Category: ಅಂಕಣ ಸಂಗಾತಿ
-

ಧಾರಾವಾಹಿ ಸಂಗಾತಿ-126 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಸುಮತಿಯ ಡಯಾಲಿಸಿಸ್ ಗೆ ಬೆಂಗಳೂರಿಗೆ? ರಾತ್ರಿ ತಾಯಿಯ ಜೊತೆಗೆ ಆಸ್ಪತ್ರೆಯಲ್ಲಿ ಮಲಗಲು ಬಂದ ಮಗಳು ಮಾರನೇ ದಿನ ಕಾಲೇಜಿಗೆ ರಜೆ ಹಾಕಿ ಬೆಳಗಿನ ಬಸ್ಸಿನಲ್ಲಿ ತನ್ನ ಊರಿಗೆ ಹೊರಟಳು. ಅಲ್ಲಿ ಹೋಗಿ ತೋಟದ ಸಾಹುಕಾರರು ಹಾಗೂ ಅವರ ಪತ್ನಿ ‘ಅಮ್ಮ’ ಅವರನ್ನು ಭೇಟಿ ಮಾಡಿದಳು. ತನ್ನ ತಾಯಿಗೆ ಡಯಾಲಿಸಿಸ್ ಚಿಕಿತ್ಸೆ ಕೊಡಿಸಬೇಕೆಂದು ವೈದ್ಯರು ಸೂಚಿಸಿರುವ ಬಗ್ಗೆ ಎಲ್ಲಾ ವಿವರಗಳನ್ನು ಅವರಿಗೆ ತಿಳಿಸಿದಳು….ನಿನ್ನ ಅಕ್ಕನಿಗೂ ತಿಳಿಸಿ ಕೊಡಿಸಬೇಕಾದ ಚಿಕಿತ್ಸೆಯನ್ನು…
-

ಧಾರಾವಾಹಿ ಸಂಗಾತಿ ಸುಜಾತಾ ರವೀಶ್ ವೃತ್ತಿ ವೃತ್ತಾಂತ ವೃತ್ತಿ ಬದುಕಿನ ಹಿನ್ನೋಟ ನೋಟ -37 ಜನವರಿ ೨೦೦೫ ರಿಂದ ಏಪ್ರಿಲ್ ೨೦೨೬ ರಲ್ಲಿ ನಾನು ನಿವೃತ್ತಿ ಹೊಂದುವ ತನಕ ಕೆಲಸ ಮಾಡಿದ್ದು ಈ ಶಾಖೆ ಐದರಲ್ಲಿ ವೃತ್ತಿ ಜೀವನದ ಅರ್ಧಕ್ಕಿಂತ ಹೆಚ್ಚು ಭಾಗ ಕಳೆದದ್ದು ಇಲ್ಲೇ. ಯಾವುದನ್ನು ಬರೆಯುವುದು ಯಾವುದನ್ನು ಬಿಡುವುದು ಎಂದೆ ತೋಚದಷ್ಟು ಸುದೀರ್ಘ ನೆನಪಿನ ಯಾನ ಇದು. ಒಂದು ಬಾರಿ ಲೂನಾದಿಂದ ಬಿದ್ದು ಅಪಘಾತವಾಗಿ ಒಂದು ರೀತಿ ಬಿಸಿ ಹಾಲು ಕಂಡ ಬೆಕ್ಕಿನಂತೆ ಆಗಿಬಿಟ್ಟಿದ್ದೆ.…
-

ಧಾರಾವಾಹಿ ಸಂಗಾತಿ ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಹೈದರಾಬಾದ ಕರ್ನಾಟಕ ವಿಮೋಚನಾ ಸಂಘಟನೆ ರಜಾಕಾರರ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಹೈದರಾಬಾದ ಕರ್ನಾಟಕ ಭಾಗದ ಜನರು ತಮ್ಮ ಜೀವ ಮತ್ತು ಮಾನವನ್ನು ಉಳಿಸಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಇಂಥ ಸಂದರ್ಭದಲ್ಲಿ *ಹೈದರಾಬಾದ ಕರ್ನಾಟಕ ವಿಮೋಚನಾ* ಹೋರಾಟವನ್ನು ಸಂಘಟಿತವಾಗಿ ಮುಂದುವರಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಗಡಿ ಶಿಬಿರಗಳನ್ನು ಸ್ಥಾಪಿಸಲಾಯಿತು. ಈ ಶಿಬಿರಗಳು ಕೇವಲ ಆಶ್ರಯ ಕೇಂದ್ರಗಳಾಗಿರದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ತರಬೇತಿ, ಸಂಘಟನೆ ಮತ್ತು…
-

ಶರಣರ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಲಿಂಗತತ್ವ ನಿಷ್ಠ. ಹಡಪದ ಅಪ್ಪಣ್ಣ ಸಂಗಮೇಶ್ವರ ಅಪ್ಪಣ್ಣ ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಕಾಲ – ಹನ್ನೆರಡನೆಯ ಶತಮಾನ ಬಸವ ಸಮಕಾಲೀನ ಶರಣಒಟ್ಟು ವಚನಗಳು – 102 +250=352ಅಂಕಿತ: ಬಸವಪ್ರಿಯ ಕೂಡಲ ಚೆನ್ನಸಂಗಮದೇವ ,/ ಬಸವ ಪ್ರಿಯ ಚೆನ್ನಬಸವಣ್ಣ ಊರು- ಕೂಡಲ ಸಂಗಮ ,ಮುಸುಬಿನಾಳ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ…
-

ಧಾರಾವಾಹಿ ಸಂಗಾತಿ-34 ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ ಅರ್ಜುನ ಉವಾಚ ರಣವೀರನಾಗಬೇಕಾದ ಮಣಿಪುರದರಸ ಮಣಿದ ನನಗೆ ‘ಮಣಿಪುರದರಸು ಬಭ್ರುವಾಹನ ನಿಮ್ಮ ಯಜ್ಞಾಶ್ವವನ್ನು ಕಟ್ಟಿಹಾಕಿದ್ದಾನೆ. ಬಿಡಿಸಿಕೊಂಡುಹೋಗುವ ಸಾಮರ್ಥ್ಯವಿದ್ದರೆ ಯುದ್ಧರಂಗದಲ್ಲಿ ಪರಾಕ್ರಮ ತೋರುವವರಾಗಬೇಕು’ ಎಂಬ ಸಂದೇಶವದು ನಮ್ಮನ್ನು ತಲುಪಿತು. ಅದಾಗಲೇ ಸೂರ್ಯ ಅಸ್ತಂಗತನಾಗಿದ್ದ. ಆ ದಿನ ಯುದ್ಧ ನಡೆಯುವುದು ಸಾಧ್ಯವಿರಲಿಲ್ಲ. ಇನ್ನೇನಿದ್ದರೂ ಮರುದಿನವಷ್ಟೇ ಕದನಕೋಲಾಹಲ ಆರಂಭ.ನನ್ನ ಆಪ್ತರ ಜೊತೆ ಮರುದಿನದ ಯುದ್ಧತಂತ್ರಗಳನ್ನು ಚರ್ಚಿಸಿದೆ. ಸಮರ್ಥನೆನಿಸಿಕೊಂಡ ಬಭ್ರುವಾಹನನನ್ನು ಹೀನಾಯವಾಗಿ ಸೋಲಿಸಿದರೆ ನನ್ನ ವಿಜಯಮಾಲೆಗೆ ಹೊಸದೊಂದು ಕುಸುಮದ ಆಗಮನವದು ಖಚಿತ ಎನಿಸಿತು. ಬಭ್ರುವಾಹನನ ಸ್ಮರಣೆಯಲ್ಲಿಯೇ…
-

ಧಾರಾವಾಹಿ ಸಂಗಾತಿ-125 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಸುಮತಿಗೆ ಡಯಾಲಿಸಿಸ್ ಮಾಡಿಸಲು ಮಗಳ ಪ್ರಯತ್ನ ಮರುದಿನ ಬೆಳಿಗ್ಗೆ ಸುಮತಿಯ ಎರಡನೇ ಮಗಳು ತನ್ನ ತಾಯಿಯ ಚಿಕಿತ್ಸೆಯನ್ನು ಮಾಡುತ್ತಿದ್ದ ವೈದ್ಯರ ಬಳಿಗೆ ಹೋದಳು. ಅವಳನ್ನು ನೋಡಿದ ವೈದ್ಯರು…. ಏನಮ್ಮ ನಿನ್ನ ತಾಯಿ ಹೇಗಿದ್ದಾರೆ?…. ಎಂದು ಕೇಳಿದರು. ಹಿಂದಿನ ದಿನ ತಂಗಿಯು ಹೇಳಿದ್ದ ವಿಚಾರವನ್ನು ಮಾತನಾಡಲೆಂದು ಅವಳು ವೈದ್ಯರಲ್ಲಿಗೆ ಬಂದಿದ್ದಳು…. _ಸರ್ ನನ್ನ ತಾಯಿಯ ಆರೋಗ್ಯ ಸುಧಾರಿಸಲು ಬೇರೆ ಯಾವ ಚಿಕಿತ್ಸೆಯೂ ಇಲ್ಲವೇ?”… ಎಂದು ಕೇಳಿದಳು. ಆಗ ವೈದ್ಯರು….…
-

ಧಾರಾವಾಹಿ ಸಂಗಾತಿ–27 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ *ನಿಜಾಂ ಪ್ರಾಂತಿಕ ಪರಿಷತ್ತಿನ ಸ್ಥಾಪನೆ ಮತ್ತು ಕನ್ನಡವಚನ ಸಾಹಿತ್ಯದ ಜಾಗೃತಿ* ಹನ್ನೆರಡನೇ ಶತಮಾನದ ಶರಣರ ವಚನಗಳು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿದವು. ಈ ವಚನಗಳ ಪ್ರಭಾವವು ಇಂದಿನ ಕಲ್ಯಾಣ ಕರ್ನಾಟಕ ಹೈದರಾಬಾದ ಕರ್ನಾಟಕ ಪ್ರದೇಶದ ಗಡಿಭಾಗಗಳಲ್ಲಿಯೂ ಆಳವಾಗಿ ಬೇರೂರಿತ್ತು.ನಿಜಾಂ ಆಡಳಿತದ ಕಾಲದಲ್ಲಿ ಕನ್ನಡ ಭಾಷೆ ಮತ್ತು ವಚನ ಸಾಹಿತ್ಯಕ್ಕೆ ಸೂಕ್ತ ಪ್ರೋತ್ಸಾಹ ದೊರೆಯದಿದ್ದರೂ,…
-

ಶರಣ ಸಂಗಾತಿ ಸಾವಿಲ್ಲದ ಶರಣರು ಶಶಿಕಾಂತ್ ಪಟ್ಟಣ ರಾಮದುರ್ಗ ಷಟ್ಪದಿಯ ಕವಿ ರಾಘವಾಂಕ ರಾಘವಾಂಕನು ಹರಿಹರನ ಸೋದರಳಿಯ ಮತ್ತು ಶಿಷ್ಯ ತನ್ನ ಸಾಹಿತ್ಯ ರಚನೆಯ ಆರಂಭದಲ್ಲಿ ರಾಘವಾಂಕನು ಕೇವಲ ವೈಷ್ಣವ ಪರಂಪರೆಯ ಕಾವ್ಯಗಳನ್ನು ರಚಿಸಿದನೆಂದು ಮತ್ತು ತನ್ನ ಗುರು ಮತ್ತು ಸೋದರ ಮಾವನಿಗೆ ಆ ಪುರಾಣಗಳನ್ನು ತೋರಿಸಿದಾಗ ಸಿಟ್ಟಿಗೆದ್ದ ಹರಿಹರ ತನ್ನ ಶಿಷ್ಯ ಮತ್ತು ಸೋದರಳಿಯನಿಗೆ ಬಾಯಿಯ ಮೇಲೆ ಬಡಿದನೆಂದು ಆಗ ಐದು ಹಲ್ಲುಗಳು ಉದರಿದವೆಂದು ಮುಂದೆ ನೀನು ಶರಣರ ಜೀವನಾಧಾರಿತ ಕೃತಿಗಳನ್ನು ಬರೆಯಬೇಕು ಅಂದರೆ ಮಾತ್ರ…
-

ಧಾರಾವಾಹಿ ಸಂಗಾತಿ ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ ಅರ್ಜುನ ಉವಾಚ ಮದನಾರಿಯಂತಿತ್ತು ಮಣಿಪುರ ಮದನಾರಿಯಂತಿತ್ತು ಮಣಿಪುರ ಮಣಿಪುರವನ್ನು ನಾವು ಸೇರಿದ ವೇಳೆಗೆ ಮಳೆಯ ಮಣಿಗಳು ಗಗನಮುಖದಿಂದ ಧರಣಿವದನದೆಡೆಗೆ ಬೀಳುತ್ತಿದ್ದವು. ವರ್ಷ ಕಾಲ ಆರಂಭವಾಗಿತ್ತು. ಮಳೆಯ ನೀರಿಗಾಗಿಯೇ ಕಾದುಕುಳಿತಿದ್ದ ಚಾತಕ ಪಕ್ಷಿಗಳು ಹನಿಹನಿಗಳನ್ನು ಕುಡಿಯುತ್ತಿದ್ದ ಪರಿಯನ್ನು ಕಂಡು ಅಸೂಯೆಯನ್ನು ತಾಳದಾದವು ಹಂಸಗಳು. ತಮಗೆ ಸಲ್ಲಬೇಕಾದ ವರ್ಷಧಾರೆಯನ್ನು ಭೂಮಿ ಸೇರುವುದಕ್ಕೂ ಮೊದಲೇ ಕುಡಿದು ಮುಗಿಸುತ್ತಿವೆ ಚಾತಕ ಪಕ್ಷಿಗಳು ಎಂಬ ಮತ್ಸರ ಹಂಸಗಳಲ್ಲಿ. ಭರದಿಂದ ಓಡುತ್ತಿದ್ದವು ಆಚೆಗೆ.ಮಣಿಪುರದ ಸಮೃದ್ಧತೆಯನ್ನೇ ಕಾಣುತ್ತಾ ಬರುತ್ತಿದ್ದೆ ನಾನು.…
-

ಧಾರಾವಾಹಿ ಸಂಗಾತಿ-124 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಮೊಮ್ಮಕ್ಕಳು ಬಂದ ಖುಶಿ ಆಸ್ಪತ್ರೆಗೆ ಬಂದ ಸುಮತಿಯ ಎರಡನೇ ಮಗಳು ಸಂಜೆ ವಾರ್ಡಿಗೆ ಕಾಫಿ-ಬ್ರೆಡ್ ಬಂದಾಗ ಸರತಿಯಲ್ಲಿ ನಿಂತು ಪಡೆದುಕೊಂಡು ಅಮ್ಮನಿಗೆ ಕೊಟ್ಟಳು. ಕಾಫಿ ಕುಡಿದು ತಾಯಿ ಮಲಗಿದ ನಂತರ ವಾರ್ಡಿನ ಹೊರಗಿನ ವೆರಾಂಡಾದ ಮೆಟ್ಟಿಲಿನ ಮೇಲೆ ಕುಳಿತು ತನ್ನ ಪಠ್ಯ ಪುಸ್ತಕವನ್ನು ತೆರೆದು ಓದಲು ಪ್ರಾರಂಭಿಸಿದಳು. ಓದಿನಲ್ಲಿ ಸಂಪೂರ್ಣ ಮಗ್ನಳಾಗಿದ್ದ ಅವಳ ಕುತ್ತಿಗೆಯನ್ನು ಎರಡು ಪುಟ್ಟ ಕೈಗಳು ಬಿಗಿಯಾಗಿ ಅಪ್ಪಿಕೊಂಡವು. ತಿರುಗಿ ನೋಡಿದಾಗ ತನ್ನ ಹಿಂದೆ…
