸಮಾಜ ಸೇವೆ: ವಿಮರ್ಶಕರ ಪ್ರಕಾರ, ಮದರ್ ಥೆರೇಸಾ ಕೇವಲ ವೈಯಕ್ತಿಕವಾಗಿ ಸೇವೆ ಮಾಡಲಿಲ್ಲ. ಬದಲಿಗೆ ‘ಮಿಷನರೀಸ್ ಆಫ್ ಚಾರಿಟಿ’ ಸಂಸ್ಥೆಯ ಮೂಲಕ ಜಗತ್ತಿನಾದ್ಯಂತ ವ್ಯವಸ್ಥಿತವಾದ ಸೇವಾ ಜಾಲವನ್ನು ನಿರ್ಮಿಸಿದರು. ಇದು ಆಧುನಿಕ ಜಗತ್ತಿಗೆ ಮಾದರಿ.ಮಾನವೀಯತೆಯೇ ಧರ್ಮ: ಕೆಲವರು ಅವರ ಧಾರ್ಮಿಕ ಹಿನ್ನೆಲೆಯನ್ನು ಚರ್ಚಿಸಿದರೂ, ಬಹುತೇಕ ವಿಮರ್ಶಕರು “ಅವರ ಸೇವೆ ಜಾತೀಯತೆ ಮತ್ತು ಧರ್ಮದ ಗಡಿಗಳನ್ನು ಮೀರಿದ್ದು. ರೋಗಿಗಳನ್ನು ಮುಟ್ಟಲು ಹಿಂಜರಿಯುತ್ತಿದ್ದ ಕಾಲದಲ್ಲಿ, ಅವರು ಕುಷ್ಠರೋಗಿಗಳನ್ನು ತಬ್ಬಿ ಆರೈಕೆ ಮಾಡಿದ್ದು ಕ್ರಾಂತಿಕಾರಿ ಹೆಜ್ಜೆ” ಎಂದು ಒಪ್ಪಿಕೊಂಡಿದ್ದಾರೆ. ನೊಬೆಲ್ ಪ್ರಶಸ್ತಿಯ ಸಾರ್ಥಕತೆ:  ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಬಂದಾಗ, “ಈ ಪ್ರಶಸ್ತಿಯಿಂದ ಮದರ್ ಥೆರೇಸಾ ಅವರಿಗೆ ಗೌರವ ಬರಲಿಲ್ಲ, ಬದಲಿಗೆ ಅವರಿಗೆ ನೀಡಿದ್ದರಿಂದ ನೊಬೆಲ್ ಪ್ರಶಸ್ತಿಗೇ ಒಂದು ಸಾರ್ಥಕತೆ ಸಿಕ್ಕಿತು” ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಮದರ ಥೆರೇಸಾ ಎಂಬ ಮಹಾಮಾನವತೆಯ ದೇವತೆ ಹುಟ್ಟಿದ ಅಲ್ಬೇನಿಯಾ ರಾಷ್ಟ್ರ ಮತ್ತು ಕರ್ಮ ಭೂಮಿ ಭಾರತದ ನೆಲದ ಋಣ ತೀರಿಸಿದ ಸಂತೆ ಶರಣೆ. ಮನುಕುಲವು ನೆನಪಿಡುವ ಮಹಾ ಮಾನವತಾವಾದಿ ಸಾವಿಲ್ಲದ ಶರಣೆ _______________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಅಪ್ಪಟ ರಾಷ್ಟ್ರ ಪ್ರೇಮಿ ಜೈ ಹಿಂದ್ ಘೋಷಣೆ ಜನಕ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲಾ ರಾಜ್ಯಗಳ ಧರ್ಮೀಯರ ಕೊಡುಗೆ ಅಪಾರವಾಗಿದೆ. ಮಹಾತ್ಮಾ ಗಾಂಧಿ ನೆಹರು ವಲ್ಲಭಭಾಯಿ ಪಟೇಲ್ ಸುಭಾಷ್ ಚಂದ್ರ ಬೋಸ್ ಹೀಗೆ ಬೇರೆ ಬೇರೆ ನಾಯಕರ ನೇತೃತ್ವದಲ್ಲಿ ಸಂಗ್ರಾಮ ಹೋರಾಟ ನಡೆದಿವೆ. ಇಂತಹ ಒಂದು ಅಪರೂಪದ ಹೋರಾಟವೇ  ಭಾರತೀಯ ರಾಷ್ಟ್ರೀಯ ಸೇನೆಯ (INA) ಇದನ್ನು ಸ್ಥಾಪಿಸಿದವರು. ಸುಭಾಷ್ ಚಂದ್ರ ಬೋಸ್. ಇವರ ಕರೆಗೆ ಓಗೊಟ್ಟು  ಸಾವಿರಾರು ಯುವಕರು ಭಾರತೀಯ ಸೇನೆಯನ್ನು ಸೇರಿದರು. ಹಿಂದೂ ಮುಸ್ಲಿಂ ಸಿಖ್ ಇಸಾಯಿ ಮುಂತಾದ ಬೇರೆ ಬೇರೆ ಧರ್ಮದವರ ನಂಬಿಕೆಯುಳ್ಳ ಯುವಕರ ಪಡೆ ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿದರು . ಅವರೆಲ್ಲರ ಆಚರಣೆ ವಿಚಾರ ಭಿನ್ನ ಭಿನ್ನವಾಗಿ ಕಂಡು ಬಂದವು. ಕೆಲವರು ಬೆಳಿಗ್ಗೆ ಎದ್ದು ಕೂಡಲೇ ರಾಮ್ ರಾಮ್ ಎನ್ನುತ್ತಿದ್ದರು ಇನ್ನೂ ಕೆಲವರು ವಾಲೀಕುಂ ಸಲಾಂ ಎನ್ನುತ್ತಿದ್ದರು. ಸಿಖ್ ಜನಾಂಗ ಅಕಾಲಿ ಎನ್ನುತ್ತಿದ್ದರು ಹೀಗೆ ಒಂದೇ ಭಾರತೀಯ ಸೇನಾ  ಸಂಸ್ಕೃತಿಯಲ್ಲಿ ಭಿನ್ನ ಭಿನ್ನವಾಗಿ ಸೈನಿಕರು ಘೋಷಣೆ ಅಥವಾ ತಮ್ಮ ತಮ್ಮ ಬೆಳಗಿನ ನಮಸ್ಕಾರಗಳನ್ನು ಹೇಳುತ್ತಿದ್ದರು. ಇದನ್ನು ಏಕ ರೂಪದಲ್ಲಿ ಅಳವಡಿಸಲು ಸುಭಾಷ್ ಚಂದ್ರ ಬೋಸರು ಚಿಂತಿಸ ಹತ್ತಿದರು ಆಗ ಇವರ ನೆರವಿಗೆ ಬಂದವರೇ ಅಬಿದ್ ಹಸನ್ ಸಫ್ರಾನೀ ಎಂಬ. ಮುಸ್ಲಿಂ ಯುವಕ. ಹಲವು ದಿನಗಳ ವರೆಗೆ. ಯೋಚನೆ ಮಾಡಿ ಜೈ ಹಿಂದುಸ್ತಾನಿ ಎಂದು ಆರಂಭದಲ್ಲಿ ಘೋಷಣೆ ಕೂಗಿದರೂ ಸಹಿತ ಮುಂದೆ ಅದನ್ನು ಜೈ ಹಿಂದ್ ಎಂಬ ಘೋಷಣೆಗೆ ಮಾರ್ಪಾಡಿಸಿದವರು  ಅಬಿದ ಹಸನ್ ಸಫ್ರಾನಿ . ಅಬಿದ್ ಹಸನ್ ಸಫ್ರಾನಿ (Zain-al-Abdin Hasan) ಅವರು ಭಾರತದ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಕಟ ಒಡನಾಡಿ ಮತ್ತು ಭಾರತೀಯ ರಾಷ್ಟ್ರೀಯ ಸೇನೆಯ (INA) ಪ್ರಮುಖ ಅಧಿಕಾರಿಯಾಗಿದ್ದರು. ಇಡೀ ದೇಶವನ್ನು ಒಗ್ಗೂಡಿಸಿದ ‘ಜೈ ಹಿಂದ್’ (Jai Hind) ಎಂಬ ಪ್ರಸಿದ್ಧ ಘೋಷಣೆಯನ್ನು ಸೃಷ್ಟಿಸಿದ ರೂವಾರಿ ಇವರೇ ಆಗಿದ್ದಾರೆ. ಆರಂಭಿಕ ಜೀವನ ಮತ್ತು ಶಿಕ್ಷಣ ಜನನ:  ಇವರು 11 ಏಪ್ರಿಲ್ 1911 ರಂದು ಹೈದರಾಬಾದ್‌ನ ಶ್ರೀಮಂತ ಮತ್ತು ಬ್ರಿಟಿಷ್ ವಿರೋಧಿ ನಿಲುವು ಹೊಂದಿದ್ದ ಕುಟುಂಬದಲ್ಲಿ ಜನಿಸಿದರು. ಮೂಲ ಹೆಸರು:  ಇವರ ನಿಜವಾದ ಹೆಸರು ‘ಝೈನ್-ಅಲ್-ಅಬ್ದಿನ್ ಹಸನ್’.ಶಿಕ್ಷಣ: ಇವರ ತಾಯಿ ಬ್ರಿಟಿಷರ ಮೇಲಿನ ವಿರೋಧದಿಂದಾಗಿ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ಇಂಗ್ಲೆಂಡ್‌ಗೆ ಕಳುಹಿಸದೆ ಜರ್ಮನಿಗೆ ಕಳುಹಿಸಿದರು. ಅಲ್ಲಿ ಅಬಿದ್ ಅವರು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ನೇತಾಜಿ ಒಡನಾಟ ಮತ್ತು ಐಎನ್‌ಎ (INA) ಪಾತ್ರಪ್ರೇರಣೆ:  ಜರ್ಮನಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾಷಣದಿಂದ ಪ್ರೇರಿತರಾಗಿ, ತಮ್ಮ ಎಂಜಿನಿಯರಿಂಗ್ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. ಸಬ್‌ಮರೀನ್ ಪ್ರಯಾಣ:  ಎರಡನೇ ಮಹಾಯುದ್ಧದ ಸಮಯದಲ್ಲಿ ನೇತಾಜಿ ಅವರೊಂದಿಗೆ ಜರ್ಮನಿಯಿಂದ ಜಪಾನ್‌ಗೆ ಅತ್ಯಂತ ಅಪಾಯಕಾರಿ 90 ದಿನಗಳ ಸಬ್‌ಮರೀನ್ (ಜಲಾವೃತ ನೌಕೆ) ಪ್ರಯಾಣ ಕೈಗೊಂಡ ಏಕೈಕ ಭಾರತೀಯ ಇವರಾಗಿದ್ದಾರೆ.’ಸಫ್ರಾನಿ’ ಹೆಸರಿನ ಹಿನ್ನೆಲೆ: ಐಎನ್‌ಎ ಧ್ವಜ ವಿನ್ಯಾಸದ ಸಂದರ್ಭದಲ್ಲಿ ಹಿಂದೂ ಮತ್ತು ಮುಸ್ಲಿಂ ಸೈನಿಕರ ನಡುವೆ ಭಿನ್ನಾಭಿಪ್ರಾಯ ಮೂಡದಂತೆ ಕೋಮು ಸೌಹಾರ್ದತೆಯನ್ನು ಸಾರಲು, ಹಿಂದೂಗಳ ಪವಿತ್ರ ಬಣ್ಣವಾದ ಕೇಸರಿಯನ್ನು (Saffron) ಸೂಚಿಸಿ, ತಮ್ಮ ಹೆಸರಿನೊಂದಿಗೆ ‘ಸಫ್ರಾನಿ’ ಎಂದು ಸೇರಿಸಿಕೊಂಡರು. ‘ಜೈ ಹಿಂದ್’ ಘೋಷಣೆಯ ಜನ್ಮ ಭಾರತೀಯ ಸೈನಿಕರನ್ನು ಧರ್ಮ ಮತ್ತು ಪ್ರಾಂತ್ಯಗಳ ಭೇದವಿಲ್ಲದೆ ಒಂದೇ ಗೌರವ ವಂದನೆಯಲ್ಲಿ ಸ್ವಾಗತಿಸಲು ನೇತಾಜಿ ಬಯಸಿದ್ದರು.ಆಗ ಅಬಿದ್ ಹಸನ್ ಅವರು “ಜೈ ಹಿಂದೂಸ್ತಾನ್ ಕಿ” ಎಂಬ ನುಡಿಗಟ್ಟನ್ನು ಸುಧಾರಿಸಿ “ಜೈ ಹಿಂದ್” (ಭಾರತಕ್ಕೆ ಜಯವಾಗಲಿ) ಎಂಬ ಸಂಕ್ಷಿಪ್ತ, ಶಕ್ತಿಯುತ ಘೋಷಣೆಯನ್ನು ಸೃಷ್ಟಿಸಿದರು. ನೇತಾಜಿ ಇದನ್ನು ತಕ್ಷಣವೇ ಒಪ್ಪಿಕೊಂಡು ಐಎನ್‌ಎಯ ಅಧಿಕೃತ ವಂದನೆಯನ್ನಾಗಿ ಮಾಡಿದರು. ರಾಜತಾಂತ್ರಿಕ ವೃತ್ತಿಜೀವನ  (Diplomat)ಸ್ವಾತಂತ್ರ್ಯದ ನಂತರ, ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೋರಿಕೆಯ ಮೇರೆಗೆ ಇವರು ಭಾರತೀಯ ವಿದೇಶಾಂಗ ಸೇವೆಗೆ (IFS) ಸೇರಿದರು.ಈಜಿಪ್ಟ್, ಡೆನ್ಮಾರ್ಕ್, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ರಾಯಭಾರಿಯಾಗಿ (Ambassador) ಅತ್ಯುತ್ತಮ ಸೇವೆ ಸಲ್ಲಿಸಿ 1969 ರಲ್ಲಿ ನಿವೃತ್ತರಾದರು. Nidhana ಈ ಮಹಾನ್ ದೇಶಭಕ್ತರು 9 ಮೇ 1984 ರಂದು ತಮ್ಮ ಸ್ವಂತ ನಗರವಾದ ಹೈದರಾಬಾದ್‌ನಲ್ಲಿ ನಿಧನರಾದರು. ಇತ್ತೀಚೆಗೆ ಅವರ ಸಾಹಸಮಯ ಜೀವನದ ಕುರಿತು Abid Hasan Safrani Netaji’s Comrade-in-Arms ಎಂಬ ಪುಸ್ತಕವನ್ನು ಅವರ ಕುಟುಂಬದವರು ಪ್ರಕಟಿಸಿದ್ದಾರೆ. ಇಂತಹ ಅಪರೂಪದ ಪ್ರಬುದ್ಧ ಪ್ರಾಮಾಣಿಕ ಭಾರತೀಯ ಸೇನಾ ಪಡೆ ಸೇನಾನಿ ಇತಿಹಾಸಗಳ ಪುಟದಲ್ಲೂ ಸೇರ್ಪಡೆಗೊಂಡಿಲ್ಲ. __________________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸ್ವಾತಂತ್ರ್ಯ ಸಿಂಹ ನರಗುಂದ ಶ್ರೀ ಬಾಬಾಸಾಹೇಬ ಸಂಸ್ಥಾನ ಸಿಂಹ ಕ್ರಾಂತಿಕಾರಿ ಹೋರಾಟಗಾರ ಶ್ರೀ  ಬಾಬಾಸಾಹೇಬ ಭಾವೆ ನರಗುಂದ ಸಂಸ್ಥಾನದ ಪ್ರಭು (1842-58) ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕದ ಒಬ್ಬ ಅಪ್ರತಿಮ  ವೀರ. ಬಾಬಾ ಸಾಹೇಬ ಇವನ ಜನಪ್ರಿಯ ನಾಮ. ಹುಟ್ಟು ಹೆಸರು ಭಾಸ್ಕರರಾವ್ ಭಾವೆ. ನರಗುಂದ ಬಾಬಾಸಾಹೇಬ (ಭಾಸ್ಕರರಾವ್ ಭಾವೆ) ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕದ ಅಪ್ರತಿಮ ವೀರ ಮತ್ತು 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ನಾಯಕ. ಇವರು ಬ್ರಿಟಿಷರ “ದತ್ತು ಮಕ್ಕಳಿಗೆ ಹಕ್ಕಿಲ್ಲ” ನೀತಿಯನ್ನು ತೀವ್ರವಾಗಿ ವಿರೋಧಿಸಿ, ದೇಶಪ್ರೇಮದ ಕಹಳೆ ಮೊಳಗಿಸಿದರು ಅಧಿಕಾರಕ್ಕೆ ಇವರ ತಂದೆ ದಾದಾಜಿ ತಾಯಿ ಯಮುನಾಬಾಯಿ. ತಂದೆ ದಾದಾಜಿಯ ಆಡಳಿತ ಕಾಲದಲ್ಲಿ ಸಂಸ್ಥಾನ ಸಾಲದಲ್ಲಿ ಮುಳುಗಿಹೋಗಿತ್ತು. ಬಾಬಾ ಸಾಹೇಬ ಪಟ್ಟವೇರಿದ ತರುಣದಲ್ಲೇ ಆಡಳಿತವನ್ನು ಪುನರವ್ಯವಸ್ಥೆಗೊಳಿಸಿ ದಕ್ಷತೆಯಿಂದ ಆಳತೊಡಗಿದ.  ಸಂಸ್ಥಾನದ ಸಾಲದ ಹೊರೆ ಕಡಿಮೆಮಾಡಿ ಪ್ರಜೆಗಳ ಪ್ರೀತ್ಯಾದರ ಗಳಿಸಿದ. ದತ್ತು ಸ್ವೀಕಾರಕ್ಕೆ ಅನುಮತಿ ನೀಡದ ಬ್ರಿಟಿಷರು ದುರದೃಷ್ಟವಶಾತ್ ಬಾಬಾಸಾಹೇಬನಿಗಿದ್ದ ಒಬ್ಬನೇ ಮಗ ತೀರಿಕೊಂಡು ಸಂಸ್ಥಾನ ಉತ್ತರಾಧಿಕಾರಿಯಿಲ್ಲದೆ ಹೋಗುವಂಥ ಪರಿಸ್ಥಿತಿಯೊದಗಿತು. ಆಗ ಬಾಬಾ ಸಾಹೇಬ ಕಂಪನಿ ಸರ್ಕಾರಕ್ಕೆ ಪತ್ರ ಬರೆದು (1846) ದತ್ತು ಸ್ವೀಕಾರಕ್ಕೆ ಅನುಮತಿ ಕೋರಿದ. ಈ ಪ್ರಶ್ನೆ ಇನಾಮ್ ಕಮಿಷನರ್ ಮ್ಯಾನ್ಸನ್ ಎಂಬುವನ ಪರಿಶೀಲನೆಗೆ ಬಂತು. ಮ್ಯಾನ್ಸನ್ ಸಂಸ್ಥಾನದ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿಯಲ್ಲಿದೆ ಎಂಬ ನೆಪ ಒಡ್ಡಿ ದತ್ತಕ ಸ್ವೀಕಾರಕ್ಕೆ ಅನುಮತಿ ನಿರಾಕರಿಸಿದ. ಇದರಿಂದ ರೋಷಗೊಂಡ ಬಾಬಾಸಾಹೇಬ ಮ್ಯಾನ್‍ಸನ್ನನ ಮೇಲೂ ಬ್ರಿಟಿಷರ ಮೇಲೂ ಸೇಡು ತೀರಿಸಿಕೊಳ್ಳಬಯಸಿದ. ಬಂಡಾಯ ಆ ಕಾಲದಲ್ಲಿ ಲಾರ್ಡ್ ಡಾಲ್‍ಹೌಸಿಯ ನಿರಾಕರಣಸೂತ್ರ ಮತ್ತು ಅದರ ಹಿಂದೆಯೇ ಬಂದ ಇನಾಮ್ ಕಮಿಷನ್ನಿನ ಕಾರ್ಯ ಚಟುವಟಿಕೆಗಳೇ ಮೂಲ ಕಾರಣವಾಗಿ ಉತ್ತರ ಭಾರತಾದ್ಯಂತ ಮಹಾಕ್ರಾಂತಿ ಹತ್ತಿ ಉರಿಯುತ್ತಿತ್ತು (1857).  ಯಾವುದೇ ಹಕ್ಕು ಪತ್ರಗಳಿಲ್ಲದೆ ಹೋದರೆ ಅಥವಾ ಸಂಬಂಧಪಟ್ಟ ದಾಖಲೆಗಳು ಸ್ಪಷ್ಟವಾಗಿಲ್ಲವೆಂದು ಕಂಡುಬಂದರೆ ಅಂಥವರ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವನ್ನು ಇನಾಮ್ ಕಮಿಷನ್ನಿಗೆ ಕೊಡಲಾಗಿತ್ತು. ದಕ್ಷಿಣ ಮರಾಠಾ ದೇಶವೊಂದರಲ್ಲೇ ಇನಾಮ್ ಕಮಿಷನ್ ಸುಮಾರು 35,000 ಜಮೀನ್ದಾರರ ಒಡೆತನ ಹಕ್ಕುಗಳನ್ನು ಪರಿಶೀಲಿಸಿ, 21,000 ಜಮೀನ್ದಾರರ ಸ್ವತ್ತನ್ನು ಸರ್ಕಾರಕ್ಕೆ ಸೇರಿಸಿಕೊಂಡಿತ್ತು. ಇದರಿಂದಾಗಿ ನಿಪ್ಪಾಣಿ, ಜಂಬೋಟಿ ಮುಂತಾದ ಕಡೆಯ ಜಮೀನ್ದಾರರು ಒಟ್ಟುಗೂಡಿ ಬಂಡಾಯವೆದ್ದರೂ ಬ್ರಿಟಿಷರ ವಿರುದ್ಧ ಎದ್ದು ನಿಂತರೆ ಇವರೆಲ್ಲರ ಸಹಾನುಭೂತಿ ಸಹಾಯ ತನಗೆ ದೊರಕುವುದೆಂದು ಬಾಬಾಸಾಹೇಬ ಭಾವಿಸಿದ. ಸಿಪಾಯಿ ದಂಗೆಯಲ್ಲಿ ಮುಖ್ಯಪಾತ್ರ ವಹಿಸಿದ್ದ ಪೇಶ್ವೆ ನಾನಾಸಾಹೇಬನೊಡನೆ ಇವನು ಪತ್ರವ್ಯವಹಾರ ನಡೆಸಿದ. ಅನಂತರ ಡಂಬಳದ ಮತ್ತು ಹಮ್ಮಿಗೆಯ ದೇಸಾಯಿಗಳೊಡನೆ ಮತ್ತು ಮುಂಡರಗಿ ಭೀಮರಾವ್ ಇವರೊಂದಿಗೆ ರಹಸ್ಯ-ಸಮಾಲೋಚನೆ ನಡೆಸಿದ. ಕೊನೆಗೆ ಉತ್ತರ ಕರ್ನಾಟಕಾದ್ಯಂತ ಒಮ್ಮೆಲೆ ಬಂಡಾಯವೆದ್ದು ನರಗುಂದದವರು ಧಾರವಾಡ ಮತ್ತು ಅದರ ಪಶ್ಚಿಮ ಭಾಗವನ್ನೂ ಮುಂಡರಗಿ ಭೀಮರಾಯ ಕೊಪ್ಪಳವನ್ನೂ ವಶಪಡಿಸಿಕೊಳ್ಳಬೇಕೆಂಬ ನಿರ್ಣಯಕ್ಕೆ ಬರಲಾಯಿತು. ಈ ಮಧ್ಯೆ ಬ್ರಿಟಿಷರು ಶಸ್ತ್ರಾಸ್ತ್ರ ಕಾಯಿದೆಗೆ ಅನುಗುಣವಾಗಿ ಬಾಬಾಸಾಹೇಬ ತನ್ನ ಕೋಟೆಯಲ್ಲಿಟ್ಟಿದ್ದ ದೊಡ್ಡ ತೋಪುಗಳು ಮದ್ದುಗುಂಡು ಇತ್ಯಾದಿಗಳನ್ನು ತಮ್ಮ ವಶಕ್ಕೆ ಒಪ್ಪಿಸಬೇಕೆಂದು ಆಜ್ಞೆ ಮಾಡಿದರು. ಆಗ ದಕ್ಷಿಣ ಮರಾಠಾ ದೇಶದ ರಾಜಕೀಯ ಪ್ರತಿನಿಧಿಯಾಗಿದ್ದವ ಮ್ಯಾನ್‍ಸನ್. ಅಂದಿನ ಪ್ರಕ್ಷುಬ್ದ ಪರಿಸ್ಥಿತಿಯಲ್ಲಿ ಈ ಶಸ್ತ್ರಾಸ್ತ್ರಗಳು ಆಂಗ್ಲರ ವಿರೋಧಿಗಳಿಗೆ ದಕ್ಕುವಂತಾಗಬಾರದೆಂಬುದೇ ಬ್ರಿಟಿಷ್ ಸರ್ಕಾರದ ಆಶಯವೆಂದು ಹೇಳಿ, ನಂಬಿಸಿ ಬಾಬಾ ಸಾಹೇಬನಿಂದ ಶಸ್ತ್ರಾಸ್ತ್ರ ಒಪ್ಪಿಸುವ ಆಶ್ವಾಸನೆ ಪಡೆದ. ಬಾಬಾಸಾಹೇಬ ಅತಿಯಾದ ಮಳೆ ಸುರಿಯುತ್ತಿದೆಯೆಂಬ ನೆಪವೊಡ್ಡಿ ಮೂರು ತೋಪುಗಳನ್ನು ದುರ್ಗದಲ್ಲೇ ಉಳಿಸಿಕೊಂಡು ಉಳಿದೆಲ್ಲ ಸಾಮಗ್ರಿಗಳನ್ನೂ ಧಾರವಾಡದತ್ತ ಕಳುಹಿಸಿದ. ಜೊತೆಗೆ ಮಧ್ಯದಾರಿಯಲ್ಲಿ ಇವನೇ ಕಳುಹಿಸಿದ ಜನ ಸಾಗಣೆ ಸಿಬ್ಬಂದಿಯವರ ಮೇಲೆ ಬಿದ್ದು ಎಲ್ಲ ಶಸ್ತ್ರಾಸ್ತ್ರಗಳನ್ನು ದೋಚಿಕೊಂಡು ಬಂದರು. ಕಾರಣಾಂತರದಿಂದ ಮುಂಡರಗಿ ಭೀಮರಾವ್ ರಹಸ್ಯವಾಗಿ ನಿಗದಿಮಾಡಿದ್ದ ದಿನಕ್ಕೆ ಮೊದಲೇ ಬಂಡಾಯವೆದ್ದ. ಡಂಬಳದ ಖಜಾನೆಯನ್ನು ಲೂಟಿಮಾಡಿ ಕೊಪ್ಪಳ ದುರ್ಗವನ್ನಾಕ್ರಮಿಸಲು ಹೊರಟ. ಈ ವಿಷಯ ತಿಳಿದಾಕ್ಷಣ ಬಾಬಾ ಸಾಹೇಬ ತನ್ನ ಬಳಿಯಿದ್ದ ಜಿದೊಡ್ಡ ತೋಪುಗಳನ್ನು ದುರ್ಗದ ಮೇಲೆ ಸರಿಯಾದ ಸ್ಥಳಗಳಲ್ಲಿರಿಸಿ ಯುದ್ಧ ಸನ್ನದ್ಧನಾದ. ಕೂಟ ರಚನೆ:  ಬಾಬಾಸಾಹೇಬರು ಬ್ರಿಟಿಷರನ್ನು ಮಟ್ಟಹಾಕಲು ಮುಂಡರಗಿ ಭೀಮರಾವ್, ಸುರ್ಪುರ ವೆಂಕಟಪ್ಪ ನಾಯಕ, ರಾಮದುರ್ಗ, ಕೊಪ್ಪಳ ಮತ್ತು ನಿಪ್ಪಾಣಿಯ ಪ್ರಮುಖ ನಾಯಕರನ್ನು ಒಗ್ಗೂಡಿಸಿ ಬೃಹತ್ ಒಕ್ಕೂಟ ರಚಿಸಿಕೊಂಡರು. ಆರಂಭಿಕ ಗೆಲುವು ನರಗುಂದದೊಡೆಯನ ಈ ಅಪಾಯಕಾರಿ ಕ್ರಮಗಳ ವಿಷಯ ಮ್ಯಾನ್ಸ್‍ನ್ ಕುರುಂದವಾಡದಲ್ಲಿ ತಿಳಿಯಿತು. ಏನಾದರೂ ಮಾಡಿ ಇವನು ದಂಗೆ ಏಳದಂತೆ, ಅದು ಸಾಧ್ಯವಾಗದಿದ್ದರೆ ರಾಮದುರ್ಗದ ಸಂಸ್ಥಾನದ ಒಡೆಯನಾಗಿದ್ದ ಇವನ ಮಲತಮ್ಮ ದಂಗೆಕೋರರಿಗೆ ಸಹಾಯ ನೀಡದಂತೆ ಮಾಡಬೇಕೆಂಬ ಉದ್ದೇಶದಿಂದ ಮ್ಯಾನ್ಸನ್ ಮೇ 25 ರಂದು ಒಳದಾರಿ ಹಿಡಿದು ನರಗುಂದದ ಕಡೆಗೆ ಸಾಗಿದ. ಜೊತೆಯಲ್ಲಿ ದಕ್ಷಿಣ ಮರಾಠಾ ಅಶ್ವದಳದ 12 ಮಂದಿಯನ್ನು ಮಾತ್ರ ತನ್ನ ರಕ್ಷಣೆಗಾಗಿ ಕರೆದೊಯ್ದ. ಆದರೆ, ಕರ್ನಲ್ ಮಾಲ್ಕಮ್ ರಾಮದುರ್ಗದಲ್ಲಿ ದಕ್ಷಿಣ ಮರಾಠಾ ಆಶ್ವದಳದೊಡನೆ ತನ್ನನ್ನು ಸಂಧಿಸಬೇಕೆಂದು ಆಜ್ಞಾಪಿಸಿದ.  ದುರದೃಷ್ಟವಶಾತ್, ಈ ಆಜ್ಞೆ ತಲುಪುವಷ್ಟರಲ್ಲಿ, ಕರ್ನಲ್ ಮಾಲ್ಕಮ್ 250 ಕುದುರೆ ಸವಾರರೊಡನೆ ಡಂಬಳದ ಖಜಾನೆ ಲೂಟಿಮಾಡಿದ ಬಂಡುಕೋರರೊಡನೆ ಹೋರಾಟಕ್ಕೆ ಸಿದ್ಧನಾಗಿ ನಿಂತಿದ್ದ. ಇದರಿಂದ ಮ್ಯಾನ್ಸನ್ ರಾಮದುರ್ಗವನ್ನು ತಲುಪಿದಾಗ ಅವನ ರಕ್ಷಣೆಗಾಗಿ ಮಾಲ್ಕಮ್ ಅಲ್ಲಿರಲಾಗಲಿಲ್ಲ. ರಾಮದುರ್ಗದ ಒಡೆಯನೇನೋ ಸ್ನೇಹಭಾವವನ್ನೇ ತೋರಿದ. ಬಾಬಾಸಾಹೇಬ ಬರೆದಿದ್ದ ಪತ್ರ ತೋರಿಸಿ ಅಲ್ಲಿಗೆ ಹೋಗಕೂಡದೆಂದು ಎಚ್ಚರಿಸಿದ.  ಈ ಪತ್ರದಲ್ಲಿ ನರಗುಂದದೊಡೆಯ ಅಪಮಾನಕ್ಕಿಂತ ಮರಣವೇ ಲೇಸೆಂದು ರಾಮದುರ್ಗ ಸಹ ದಂಗೆಯಲ್ಲಿ ಪಾಲ್ಗೊಳ್ಳಬೇಕೆಂದೂ ಒತ್ತಿ ಹೇಳಿದ್ದ. ಧಾರವಾಡಕ್ಕೆ ಹೋಗಿ ಅಲ್ಲಿ ಮಾಲ್ಕಮನ ಪಡೆಯನ್ನು ಕೂಡಿಕೊಳ್ಳುವ ಉದ್ದೇಶದಿಂದ, ಎಷ್ಟು ಹೇಳಿದರೂ ಲಕ್ಷಿಸದೆ ಮ್ಯಾನ್ಸನ್ ಮೇ 29ರ ಮಧ್ಯಾಹ್ನ ರಾಮದುರ್ಗದಿಂದ ಹೊರಟ. ಹನ್ನೆರಡು ಮಂದಿ ಆಶ್ವೀಕರಲ್ಲದೆ ಅವನ ಜೊತೆ ಕೆಲವೇ ಪರಿಚಾರಕರಿದ್ದರು. ರಾಮದುರ್ಗದಿಂದ ಧಾರವಾಡದತ್ತ ಹೋಗುವ ದಾರಿ ನರಗುಂದದ ಸಮೀಪದಲ್ಲೇ ಹಾಯುತ್ತಿತ್ತು. ಹೀಗಾಗಿ ಮ್ಯಾನ್ಸನ್ನನ ಸಾಹಸ ಅಪಾಯದಿಂದ ಕೂಡಿತ್ತು. ರಾತ್ರಿಯಾಗುತ್ತಲೇ ಸುರೆಬಾನ ಎಂಬ ಹಳ್ಳಿಯಲ್ಲಿ ಇವನು ತಂಗಿದ. ಇಷ್ಟರಲ್ಲಿ ಮ್ಯಾನ್ಸನ್ ರಾಮದುರ್ಗದಿಂದ ಕಳುಹಿಸಿದ್ದ ಪತ್ರ ಓದಿ ಕೋಪೋದ್ರಿಕ್ತನಾಗಿದ್ದ ಬಾಬಾಸಾಹೇಬ ಸುಮಾರು 700-800 ಕುದುರೆ ಮತ್ತು ಕಾಲ್ದಳದೊಂದಿಗೆ ರಾಮದುರ್ಗದತ್ತ ಬಂದು ಮ್ಯಾನ್ಸನ್ ಸುರೆಬಾನದಲ್ಲಿ ತಂಗಿರುವ ವಿಷಯ ತಿಳಿದು ಅತ್ತ ಧಾವಿಸಿದ.ಹತ್ತಿರದ ಮಲ್ಲಿಕಾರ್ಜುನ ಗುಡ್ಡದ ಬಳಿ ವಿಶ್ರಾಂತಿ ಪಡೆಯುತ್ತಿದ್ದ ಮ್ಯಾನ್ಸನ್ ಮೇಲೆ ಬಾಬಾಸಾಹೇಬರ ಸೈನಿಕರು ಅನಿರೀಕ್ಷಿತ ದಾಳಿ ಮಾಡಿದರು.  ಬಾಬಾಸಾಹೇಬನ ಸೈನಿಕರು ಮ್ಯಾನ್ಸನ್ನನ ತಲೆ ಕಡಿದು ಹಾಕಿದರು. ಕತ್ತಲಲ್ಲಿ ಕೇವಲ ಆರು ಮಂದಿ ಸೈನಿಕರು ತಪ್ಪಿಸಿಕೊಂಡರು. ದಕ್ಷಿಣ ಮಹಾರಾಷ್ಟ್ರರ ಅಶ್ವದಳದ ಅಧಿಕಾರಿಗಳಲ್ಲಿ ಶ್ರೇಷ್ಠ ಎನಿಸಿದ್ದ ಪೂರ್ಣಸಿಂಗನೂ ಕೊಲ್ಲಲ್ಪಟ್ಟ. ಮ್ಯಾನ್ಸನ್ನನ ರುಂಡವನ್ನು ನರಗುಂದ ಪಟ್ಟಣದ ಅಗಸಿ ದ್ವಾರವೊಂದಕ್ಕೆ ನೇತುಹಾಕಲಾಯಿತು. ಮ್ಯಾನ್ಸನನ ಬಳಿಯಿದ್ದ ಕಾಗದಪತ್ರಗಳ ಪರಿಶೀಲನೆ ನಡೆಸಿದಾಗ ತನ್ನ ಅನುಚರರೇ ಆದ ಕೃಷ್ಣಾಜಿಪಂತ ಜೋಶಿ ಮತ್ತು ಮಾನ್ಯಾ ಬಾಪು ಮೊದಲಾದ ಬಾಬಾಸಾಹೇಬರ ಆಪ್ತರು ತಮ್ಮ ಕುಟಿಲುತನದಿಂದ  ದ್ರೋಹ ಎಸಗಿ  ತನ್ನ ಗುಪ್ತ ಕಾರ್ಯಾಗಾರಗಳೆಲ್ಲ ಬ್ರಿಟಿಷರಿಗೆ  ತಿಳಿಸಿರುವ  ವಿಷಯ ಗಮನಕ್ಕೆ ಬಂದು ಬಾಬಾ ಸಾಹೇಬನಿಗೆ ಗಾಬರಿಯಾಯಿತು. ಈ ದ್ರೋಹಿಗಳು ಮದ್ದಿನ ಮನೆಗೆ ಸಗಣಿ ತುಂಬಿದ್ದರು. ಎಷ್ಟಾದರೂ ಇವನು ಹೋರಾಟಕ್ಕೆ ಸಿದ್ಧನಾದ. ಸೋಲು ಮ್ಯಾನ್ಸನ್ ಮತ್ತು ಇತರರಿಗೊದಗಿದ ಘೋರ ಮರಣ ವೃತ್ತಾಂತ ಧಾರವಾಡಕ್ಕೆ ಮಾರನೇ ದಿನ ತಲುಪಿತು.  ಕೂಡಲೇ ಧಾರವಾಡದಿಂದ ಅಮರಗೋಳಕ್ಕೆ ಸಣ್ಣ ಪಡೆಯೊಂದನ್ನು ರವಾನಿಸಲಾಯಿತು.  ಜೂನ್ 1ರಂದು ಕರ್ನಲ್ ಮಾಲ್ಕಮ್ ದಕ್ಷಿಣ ಮರಾಠಾ ಅಶ್ವದಳದ 150 ಮಂದಿ ದೇಶೀಯ ಪದಾತಿದಳದ 28ನೆಯ ರೆಜಿಮೆಂಟ್ ಮತ್ತು 74ನೆಯ ಪರ್ವತ ಪಡೆಯ ಎರಡು ತುಕಡಿಗಳೊಡನೆ ನರಗುಂದ ತಲುಪಿದ. ನಡೆದ ಹೋರಾಟದಲ್ಲಿ ಪಟ್ಟಣ ಬ್ರಿಟಿಷರ ವಶವಾಯಿತು. ಮಾರನೆಯ ದಿನ ಬ್ರಿಟಿಷರು ಕೋಟೆ ವಶಪಡಿಸಿಕೊಳ್ಳಲು ಹೊರಟರು. ಬಾಬಾಸಾಹೇಬನಿಗೆ ಹೋರಾಟ ಮುಂದುವರಿಸುವುದರಿಂದ ಪ್ರಯೋಜನವಿಲ್ಲವೆಂಬ ಅರಿವಾಯಿತು. ಅಂದು ರಾತ್ರಿಯೇ ಆರು ಮಂದಿ ಆಪ್ತರೊಡನೆ ರಾಮದುರ್ಗ ತೊರೆದು ಹೋದ. ಬೆಳಗಾಂವಿಯ ಪೊಲೀಸ್ ಸೂಪರಿಂಟೆಂಡೆಂಟ್ ಆಗಿದ್ದ ಫ್ರಾಂಕ್ ಸೌಟರ್ ಮಾರನೆಯ ದಿನ ಪಂಢರಾಪುರಕ್ಕೆ ತೆರಳುವ ಯಾತ್ರಾರ್ಥಿಗಳಂತೆ ವೇಷ ಧರಿಸಿದ್ದ ಬಾಬಾಸಾಹೇಬ ಮತ್ತು ಅವನ ಅನುಚರರನ್ನು ತೊರಗಲ್ ಕಾಡಿನಲ್ಲಿ ಸೆರೆಹಿಡಿದು ಬೆಳಗಾಂವಿಗೆ ತಂದು ವಿಚಾರಣೆ ನಡೆಸಿ ಬಾಬಾಸಾಹೇಬನಿಗೆ ಮರಣದಂಡನೆ ವಿಧಿಸಲಾಯಿತು. 1858 ಜೂನ್ 12ರಂದು ಸಾವಿರಾರು ಮಂದಿಯ ಸಮ್ಮುಖದಲ್ಲಿ ಬೆಳಗಾಂವಿಯಲ್ಲಿ ಈ ವೀರ ಬಾಬಾಸಾಹೇಬನನ್ನು ನೇಣುಹಾಕಲಾಯಿತು.  ಶೋಕತಪ್ತರಾದ ಇವನ ತಾಯಿ ಯಮುನಾಬಾಯಿ ಮತ್ತು ಹೆಂಡತಿ ಸಾವಿತ್ರಿಬಾಯಿ ಮಲಪ್ರಭಾ ನದಿಗೆ ಹಾರಿಕೊಂಡು ಸತ್ತರು.  ಬಾಬಾಸಾಹೇಬ ಸ್ಥಾಪಿಸಿದ್ದ ಸುಮಾರು 3-4 ಸಹಸ್ರ ಗ್ರಂಥಗಳನ್ನೊಳಗೊಂಡಿದ್ದ ಪುಸ್ತಕ ಭಂಡಾರವನ್ನು ಬ್ರಿಟಿಷರು ಸುಟ್ಟರು.  1858 ಜೂನ್ 3ರಂದು ನರಗುಂದ ಸಂಸ್ಥಾನವನ್ನು ಬ್ರಿಟಿಷ್ ಅಧಿಪತ್ಯಕ್ಕೆ ಒಳಪಡಿಸಿಕೊಂಡರು. ಹೀಗೊಂದು ಕ್ರಾಂತಿ ತನ್ನ ಜನರಿಂದಲೇ ನೆಲೆ ಕಚ್ಚಿತು.

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಗಜೇಶ ಮಸಣಯ್ಯ ಗಜೇಶ ಮಸಣಯ್ಯನವರ  ವಚನಗಳು ಶರಣಸತಿ ಲಿಂಗಪತಿ ಭಾವ, ಷಟ್ಸ್ಥಲ ಸಿದ್ಧಾಂತ ಮತ್ತು ಆತ್ಮಜ್ಞಾನದ ಆಳವಾದ ತಿಳುವಳಿಕೆಯನ್ನು ಒಳಗೊಂಡಿವೆ. ಬಸವಣ್ಣನವರ ಕೀರ್ತಿಯನ್ನು ಕೇಳಿ ಇವರು ತಮ್ಮ ಮಡದಿಯೊಂದಿಗೆ ಕಲ್ಯಾಣಕ್ಕೆ ಬಂದು ಅನುಭವ ಮಂಟಪದ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು.  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜನಿಸಿದರು. ಒಬ್ಬಶ್ರೇಷ್ಠಅನುಭಾವಿ ಚಿಂತಕ ಬಸವಕಾಲಿನಶರಣರು.   ಕಾಲ – ಹನ್ನೆರಡನೆಯ ಶತಮಾನಒಟ್ಟು ವಚನಗಳು 70 ಜನ್ಮ ಸ್ಥಳ  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜನಿಸಿದರು.ಅಂಕಿತ -ಮಹಾಲಿಂಗ ಗಜೇಶ್ವರ”. ಮಡದಿ -ಗಜೇಶ ಮಸಣಮ್ಮಐಕ್ಯ ಸ್ಥಳ – ಕಲ್ಯಾಣ ಕ್ರಾಂತಿಯ ನಂತರದಲ್ಲಿ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಮನಹಳ್ಳಿ ಗ್ರಾಮದಲ್ಲಿದ್ದು ಕೊನೆಗೆ ಅಲ್ಲಿಯೇ ಐಕ್ಯರಾದರೆಂದು ಕೆಲವರು ಹೇಳಿದರೆ, ಅಕ್ಕಲಕೋಟೆಯ ಕರ್ಜಗಿ ಗ್ರಾಮದಲ್ಲಿ ಐಕ್ಯರಾದರೆಂದು ತಿಳಿದು ಬರುತ್ತದೆ.   12 ನೇ ಶತಮಾನದ ಅಪ್ರಸಿದ್ದ ವಚನಕಾರ, ಅಕಲಕೋಟೆ ತಾಲ್ಲೋಕಿನ ಕರಜಗಿ ಗ್ರಾಮದ ನಿವಾಸಿ. ಬಸವಾದಿ ಶರಣರ ಸಮಕಾಲೀನ. ಈತನ ಪತ್ನಿಯ ಹೆಸರು ಏನೆಂದು ತಿಳಿಯುವುದಿಲ್ಲವಾದರೂ ಆಕೆಯೂ ವಚನಕಾರ್ತಿಯಾಗಿರುವುದನ್ನು ಗಮನಿಸಬಹುದಾಗಿದೆ. ಇಂತಹ ಒಂದೆರಡು ಪ್ರಸಂಗಗಳು ವಚನ ಸಾಹಿತ್ಯಯುಗದಲ್ಲಿ ದಾಖಲಾಗಿವೆ. ಅವೆಲ್ಲವೂ ಷಟ್ಸ್ಥಲಸಿದ್ದಾಂತದ ವಿವರಗಳನ್ನು, ಆತ್ಮಜ್ಞಾನದ ತಿಳುವಳಿಕೆಯನ್ನು ಒಳಗೊಂಡಿವೆ. ಇವರ ವಚನಗಳ ಅಂಕಿತ “ಮಹಾಲಿಂಗ ಗಜೇಶ್ವರ”. ಹೊಸ ಮದುವೆ ಹಸೆ ಉಡುಗದ ಮುನ್ನಹೂಸಿದರಿಶಿನ ಬಿಸಿಲಿಂಗೆ ಹರಿಯದ ಮುನ್ನನೀರ ತಾಳ್ಮೆ ಹರಿಯದ ಮುನ್ನತನು ಸಂಚಳವಾಗಿ, ಮನ ಗುರುಕಾರುಣ್ಯವ ಪಡೆದುಹುಸಿ ಇಲ್ಲದಿದ್ದಡೆ ಭಕ್ತನೆಂಬೆಪಿಡಿಯಲಿಲ್ಲದಿದ್ದಡೆ ಮಾಹೇಶ್ವರನೆಂಬೆತನುವಿಲ್ಲದಿದ್ದಡೆ ಪ್ರಸಾದಿ ಎಂಬೆಭೇಧವಿಲ್ಲದಿದ್ದಡೆ ಪ್ರಾಣಲಿಂಗಿ ಎಂಬೆಆಸೆ ಇಲ್ಲದಿದ್ದಡೆ ಶರಣನೆಂಬೆಐವರ ಸಂಪರ್ಕ ಭೋಗವಾ[ಗ]ದಡೆ ಐಕ್ಯನೆಂಬೆಐಕ್ಯದ ಸಂತೋಷ ಹಿಂಗಿದಡೆ ಜ್ಯೋತಿರ್ಮಯವೆಂಬೆಇಂತಾಗಬೇಕೆಂಬ ಮನದ ದೇಹಇರಿದಡರಿಯದು, ಸ್ತುತಿಸಿದಡರಿಯದುಸುಖವನರಿಯದು, ದುಃಖವನರಿಯದುಈ ಚತಿರ್ವಿಧ ತಾಗು ನಿರೋಧವನರಿಯದಿರ್ದಡೆಅದೇ ಮಹಾಲಿಂಗ ಗಜೇಶ್ವರನೆಂಬೆ ಎನ್ನ ಕರಸ್ಥಲವೇ ಬಸವಣ್ಣನಯ್ಯಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯಎನ್ನ ಭಾವ ಸ್ಥಲವೇಪ್ರಭುದೇವರಯ್ಯ,ಇಂತೆನ್ನ ಕರ ಮನ ಭಾವಂಗಳಲ್ಲಿ  ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ    ಮಹಾಲಿಂಗ ಗಜೇಶ್ವರನಿಮ್ಮ ಶರಣರ ಘನವನುಎನ್ನ ಸರ್ವಾಂಗದಲ್ಲಿ  ಕಂಡು ಪರಮ ಸುಖಿಯಾಗಿರ್ದೆನು.                                         ಗಜೇಶ ಮಸಣಯ್ಯ -ವಚನ ಸಂಖ್ಯೆ 213 ಪುಟ 78 ಸಂಪುಟ 7ಇದು ಮಹಾ ಅನುಭವಿ ಗಜೇಶ ಮಸಣಯ್ಯನವರ ಅಪರೂಪದ ವಚನವಾಗಿದೆ. ಇಷ್ಟಲಿಂಗ ಪ್ರಾಣ ಲಿಂಗ ಭಾವಲಿಂಗಗಳು ತನ್ನ ಬದುಕಿನಲ್ಲಿ  ಹೇಗೆ ಅಳವಡಿಸಿಕೊಂಡನು ಮಸಣಯ್ಯ   ಎಂದು ಸುಂದರವಾಗಿ ಸಾದರಪಡಿಸಿದ್ದಾನೆ .ಎನ್ನ ಕರಸ್ಥಲವೇ ಬಸವಣ್ಣನಯ್ಯ———————————-ಗುರು ಲಿಂಗ ಜಂಗಮ – ಉಪಾದಿತವಲ್ಲ ಅವು ತತ್ವಗುಣಗಳು .ಶರೀರದಲ್ಲಿಯೇ ಇರುವ ಗುರು ಲಿಂಗ ಜಂಗಮ  ತತ್ವವವನ್ನು ವಿಸ್ತಾರಗೊಳಿಸಿ ಆಚರಿಸುವ ಸಲುವಾಗಿ, ಸುಲಭ ಸಾಧನವೆಂಬ ಇಷ್ಟಲಿಂಗ (ಕುರುಹು) ವನ್ನು ಪರಿಕಲ್ಪಿಸಿಕೊಟ್ಟು, ಸಮಸ್ತ ಜನವರ್ಗವನ್ನು ಪಾವನ ಮಾಡಿದವನು ಬಸವಣ್ಣ.ಕರಸ್ಥಲಕ್ಕೆ   ಪರಂಜ್ಯೋತಿಯ ಕುರುಹು ತಂದಿಟ್ಟ ಕರಣ ಬಸವಣ್ಣ ತನ್ನ ಕರಸ್ಥಲದಲ್ಲಿದ್ದನಯ್ಯ ಬಸವಣ್ಣನು ಎಂದಿದ್ದಾನೆ  ಗಜೇಶ ಮಸಣಯ್ಯ . ಇದನ್ನು ಚಾಮರಸನು ಅತ್ಯಂತ ಸುಂದರವಾಗಿ ಹೀಗೆ ಹೇಳಿದ್ದಾನೆ. ಕಾಯದೊಳು ಗುರು ಲಿಂಗ ಜಂಗಮದಾಯತವನರಿಯಲ್ಕೆ ಸುಲಭೋಪಾಯದಿಂದಿದಿರಿಟ್ಟು ಬಾಹ್ಯಸ್ಥಲಕೆ ಕುರುಹಾಗಿ |ದಾಯದೋರಿ ಸಮಸ್ತ ಭಕ್ತ ನಿಕಾಯವನು ಪಾವನವ ಮಾಡಿದರಾಯ ಪೂರ್ವಾಚಾರ್ಯ ಸಂಗನಬಸವ ಶರಣಾರ್ಥಿ||  ಚಾಮರಸ ( ಪ್ರಭು ಲಿಂಗ ಲೀಲೆ ) ಗಜೇಶ ಮಸಣಯ್ಯನವರು ಬಸವಣ್ಣ ತನ್ನ ಕರಸ್ಥಲದ ಚೇತನ ಕಾರಸ್ತಹದಲ್ಲಿ ಇಂಬುಗೊಂಡ ಲಿಂಗದ ಜನಕ ಎಂತಲೂ ಹೇಳಿದ್ದಾನೆ. ಕರಸ್ಥದಲ್ಲಿರುವ ಲಿಂಗವು ಜಂಗಮ ಸಮಾಜ ಎಂತಾದರೆ ಮಸಣಯ್ಯನವರಿಗೆ ಅದು ಬಸವಣ್ಣ ಮಾತ್ರ.ಕರಸ್ಥಲದಿಂದ ಕಾಯಕ ಮಾಡಿ ದಾಸೋಹ ಮಾಡುವ ತತ್ವವ ನೀಡಿದ ಬಸವಣ್ಣ ತನ್ನ ನಿಜದ ಅರಿವಿನ ಗುರು ಎಂದಿದ್ದಾನೆ. ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯ————————————–ಕರವು ಬಸವಣ್ಣನವರು ನೀಡಿದ ಇಷ್ಟಲಿಂಗದಿಂದ ಚುಳುಕಾಗಿ ಜಂಗಮ ಜ್ಞಾನಕ್ಕೆ ಕಾಲಿಡುವಾಗ ಮುಂದಿನ ಅಂತರಂಗದ ವಿಕಸತನದಲ್ಲಿ  ಚೆನ್ನ ಬಸವಣ್ಣ ಮನದ ಮೂರುತಿಯಾಗುತ್ತಾರೆ.ಮಾನಸಿಕವಾಗಿ ಬೌದ್ಧಿಕವಾಗಿ ಬಾಹ್ಯ ಶರೀರದಿಂದ ಆತ್ಮದ ಒಳಗೆ ಪ್ರವೇಶ ಮಾಡುವಾಗ ಚೆನ್ನ ಬಸವಣ್ಣನವರ ಷಟಸ್ಥಲ ಕರಣ ಹಸಿಗೆ ಕೊಡುಗೆ ಅಪಾರವಾಗಿದೆ..ಹೀಗಾಗಿ ಚೆನ್ನ ಬಸವಣ್ಣನವರ ಅನುಭವ ತಮ್ಮ ಪ್ರಾಣಲಿಂಗವಾಯಿತ್ತು ಎಂದು ಇಷ್ಟಲಿಂಗವೆಂಬ ಸ್ಥಾವರ ಭಾವವನ್ನು  ತೊರೆದು ಚೆನ್ನಬಸವಣ್ಣನವರ ಅನುಭವವೇ ಮೌಲ್ಯ ಅವುಗಳೇ ತಮಗೆ ಪ್ರಾಣಲಿಂಗವಾಗಿಸಲು ಅಂತರಂಗದ ಆತ್ಮ ವಿಮರ್ಶೆ ಆತ್ಮಾವಲೋಕನ ಅಗತ್ಯವಾಗಿದೆ ಎಂದಿದ್ದಾರೆ ಮಸಣಯ್ಯನವರು. ಎನ್ನ ಭಾವಸ್ಥಲವೇ ಪ್ರಭುದೇವರಯ್ಯ,———————————–ಇಷ್ಟಲಿಂಗ ಬಸವಣ್ಣ  ಪ್ರಾಣಲಿಂಗಚೆನ್ನಬಸವಣ್ಣನವರ ಜ್ಞಾನ ಪಡೆದ ಶರಣನು ಅಲ್ಲಮ ಪ್ರಭುದೇವರ ಉದಾತ್ತೀಕರಣ . ನಿರ್ದೇಹಿ ತತ್ವ   ಶರಣ ಸಂಕುಲಕ್ಕೆ ಆಕರ್ಷಣೆ ಮತ್ತು ಅನುಕರಣೀಯವಾಗಿದೆ.ಅಲ್ಲಮರ ಅನುಭಾವವು ಚಿಂತನೆಗಳು ಜಗತ್ತಿನ ಇಂದಿಗೂ ಆದರಣೀಯವಾದ ಮೌಲ್ಯಗಳು . ಇಷ್ಟಲಿಂಗವೆಂಬುದು ಅರಿವಿನ ಕುರು ಇಷ್ಟಲಿಂಗವು ಯೋಗ ಸಾಧನವು. ಅದನ್ನು ಮನದಲ್ಲಿರಿಸಿಕೊಂಡು ಪ್ರಾಣಜೀವಕ್ಕೆ ಸಂಚಯಿಸುವುದು ಪ್ರಾಣಲಿಂಗವು ಅದು ಚೆನ್ನಬಸವಣ್ಣನವರಜ್ಞಾನ ಮತ್ತು ಅನುಭವವು. ಪ್ರಾಣಮಯ ಮಾಡಿದ ಲಿಂಗ ಜ್ಞಾನವು ಭಾವಲಿಂಗವಾಗಿ ಸೃಷ್ಟಿ ಸ್ಥಿತಿ ಲಯಗಳ ಮಧ್ಯೆ ಪಂಚ ಮಹಾಭೂತಗಳ ಚೇಷ್ಟೆ ಕಾರ್ಯಗಳನ್ನು ಪಂಚೇಂದ್ರಿಗಳ ಮೂಲಕ ಅನುಭವಿಸುವ ಭಾವ ಲಿಂಗವೇ ಅಲ್ಲಮ ಪ್ರಭುಗಳು ಎಂದೆನ್ನುತ್ತಾರೆ ಮಸಣಯ್ಯನವರು. ಇಂತೆನ್ನ ಕರ ಮನ ಭಾವಂಗಳಲ್ಲಿ    ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ——————————————————————————ಈ ರೀತಿಯಾಗಿ ಇಷ್ಟ ಲಿಂಗ ಪ್ರಾಣಲಿಂಗ ಭಾವಲಿಂಗವು ತನ್ನ ಕಾಯದೊಳು ಕೂಡಿಕೊಂಡು ತನ್ನ ಶರೀರವನ್ನುಪ್ರಾಣವನ್ನು  ಮನವನ್ನು ಭಾವವನ್ನು ಶುದ್ಧ ಮಾಡುವ  ಪರಿ ಅದ್ಭುತವಾಗಿದೆ . ಇಷ್ಟ ಪ್ರಾಣ ಭಾವ ಲಿಂಗವೆನ್ನುವುದು   ಒಂದು ಮುಹೂರ್ತ ಸ್ವರೂಪ . ಭಕ್ತನ ಆಧ್ಯಾತ್ಮಿಕ ವಿಕಸನದ ಒಳ ಪಯಣ .ಬಾಹ್ಯವಾಗಿ ಬದುಕಲುಅಣಿಯಾಗುವ ಉಪಕ್ರಮ ಮಾತ್ರ . ಇದೆ ಕಾರಣಕ್ಕೆ ಬಸವಣ್ಣನವರು ಇದೆ ಅಂತರಂಗದ ಶುದ್ಧಿ ಇದೆ ಬಹಿರಂಗದ ಶುದ್ಧಿ ಎಂದಿದ್ದಾರೆ.ಒಳಗಿನ ಶುಚಿತ್ವವು ಹೊರಗಿನ ಸುಂದರತೆಗೆ ತತ್ವ ನಿಷ್ಠೆಗೆ ಕಾರಣವಾಗುತ್ತದೆ. ಶರಣ ಸಂಸ್ಕೃತಿಗೆ ಬಸವಣ್ಣ  ಚೆನ್ನ ಬಸವಣ್ಣ ಮತ್ತು ಅಲ್ಲಮಪ್ರಭುಗಳ ಅನುಭಾವ ಅನುಪಮವಾದದ್ದು ಎಂದು ಮಸಣಯ್ಯ ಶರಣ ಅವರನ್ನು ನೆನೆದಿದ್ದಾನೆ. ಮಹಾಲಿಂಗ ಗಜೇಶ್ವರ ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ  ಕಂಡು ಪರಮ ಸುಖಿಯಾಗಿರ್ದೆನು.————————————————————————————————–ಶರಣರ ಆಧ್ಯಾತ್ಮಿಕ ಸಾಧನೆಯಲ್ಲಿ ಅಲ್ಲಮ ಬಸವಣ್ಣ ಸಿದ್ಧರಾಮ ಅಕ್ಕಮಹಾದೇವಿ ಚೆನ್ನ ಬಸವಣ್ಣ ಮಡಿವಾಳ ಮಾಚಿದೇವ ಕಕ್ಕಯ್ಯ ಹೀಗೆ ಸಾವಿರಾರು ಶರಣರುತಮ್ಮ ಅನುಭಗಳ ನಿಜದ ನಿಲುವುಗಳನ್ನು ಅನುಭವ ಮಂಟಪದಲ್ಲಿ ನಿರಂತರವಾಗಿ ಪ್ರಕಟಗೊಳಿಸಿ ಶರಣಾತ ತತ್ವಗಳನ್ನು ಇನ್ನಷ್ಟು ಬಲಗೊಳಿಸಿದ್ದಾರೆ.ಆ ಕಾರಣ ತನ್ನ ಚೈತನ್ಯದ ಕುರುಹು ಮಹಾಲಿಂಗ ಗಜೇಶ್ವರ ಎಂಬುದಾಗಿ ಆತ್ಮ ನಿವೇದನೆ ಮಾಡಿಕೊಳ್ಳುತ್ತಾ ಗಜೇಶ ಮಸಣಯ್ಯನವರು ಪ್ರತಿ ಸಾಧಕರ ಶರಣರ ಘನವಾದ ನಿಲುವುಗಳನ್ನು ತಮ್ಮ ಅಂಗ ಗುಣ ಕಾಯದಲ್ಲಿ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾದೆನು ಎಂದು ಅಭಿಮಾನದಿಂದ ಹೇಳಿಕೊಂಡಿದ್ದಾರೆ.ಇಷ್ಟಲಿಂಗ ಸಾಧಕನ ಗಟ್ಟಿ ಮುಟ್ಟದ ಸಂಕೇತ ಅರಿವಿನ ಕುರುಹು ಅದನ್ನು ಕೊಟ್ಟ ಬಸವಣ್ಣ ಸಮಗ್ರ ಪಯಣದ ಚಿಂತನೆಗಳ ಆರಂಭಿಕ ಸೂತ್ರಧಾರ . ಇಷ್ಟಲಿಂಗವು ನಿತ್ಯ ಯೋಗಕ್ಕೆ ಸಾಧನ ಹಾಗು ಬಹು ಮುಖ್ಯ ಸಾಧನೆಯ ಮೆಟ್ಟಿಲು. ಇಷ್ಟಲಿಂಗದ ಯೋಗದೊಳು ಹೊಕ್ಕು ನಿರಂತರವಾಗಿ ವಿಕಸಿತವಾಗಿ ಅವುಗಳನ್ನು ಪ್ರಾಣದಲ್ಲಿ ಪ್ರತಿಷ್ಠಾಪನೆ   ಮಾಡಿದಲ್ಲಿ ಅಲ್ಲಿ ಪ್ರಾಣವು ಆನಂದಕರ ಭಾವವನ್ನು ಹೊಂದುತ್ತದೆ ಅದು ಮುಂದೆ ಭಾವಕ್ಕೆ ತಲುಪಿ ಮನವು ಪ್ರಸನ್ನ ಭಾವವಾಗುತ್ತದೆ. ಅದುವೇ ಕಾಯ ಪ್ರಸಾದ ಗುಣವಾಗುವ ಸಿದ್ಧಿಯೋಗ. ಬಸವಣ್ಣ ಸ್ಥೂಲ ಚೆನ್ನಬಸವಣ್ಣ ಸೂಕ್ಷ್ಮ ಮತ್ತು ಅಲ್ಲಮ ಪ್ರಭುಗಳು ಕಾರಣ ಶರೀರಕ್ಕೆ ಪ್ರತಿನಿಧಿಗಳಾಗುತ್ತಾರೆ.ಇದನ್ನು ಭಕ್ತನು ನಿತ್ಯ ನಿರಂತರವಾಗಿ ಕೈಗೊಂಡಾಗ ಮಾತ್ರ ಅನಂತಹ ಎತ್ತರದ ನಿಲುವನ್ನು ಕಾಣಲುಸಾದ್ಯ  ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಅಂಕಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸಮಾಜವಾದಿ ಚಿಂತಕರು,ಗಾಂಧಿವಾದಿಡಾ ಕುಮಾರ ಸಪ್ತರ್ಷಿ ಗ್ರಾಮ ರಾಜ್ಯದ ಕನಸು ಕಂಡ ಅಪ್ಪಟ ಗಾಂಧಿವಾದಿ ಡಾ. ಕುಮಾರ ಸಪ್ತರ್ಷಿ ಅವರು ಮಹಾರಾಷ್ಟ್ರದ ಪ್ರಸಿದ್ಧ ಹಿರಿಯ ಸಮಾಜವಾದಿ ಚಿಂತಕರು, ಗಾಂಧಿವಾದಿ ಹೋರಾಟಗಾರರು ಮತ್ತು ಯುವ ನಾಯಕರಾಗಿದ್ದರು. ಅವರು ಮಹಾರಾಷ್ಟ್ರದ ಸಾಮಾಜಿಕ, ರಾಜಕೀಯ ಮತ್ತು ಪ್ರಗತಿಪರ ಚಳವಳಿಗಳಲ್ಲಿ ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಅವರು ತಮ್ಮ 85ನೇ ವಯಸ್ಸಿನಲ್ಲಿ 18 ಜುಲೈ 2026 ರಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿನಿಧನರಾದರು. 1941ರ ಆಗಸ್ಟ್ 21ರಂದು ಜನಿಸಿದ ಸಪ್ತರ್ಷಿ ಅವರು ಬಿಹಾರದ ಗಯಾದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ತಮ್ಮ ಸಾಮಾಜಿಕ ಜೀವನವನ್ನು ಆರಂಭಿಸಿದರು; ಅಲ್ಲಿ ಅವರು ಬರಗಾಲದಿಂದ ತೊಂದರೆಗೀಡಾದ ಜನರಿಗಾಗಿ ಸಹಾಯ ಕೇಂದ್ರವೊಂದನ್ನು ನಡೆಸುತ್ತಿದ್ದರು. ಅವರು 1967ರ ನವೆಂಬರ್‌ನಲ್ಲಿ ‘ಯುಕ್ರಂದ್’ (Yukrand) ಸಂಘಟನೆಯನ್ನು ಸ್ಥಾಪಿಸಿದರು. ಮಹಾರಾಷ್ಟ್ರದ ಇತಿಹಾಸದಲ್ಲಿ ‘ಯುಕ್ರಂದ್’ ಕಾಲಘಟ್ಟವು ಮಹತ್ವದ ಸ್ಥಾನವನ್ನು ಹೊಂದಿದೆ, ಏಕೆಂದರೆ ಇದು ಸಾಮಾಜಿಕ ನ್ಯಾಯದ ವಿಷಯವನ್ನು ಬಲವಾಗಿ ಎತ್ತಿಕೊಂಡ ಸಮಾಜವಾದಿ ನಾಯಕರ ಗುಂಪಾಗಿತ್ತು. ಜಾತಿ ತಾರತಮ್ಯದ ವಿಷಯದಲ್ಲಿ ಈ ಸಂಘಟನೆಯು ಎಷ್ಟು ಸಕ್ರಿಯವಾಗಿತ್ತೆಂದರೆ, ಮುಂದಿನದಿನಗಳಲ್ಲಿಅದು ‘ದಲಿತ ಪ್ಯಾಂಥರ್’ ಜೊತೆಗೂಡಿ ಜಂಟಿ ಹೋರಾಟಗಳನ್ನು ನಡೆಸಿತು. ಕುಮಾರ ಸಪ್ತರ್ಷಿ ಅವರ ಜೀವನ ಮತ್ತು ಪ್ರಮುಖ ಕಾರ್ಯಗಳ  ಪ್ರಮುಖ ಸಾಧನೆಗಳು ಮತ್ತು ಸಂಘಟನೆಗಳು ಯುವಕ ಕ್ರಾಂತಿ ದಳ (ಯುಕ್ರಾಂದ್): ಯುವಕರಲ್ಲಿ ಸಾಮಾಜಿಕ ಪ್ರಜ್ಞೆ ಮತ್ತು ಪ್ರಗತಿಪರ ಆಲೋಚನೆಗಳನ್ನು ಬೆಳೆಸಲು ಅವರು 1967 ರಲ್ಲಿ ಈ ಪ್ರಭಾವಿ ಯುವ ಸಂಘಟನೆಯನ್ನು ಸ್ಥಾಪಿಸಿದರು. ಮಹಾರಾಷ್ಟ್ರ ಗಾಂಧಿ ಸ್ಮಾರಕ ನಿಧಿ: ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ, ಗಾಂಧಿವಾದಿ ತತ್ವಗಳನ್ನು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೊಸ ಪೀಳಿಗೆಗೆ ತಲುಪಿಸಲು ಶ್ರಮಿಸಿದರು.ಸಾಮಾಜಿಕ ಹೋರಾಟಗಳು: ಭ್ರಷ್ಟಾಚಾರ, ಸಾಮಾಜಿಕ ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತಿದ್ದ ಅವರು, ವಿವಿಧ ಆಂದೋಲನಗಳ ಭಾಗವಾಗಿ ಸುಮಾರು 35 ಕ್ಕೂ ಹೆಚ್ಚು ಬಾರಿ ಜೈಲು ಸೇರಿದ್ದರು.  ತುರ್ತು ಪರಿಸ್ಥಿತಿಯ (Emergency) ಸಮಯದಲ್ಲಿ ಅವರು ‘ಮಿಸಾ’ (MISA) ಕಾಯ್ದೆಯಡಿ ಯೆರವಾಡ ಜೈಲಿನಲ್ಲಿ ಬಂಧಿಯಾಗಿದ್ದರು. ರಾಜಕೀಯ ಮತ್ತು ಸಾಹಿತ್ಯಿಕ ಕೊಡುಗೆಶಾಸಕರಾಗಿ ಸೇವೆ: 1977 ರಲ್ಲಿ ಜನತಾ ಪಕ್ಷವನ್ನು ಸೇರಿ, 1978 ರ ವಿಧಾನಸಭಾ ಚುನಾವಣೆಯಲ್ಲಿ ಅಹಮದ್‌ನಗರ ಕ್ಷೇತ್ರದಿಂದ ಶಾಸಕರಾಗಿ (MLA) ಆಯ್ಕೆಯಾಗಿದ್ದರು. *ಪತ್ರಿಕೋದ್ಯಮ ಮತ್ತು ಸಾಹಿತ್ಯ: ಪ್ರಗತಿಪರ ವಿಚಾರಗಳನ್ನು ಹರಡಲು ‘ಸತ್ಯಾಗ್ರಹಿ ಪತ್ರಿಕೋದ್ಯಮ’ (Satyagrahi Vichardhara) ಎಂಬ ಮರಾಠಿ ಮಾಸಿಕ ಪತ್ರಿಕೆಯ ಸಂಪಾದಕರಾಗಿ ದೀರ್ಘಕಾಲ ಕೆಲಸ ಮಾಡಿದರು. ಅವರು ‘ಸಂಕಲ್ಪ’, ‘ಯಾತ್ರಿ’ ಮತ್ತು ‘ಡೇಸ್ ಅಟ್ ಯೆರವಾಡ ಯೂನಿವರ್ಸಿಟಿ’ ಸೇರಿದಂತೆ ಹಲವು ಪ್ರಸಿದ್ಧ ಪುಸ್ತಕಗಳನ್ನು ಬರೆದಿದ್ದಾರೆ. ವೃತ್ತಿಯಿಂದ ವೈದ್ಯರಾಗಿದ್ದರೂ (Medical Doctor), ತಮ್ಮ ಇಡೀ ಜೀವನವನ್ನು ಸಮಾಜ ಸೇವೆ, ಜಾತಿ ನಿರ್ಮೂಲನೆ ಮತ್ತು ಸಮಾನತೆಯ ಹೋರಾಟಕ್ಕಾಗಿ ಮುಡುಪಾಗಿಟ್ಟಿದ್ದರು. ಸಮಾಜವಾದದ ಗಟ್ಟಿ ಕೊಂಡಿಯೊಂದು ಕಳಚಿತಿದೆ. ಬುದ್ಧ ಬಸವ ಮಹಾತ್ಮಾ ಗಾಂಧಿ ಬಾಬಾಸಾಹೇಬ ಅಂಬೇಡ್ಕರ ಅವರ ವಿಚಾರ ಧಾರೆಗೆ ಆಕರ್ಷಿತರಾದ ಇವರು ಜೀವನದಲ್ಲಿ ಬಡವರ ಪರವಾಗಿ ಧ್ವನಿ ಎತ್ತಿದರು. ಜೆಪಿ ಚಳುವಳಿಯ ಮಹಾರಾಷ್ಟ್ರದ ಉಸ್ತುವಾರಿ ವಹಿಸಿದ ಅಪ್ಪಟ ಭಾರತೀಯ ಸಂಸ್ಕೃತಿ ಚಿಂತಕ ಸಮಾಜವಾದಿ ಈಗ ನೆನಪು ಮಾತ್ರ. ಇತ್ತೀಚೆಗೆ ಶ್ರೀ ಸಂಜಯ ಇಂಡೆ ಅವರ ಮೂಲಕ ಬಸವ ತಿಳುವಳಿಕೆ ಮತ್ತು ತತ್ವಜ್ಞಾನದ ಒಂದು ದಿನದ ಕಾರ್ಯಾಗಾರವನ್ನು ಪುಣೆಯ ಗಾಂಧಿ ಭವನದಲ್ಲಿ ಮಾಡಲು ಅವರ ಮೂಲಕ ನನಗೆಸೂಚಿಸಿದ್ದರು. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಶತಕದ ಸಾಧಕ ಪುಲಿಗೆರೆ ಸೋಮನಾಥ ಕನ್ನಡ ಸಾಹಿತ್ಯ ಪರಂಪರೆ ಕನ್ನಡ ಸಾಹಿತ್ಯ ಪರಂಪರೆಯು ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಮತ್ತು ವೈವಿಧ್ಯಮಯವಾದ ಸಂಪ್ರದಾಯವಾಗಿದೆ. ಭಾರತದ ಅತ್ಯಂತ ಹಳೆಯ ಸಾಹಿತ್ಯ ಸಂಪ್ರದಾಯಗಳಲ್ಲಿ ಇದು ಮೂರನೇ ಸ್ಥಾನದಲ್ಲಿದ್ದು, ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚಳವಳಿಗಳೊಂದಿಗೆ ಬೆರೆತು ವಿಕಸನಗೊಂಡಿದೆ. ಕನ್ನಡ ಭಾಷೆ ಹಲ್ಮಡಿ ಶಾಸನದಲ್ಲಿ ಕಂಡು ಬಂದರೂ ಸಹಿತ ಅದಕ್ಕಿಂತ  ಮೂರು ಶತಮಾನಕ್ಕೂ ಅಧಿಕವಾದ ಪ್ರಾಚೀನ ಭಾರತೀಯ ದ್ರಾವಿಡ ಭಾಷೆಯಾಗಿದೆ. ಪೂರ್ವದ ಹಳಗನ್ನಡ ಮತ್ತು ಹಳಗನ್ನಡ ಕಾಲ (ಜೈನ ಯುಗ / ಪಂಪ ಯುಗ) ಕ್ರಿ.ಶ. ೫ ನೇ ಶತಮಾನದ ಹಲ್ಮಿಡಿ ಶಾಸನ ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದೆ. ಕ್ರಿ.ಶ. ೮೫೦ ರ ಸುಮಾರಿನ ಅಮೋಘವರ್ಷ ನೃಪತುಂಗನ ‘ಕವಿರಾಜಮಾರ್ಗ’ ನಮಗೆ ದೊರೆತಿರುವ ಮೊದಲ ಸಾಹಿತ್ಯಿಕ ಗ್ರಂಥವಾಗಿದೆ. ಪಂಪ ಯುಗ: ೧೦ ನೇ ಶತಮಾನವನ್ನು ಕನ್ನಡ ಸಾಹಿತ್ಯದ ‘ಚಿನ್ನದ ಯುಗ’ ಎನ್ನಲಾಗುತ್ತದೆ. ರತ್ನತ್ರಯರು: ಆದಿಕವಿ ಪಂಪ (ವಿಕ್ರಮಾರ್ಜುನ ವಿಜಯ, ಆದಿಪುರಾಣ), ಪೊನ್ನ ಮತ್ತು ರನ್ನ ಕನ್ನಡದ ಮಹಾಕವಿಗಳಾಗಿದ್ದಾರೆ. ಶೈಲಿ: ಈ ಕಾಲದಲ್ಲಿ ‘ಚಂಪೂ’ (ಗದ್ಯ ಮತ್ತು ಪದ್ಯ ಮಿಶ್ರಿತ) ಶೈಲಿಯು ಪ್ರಸಿದ್ಧವಾಗಿತ್ತು. ೨. ನಡುಗನ್ನಡ ಕಾಲ (ವಚನ ಮತ್ತು ವೈಷ್ಣವ ಯುಗ) ೧೨ ನೇ ಶತಮಾನದಿಂದ ಕನ್ನಡ ಸಾಹಿತ್ಯವು ರಾಜಾಶ್ರಯದಿಂದ ಹೊರಬಂದು ಸಾಮಾನ್ಯ ಜನರ ಭಾಷೆಯಾಗಿ ಮಾರ್ಪಟ್ಟಿತು.ವಚನ ಸಾಹಿತ್ಯ: ೧೨ ನೇ ಶತಮಾನದ ಸಾಮಾಜಿಕ ಕ್ರಾಂತಿಯೊಂದಿಗೆ ವಚನ ಚಳವಳಿ ಆರಂಭವಾಯಿತು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಮುಂತಾದ ವಚನಕಾರರು ಸರಳ ಕನ್ನಡದಲ್ಲಿ ಬದುಕಿನ ತತ್ವಗಳನ್ನು ಬರೆದರು. ಹರಿಹರ ಮತ್ತು ರಾಘವಾಂಕ: ಹರಿಹರನು ‘ರಗಳೆ’ ಸಾಹಿತ್ಯವನ್ನೂ, ರಾಘವಾಂಕನು ‘ಷಟ್ಪದಿ’ ಶೈಲಿಯನ್ನೂ ಪರಿಚಯಿಸಿದರು. ದಾಸ ಸಾಹಿತ್ಯ: ಭಕ್ತಿ ಪಂಥದ ಭಾಗವಾಗಿ ಪುರಂದರದಾಸರು, ಕನಕದಾಸರು ಮುಂತಾದ ಹರಿದಾಸರು ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. ಕುಮಾರವ್ಯಾಸ: ‘ಕರ್ಣಾಟ ಭಾರತ ಕಥಾಮಂಜರಿ’ (ಗದಗಿನ ಭಾರತ) ಮಹಾಕಾವ್ಯದ ಮೂಲಕ ನಡುಗನ್ನಡದ ಶ್ರೇಷ್ಠ ಕವಿಯಾಗಿ ಹೊರಹೊಮ್ಮಿದನು. ಇಂತಹ ಸುದೀರ್ಘ ಸಾಹಿತ್ಯ ಪರಂಪರೆಯ ಶ್ರೇಷ್ಠ ಶತಕ ಸಾಧಕ ಪುಲಿಗೆರೆ ಸೋಮನಾಥ (ಪುಲಗೇರೆ ಸೋಮನಾಥ) ಕನ್ನಡ ಸಾಹಿತ್ಯ ಲೋಕದ ಒಬ್ಬ ಪ್ರಸಿದ್ಧ ಹಳಗನ್ನಡದ ಕವಿ.  ಇವರು ಪ್ರಮುಖವಾಗಿ ತಮ್ಮ ನೀತಿಪ್ರಧಾನ ಕಾವ್ಯವಾದ  ಸೋಮೇಶ್ವರ ಶತಕ’ಕ್ಕಾಗಿ ಜನಪ್ರಿಯರಾಗಿದ್ದಾರೆ.ಕವಿಯ ಕುರಿತಾದ ಪ್ರಮುಖ ವಿವರಗಳು  ವೈಯಕ್ತಿಕ ವಿವರಗಳು ಮತ್ತು ಕಾಲ ಇವರು ಸುಮಾರು ಕ್ರಿ.ಶ. ೧೨೯೯ ಅಥವಾ ೧೩ನೆಯ ಶತಮಾನದ ಉತ್ತರಾರ್ಧದಲ್ಲಿ ಬದುಕಿದ್ದರು ಎಂದು ಅಂದಾಜಿಸಲಾಗಿದೆ. ಇವರು ಹೊಯ್ಸಳ ರಾಜರ ಆಶ್ರಯದಲ್ಲಿದ್ದರು. ಜನ್ಮಸ್ಥಳ: ಇವರು ಪ್ರಸ್ತುತ ಗದಗ ಜಿಲ್ಲೆಯ (ಹಳೆಯ ಧಾರವಾಡ ಜಿಲ್ಲೆ) ಲಕ್ಷ್ಮೇಶ್ವರ ತಾಲೂಕಿನ ಪುಲಿಗೆರೆ (ಈಗಿನ ಲಕ್ಷ್ಮೇಶ್ವರ) ಎಂಬ ಊರಿನವರು.ಪಾಂಡಿತ್ಯ: ಸೋಮನಾಥನು ಕನ್ನಡ ಮತ್ತು ಸಂಸ್ಕೃತ ಎರಡೂ ಭಾಷೆಗಳಲ್ಲಿ ಮಹಾ ಪಂಡಿತನಾಗಿದ್ದನು. ಸಾಹಿತ್ಯ ಕೃಷಿ ಮತ್ತು ಅಂಕಿತ ನಾಮ ಇವರ ಪದ್ಯಗಳ ಅಂಕಿತ ನಾಮ “ಹರಹರಾ ಶ್ರೀ ಚೆನ್ನಸೋಮೇಶ್ವರಾ” ಅಥವಾ “ಹರಹರ ಶ್ರೀ ಚನ್ನಸೋಮೇಶ್ವರ”.ಸೋಮೇಶ್ವರ ಶತಕ: ಇದು ಇವರ ಅತ್ಯಂತ ಪ್ರಸಿದ್ಧ ಕೃತಿ.  ವೃತ್ತ ಛಂದಸ್ಸಿನಲ್ಲಿ (ಮತ್ತೇಭವಿಕ್ರೀಡಿತ ವೃತ್ತ) ರಚಿತವಾಗಿರುವ ಈ ಕಾವ್ಯವು ಒಟ್ಟು 100 ಪದ್ಯಗಳನ್ನು ಒಳಗೊಂಡಿದೆ. ಇವು ಸಮಾಜಕ್ಕೆ ಉತ್ತಮ ನೀತಿ, ಆದರ್ಶ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸುತ್ತವೆ. ರತ್ನಾಕರಂಡಕ: ಇವರು ಚಂಪೂ ಶೈಲಿಯಲ್ಲಿ ‘ರತ್ನಾಕರಂಡಕ’ ಎಂಬ ಕಾವ್ಯವನ್ನೂ ರಚಿಸಿದ್ದಾರೆ. ಪ್ರಸಿದ್ಧ ಸಾಲುಗಳುಇವರ ಸೋಮೇಶ್ವರ ಶತಕದ ಈ ಸಾಲು ಕನ್ನಡ ನಾಡಿನಲ್ಲಿ ಅತ್ಯಂತ ಜನಪ್ರಿಯವಾಗಿದೆ:”ಕೆಲವಂ ಬಲ್ಲವರಿಂದ ಕಲ್ತು ಕೆಲವಂ ಶಾಸ್ತ್ರಂಗಳಂ ಕೇಳುತಂ…”(ಇದರ ಅರ್ಥ: ಮನುಷ್ಯನು ಸ್ವಲ್ಪ ಜ್ಞಾನವನ್ನು ತಿಳಿದವರಿಂದ ಕಲಿತು, ಇನ್ನು ಸ್ವಲ್ಪ ಜ್ಞಾನವನ್ನು ಶಾಸ್ತ್ರಗಳನ್ನು ಕೇಳಿ ಪಡೆಯುತ್ತಾ ಜ್ಞಾನಿಯಾಗಬೇಕು.) ಪುಲಿಗೆರೆ ಸೋಮನಾಥ ಮೂಲತಃ ಜೈನ ಧರ್ಮೀಯನಾಗಿದ್ದು ಶರಣರ ವಚನಗಳನ್ನು ಆಳವಾಗಿ ಓದಿಕೊಂಡು ನಡುಗನ್ನಡ ದೇಸಿ ಪದ್ಧತಿಯನ್ನು ತನ್ನ ಕಾವ್ಯ ಶೈಲಿಯನ್ನಾಗಿ ಪರಿವರ್ತಿಸಿದನು. ಬಸವಣ್ಣ ಅಕ್ಕ ಮಹಾದೇವಿ ಮತ್ತು ಇತರ ಶರಣರ ವಚನಗಳ ಪ್ರಭಾವ ಈತನ ಮೇಲೆ ಅಪಾರವಾಗಿ ಬೀರಿತ್ತು. ಇವನ ಶತಕಗಳು ಮುಂದೆ ಸರ್ವಜ್ಞ ಮತ್ತು ತತ್ವ ಪದಕಾರರಿಗೆ ಪ್ರಭಾವ ಬೀರಿರಬಹುದು ಎಂದೆನಿಸುತ್ತಿದೆ.ಒಟ್ಟಾರೆ ಸೋಮನಾಥನ ಶತಕಗಳು ಇಂದಿಗೂ ಕನ್ನಡ ಸಾಹಿತ್ಯ ಲೋಕದ ಅಪೂರ್ವ ಆಸ್ತಿ ಎಂದು ಹೇಳ ಬಹುದು ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಲಿಂಗತತ್ವ ನಿಷ್ಠ. ಹಡಪದ ಅಪ್ಪಣ್ಣ ಸಂಗಮೇಶ್ವರ ಅಪ್ಪಣ್ಣ ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಕಾಲ – ಹನ್ನೆರಡನೆಯ ಶತಮಾನ ಬಸವ ಸಮಕಾಲೀನ ಶರಣಒಟ್ಟು ವಚನಗಳು – 102 +250=352ಅಂಕಿತ: ಬಸವಪ್ರಿಯ ಕೂಡಲ ಚೆನ್ನಸಂಗಮದೇವ ,/ ಬಸವ ಪ್ರಿಯ ಚೆನ್ನಬಸವಣ್ಣ ಊರು- ಕೂಡಲ ಸಂಗಮ ,ಮುಸುಬಿನಾಳ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ ಮಂಟಪದಲ್ಲಿ’ ಪ್ರಮುಖ ಪಾತ್ರ ವಹಿಸಿದ್ದರು. ಇವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮನವರು ಕೂಡ ವಚನಗಾರ್ತಿಯಾಗಿದ್ದರು        ಅಪ್ಪಣ್ಣನ  ಹೆಸರಿನ ಹಿಂದೆ ಸೇರಿದ ‘ಸಂಗಮೇಶ್ವರ’ (ಕೂಡಲಸಂಗಮ) ಈತನ ಸ್ಥಳವಾಗಿರಬೇಕು. ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ಬೋಧೆ ಕಾಯಕ ದಾಸೋಹದ ಮಹತ್ವ ಮುಂತಾದ ಅನೇಕ ವಿಷಯಗಳ ಮೇಲೆ ಭಿನ್ನ ಚಿಂತನೆ ನಡೆಸಿದವರು.   ಎಲ್ಲವೂ ತಾತ್ವಿಕವಾಗಿವೆ. ಅನ್ಯಮತ ಖಂಡನೆ, ಶಿವಪಾರಮ್ಯ ಸ್ಥಾಪನೆಗೆ ವಿಶೇಷ ಸ್ಥಾನ ಸಂದಿದೆ. ಶರಣಸ್ತುತಿ, ಶೂನ್ಯಸಿಂಹಾಸನ, ಅನುಭವ ಮಂಟಪಗಳ ಉಲ್ಲೇಖ, ಪ್ರಭುದೇವರು ಕಲ್ಯಾಣಕ್ಕೆ ಬಂದ ಪ್ರಸಂಗ ಮತ್ತು ಆರೋಗಣೆ ನಡೆಸಿದ ಸಂದರ್ಭಗಳನ್ನು ಪ್ರಸ್ತಾಪಿಸುವುದು ಮಹತ್ವದ ಅಂಶಗಳೆನಿಸಿವೆ. ತುಂಬ ದೀರ್ಘವಾಗಿದ್ದು ಗದ್ಯಲಕ್ಷಣವನ್ನು ಹೊಂದಿದ ರಚನೆಗಳ ಜೊತೆಗೆ ಮುಕ್ತಕ ರೂಪದ ವಚನಗಳೂ ಸಮಾವೇಶಗೊಂಡಿವೆ.   ಲಿಂಗತತ್ವ  ಸಂಗಮೇಶ್ವರ ಅಪ್ಪಣ್ಣನಿಗೆ ಅಪಾರವಾಗಿದೆ. ತರ್ಕ ಶಕ್ತಿ ಅಗಾಧವಾಗಿದೆ. ಲಿಂಗಾಯತ ತತ್ತ್ವ ಪ್ರತಿಪಾದನೆ ವಿಶೇಷವಾಗಿ ಕಂಡು ಬರುತ್ತದೆ. ಶಿವಪಾರಮ್ಯ, ಅನ್ಯಮತ ಖಂಡನೆ, ಬ್ರಾಹ್ಮಣರ ಕರ್ಮಠತನದ ಖಂಡನೆ, ಅಷ್ಟಾವರಣ, ಪಂಚಾಚಾರಗಳ ವಿವರಣೆ ಇವನ ವಚನಗಳಲ್ಲಿ ಬಂದಿದೆ. ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ   ಇತ್ತೀಚಿನ ನನ್ನ ಅಧ್ಯಯನ ಮತ್ತು ಸಂಶೋಧನೆಯಿಂದ ನಾನು ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಎಂದು ಖಚಿತ ಪಡಿಸಲು ಇಚ್ಛಿಸುತ್ತೇನೆ . ಇದಕ್ಕೆ ಕೆಲ ಪುರಾವೆಗಳನ್ನೂ ಇಲ್ಲಿ ನೀಡುತ್ತಿದ್ದೇನೆ. 1 ವಚನಾಂಕಿತ –  ಬಸವಪ್ರಿಯ ಕೂಡಲ ಚೆನ್ನಸಂಗಮದೇವ -ಈ ವಚನಾಂಕಿತ ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣನವರ ವಚನಾಂಕಿತವಾಗಿದ್ದು ಇಬ್ಬರೂ ಒಬ್ಬರೇ ಎನ್ನುವ ನಿರ್ಧಾರ ಬಲವಾಗುತ್ತದೆ. 2 ಇಬ್ಬರ ವಚನಗಳಲ್ಲಿ -ಲಿಂಗ ತತ್ವ ಷಟಸ್ಥಲ, ಸಿದ್ಧಾಂತ ಅಪಾರವಾಗಿ ಕಂಡು ಬರುತ್ತದೆ. ವಚನ ರಚನಾ ಕೌಶಲ್ಯ,ಭಾವ,ಚಿಂತನೆಗಳು ಒಂದೇ ರೀತಿಯಾಗಿ ಕಂಡು ಬರುತ್ತವೆ.3 ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪಣನವರ ವಚನಗಳಲ್ಲಿ ತಮ್ಮ ಬಸವಣ್ಣನವರ ಸಂಬಂಧವು ಎದ್ದು ಕಾಣುತ್ತದೆ,ಹೀಗಾಗಿ ಇಬ್ಬರೂ ಬೇರೆ ಬೇರೆ ಅಲ್ಲ ಒಬ್ಬರೇ ಎಂದು ನಿರ್ಧರಿಸಬಹುದು. 3 ಹಡಪದ ಅಪ್ಪಣ್ಣ ಬಾಗೇವಾಡಿಯ ಹತ್ತಿರದ ಮುಸುಬಿನಾಳ ಗ್ರಾಮದವನು, ಅವನ ಹೆಂಡತಿ ಲಿಂಗಮ್ಮ ಅದೇ ಊರಿನ ಹೂಗಾರ ನಾಗಪ್ಪನ ಮಗಳು ಎಂದು ಇತ್ತೀಚಿನ ಅಧ್ಯಯನ ಮತ್ತು ಸಂಶೋಧನೆಯಿಂದ ತಿಳಿದು ಬರುತ್ತದೆ. ಬಾಲಕ ಬಸವಣ್ಣ ಬಾಗೇವಾಡಿ ಅಗ್ರಹಾರದ ವಿರುದ್ಧ ಬಂಡೆದ್ದು ಮನೆ ಬಿಟ್ಟು ಹೋಗುವಾಗ ಅಕ್ಕ ಅಕ್ಕನಾಗಮ್ಮ  ಪತಿ ಶಿವಸ್ವಾಮಿ ಜೊತೆಗೆ ಹಿರಿಯ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಅವರ ಜೊತೆಗೆ ಕೂಡಲ ಸಂಗಮಕ್ಕೆ ಹೋಗಿರಬಹುದು , ಹನ್ನೆರಡು ವರುಷ ಕೂಡಲ ಸಂಗಮ್ಮದಲ್ಲಿ ಇದ್ದು ತನ್ನ ಕಾಯಕ ಮಾಡುತ್ತಾ ಬಸವಣ್ಣನವರ ಅಧ್ಯಯನಕ್ಕೆ ಸಹಾಯ ಮಾಡುತ್ತ ಮುಂದೆ ಮಂಗಳವೆಡೆಗೆ ಹೋಗಿ ಬಸವಣ್ಣನವರ ನೆರಳಂತೆ ನಿಂತದ್ದು ಸ್ಪಷ್ಟವಾಗಿ ಕಂಡು ಬರುತ್ತದೆ. 4 ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲಸಂಗಮವಾಗಿದ್ದು  ಬಾಗೇವಾಡಿ ಅಗ್ರಹಾರ ತೊರೆದ ಬಸವಣ್ಣನಿಗೆ ಆಶ್ರಯಕ್ಕೆ ಬಂದಿದ್ದು ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲ ಸಂಗಮ, ಸಹೋದರ ಮಾವ ಬಲದೇವನು ಸಹಾಯ ಮಾಡಿದ್ದೂ ಗಮನಾರ್ಹ, ಇದನ್ನು ಜಾನಪದ ಕವಿಗಳು ಹೇಳುತ್ತಾರೆ. 5 ಬಹಳ ವರ್ಷಗಳವರೆಗೆ ಹಡಪದ ಅಪ್ಪಣ್ಣ ಕೂಡಲ ಸಂಗಮದಲ್ಲಿ ಇದ್ದ ಕಾರಣ ಅವನನ್ನು ಕಲ್ಯಾಣದ ಶರಣರು  ಆರಂಭದಲ್ಲಿ ಸಂಗಮೇಶ್ವರ ಅಪ್ಪಣ್ಣ ಎಂದು ಕರೆದಿರಬಹುದು, ಮುಂದೆ  ಅಪ್ಪಣ್ಣ ಕಲ್ಯಾಣಕ್ಕೆ ಬಂದ ಮೇಲೆ ಬಸವಣ್ಣನವರ ಆಪ್ತ  ಕಾರ್ಯದರ್ಶಿಯಾಗಿ ನೇಮಕ ಗೊಂಡ ಮೇಲೆ ಆಡಳಿತದ ಆಸ್ಥಾನದ ಕಡತಗಳನ್ನು,ಕಚೇರಿ ಪತ್ರಗಳನ್ನು,ಮಂತ್ರಿಯ ಆದೇಶಗಳನ್ನು ಇಡಲು ಅಡಪ ( ಕಟ್ಟಿಗೆಯ ಡಬ್ಬಿ) ತನ್ನೊಂದಿಗೆ ಇಡುತ್ತಿದ್ದನು.    ಕಲ್ಯಾಣಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಬಲು ದೊಡ್ಡದು, ಬಸವಣ್ಣನವರ ಯೋಜನೆ ಚಿಂತನಾಕ್ರಮದಲ್ಲಿ ಪಾಲ್ಗೊಂಡ ವೈಚಾರಿಕ ಶರಣ, ಬಸವಣ್ಣನವರ ಆಸೆಯಂತೆ ಹಡಪದ ಅಪ್ಪಣ್ಣನವರು ನೀಲಾಂಬಿಕೆಯನ್ನು ಕೂಡಲ ಸಂಗಮಕ್ಕೆ ಕರೆ ತರಲು ಹೇಳಿದಾಗ, ಅವರ ಆದೇಶದಂತೆ ಅಪ್ಪಣ್ಣನವರು ನೀಲಮ್ಮನನ್ನು ಕರೆದುಕೊಂಡು ಬರುವಾಗ ತಂಗಡಗಿಗೆ ಬಂದಾಗ ಬಸವಣ್ಣನವರ ಸಾವಿನ ಸುದ್ಧಿ ಕೇಳಿ ಬರುತ್ತದೆ, ಆಗ ನೀಲಮ್ಮ ಮತ್ತು ಅಪ್ಪಣ್ಣನವರು ಅಲ್ಲಿಯೇ ಐಕ್ಯವಾಗಿದ್ದು ನದಿಯ ದಡದಲ್ಲಿ ಇಬ್ಬರ ಸಮಾಧಿಯ ಕುರುಹು ಸ್ಮಾರಕಗಳು ಕಂಡು ಬರುತ್ತವೆ.             ಸಂಗಮೇಶ ಅಪ್ಪಣ್ಣನವರ ಕೆಲ  ವಚನಗಳಅಂಗ ಲಿಂಗವೆಂದರಿದಾತಂಗೆ, ಅಂಗದಲೆ ಐಕ್ಯ.ಕಂಗಳು ಲಿಂಗವೆಂದರಿದಾತಂಗೆ, ಕಂಗಳಲೆ ಐಕ್ಯ.ಕರವೆ ಲಿಂಗವೆಂದರಿದಾತಂಗೆ, ಕರದಲೆ ಐಕ್ಯ.ಈ ತ್ರಿವಿಧದ ನೆಲೆಯ, ಶ್ರುತಿ ಸ್ಮೃತಿಗಳರಿಯವು.ಎಮ್ಮ ಬಸವಪ್ರಿಯ ಕೂಡಲಚನ್ನಸಂಗಮದೇವನಲ್ಲಿಈ ಇರವ ಶರಣರೆ ಬಲ್ಲರು./1 ಅಂಗದ ಕಳೆ ಲಿಂಗದಲ್ಲಿ ಲೀಯವಾಗದು.ಲಿಂಗದ ಕಳೆ ಅಂಗದಲ್ಲಿ ಲೀಯವಾಗದು.ಮಾತಿನಮಾಲೆಯ ಬೊಮ್ಮವೇತರದೊ ?ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು.ಪ್ರಾಣ ಜಂಗಮವಾದಡೆ ಅರಿದಿರಬೇಕು.ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ.ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು,ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ,ಸಂಗನಬಸವಣ್ಣಾ./2 ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು.ಸಂದ ಪುರಾತನರ ನೆನೆಯುತ್ತಿರಬೇಕು.ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು.ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ./4 ಅಗ್ಗದ ಹರಿಬ್ರಹ್ಮರ ಮರೆದೊಮ್ಮೆ ಹರಂಗೆ ಸಮವೆಂದಡೆ,ಅವನು ಚಾಂಡಾಲನು. ಅವನ ಮುಖವ ನೋಡಲಾಗದು.ಅದೆಂತೆಂದಡೆ: ಯೋ ಮಹಾದೇವಮನ್ಯೇನ ಹೀನದೇವೇನ ದುರ್ಮತಿಃ |ಸಕೃತ್ಸಾಧಾರಣಂ ಬ್ರೂಯಾದಂತ್ಯಜಾನಾಂತ್ಯಜೋಂತಜಃ ||ಇಂತೆಂದುದಾಗಿ, ನಿಮಗೆ ಕಿರುಕುಳದೈವಂಗಳ ಸಮವೆಂದುಬಗಳುವನ ಬಾಯಿ ಪಾಕುಳತಪ್ಪದು,ಬಸವಪ್ರಿಯ ಕೂಡಲಚನ್ನಸಂಗಮದೇವಾ./5 ಅಜಹರಿಸುರರೆಲ್ಲರು ಅಳಿದವರಲ್ಲದೆ, ಉಳಿದವರಿಲ್ಲ.ಶಿವನೆ ನಿತ್ಯನೆಂದು ಹೊಡೆವಡುತ್ತಿವೆ ವೇದ.ಉತೈನಂ ವಿಶ್ವಾಭೂತಾನಿ ಸದೃಷ್ಟೋ ಮೃಡಯಾತಿನಃ |ನಮೋಸ್ತು ನೀಲಗ್ರೀವಾಯ ಸಹಸ್ರಾಕ್ಷಾಯ ಮೀಡುಷೇ ||ಎಂಬ ಶ್ರುತಿ, ಬಸವಪ್ರಿಯ ಕೂಡಲಚನ್ನಸಂಗಯ್ಯನೊರ್ವನೆನಿತ್ಯನೆಂದು ಹೊಗಳುತ್ತಲಿದೆ./7 ಅನಿಮಿಷನಾದ ನಿಬ್ಬೆರಗಿನ ಲಿಂಗೈಕ್ಯನು, ಭಾವ ನಿರ್ಭಾವವನೆಯ್ದಿ,ಜ್ಞಾನವೆ ಪರಮಾಶ್ರಯವಾಗಿಪ್ಪ ಲಿಂಗೈಕ್ಯನು,ಮಹವನೊಳಕೊಂಡ ಮಹಿಮ ಲಿಂಗೈಕ್ಯನು,ಬಸವಪ್ರಿಯ ಕೂಡಲ ಚನ್ನಸಂಗಯ್ಯಾ ನಿಮ್ಮ ಶರಣ ಪ್ರಭುದೇವರು./9 ಅನೇಕ ಪರಿಯ ಭಕ್ತಿಯ ವೇಷವನಳವಡಿಸಿಕೊಂಡು,ಮನೆಮನೆದಪ್ಪದೆ ತಿರುಗುವೆನು.ಅವರ ಇಚ್ಛಿಗೆ ಅನುಮಾನವಿಡಿದು ನುಡಿವೆನು.ಅವರ ಮನಧರ್ಮವನರಿಯದೆ ನುಡಿದೆನಾದಡೆ,ಅನೇಕ ಪರಿಯಲ್ಲಿ ಭಂಗಬಡುವೆನು.ದಿಟದ ಭಕುತನಂತೆ,ಪುರಾತರ ವಚನಂಗಳ ಉದರ ನಿಮಿತ್ತವಾಗಿ ಬಳಸುವೆನು.[ಕಡು] ಪಾಪಿಗಿನ್ನೇನು ಹದನಯ್ಯ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ ?/10 ಅಯ್ಯಾ ಎನ್ನ ಹಲ್ಲ ಮರೆಯಲ್ಲಿಪ್ಪ ಬೆಲ್ಲವ ಕಂಡು, ಎಲ್ಲರೂ ಮೆಲಬಂದರು.ಬೆಲ್ಲಗಳಿದ್ದಡೆ ನಿಲಲೀಸದೆ ಎನ್ನ ಕಾಡುತ್ತಿದಾರೆಯೆಂದು,ಆ ಬೆಲ್ಲವನಲ್ಲಿಯೆ ನುಂಗಿದಡೆ, ಹಲ್ಲು ಮುರಿದವು.ಮೆಲಬಂದವರೆಲ್ಲ ಅಲ್ಲಿಯೆ ಬಯಲಾದರು.ನಾ ನಿಮ್ಮಲ್ಲಿ ಕೂಡಿ ಸುಖಿಯಾದೆನಯ್ಯಾ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ./11 ಅಯ್ಯಾ ಮರದೊಳಗಣ ಕಿಚ್ಚು ಮರನ ಸುಡುತ್ತಿದ್ದಿತ್ತಯ್ಯಾ.ಮರ ಬೆಂದು ನಿಂದುರಿಯಿತ್ತು , ಮಣ್ಣು ಜರಿದು ಬಿದ್ದಿತ್ತು.ಉರಿ ಹೊಗೆ ನಂದಿತ್ತು , ಸ್ವಯಂಪ್ರಕಾಶವಾಗಿಪ್ಪ ಉರಿ ಉಳಿಯಿತ್ತು.ಆ ಉರಿ ಬಂದು ಎನ್ನ ಕರಸ್ಥಲದಲ್ಲಡಗಿತ್ತು .ಇದ ಕಂಡು, ನಾ ಬೆರಗಾಗಿ ನೋಡುತ್ತಿದ್ದೆನಯ್ಯಾ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ./12 ಅಲ್ಲಿಂದತ್ತ ಪಶ್ಚಿಮಚಕ್ರಕ್ಕೆ ಏಕದಳ ಪದ್ಮ,ಹವಣಿಸಬಾರದ ತೇಜ, ಏಕಾಕ್ಷರ,ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ,ನಿಭರ್ಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ.ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು.ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ,ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿಸಂಗನಬಸವಣ್ಣನಯ್ಯಾ, ಪ್ರಭುವೆ./16 ಎನ್ನ ತನು ನಿಮ್ಮ ಸೇವೆಯಲ್ಲಿ ಸವೆದು,ಎನ್ನ ಮನ ನಿಮ್ಮ ನೆನಹಿನಲ್ಲಿ ಸವೆದು,ಎನ್ನರಿವು ನಿಮ್ಮ ಘನದೊಳಗೆ ಸವೆದು, ನಿಶ್ಚಲ ನಿಜೈಕ್ಯವಾಗಿ,ಬಸವಪ್ರಿಯ ಕೂಡಲಚೆನ್ನಸಂಗಯ್ಯಾ,ನೀ ನಾನೆಂಬುದೇನಾಯಿತ್ತೆಂದರಿಯೆನು./24 ಹಡಪದ ಅಪ್ಪಣ್ಣನವರ ಕೆಲ ವಚನಗಳು ಅಂಗ ಲಿಂಗವಾಯಿತ್ತೆಂಬಿರಿ, ಲಿಂಗ ಅಂಗವಾಯಿತ್ತೆಂಬಿರಿ.ಅಂಗ ಲಿಂಗ ಸಂಬಂಧ ಎಲ್ಲರಿಗೆ ಎಂತಾಯಿತ್ತು ಹೇಳಿರಣ್ಣಾ.ಅಂಗ ಲಿಂಗ ಸಂಬಂಧವಾದರೆ, ಗುರುವಿನಲ್ಲಿ ಗುಡ್ಡನಾಗಿರಬೇಕು,ಲಿಂಗದಲ್ಲಿ ನಿಷ್ಠನಾಗಿರಬೇಕು, ಜಂಗಮದಲ್ಲಿ ಅವಧಾನಿಯಾಗಿರಬೇಕು.ಇವ ಮೂರರಲ್ಲಿ ದೂರಾಗಿಪ್ಪರ ಎನಗೊಮ್ಮೆ ತೋರದಿರಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ಕರವನರಿದಂಗೆ ಕಮಲದ ಹಂಗೇಕೊ?ಇರವನರಿದಂಗೆ ಪರದ ಹಂಗೇಕೊ ?ಪರವನರಿದಂಗೆ ಇರವದ ಹಂಗೇಕೊ?ಇಹ ಪರವೆಂಬ ಉಭಯವಳಿದ ಶರಣಂಗೆಮರ್ತ್ಯದ ನರರ ಹಂಗೇಕೊ ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ? ಮನವನರಿದಂಗೆ ಮತದ ಹಂಗೇಕೊ ?ನಿತ್ಯವನರಿದಂಗೆ ತೀರ್ಥದ ಹಂಗೇಕೊ ?ಪರಮಾರ್ಥವನರಿದಂಗೆ ಪ್ರಸಾದದ ಹಂಗೇಕೊ ?ಜ್ಯೋತಿಯನರಿದಂಗೆ ಕತ್ತಲೆಯ ಹಂಗೇಕೊ?ಲೋಕವನರಿದಂಗೆ ವ್ಯಾಕುಲದ ಹಂಗೇಕೊ?ಈ ತೆರನನರಿದಂಗೆ ಮುಂದಾವ ಭೀತಿಯುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?  ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪನವರ ವಚನಗಳಲ್ಲಿ ಸಾಮ್ಯತೆಯಿದೆ . ಬಹುತೇಕ ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ತಾತ್ವಿಕ ಚಿಂತೆಗಳಲ್ಲಿ ಸಾಮ್ಯತೆ ಎದ್ದು ಕಾಣುತ್ತದೆ.  ಹೀಗಾಗಿ ಇವರಿಬ್ಬರೂ ಒಬ್ಬರೇ ಎನ್ನುವ ತೀರ್ಮಾನಕ್ಕೆ ಬರಲಾಗುವುದು.   ಹಡಪದ ಅಪ್ಪಣ್ಣ ಕ್ಷೌರಿಕ ವೃತ್ತಿಯವನೇ  ? ಹೀಗಾಗಿ ಅಡಪ  ಜನಬಳಕೆಯಲ್ಲಿ ಹಡಪ ಆಗಿದೆ ಅಡಪವನ್ನು ಇಟ್ಟುಕೊಂಡವ  ಅಡಪದವ ಅಥವಾ ಹಡಪದ  ಎಂದು ಬಂದಿದೆ.ಕಲ್ಯಾಣದ  ಚಾಲುಕ್ಯರ ಕಳಚೂರ್ಯರ ರಾಜ್ಯದ ವಿಸ್ತಾರ ಎಷ್ಟಿತ್ತಂದರೆ ಛಪ್ಪನ್ನೈವತ್ತಾರು ರಾಜ್ಯಗಳಿದ್ದವು ಎಂದು ಬಸವಣ್ಣನವರ ವಚನವೊಂದರಲ್ಲಿ ಕಾಣಬಹುದು. ಮಹಾರಾಷ್ಟ್ರದ ಮಂಗಳವೆಡೆ, ಉದ್ಗೀರ, ಲಾತೂರ, ಸೋಲಾಪುರ,  ತುಳಜಾಪುರ,  ಪಂಡರಾಪುರ ಜತ್ತ ಅಕ್ಕಲಕೋಟ ಮುಂತಾದ ಪ್ರದೇಶಗಳ  ಭೂ ಪ್ರದೇಶವು ಆಂಧ್ರ ವೆಂಗಿಪಳು ಕರ್ನಾಟಕ ಮುಂತಾದ ಪ್ರದೇಶಗಳನ್ನು  ಮುಂತಾದ ಕಡೆಗಳಲ್ಲಿ ಚಾಲುಕ್ಯ ರಾಜ್ಯರ ಆಡಳಿತದ ಶಿಲ್ಪ ಕಲೆ ಶಾಸನಗಳು ಮತ್ತು ಗುಡಿ ಗೋಪುರಗಳ ಶೈಲಿ ಚಾಲುಕ್ಯರದ್ದಾಗಿತ್ತು.       ಬಿಜ್ಜಳನೂ ಕ್ಷೌರಿಕ ಕುಲದ ಶೈವನೆಂದು ಕೆಲ ಸಂಶೋಧಕರು ತಮ್ಮ ಅಭಿಮತ ವ್ಯಕ್ತ ಪಡಿಸಿದ್ದಾರೆ. ಹಡಪದ ಅಪ್ಪಣ್ಣ ಅವನ ಹೆಂಡತಿ ಮುಸುಬಿನಾಳ ಹೂಗಾರ ನಾಗಪ್ಪನ ಮಗಳು ಲಿಂಗಮ್ಮ ಎಂದು ತಿಳಿದು ಬರುತ್ತದೆ.    ಬಸವಣ್ಣ ಬಿಜ್ಜಳನ ಪ್ರಧಾನಿ ಅರ್ಥ ಸಚಿವ ದಂಡನಾಯಕನಾಗಿದ್ದನು ಇವರ ಆಪ್ತ ಕಾರ್ಯದರ್ಶಿಯಾಗಿ ಹಡಪದ ಅಪ್ಪಣ್ಣ ಕಲ್ಯಾಣದಲ್ಲಿ ಕ್ಷೌರಿಕ ವೃತ್ತಿಯನ್ನು ಕೈಗೊಂಡಿದ್ದನು ಎಂದೆನ್ನುವುದು ನನ್ನ ದೃಷ್ಟಿಯಲ್ಲಿ ಸರಿ ಅನಿಸುವುದಿಲ್ಲ. ರಾಜ್ಯಾಡಳಿತ ದಾಖಲೆಗಳು ಕಾಗದ ಪಾತ್ರಗಳು ಬೇರೆ ಬೇರೆ ರಾಜರ ಸಾಮಂತರ ಒಲೆಗಳು ಮುಂತಾದ ಅನೇಕ ಮಹತ್ತರ ದಾಖಲೆಗಳನ್ನು ಸಂಗ್ರಹಿಸಿ ಇಡಲು ಕಟ್ಟಿಗೆಯಿಂದ ಮಾಡಿದೆ ಒಂದು ಡಬ್ಬಿ ಅದಕ್ಕೆ ಈಗಲೂ ಅಡಪ ಎಂದು ಉತ್ತರ ಕರ್ನಾಟಕದಲ್ಲಿ ಕರೆಯುತ್ತಾರೆ.  ಮಹಾ ಮನೆಯಲ್ಲಿ ಪ್ರಸಾದವಾದ ಮೇಲೆ  ತಾಂಬೂಲ ವಿತರಿಸುವ ರೇಚಣ್ಣನೂ ಅಡಪವನ್ನು ಹೊಂದಿದ್ದನ್ನು . ಅಡಪವನ್ನು ಹೊಂದಿದವ ಅಡಪದವ ಅಥವಾ ಹಡಪದ ಎಂಬ ತಪ್ಪು ಉಚ್ಚಾರಣೆಯಿಂದಾಗಿ ಹಡಪದ ಎಂದು ಹೆಸರು ಬಂತು.  ಕ್ಷೌರಿಕ ಕಾರ್ಯವನ್ನು ಮಾಡುವವರು ಈಗಲೂ ಕೂಡ ಹಳ್ಳಿಯಲ್ಲಿ ಅಡಪವನ್ನು ಇಟ್ಟುಕೊಂಡು ಮನೆ ಮನೆಗೆ ಹೋಗಿ ಕ್ಷೌರಿಕ ಸೇವೆ ಮಾಡುತ್ತಾರೆ. ಹಡಪದ ಅಪ್ಪಣ್ಣನವರು ಕ್ಷೌರಿಕ ಕುಲದಲ್ಲಿ ಹುಟ್ಟಿದರೂ ಸಹಿತ ಅವರು ಪ್ರಧಾನಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ಮಾಡಿದರು ಎಂದು ತಿಳಿದು ಬರುತ್ತದೆ.     ಚೆನ್ನಬಸವಣ್ಣನವರ ಮೇಲೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮರ  ಪ್ರಭಾವ  ಬಸವಣ್ಣನವರು ಬಾಗೇವಾಡಿ ಅಗ್ರಹಾರವನ್ನು ಬಿಟ್ಟು ಕೂಡಲ ಸಂಗಮಕ್ಕೆ ಹೋಗುವಾಗ ಅಕ್ಕನಾಗಮ್ಮ ಮತ್ತು ಅವಳ ಪತಿ ಶಿವಸ್ವಾಮಿಗಳ ಜೊತೆಗೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರೂ ಹೋಗಿದ್ದರು. ಹಡಪದ ಅಪ್ಪಣ್ಣ ಕೂದಲ ಸಂಗಮ್ಮದಲ್ಲಿ ಮಾದಲಾಂಬಿಕೆಯ ತವರು ಮನೆಯಲ್ಲಿ ಕೃಷಿ ಮಾಡುತ್ತಿರಬಹುದು ಅಥವಾ ಬಸವಣ್ಣನವರು ತಮ್ಮ ಶಿಕ್ಷಣವನ್ನು  12 ವರುಷ  ಕೂಡಲ ಸಂಗಮದಲ್ಲಿ ಮಾಡುತ್ತಿರುವಾಗ  ಕ್ಷೌರಿಕ ವೃತ್ತಿಯನ್ನು ಮಾಡುತ್ತಿರಬಹುದು. ಬಲದೇವರ ಆಮಂತ್ರಣದ ಮೇರೆಗೆ ಬಸವಣ್ಣ ಅಕ್ಕನಾಗಮ್ಮ ಬಾಲಕ ಚೆನ್ನಬಸವಣ್ಣ ಮತ್ತು ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಮಂಗಳವೇಡೆಗೆ ಹೋದರು.          ಹಡಪದ  ಅಪ್ಪಣ್ಣ ಮತ್ತು ಲಿಂಗಮ್ಮ

Read Post »

You cannot copy content of this page

Scroll to Top