ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ ಪ್ರಾಣಿಯಂತೆ ವಿನಯದ ಮುಖವಾಡ ತೊಟ್ಟು ಬದುಕುತ್ತಿದ್ದನೇ ಹೊರತು ಅಸಾಮಾನ್ಯ ಧೈರ್ಯ ಕ್ರೌರ್ಯಗಳು ಅವನ ರಕ್ತದಲ್ಲೇ ಮಡುಗಟ್ಟಿದ್ದವು ಎಂಬ ಸಂಗತಿಯನ್ನು ತಿಳಿಯುವ ಚಾತುರ್ಯ ಶಂಕರನಲ್ಲಿರಲಿಲ್ಲ. ಒಬ್ಬಿಬ್ಬರು ಗಟ್ಟಿಯಾಳುಗಳಿಂದ ಸದೆಬಡಿಯಲಾಗದಷ್ಟು ಬಲಿಷ್ಠ ಆಸಾಮಿಯಾಗಿದ್ದ ಸಂತಾನಪ್ಪನಿಗೆ ತನ್ನ ಶಕ್ತಿ ಸಾಮಥ್ರ್ಯದ ಮೇಲೆ ಸಂಪೂರ್ಣ ವಿಶ್ವಾಸವಿತ್ತು. ಹಾಗಾಗಿಯೇ ಇಂದು ಒಬ್ಬಂಟಿಯಾಗಿ ಶಂಕರನ ಹುಟ್ಟಡಗಿಸಲು ಹೊರಟಿದ್ದ. ಅದಕ್ಕೆ ಸರಿಯಾಗಿ ಅಂದು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ತನ್ನಿಬ್ಬರು ಆಳುಗಳಿಂದ, ‘ಶಂಕರಣ್ಣ, ಅವನ ಒಬ್ಬ ಸ್ನೇಹಿತನೊಂದಿಗೆ ಸಿಟಿ ಬಸ್ಸು ನಿಲ್ದಾಣ ಸಮೀಪದ ಪಾಳು ಬಿಲ್ಡಿಂಗ್‍ನ ಅಡ್ಡಾವೊಂದರಲ್ಲಿ ಕುಳಿತು ಸಾರಾಯಿ ಕುಡಿಯುತ್ತಿದ್ದಾನೆ!’ ಎಂಬ ಸಿಹಿ ಸುದ್ದಿಯೂ ಸಿಕ್ಕಿದ್ದರಿಂದ ಅವನು ತಟ್ಟನೆ ಚುರುಕಾದ. ‘ಅವ್ನೊಂದಿಗೆ ಒಟ್ಟು ಎಷ್ಟು ಮಂದಿ ಅದಾರಾ ಅಂತ ಸರಿಯಾಗಿ ನೋಡಿದ್ರಲಾ…?’ ಎಂದು ಆಳುಗಳನ್ನು ಗದರಿಸಿಯೇ ವಿಚಾರಿಸಿದ. ‘ಹೌದು ಧಣೇರಾ, ಅವ್ನ್ ಕೋಣೆಯಾಗ ಅವ್ನ್ ಕೂಡಿ ನಮಗಾ ಇಬ್ರೇ ಕಂಡವ್ರೀ…!’ ಎಂದರು ಅವರು. ಸಂತಾನಪ್ಪ ಮತ್ತೆ ತಡಮಾಡಲಿಲ್ಲ. ಕೂಡಲೇ ಶಂಕರನ ಅಡ್ಡಾಕ್ಕೆ ಧಾವಿಸಿದ. ಆ ಹೊತ್ತು ಬಸ್ಸು ನಿಲ್ದಾಣದಲ್ಲಿ ಒಂದೆರಡು ಸಿಟಿ ಬಸ್ಸುಗಳು ಕೊನೆಯ ಟ್ರಿಪ್ಪಿನ ಪ್ರಯಾಣಿಕರನ್ನು ಕಾಯುತ್ತ ನಿಂತಿದ್ದವು. ವಿದ್ಯುತ್ ಕಂಬಗಳ ಅಡಿಯಲ್ಲಿ ಅಲ್ಲೊಂದು ಇಲ್ಲೊಂದು ಗೂಡಂಗಡಿಗಳು ಆಮ್ಲೇಟ್, ಬ್ರೆಡ್ ಮಸಾಲೆಗಳಂಥ ತಿಂಡಿ ತಿನಿಸುಗಳನ್ನು ತಯಾರಿಸಲು ಮೊಟ್ಟೆ ಕಲಕುವ ಮತ್ತು ಬಾಣಲಿಯ ಠಣಠಣ ಸದ್ದು, ಗದ್ದಲಗಳು ಹಗಲಿಡೀ ಕರ್ಕಶ ಶಬ್ದ ಮಾಲಿನ್ಯದಿಂದಲೂ, ವಾಯು ಮಾಲಿನ್ಯದಿಂದಲೂ ಬೆಂದು ಬಸವಳಿದು ಈಗಷ್ಟೇ ವಿರಮಿಸಲು ಹವಣಿಸುತ್ತಿದ್ದ ಆ ಇಡೀ ಪ್ರದೇಶದ ನೀರವ ಮೌನವನ್ನು ಕದಡುತ್ತಿದ್ದವು. ಸಂತಾನಪ್ಪ ಬಸ್ಸು ನಿಲ್ದಾಣದ ಮೇಲೆ ಎಡಭಾಗದಲ್ಲಿರುವ ಪ್ರೇಮ ಬೇಕರಿಯ ಎದುರು ಬಂದು ಕಾರು ನಿಲ್ಲಿಸಿದ. ಥಳಥಳ ಹೊಳೆಯುವ ಅಗಲವಾದ ಮಚ್ಚನ್ನು ಪೇಪರಿನಿಂದ ಸುತ್ತಿ ಬೆನ್ನ ಹಿಂದೆ ಪ್ಯಾಂಟಿನೊಳಗೆ ತುರುಕಿಸಿ ಮರೆಮಾಚಿದ. ಶಂಕರನ ರಹಸ್ಯ ತಾಣಕ್ಕೆ ತಾನು ಸಾಕಷ್ಟು ಬಾರಿ ಬಂದು ಕೆಲಸಕಾರ್ಯಗಳ ಬಗ್ಗೆ ಚರ್ಚಿಸುತ್ತ ಪೆಗ್ಗು ಹೀರುತ್ತ ಕುಳಿತಿರುತ್ತಿದ್ದವನಿಗೆ ಆ ಜಾಗವು ಚಿರಪರಿಚಿತವಿತ್ತು . ಹಾಗಾಗಿ ಧೈರ್ಯದಿಂದ ಅಡ್ಡಾದ ಹತ್ತಿರ ಹೋದ. ಶಂಕರನ ಕೋಣೆಯ ಬಾಗಿಲು ಮುಚ್ಚಿತ್ತು. ನಿಶ್ಶಬ್ದವಾಗಿ ನಿಂತು ಒಳಗಿನ ಶಬ್ದವನ್ನು ಆಲಿಸಿದ. ಯಾರದೋ ಗುಸುಗುಸು ಮೆಲುಧ್ವನಿ ಅಸ್ಪಷ್ಟವಾಗಿ ಕೇಳುತ್ತಿತ್ತು. ಹೌದು, ತನ್ನ ಕಡೆಯವರು ಹೇಳಿದ್ದು ನಿಜ. ಒಳಗೆ ಇಬ್ಬರೇ ಇರುವುದು ಎಂದುಕೊಂಡು ಬಾಗಿಲು ತಟ್ಟಿದ. ಕೆಲಕ್ಷಣದಲ್ಲಿ ಚಿಲಕ ತೆಗೆದ ಸದ್ದಾಯಿತು. ಶಂಕರನೇ ಬಾಗಿಲು ತೆರೆದ. ಆದರೆ ಸಂತಾನಪ್ಪ ಅವಕ್ಕಾದ. ಏಕೆಂದರೆ ಶಂಕರ ಇನ್ನೂ ಮತ್ತನಾಗಿರಲಿಲ್ಲ ಮಾತ್ರವಲ್ಲದೇ ಒಳಗೆ ಇನ್ನಿಬ್ಬರು ವಿಲಕ್ಷಣ ಗಡ್ಡಾಧಾರಿಗಳೂ ಇದ್ದುದು ಅವನಿಗೆ ಕಾಣಿಸಿತು. ಕೋಣೆಯ ಮಂದ ಬೆಳಕಿನಲ್ಲಿ ಆ ಆಗಂತುಕರು ತನ್ನನ್ನು ಕ್ರೂರವಾಗಿ ದಿಟ್ಟಿಸುತ್ತಿರುವಂತೆ ಅವನಿಗೆ ಭಾಸವಾಯಿತು. ಕೆಲವುಕ್ಷಣ ಏನೂ ತೋಚದೆ ನಿಂತುಬಿಟ್ಟ. ಆದರೆ ಶಂಕರ ಏನೂ ನಡೆದಿಲ್ಲವೆಂಬಂತೆ ನಗುತ್ತ, ‘ಓಹೋ…ಏನೋ ಸಂತಾನಪ್ಪ ಇಷ್ಟೊತ್ನಲ್ಲಿ…?’ ಎನ್ನುತ್ತ ಸ್ನೇಹದಿಂದ ಆಹ್ವಾನಿಸಿದ. ಅಷ್ಟೊತ್ತಿಗೆ ಸಂತಾನಪ್ಪನೂ ಹತೋಟಿಗೆ ಬಂದಿದ್ದವನು ಶಂಕರನ ಕುಟಿಲ ಆತ್ಮೀಯತೆಯನ್ನು ಕಂಡು ಕೋಪದಿಂದ ಕುದಿದ. ‘ನೋಡ್ ಶಂಕರಣ್ಣ, ನನ್ನ ಜೊತೆ ಹುಡುಗಾಟ ಆಡ್ ಬ್ಯಾಡ. ನೀನೆಣಿಸಿದಷ್ಟು ಛಲೋ ಮನ್ಷ ನಾನಲ್ಲ ತಿಳ್ಕೋ!’ ಎಂದ ಒರಟಾಗಿ. ‘ಅದು ನನಗೂ ಗೊತ್ತಿದೆ ಮಾರಾಯಾ. ಅದಿರಲಿ ನೀನೀಗ ಇಷ್ಟೊಂದು ಸಿಟ್ಟಾಗುವಂಥದ್ದು ಏನಾಯ್ತು ಅಂತ ಹೇಳಬೇಕಲ್ವಾ…?’ ಎಂದು ಶಂಕರ ವ್ಯಂಗ್ಯವಾಗಿ ನಗುತ್ತ ಪ್ರಶ್ನಿಸಿದ. ಸಂತಾನಪ್ಪನಿಗೆ ಉರಿದು ಹೋಯಿತು. ‘ಏನಲೇ ಹೈವಾನ್! ಮೊನ್ನೆ ನನ್ನಿಂದ ಹೆಬ್ಬೆಟ್ ಒತ್ತುಸ್ಕೊಂಡು ಓಡ್ ಬಂದಿಯಲ್ಲ ಆ ಪತ್ರಗಳು ಎಲ್ಲದಾವಂತ ತೋರ್ಸಲೇ…?’ ಎಂದು ಗುಡುಗಿದ. ‘ಯಾಕೆ ಮಾರಾಯಾ, ಅದರಿಂದೇನಾಯ್ತು? ಅಚ್ಚಡಪಾಡಿಯಲ್ಲಿ ಖರೀದಿಸಿದ ಜಮೀನಿನ ಪತ್ರಗಳೆಂದು ಹೇಳಿದ್ದೆನಲ್ಲಾ!’ ಎಂದ ಶಂಕರ ಅಸಡ್ಡೆಯಿಂದ. ಆದರೀಗ ಸಂತಾನಪ್ಪ ಅದನ್ನು ನಂಬುವಷ್ಟು ಮೂರ್ಖನಾಗಲಿಲ್ಲ. ‘ಓಹೋ, ಹೌದಾ? ಸರಿ ಹಂಗಾದ್ರೆ ನಾನೂ ಅದ್ನ ನೋಡಬೇಕಲೇ?’ ‘ಅರೇ, ಅದೀಗ ಇಲ್ಲೆಲ್ಲಿದೆ ಮಾರಾಯಾ! ಕನ್ವರ್ಶನ್‍ಗೆ ಕೊಟ್ಟಾಯಿತು. ಬೇಕಿದ್ದರೆ ನಾಳೆ ಬೆಳಿಗ್ಗೆ ಫ್ಲಾಟ್‍ಗೆ ಬಾ ಝೆರಾಕ್ಸ್ ಕಾಪಿಗಳಿವೆ, ತೋರಿಸುತ್ತೇನೆ’ ಎಂದ ಶಂಕರ ಉಡಾಫೆಯಿಂದ. ಆಗ ಸಂತಾನಪ್ಪನಿಗೆ ಚಿಂತೆಗಿಟ್ಟುಕೊಂಡಿತು. ಆ ಸಂಪತ್ತು ತಾನು ಬೆವರು ಸುರಿಸಿ ಸಂಪಾದಿಸಿದ್ದಲ್ಲವಾದರೂ ತನ್ನ ಅದೃಷ್ಟದಿಂದಲೇ ತನಗೆ ದಕ್ಕಿದ್ದು. ತನ್ನ ಎರಡು ಸಂಸಾರಗಳೂ ಅದನ್ನೇ ನಂಬಿಕೊಂಡಿವೆ ಮತ್ತು ಅದರಿಂದಾಗಿಯೇ ತನ್ನ ಊರಲ್ಲೂ ತಾನು ಭಾರಿದೊಡ್ಡ ಕುಳವೆಂಬ ಹೆಗ್ಗಳಿಕೆಗೆ ಪಾತ್ರನಾಗಿರುವುದು. ಹೀಗಿರುವಾಗ ಅಂಥ ಆಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಎಂಥ ಎಡವಟ್ಟು ಮಾಡಿಕೊಂಡೆನಲ್ಲ! ಈ ಹಾದರಕ್ ಹುಟ್ಟಿದ ನನ್ಮಗ ಖಂಡಿತವಾಗಿಯೂ ಅವೇ ಪತ್ರಗಳಿಗೆ ತನ್ನಿಂದ ರುಜು ಹಾಕಿಸಿಕೊಂಡು ಮಸಲತ್ತು ಮಾಡ್ತಿದ್ದಾನೆ ಎಂದು ಯೋಚಿಸಿದವನ ಆತಂಕ ಇಮ್ಮಡಿಯಾಯಿತು. ‘ನಾಳೆಯವರೆಗೆ ಕಾಯಲು ಸಾಧ್ಯವಿಲ್ಲ ಶಂಕರಣ್ಣಾ. ನಡೆ, ಈಗಲೇ ಫ್ಲಾಟಿಗೆ ಹೋಗೋಣ!’ ಎಂದ ಸಿಡುಕಿನಿಂದ. ಅದಕ್ಕೆ ಶಂಕರ ವ್ಯಂಗ್ಯವಾಗಿ ನಗುತ್ತ ತನ್ನ ಗೆಳೆಯರತ್ತ ದಿಟ್ಟಿಸಿದವನು ಅವರಿಗೇನೋ ಕಣ್ಸನ್ನೆ ಮಾಡಿದ. ಆ ಮುಖಗಳು ಕೂಡಲೇ ಕಠೋರವಾದವು. ‘ಆಯ್ತು ಮಾರಾಯಾ ನಡೆ. ಯಾರೋ ದರವೇಶಿಗಳು ನನ್ನ ಬಗ್ಗೆ ನಿನ್ನಲ್ಲಿ ಸಂಶಯ ಹುಟ್ಟಿಸಿದ್ದಾರೆಂದು ಕಾಣುತ್ತದೆ. ಪರ್ವಾಗಿಲ್ಲ ನಿನ್ನ ಅನುಮಾನ ನಿವಾರಿಸುವ!’ ಎಂದು ಅದೇ ವ್ಯಂಗ್ಯ ನಗುವಿನೊಂದಿಗೆ ಹೇಳಿದವನು ಗೆಳೆಯರತ್ತ ತಿರುಗಿ, ‘ಇವರು ನನ್ನ ಸ್ನೇಹಿತರು. ಅಪರೂಪಕ್ಕೆ ಬಂದಿದ್ದಾರೆ ಮಾರಾಯಾ. ಅವರೊಂದಿಗೆ ಸ್ವಲ್ಪ ಡ್ರಿಂಕ್ಸ್ ಮಾಡುತ್ತ ಮಾತಾಡುವುದಿದೆ. ಬೇಕಿದ್ದರೆ ನಮ್ಮೊಂದಿಗೆ ನೀನೂ ಸೇರಿಕೋ. ನಂತರ ಹೊರಡುವ’ ಎಂದ ಶಂಕರ ನಯವಾಗಿ. ಸಂತಾನಪ್ಪನಿಗೆ ಅವನ ಮಾತು ನಂಬಬೇಕೋ ಬಿಡಬೇಕೋ ಎಂದು ಗೊಂದಲವಾಯಿತು. ಹಾಗಾಗಿ ಶಂಕರ ತೋರಿಸಿದ ಕುರ್ಚಿಯಲ್ಲಿ ಕುಳಿತುಕೊಂಡ. ಶಂಕರನೂ ಗಂಭೀರವಾಗಿ ಸಾರಾಯಿ ಸುರಿದು ಸ್ನೇಹಿತರೊಂದಿಗೆ ಇವನಿಗೂ ಕೊಟ್ಟ. ಸಂತಾನಪ್ಪ ಒಲ್ಲದ ಮನಸ್ಸಿನಿಂದ ಕುಡಿಯತೊಡಗಿದ. ಎರಡು ಪೆಗ್ಗು ಹೊಟ್ಟೆಗಿಳಿಯುವ ಹೊತ್ತಿಗೆ ಅವನ ದೇಹ, ಮನಸ್ಸುಗಳೆರಡೂ ಹುಗುರವಾಗಿ ಬಿಗುಮಾನ ಮಾಯವಾಯಿತು. ಆದರೂ ಯಾರೊಡನೆಯೂ ಮಾತಾಡದೆ ಮೌನವಾಗಿ ಸಾರಾಯಿ ಹೀರತೊಡಗಿದ. ಶಂಕರ ಮಾತ್ರ ಬೇಕೆಂದೇ ಇವನ ಇರುವನ್ನು ಕಡೆಗಣಿಸಿ ಇವನಿಗೆ ಅರ್ಥವಾಗದ ವಿಷಯಗಳನ್ನೆತ್ತಿ ಸ್ನೇಹಿತರೊಂದಿಗೆ ಚರ್ಚಿಸುತ್ತ, ಸೂರು ಕಿತ್ತು ಹೋಗುವಂತೆ ನಗುತ್ತ ಬಾಟಲಿ ಖಾಲಿ ಮಾಡುತ್ತಿದ್ದ. ಇತ್ತ ಸ್ವಲ್ಪಹೊತ್ತಿನಲ್ಲಿ ಐದನೆಯ ಪೆಗ್ಗು ಸಂತಾನಪ್ಪನ ಹೊಟ್ಟೆ ಸೇರುತ್ತಲೇ ಶಂಕರನ ಮೇಲಿನ ಶಂಕೆ ಮತ್ತೆ ಅವನಲ್ಲಿ ಹೆಡೆಯೆತ್ತಿತು. ಜೊತೆಗೆ ತಾನು ಮೊನ್ನೆಯೂ ಇವನ ಇಂಥ ಮೋಡಿಯ ಮಾತುಗಳಿಗೆ ಮೋಸ ಹೋಗಿ ಅನಾಹುತ ಮಾಡಿಕೊಂಡಿದ್ದು ಎಂದನ್ನಿಸುತ್ತಲೇ ಮರಳಿ ಅವನ ತಾಳ್ಮೆ ಕುಸಿಯಿತು. ‘ನಡೆ ಶಂಕರಣ್ಣ ಹೋಗೋಣ. ನನಗೀಗಲೇ ಆ ಪತ್ರಗಳನ್ನು ನೋಡಬೇಕು!’ ಎಂದು ಎದ್ದು ನಿಂತ. ಶಂಕರ ಆಗಲೂ ಅವನ್ನು ಕುಳ್ಳಿರಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಆಗ ಮಾತ್ರ ಸಂತಾನಪ್ಪನ ಕೋಪ ನೆತ್ತಿಗೇರಿತು. ‘ಲೇ, ಹಡಿ ಸೂಳೀಮಗನಾ…ನಿನ್ ದಗಲ್ಬಾಜಿನೆಲ್ಲ ನನ್ ಹತ್ರ ಬಿಚ್ಬೇಡಲೇ…! ಪತ್ರಗಳ್ನ ಈಗ್ಲೇ ತಂದೊಪ್ಪಿಸಿದ್ದಿಯೋ ಬಚಾವಾದಿ ಮಗನಾ! ಇಲ್ಲಾ, ನಿನ್ನನ್ ಕಂಬಿ ಎಣಿಸುವಂತೆ ಮಾಡದೆ ಬಿಡಕ್ಕಿಲ್ವೋ ಹೈವಾನ್!’ ಎಂದು ಗುಡುಗಿದ. ಆದರೆ ಆಗ ಶಂಕರನೂ ಹದವಾದ ಮತ್ತಿನಲ್ಲಿದ್ದ. ಅವನ ಮುಖದಲ್ಲೂ ತೀಕ್ಷ್ಣ ಕೋಪ ವಿಜೃಂಭಿಸಿತು. ‘ಓಹೋ ಹೌದಾ ಮಗನೇ…! ಪರ್ವಾಗಿಲ್ಲವಾ ನೀನೂ ಭಾರೀ ಅರ್ಜೆಂಟಿನಲ್ಲಿದ್ದಿ. ಹಾಗಾಗಿ ಇನ್ನು ಟೈಮ್‍ವೇಸ್ಟ್ ಮಾಡುವುದು ನನಗೂ ಸರಿ ಕಾಣುವುದಿಲ್ಲ. ಆಯ್ತು ಹೋಗುವ!’ ಎಂದು ದಢಕ್ಕನೆದ್ದವನು ಗೆಳೆಯರತ್ತ ತಿರುಗಿ ಮತ್ತೇನೋ ಸಂಜ್ಞೆ ಮಾಡಿ ಧುರಧುರನೇ ಹೊರಗೆ ನಡೆದ. ಸಂತಾನಪ್ಪನೂ ಬಿರುಸಿನಿಂದ ಅವನನ್ನು ಹಿಂಬಾಲಿಸಿದ. ಆದರೆ ತನ್ನ ಸೊಂಟದಲ್ಲಿದ್ದ ಕತ್ತಿಯನ್ನೊಮ್ಮೆ ಮೆಲ್ಲನೆ ಸ್ಪರ್ಶಿಸಿ ನೋಡಿ ಸೆಟೆದುಕೊಂಡು ಮುನ್ನಡೆದ. ಶಂಕರ, ಸಂತಾನಪ್ಪನಿಗೆ ಏನೂ ಹೇಳದೆ ಮೂತ್ರ ವಿಸರ್ಜಿಸಲೆಂಬಂತೆ ಸಮೀಪದ ಸಾರ್ವಜನಿಕ ಶೌಚಾಲಯದತ್ತ ಹೊರಟ. ಸಂತಾನಪ್ಪನಿಗೆ ಅನುಮಾನವಾಯಿತು. ‘ಆ ಕಡೆ ಎಲ್ಲಿಗೇ…?’ ಎಂದ ಜೋರಿನಿಂದ. ‘ಮೂತ್ರ ಹುಯ್ಯಬೇಕು ಮಾರಾಯಾ…!’ ಎಂದ ಶಂಕರ ನಗುತ್ತ. ‘ನಾನೂ ಬರುತ್ತೇನೆ!’ ಎಂದ ಸಂತಾನಪ್ಪ ಅವನ ಬೆನ್ನು ಹತ್ತಿದ. ಶಂಕರನೂ ಅದನ್ನೇ ನಿರೀಕ್ಷಿಸಿದ್ದವನು ಸಂತಾನಪ್ಪನ ಹುಂಬತನವನ್ನು ನೆನೆದು ಕತ್ತಲಲ್ಲಿ ಭುಜ ಕುಣಿಸಿ ನಗುತ್ತ ನಡೆದ. ಆದರೆ ಶೌಚಾಲಯಕ್ಕೆ ಹೋಗದೆ ಕಟ್ಟಡದ ಹಿಂದೆ ಕುರುಚಲು ಪೊದೆಗಳು ತುಂಬಿದ್ದ ಪಾಳು ಜಾಗವೊಂದಕ್ಕೆ ಹೋದ. ಸಂತಾನಪ್ಪ ಅಲ್ಲಿಗೂ ಹಿಂಬಾಲಿಸಿದ. ಆ ಪ್ರದೇಶದಲ್ಲಿ ದಟ್ಟ ಕತ್ತಲೆ ಗೌವ್ವ್ ಗುಡುತ್ತಿತ್ತು. ಸಂತಾನಪ್ಪನ ಹಿಂದುಗಡೆ ಮತ್ತೆರಡು ಆಕೃತಿಗಳು ಮೆತ್ತಗೆ ಬಂದು ನಿಂತಿದ್ದನ್ನು ಅವನ ಸಾರಾಯಿ ಪ್ರಜ್ಞೆಯು ಗ್ರಹಿಸಲಿಲ್ಲ. ಅತ್ತ ಶಂಕರ ಮೂತ್ರ ಹುಯ್ಯಲು ನಿಂತಂತೆ ನಟಿಸಿದ. ಅಷ್ಟರಲ್ಲಿ ಸಂತಾನಪ್ಪನ ಹಿಂದಿದ್ದವನೊಬ್ಬ ಅವನ ಕೊರಳಿಗೆ ಬಲವಾಗಿ ಹೊಡೆದ. ಸಂತಾನಪ್ಪ, ‘ಯಾವ್ವಾ…!’ ಎಂದು ಚೀರಿ ಧೊಪ್ಪನೆ ಕುಸಿದ. ‘ಏನಲೇ ಬೇವರ್ಸಿ… ನಮ್ಮೂರಿಗೆ ಕೂಲಿಗೆ ಬಂದಂಥ ನಾಯಿ ನೀನು! ನಮ್ಮವರ ಆಸ್ತಿಯನ್ನೇ ಲಪಟಾಯಿಸಿ ಮಜಾ ಉಡಾಯಿಸಬೇಕೆಂದಿದ್ದಿಯೇನೋ…? ಅದನ್ನು ನೋಡಿಯೂ ನನ್ನಂಥವನು ಸುಮ್ಮನಿರುತ್ತಾನೆಂದು ಅದ್ಹೇಗೆ ಭಾವಿಸಿದೆಯೋ? ಮರ್ಯಾದೆಯಿಂದ ನಾಳೆ ಬೆಳಗಾಗುವುದರೊಳಗೆ ನಿನ್ನ ಎರಡು ಸಂಸಾರಗಳನ್ನು ಕಟ್ಟಿಕೊಂಡು ಇಲ್ಲಿಂದ ಜಾಗ ಖಾಲಿ ಮಾಡಿದೆಯೋ ಬಚಾವಾದೆ. ಇಲ್ಲಾ, ನಿನ್ನ ಹೆಣ ಮಸಣದ ಗುಡ್ಡೆಯಲ್ಲೇ ಸುಟ್ಟು ಬೂದಿಯಾಗುವುದು ಗ್ಯಾರಂಟಿ ಬೋಳಿಮಗನೇ!’ ಎಂದು ಕೋಪದಿಂದ ಗುಡುಗಿದ ಶಂಕರ, ಸಂತಾನಪ್ಪನಿಗೆ ಬೀಸಿ ಬೀಸಿ ಒದೆಯತೊಡಗಿದ. ಆದರೆ ಒಂದೆರಡು ಒದೆತಗಳು ಬೀಳುತ್ತಿದ್ದಂತೆಯೇ ಸಂತಾನಪ್ಪನೂ ಗೂಳಿಯಂತೆ ಉಸಿರುದಬ್ಬುತ್ತ ಎದ್ದು ನಿಂತ. ಅವನ ಬಲಗೈ ರಪ್ಪನೆ ಬೆನ್ನ ಹಿಂದೆ ಸರಿದು ಮಚ್ಚನ್ನು ಎಳೆದುಕೊಂಡಿತು. ಸಂತಾನಪ್ಪನ ರೌದ್ರಾವತಾರವನ್ನೂ ಮತ್ತು ಆ ಕತ್ತಲನ್ನೂ ಮೀರಿ ಮಿರಮಿರನೇ ಮಿಂಚುತ್ತಿದ್ದ ಮಚ್ಚನ್ನೂ ಕಂಡ ಶಂಕರ ದಿಗ್ಭ್ರಾಂತನಾದ. ಅದೇ ಹೊತ್ತಿಗೆ ಸಂತಾನಪ್ಪ ಶಂಕರನ ಕೊರಳಿಗೆ ಗುರಿಯಿಟ್ಟು ಮಚ್ಚು ಬೀಸಿದ. ಆದರೆ ಶಂಕರ ನೂಲಿನೆಳೆಯಷ್ಟು ಅಂತರದಲ್ಲಿ ತಪ್ಪಿಸಿಕೊಂಡ. ಅದರ ಬೆನ್ನಿಗೆ ಸಂತಾನಪ್ಪ ಅವನ ಕಿಬ್ಬೊಟ್ಟೆಗೆ ಜಾಡಿಸಿ ಒದ್ದ. ಶಂಕರ, ‘ಅಯ್ಯಮ್ಮಾ…!’ ಎಂದು ಕಿರುಚುತ್ತ ಅಷ್ಟು ದೂರಕ್ಕೆ ಎಗರಿ ಬಿದ್ದ. ಮರುಕ್ಷಣ ಸಂತಾನಪ್ಪ ಮಿಂಚಿನವೇಗದಲ್ಲಿ ಅತ್ತ ನೆಗೆದವನು ಶಂಕರನ ಕೊರಳನ್ನು ಕಡಿದೇ ಹಾಕುತ್ತಾನೆ ಎಂಬಷ್ಟರಲ್ಲಿ ಶಂಕರನ ಬಾಡಿಗೆ ಗೂಂಡಾಗಳು ಕ್ಷಣದಲ್ಲಿ ಮುನ್ನುಗ್ಗಿ ಸಂತಾನಪ್ಪನನ್ನು ಮಿಸುಕಾಡದಂತೆ ಬಲವಾಗಿ ಹಿಡಿದುಕೊಂಡರು. ಶಂಕರ ತನ್ನ ಜೀವವಮಾನದಲ್ಲಿ ಅಂಥದ್ದೊಂದು ಒದೆತವನ್ನು ಯಾರಿಂದಲೂ ತಿಂದವನಲ್ಲ. ಆದರೆ ಇಂದು ತನ್ನ ಕೂಲಿಯಾಳಿನಿಂದಲೇ ಅಂಥ ದುರ್ದುಸೆ ತನಗೆ ಬಂದುದನ್ನು ನೆನೆದವನಿಗೆ ಅವಮಾನದಿಂದ ಸತ್ತಂತಾಯಿತು. ಎದ್ದು ನಿಲ್ಲಲಾಗದಷ್ಟು ನೋವಿದ್ದರೂ ಕಷ್ಟಪಟ್ಟು ಎದ್ದು ನಿಂತ. ಅವನ ರಕ್ತದ ಕಣಕಣದಲ್ಲೂ ಕ್ರೋಧವು ಪ್ರಜ್ವಲಿಸಿತು. ಸಂತಾನಪ್ಪನ ಕತ್ತಿನ ಪಟ್ಟಿಯನ್ನು ಒರಟಾಗಿ ಎಳೆದು ಹಿಡಿದವನು, ‘ಹಲ್ಕಟ್ ನನ್ಮಗನೇ… ನನ್ನ ಮೇಲೆಯೇ ಕೈಮಾಡುವಷ್ಟು ಸೊಕ್ಕಾ ನಿಂಗೆ…!?’ ಎಂದು ಕ್ಯಾಕರಿಸಿ ಅವನ ಮುಖಕ್ಕೆ ಉಗಿದವನು, ಕಾಲ ಮೊಣಗಂಟಿನಿಂದ ಅವನ ಮರ್ಮಾಂಗಕ್ಕೆ ಬೀಸಿ ಬೀಸಿ ನಾಲ್ಕೈದೇಟು ಜಾಡಿಸಿ ಒದ್ದುಬಿಟ್ಟ. ‘ಯಾವ್ವಾ ಸತ್ತೆನವ್ವಾ…!’ ಎಂದು ಉಸಿರುಗಟ್ಟಿ ಅರಚಿದ ಸಂತಾನಪ್ಪ ಕಡಿದ ಬಾಳೆಯಂತೆ ನೆಲಕ್ಕುರುಳಿದ. ಅವನ ಕೈಯಿಂದ ಮಚ್ಚು ತನ್ನಿಂದ ತಾನೇ ಕಳಚಿಬಿತ್ತು. *** ಮರುದಿನ ಮುಂಜಾನೆ, ‘ಈಶ್ವರಪುರದ ಸಾರ್ವಜನಿಕ ಶೌಚಾಲಯದಲ್ಲಿ ಉತ್ತರ
ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ ಮೂಲಕ ಹಟ್ಟಿಗೆ ನುಗ್ಗಿ ರಾತ್ರೋರಾತ್ರಿ ದನಗಳನ್ನು ಹೊತ್ತೊಯ್ಯುತ್ತಿತ್ತು. ಹಾಗೊಂದು ಸಲ ಹತ್ತಿರದಲ್ಲೇ ಹುಲಿಯ ಭೀಕರ ಘರ್ಜನೆ ಕೇಳಿ ಮನೆಯವರೆಲ್ಲ ನಡುಗಿ ಕುಳಿತಿದ್ದಾಗ ಹಟ್ಟಿಯಿಂದ ಒಂದು ದನವನ್ನು ಕೊಂಡೊಯ್ದಿತ್ತು ಎಂಬ ಭೀಕರ ಘಟನೆಯನ್ನುಅಜ್ಜಿ ಹೇಳಿದರು. ಮೇಯಲು ಬಿಟ್ಟಾಗಲೂ ದನಕರುಗಳನ್ನು ಕದ್ದುಕೊಂಡು ಹೋಗುತ್ತಿತ್ತು ಎಂದರು. ಈ ಘಟನೆಗಳನ್ನು ಕೇಳಿದ ನಂತರ ವಿಜಿಗೆ ಸುಮಾರು ಸಲ ಹುಲಿ ಬಂದು ತಮ್ಮ ದನಗಳನ್ನು ತೆಗೆದುಕೊಂಡು ಹೋದಂತೆ; ತಡೆಯಲು ಹೋದ ಊರಿನವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದಂತೆ ಕನಸು ಬೀಳುತ್ತಿತ್ತು! ಅಜ್ಜಿ ಹೇಳಿದ ಹಳೆಯ ಕಾಲದಲ್ಲಿ ಹುಲಿಗಳು ಜನರಿಗೆ ಬಹಳಷ್ಟು ಕಾಟ ಕೊಟ್ಟಿದ್ದರೂ ವಿಜಿ ಸಣ್ಣವಳಿರುವಾಗ ಅಂತದ್ದೇನೂ ಇರಲಿಲ್ಲ. ಆದರೆ ಹುಲಿಯ ಬದಲಿಗೆ `ಕುರ್ಕ’ ಎಂದು ಕರೆಯುವ ಸಣ್ಣ ಚಿರತೆ ಇತ್ತು. ಇದು ನಾಯಿಗಳನ್ನು ಕದ್ದೊಯ್ಯುತ್ತಿತ್ತು. ಕಾಡಿನೊಳಗೇ ಇರುವ ಕೆಲ ಮನೆಗಳ ನಾಯಿಗಳನ್ನು ಕೊಂಡೊಯ್ಯುತ್ತಿತ್ತು. ಪ್ರೀತಿಯ ನಾಯಿಗಳನ್ನು ಕಳೆದುಕೊಂಡ ಅಂತಹ ಮನೆ ಜನರ ನೋವಿನ ಪ್ರಕರಣಗಳನ್ನು ರುಕ್ಮಿಣಿಬಾಯಿ ಆಗಾಗ ಹೇಳುತ್ತಿದ್ದರು. ಆದರೆ ವಿಜಿಯ ಮನೆ ಕಾಡಿನಿಂದ ಹೊರಗೆ ತೋಟದ ಪಕ್ಕದಲ್ಲಿದ್ದುದರಿಂದ ಇಂತಹ ಅನುಭವ ಆಗಿರಲಿಲ್ಲ. ಅವರೂರಿಗೆ ಸಮೀಪದಲ್ಲೇ ಇದ್ದ `ಹರಿನ್‌ಗುಡ್ಡೆ’ ಎಂಬ ದೊಡ್ಡ ಬೆಟ್ಟದಲ್ಲಿ ಹುಲಿ ಇದೆ ಎಂದು ಜನ ಹೇಳುತ್ತಿದ್ದರು. ಅದು ಸುತ್ತಮುತ್ತಲಿನ ದಟ್ಟ ಕಾಡುಗಳಲ್ಲಿ ರಾತ್ರಿ ತಿರುಗುತ್ತದೆ ಎಂದು ಮಾತಾಡಿಕೊಳ್ಳುತ್ತಿದ್ದರು. ಹಾಗಾಗಿ ರಾತ್ರಿ ಹೊತ್ತುಅಂತಹ ಜಾಗಗಳಿಗೆ ಯಾರೂ ಕಾಲು ಹಾಕುತ್ತಿರಲಿಲ್ಲ. ಮುದೂರಿನಲ್ಲಿಕಬ್ಬಿನಾಲೆ (ಅಲೆಮನೆ) ಪ್ರತೀ ವರ್ಷ ನಡೆಯುತ್ತಿತ್ತು. ಸುತ್ತಮುತ್ತ ಕಬ್ಬು ಬೆಳೆದವರು ಅಲೆಮನೆಗೆ ಸಾಗಿಸಿ ಬೆಲ್ಲ ಮಾಡುತ್ತಿದ್ದರು. ಈ ಕಬ್ಬಿನಾಲೆ ಆಗುತ್ತಿದ್ದುದು ಚಳಿಗಾಲದಲ್ಲಿ. ಆಗ ರಾತ್ರಿಯೆಲ್ಲ ಆಲೆಮನೆಯಲ್ಲಿ ಕೋಣಗಳನ್ನು ಓಡಿಸುತ್ತ ಹಾಡುತ್ತಿದ್ದ ಹಾಡು ಕಿವಿಗೆ ಬೀಳುತ್ತಿತ್ತು. ಇಂತಹ ಸಿಹಿ ಕಬ್ಬಿನಗದ್ದೆಗೆ ನರಿಗಳು ಬರುತ್ತಿದ್ದವು. ರಾತ್ರಿ ಬಂದು ಕಬ್ಬು ತಿಂದು ಹೋಗುತ್ತಿದ್ದವು. ಬಹುಶಃ ಕಬ್ಬು ತಿಂದ ಖುಷಿಯಲ್ಲೋ ಏನೋ ಕೂಕೂಕೂ ಎಂದು ಜೋರಾಗಿ ಊಳಿಡುತ್ತಿದ್ದವು. ಈ ಕೂಗಂತೂ ಮನುಷ್ಯರದ್ದೇ ಸ್ವರ ಎಂಬಷ್ಟರಮಟ್ಟಿಗೆ ಹೋಲಿಕೆಯಾಗುತ್ತದೆ! ಮನೆಯಲ್ಲಿ ಬೆಚ್ಚಗೆ ಮಲಗಿದ ವಿಜಿಗೆ ಈ ಕೂಗು ಕೇಳಿದೊಡನೆ ಕಬ್ಬು, ಸೌತೆಕಾಯಿ ತಿನ್ನುವ ವಿಚಿತ್ರ ಪ್ರಾಣಿ ನರಿ ಇಷ್ಟವೆನಿಸಿ ಅದನ್ನು ನೋಡಬೇಕೆನಿಸುತ್ತಿತ್ತು. ಆದರೆ ಅದನ್ನು ಕಾಡಿನಲ್ಲಿ ನೋಡಿದ್ದು ಒಂದೇ ಸಲ. ಉಳಿದಂತೆ ಝೂಗಳಲ್ಲಿ ನೋಡಿದ್ದಷ್ಟೇ. ಕತೆಗಳಲ್ಲಿ ಓದಿದಂತೆ ನರಿ ಮೋಸ ಮಾಡುವ ಪ್ರಾಣಿ ಎಂದು ಒಪ್ಪಿಕೊಳ್ಳಲು ಅವಳಿಗೆಂದೂ ಸಾಧ್ಯವಾಗಲೇಇಲ್ಲ. “ಮೋಸ ಮಾಡುವುದು ಮನುಷ್ಯರು ಮಾತ್ರ, ಪ್ರಾಣಿಗಳಲ್ಲ” ಎನಿಸುತ್ತಿತ್ತು. ನರಿಗಳ ಕುರಿತು ಅವರೂರಿನ ಜನರು ಒಂದು ಮಾತು ಹೇಳುತ್ತಿದ್ದರು. ಅದು ತಮಾಷೆಯಾಗಿ ಕಂಡರೂ ಜನಕ್ಕೆ ಅದು ನಿಜವೆಂದೇ ನಂಬಿಕೆಯಿತ್ತು. ಕಬ್ಬು ತಿನ್ನುವಾಗ ನಡುನಡುವೆ ಕೆಲಭಾಗ ಕೆಂಪಾಗಿ ಬಿರುಕುಬಿಟ್ಟು ಹಾಳಾಗಿರುತ್ತದಲ್ಲ; `ನರಿ ಪೂಂಕಿ ಬಿಟ್ಟು ಹಾಗಾದದ್ದು’ ಎಂದು ಜನ ಹೇಳುತ್ತಿದ್ದರು! ರಾತ್ರಿ ಕಬ್ಬಿನಗದ್ದೆಗೆ ಇಳಿದು ಚೆನ್ನಾಗಿ ತಿಂದು ಆಮೇಲೆ ಹೀಗೆ ಕಿಡಿಗೇಡಿತನ ಮಾಡಿ ನರಿಗಳು ವಾಪಸ್ಸಾಗುತ್ತವಂತೆ! ವಿಜಿ ಕೂಡಾ ಇದು ನಿಜವೆಂದೇ ತಿಳಿದುಕೊಂಡಿದ್ದಳು. ಆಮೇಲೆ ಸ್ವಲ್ಪ ದೊಡ್ಡವಳಾದ ನಂತರ ಅದು ಕಬ್ಬಿಗೆ ಬರುವ ಎಂತದೋ ರೋಗ ಎಂದು ಗೊತ್ತಾಯಿತು. ಆದರೂ ಪ್ರತೀ ಸಲ ಕಬ್ಬು ತಿನ್ನುವಾಗ ಹಾಳಾದ ಭಾಗವನ್ನು ನೋಡಿದಾಗ ನರಿಯ ಈ ಪ್ರಕರಣ ನೆನಪಾಗದೇ ಹೋಗುವುದಿಲ್ಲ! ಬಿಸಿಲು-ಮಳೆ ಒಟ್ಟಾಗಿ ಬಂದರೆ “ಹಾ ನರಿಯಣ್ಣನ್ ಮದಿ ಆತ್ತ್ಕಾಣಿ ಮಕ್ಳೇ ಈಗ” ಎನ್ನುತ್ತಿದ್ದರು ಅಜ್ಜಿ ಮತ್ತು ಆಚೆಮನೆ ದೊಡ್ಡಮ್ಮ. ಬಿಸಿಲು-ಮಳೆ ಬಂದಾಗಷ್ಟೇ ನರಿಗಳ ಮದುವೆ ನಡೆಯುತ್ತದೆ ಎಂದು ವಿಜಿಯಂತಹಾ ಮಕ್ಕಳು ಕಲ್ಪಿಸಿಕೊಂಡೂ ಇದ್ದರು! ನರಿಗಳು ‘ಕೂಕೂಕೂ’ ಎಂದು ಗುಂಪಾಗಿ ಕೂಗುತ್ತವಲ್ಲ; ಅದು ರಾತ್ರಿ ಹೊತ್ತು ಮಾತ್ರ. ಕಗ್ಗತ್ತಲಲ್ಲಿ ಕೇಳುವ ಆ ವಿಚಿತ್ರ ಕೂಗು ಬಾಲ್ಯದ ಸಿಹಿನೆನಪುಗಳಲ್ಲಿ ಒಂದು. ವಿಶೇಷವೆಂದರೆ ದೀಪಾವಳಿ ಹಬ್ಬದ ದಿನ ಗದ್ದೆಗೆ ದೀಪವಿಟ್ಟ ನಂತರ ಮನುಷ್ಯರೂ ನರಿಗಳಂತೆ ಕೂಕೂಕೂ ಎಂದು ಕೂಗು ಹಾಕುತ್ತಿದ್ದರು! ಇದಾದರೆ ಭೂಮಿಯ ರಾಜ ಬಲೀಂದ್ರನನ್ನು ಕರೆಯುವ ಸಲುವಾಗಿ ವರ್ಷಕ್ಕೊಮ್ಮೆ ಹಬ್ಬ ಮಾಡಿ ಕರೆಯುವುದು. ಆದರೆ ನರಿಗಳು ಯಾರನ್ನು ಕರೆಯಲು ಕೂಗುತ್ತವೋ ವಿಜಿಗೆ ಗೊತ್ತಿರಲಿಲ್ಲ. ಕಬ್ಬು ತಿಂದ ಖುಷಿಯಲ್ಲಿ ಅವು `ದಿಗಣ’ ಹಾರಿ ಕೂಗುವುದು ಎನ್ನುತ್ತಿದ್ದರು ಅಜ್ಜಿ! ಅದೇ ನಿಜವೆಂದು ಅವಳೂ ನಂಬಿದ್ದಳು. ಆದರೆ ಕತೆಗಳಲ್ಲಿ ಓದಿದ ಕಳ್ಳನರಿ, ಸುಳ್ಳನರಿ, ಕುತಂತ್ರಿ ನರಿ, ಮೋಸಗಾರ ನರಿಯ ಪಾತ್ರ ಎಂದೂ ವಿಜಿಯೊಳಗೆ ಇಳಿಯಲೇ ಇಲ್ಲ. ನರಿಯೆಂದರೆ ಮುದ್ದಿನಪ್ರಾಣಿ ಅವಳಿಗೆ! ಗಾಢ ರಾತ್ರಿಗಳಲ್ಲಿ ಕಬ್ಬು, ಸೌತೆ ತಿಂದು ಹಾಡು ಹೇಳುವ ಜೀವನಪ್ರೀತಿಯ ನರಿ ಅವಳಿಗೆ ಸದಾ ಇಷ್ಟ. ಮನೆ ಎದುರಿನ ಗದ್ದೆಯಲ್ಲಿ ಬಸಳೆ ಚಪ್ಪರವನ್ನು ಹಾಕುತ್ತಿದ್ದರು. ಮಳೆಗಾಲದ ಮೂರ್ನಾಲ್ಕು ತಿಂಗಳುಗಳನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಬಸಳೆ ಚಪ್ಪರ ಇದ್ದೇ ಇರುತ್ತಿತ್ತು. ಉಳಿದ ತರಕಾರಿಗಳೂ ಇರುತ್ತಿದ್ದವು. ಕಾಡುಹಂದಿ ರಾತ್ರಿ ಬಂದು ಈ ಗಿಡಗಳ ಬುಡವನ್ನು ಒಕ್ಕಿ ಹೋಗುತ್ತಿತ್ತು. ಬೆಳಿಗ್ಗೆ ಹೋಗಿ ನೋಡುವಾಗ ಅಗೆದು ಹಾಕಿದ ಮಣ್ಣು; ಕೆಲವು ಗಿಡಗಳು ಬುಡಮೇಲಾಗಿ ಬಿದ್ದದ್ದು ಕಾಣುತ್ತಿತ್ತು. ರಾತ್ರಿ ಯಾವ ಮಾಯಕದಲ್ಲೋ ಬಂದು ಹೀಗೆಲ್ಲ ಕರಾಮತ್ತು ಮಾಡಿಹೋದ ಆ ಹಂದಿಗೆ ಅಜ್ಜಿ ಬಯ್ಯುತ್ತಿದ್ದರು. ಕಾಡುಹಂದಿ ಹೀಗೆ ಅಗೆದು ಹೋಗುವುದು ಯಾಕೆ ಎಂದು ವಿಜಿ ಕೇಳಿದಾಗ ಅದು ಗಿಡದ ಗಡ್ಡೆ ಹುಡುಕುವುದುಎಂದು ಅಜ್ಜಿ ಹೇಳುತ್ತಿದ್ದರು. ಅಂದರೆ ಬಸಳೆಯನ್ನು ಗೆಣಸೋ, ಮರಸಣಿಗೆಯೋ, ಕೆಸವೋ, ಮರಗೆಣಸೋ ಎಂದು ಭ್ರಮಿಸಿ, ಅಗೆದು ನೋಡುತ್ತಿತ್ತೇನೋ ಪಾಪದ್ದು! ‘ಕಾಡುಹಂದಿಗೆ ದೊಡ್ಡ ಕೊಂಬಿದೆ, ಅದರಿಂದ ನೆಲ ಅಗೆಯುತ್ತದೆ’ ಎಂದು ವಿಜಿ ಕಲ್ಪಿಸಿಕೊಂಡಿದ್ದಳು. ಆದರೆ ಮತ್ತೆ ಗೊತ್ತಾಯಿತು; ಕೊಂಬಲ್ಲ, ಅದಕ್ಕಿರುವುದು ಬಾಯಿಂದ ಹೊರಹೊರಟ ಬಲಿಷ್ಠ ಹಲ್ಲು ಎಂದು. ಕೆಲವೊಮ್ಮೆ ಸುಮ್ಮ ಸುಮ್ಮನೆ ಗದ್ದೆಯಕಂಟ(ಬದು)ಗಳನ್ನೆಲ್ಲ ಅಗೆದುಹಾಕಿ ಹೋಗುತ್ತಿತ್ತು. ಅಲ್ಲಿ ಹುಳಗಳನ್ನು ಹುಡುಕುತ್ತಿತ್ತೋ ಏನೋ! “ಈ ಹಂದಿಯಿಂದ ಇರಸ್ತಿಕೆ ಇಲ್ಲ” ಎಂದು ಅಜ್ಜಿ ಗೊಣಗುತ್ತಿದ್ದರು. ಇಂತಹ ಹಂದಿ ಮತ್ತು ಇತರ ಪ್ರಾಣಿಗಳ ಬೇಟೆಗಾಗಿ ಅವರೂರಿನ ಜನ ವರ್ಷಕ್ಕೊಂದು ಸಲ ಹೋಗುತ್ತಿದ್ದರು. ನಾಯಿಗಳನ್ನು ಕರೆದುಕೊಂಡು ವಿವಿಧ ರೀತಿಯ ಬಲೆಗಳನ್ನೆಲ್ಲ ಹಿಡಿದು ಹುರುಪಿನಿಂದ ಅವರೆಲ್ಲ ಬೇಟೆಗೆ ಹೋಗುವುದನ್ನು ನೋಡಿ ಅದೇನೋ ಸಂಭ್ರಮವಿರಬೇಕು ಎಂದು ವಿಜಿ ಮೊದಮೊದಲು ಊಹಿಸಿದ್ದಳು. ನಾಯಿಗಳಂತೂ ಕಿವಿಗೆ ಗಾಳಿ ಹೊಗ್ಗಿದಂತೆ ಹತ್ತು ದಿಕ್ಕಿಗೆ ಮೂಗುಗಾಳಿ ಹಿಡಿಯುತ್ತಾ ನೆಗೆದು ಬಿಡುತ್ತಿದ್ದವು. ಅವುಗಳ ಕಾತುರ, ಉದ್ವೇಗ, ಚುರುಕುತನ ವರ್ಣಿಸಲಸಾಧ್ಯ. ಆದರೆ ಬೇಟೆ ಎಂದರೆ ಹೇಗಿರುತ್ತದೆಂದು ವಿಜಿಗೆ ಗೊತ್ತಿರಲಿಲ್ಲ. ಕ್ರಮೇಣ, ಜನರು ಹೆಗಲ ಮೇಲೆ ತೂಗುಹಾಕಿಕೊಂಡು ಬರುವ ಮೊಲ, ಹಂದಿ ಮತ್ತಿತರ ಸತ್ತ ಪ್ರಾಣಿಗಳನ್ನು ನೋಡಿ ಬೇಟೆಯೆಂದರೆ ಏನೆಂದು ತಿಳಿಯಿತು. ವಿಜಿಯ ಮನೆ ಮೆಟ್ಟಿಲಿನಿಂದ ಮುಂದಿನ ಹೆಜ್ಜೆ ಇಟ್ಟರೆ ಅದೇ ಗದ್ದೆ! ಮಳೆಗಾಲದಲ್ಲಂತೂ ನೀರು, ಕೆಸರು ಅಥವಾ ಬತ್ತದ ಸಸಿಗಳನ್ನು ಒಳಗೊಂಡ ಈ ಗದ್ದೆ ಹಲವು ರೂಪಗಳಲ್ಲಿ ಕಾಣಿಸುತ್ತಿತ್ತು. ಗದ್ದೆಯಲ್ಲಿದ್ದ ಕಪ್ಪೆಗಳೆಲ್ಲ ಮಳೆಗಾಲದ ರಾತ್ರಿ ಕೂಗುತ್ತಾ ಅದೇ ಒಂದು ದೊಡ್ಡ ಶ್ರುತಿ ಹಿಡಿದ ಸಂಗೀತ ಸಭೆಯಂತೆ ಕೇಳುತ್ತಿತ್ತು. ಈ ಕಪ್ಪೆಗಳಿಗೂ ವಿಜಿಯ ಮನೆ ಸದಸ್ಯರಿಗೂ ಹತ್ತಿರದ ಸಂಬಂಧ! ‘ಗೋಂಕ್ರಕಪ್ಪೆ’ ಎಂದು ಕರೆಯುವ ದೊಡ್ಡ ಕಪ್ಪೆಯನ್ನು ಕಂಡರಂತೂ ವಿಜಿಯಂತಹ ಮಕ್ಕಳು ಎರಡು ಹೆಜ್ಜೆ ಹಿಂದೆ ಹಾರಿ ಹೆದರಿಕೊಳ್ಳುತ್ತಿದ್ದವು. ದೊಡ್ಡ, ಉರುಟು ಕಣ್ಣಿನ ಗ್ವಾಂಕ್ರ ಕಪ್ಪೆಗಳು ತೆಂಗಿನಕಟ್ಟೆಯಲ್ಲಿ, ಹೂವಿನ ಗಿಡಗಳ ಅಡಿಯಲ್ಲಿ ಹುಲ್‌ಕುತ್ರೆಯ ಅಡಿಯಲ್ಲಿ ಎಲ್ಲೆಲ್ಲೋ ಕುಳಿತುಕೊಳ್ಳುತ್ತಿದ್ದವು. ಕೆಸರಿನ ಬಣ್ಣಕ್ಕಿರುವ ಅವು ಫಕ್ಕನೆ ಕಾಣುತ್ತಿರಲಿಲ್ಲ. ಹತ್ತಿರ ಹೋದಾಗ ಚಂಗನೆ ಹಾರಿ ಹೆದರಿಸುತ್ತಿದ್ದವು! ಅವು ಕೂಗುವುದೂ ‘ಗ್ವಾಂಕ್ರ್ ಗ್ವಾಂಕ್ರ್ ‘ ಎಂಬ ದೊಡ್ಡ ಶಬ್ದದಲ್ಲಿ! ಬೇಸಗೆ ಕಳೆದು ಮೊದಲ ಮಳೆ ಬೀಳುವ ಸಮಯದಲ್ಲಿ ಸೂಚನೆ ಕೊಡುವುದು ಈ ಗ್ವಾಂಕ್ರ ಕಪ್ಪೆಗಳೇ! ಎಲ್ಲೋ ದೂರದಲ್ಲಿ ಮಳೆ ಬರುವಾಗಲೇ ಅಥವಾ ಮಳೆ ಬರುವ ವಾತಾವರಣ ಉಂಟಾದಾಗಲೇ ಇವುಗಳಿಗೆ ಗೊತ್ತಾಗುತ್ತೆಂದು ಕಾಣುತ್ತದೆ. ಒಂದೇ ಸಮನೆ ಕೂಗಲು ಶುರು ಮಾಡುತ್ತಿದ್ದವು. ಹಾಗೆ ಕಪ್ಪೆಗಳು ಕೂಗಿದಾಗ ‘ಹೋ ಮಳೆ ಬರುತ್ತದೆ’ ಎಂಬ ಖುಷಿ ಜನರಲ್ಲಿ ಮೂಡುತ್ತಿತ್ತು. ಇವಲ್ಲದೆ ಇತರ ಸಣ್ಣ ಸಣ್ಣ ಕಪ್ಪೆಗಳೂ ಇದ್ದವು. ಇವು ಆಗಾಗ ನೇರ ಮನೆಯೊಳಗೇ ಪ್ರವೇಶಿಸುತ್ತಿದ್ದವು. ಹಿಡಿಕಟ್ಟಿನಲ್ಲಿ ಓಡಿಸಿ ಹೊರಹಾಕಲು ಪ್ರಯತ್ನಿಸಿದರೆ ಛಲಬಿಡದೆ ಜಗಲಿಯಿಂದ ಚಾವಡಿಗೆ, ಪಡಸಾಲೆಗೆ, ಅಲ್ಲಿಂದ ಒಳಕೋಣೆಗೆ ಹೀಗೆ ಮನೆಯೊಳಗೇ ಹಾರುತ್ತ ಪಜೀತಿ ಮಾಡುತ್ತಿದ್ದವು. ಹಾಗಾಗಿ ರಾತ್ರಿ ಇವು ಒಳಗೆ ಬಂದಾಗ ಹಾರದಂತೆ ಒಂದು ಪಾತ್ರೆ ಮುಚ್ಚಿಟ್ಟು ಮರುದಿನ ಬೆಳಿಗ್ಗೆ ಹೊರಗೆ ಓಡಿಸುತ್ತಿದ್ದುದೂ ಇದೆ. ಈ ಕಪ್ಪೆಗಳ ಒಂದು ದುರ್ಗುಣವೆಂದರೆ ಉಚ್ಚೆ ಹಾರಿಸುವುದು. ಓಡಿಸಲು ಹೋದ ಕೂಡಲೇ ಉಚ್ಚೆ ಹಾರಿಸಿ ತಪ್ಪಿಸಿಕೊಳ್ಳುತ್ತಿದ್ದವು! ಬೆಕ್ಕು ನಾಯಿಗಳು ಇವನ್ನು ಮುಟ್ಟಲು ಹೋದರೆ ಕಣ್ಣಿಗೋ, ಮೂಗಿಗೋ, ಬಾಯಿಗೋ ಇವು ಹಾರಿಸಿದ ಉಚ್ಚೆ ಕುಡಿದುಕೊಂಡು ಸಪ್ಪೆ ಮುಖ ಹಾಕಿ ವಾಪಸ್ಸು ಬರುತ್ತಿದ್ದವು! ಆದರೆ ಇವು ಎಷ್ಟೇ ಉಪದ್ರ ಕೊಟ್ಟರೂ ಯಾರೂ ಕೊಲ್ಲುತ್ತಿರಲಿಲ್ಲ. “ಕಪ್ಪೆಕೊಂದ್ರೆ ಪಾಪ” ಎಂಬ ಆಡುಮಾತನ್ನುಎಲ್ಲರೂ ನಂಬುತ್ತಿದ್ದರು. ವಿಜಿಯ ಮನೆಯಲ್ಲಿ ಯಾರೂ ಯಾವತ್ತೂ ಒಂದೇ ಒಂದು ಕಪ್ಪೆಯನ್ನು ಹೊಡೆದದ್ದು, ಕೊಂದದ್ದನ್ನು ಅವಳು ನೋಡಿಲ್ಲ, ಇನ್ನು ಮರಕಪ್ಪೆಗಳೆಂದರೆ ವಿಜಿಗೆ ಭಾರೀ ಹೆದರಿಕೆ. ಇವು ಒಳಗೆ ಬಂದರೆ ಹೊರಹಾಕಲು ಸಾಧ್ಯವೇ ಇಲ್ಲ! ಕಡ್ಡಿಯಲ್ಲಿ ಮುಟ್ಟಲು ಹೋದರೆ ತಿರುಗಿ ಮುಖದ ಕಡೆಗೇ ಹಾರುತ್ತವೆ. ಇವುಗಳಿಗೆ ಮನುಷ್ಯರಂತೆ ಬುದ್ಧಿ ಗಿದ್ದಿ ಇದೆಯೇನೋ ಎಂದು ಸಂಶಯವಾಗುತ್ತಿತ್ತು ಅವಳಿಗೆ! ವಿಚಿತ್ರವಾಗಿ ವರ್ತಿಸುವ ಇವುಗಳು ಮೈಮೇಲೆ ಹಾರಿ ಕುಳಿತುಕೊಳ್ಳಲು ಮನುಷ್ಯನ ಕಡೆಗೇ ಹಾರುತ್ತವೆ. ಅದಲ್ಲದೆ ಮನೆಯ ಆಯಕಟ್ಟಿನ ಯಾವುದಾದರೂ ಜಾಗದಲ್ಲಿ ಕುಳಿತು ಅಶರೀರವಾಣಿ ಹೊರಡಿಸುತ್ತವೆ. ಮನೆಯೊಳಗೇ ಅವಿತುಕೊಂಡಿದ್ದರೂ ಇವುಗಳನ್ನು ಹುಡುಕುವುದು ಕಷ್ಟ. ಕಾಲುಗಳನ್ನು ಅಗಲವಾಗಿ ಹರಡಿಕೊಂಡು ಗೋಡೆಯ ಮೇಲೆ ಚಲಿಸುವ ಮರಕಪ್ಪೆಯನ್ನು ಕಂಡರೆ ಭಯವಾಗಿ ಆ ಜಾಗದಿಂದಲೇ ದೂರ ಓಡಿಹೋಗುತ್ತಿದ್ದಳು ವಿಜಿ. ಒಮ್ಮೊಮ್ಮೆ ಬಚ್ಚಲು ಮನೆಯೊಳಗೆ, ಕೋಣೆಯೊಳಗೆ ಕುಳಿತು ಇವು ಅಣಕಿಸುವಾಗ ಏನು ಮಾಡಬೇಕೆಂದೇ ತಿಳಿಯುತ್ತಿರಲಿಲ್ಲ! ಆವಾಗೆಲ್ಲ ಎಷ್ಟೊಂದು ಗ್ವಾಂಕ್ರ ಕಪ್ಪೆ, ಮರಕಪ್ಪೆ, ಸಣ್ಣ ಚಿಲ್ಟಾರಿ ಕಪ್ಪೆಗಳು ಇದ್ದವು! ವಿಜಿ ಹೈಸ್ಕೂಲಿಗೆ ಹೋಗುತ್ತಿದ್ದ ಎಂಬತ್ತು-ತೊಂಬತ್ತರ ದಶಕದಲ್ಲಿ ಹಾವು-ಕಪ್ಪೆ ಹಿಡಿಯುವವರು ಬರಲಾರಂಭಿಸಿದರು. ಗದ್ದೆ ಬದಿ, ತೋಡಿನ ಬದಿ ಚೀಲಗಳನ್ನು ಹಿಡಿದುಕೊಂಡು ಅವರು ತಿರುಗಾಡುತ್ತಿದ್ದರು. `ಗೋಂಕ್ರಕಪ್ಪೆ ಮತ್ತು ಹಾವಿನ ಚರ್ಮಕ್ಕಾಗಿ ಅವುಗಳನ್ನು ಹಿಡಿದುಕೊಂಡು ಹೋಗುತ್ತಾರೆ. ಯಾವುದೋ ಕಂಪನಿಯವರು ಇದನ್ನೆಲ್ಲ ಮಾಡಿಸುತ್ತಾರೆ’ ಎಂದು ಅಣ್ಣ ಹೇಳುತ್ತಿದ್ದ. ಹಳ್ಳಿಯ ಜನ ಎಷ್ಟು ಅಮಾಯಕರಾಗಿದ್ದರೆ, ತಮ್ಮಗದ್ದೆ ಬಯಲುಗಳಿಂದ ಅವುಗಳನ್ನು ಹಿಡಿದೊಯ್ಯಬಾರದೆಂದು ಗುರುತು ಪರಿಚಯವಿಲ್ಲದ ಆ ಮನುಷ್ಯರಿಗೆ ತಾಕೀತು ಮಾಡಬೇಕೆಂದೂ ಅವರಿಗೆ ತಿಳಿದಿರಲಿಲ್ಲ…! ಹೀಗೆ ಹಾವು, ಕಪ್ಪೆಗಳನ್ನು ಹಿಡಿದು ಕೊಂದ ಅಂದಿನ ಆ ಕೆಲಸ ಪರಿಸರಕ್ಕೆ ದೊಡ್ಡ ನಷ್ಟ. ಆಮೇಲೆ ಗ್ವಾಂಕ್ರ ಕಪ್ಪೆಗಳು ಮೊದಲಿನಷ್ಟು ಕಾಣ ಸಿಗಲೇ ಇಲ್ಲ! ಓತಿಕ್ಯಾತಕ್ಕೆ ವಿಜಿಯ ಊರಿನಲ್ಲಿ ‘ಕಾಯ್ಕಳ್ಳ’ ಎಂದು ಕರೆಯುತ್ತಿದ್ದರು. ಈ ಹೆಸರು
ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆಯನ್ನು ಪ್ರೋತ್ನಾಹಿಸಲು ನಿರ್ಧರಿಸಿ; ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ ವಿಧಿಸಿಕೊಂಡೆವು. …… ಸಾಂವಿಧಾನಿಕ ಸ್ಥಾನಮಾನ– ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, ‘ಕೇಶವಾನಂದ ಭಾರತಿ ಮತ್ತು ಕೇರಳ ಸರ್ಕಾರ’ ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, ಹಕ್ಕು ಸಾಧಿಸುವ ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು. ಪೀಠಿಕೆಯ ಮೂಲಪ್ರತಿಯಲ್ಲಿ “ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ” ಎಂದಿತ್ತು. ಎರಡು ಹೆಚ್ಚಿನ ಪದಗಳಾದ “ಸಮಾಜವಾದಿ” ಮತ್ತು “ಜಾತ್ಯಾತೀತ” ಪದಗಳನ್ನು ೧೯೭೬ ರಲ್ಲಿ ಸಂವಿಧಾನದ ೪೨ ನೆಯ ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೇ ಎಂಬುದನ್ನು ಹಿಂದಿನ ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ ಸಮಿತಿಯು ಈ ತಿದ್ದುಪಡಿಯನ್ನು ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು. ಪೀಠಿಕೆಯ ಮಹತ್ವ– ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು) ಮಾಡುವಂತಿಲ್ಲ. ಪೀಠಿಕೆಯ ಮೊದಲ ಪದಗಳು – “ನಾವು, ಜನಗಳು ” – ಭಾರತಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ – ನವೆಂಬರ್ ೨೬ ೧೯೪೯ ಎಂದು ಹೇಳುತ್ತದೆ. ಪೀಠಿಕೆಯ ಕೆಲವು ಪದಗಳ ನಿರೂಪಣೆ ಸಂಪಾದಿಸಿ ಸಾರ್ವಭೌಮ– ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥವಾ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ. ಭಾರತ ಕಾಮನ್ವೆಲ್ತ್ ರಾಷ್ಟ್ರಗಳ ಒಕ್ಕೂಟದಲ್ಲಿ ಸದಸ್ಯ ಸ್ಥಾನ ಪಡೆದಿದೆ. ಹಾಗಂತ ಬ್ರಿಟೀಷರ ಅಡಿಯಾಳಲ್ಲ. ವಿಶ್ವದಲ್ಲಿ ಉತ್ತಮವಾದ ಸ್ಥಾನಮಾನ ಪಡೆಯಲು ಇದು ಅವಶ್ಯಕ. ಅಂತರರಾಷ್ಟ್ರೀಯ ವ್ಯಾಪಾರವನ್ನು ಕೈಗೊಂಡು ದೇಶದ ಆರ್ಥಿಕ ಭದ್ರತೆಗೆ ಈ ರೀತಿಯ ಸದಸ್ಯತ್ವ ಅವಶ್ಯಕವಾಗಿದೆ. ಸಮಾಜವಾದಿ– ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ ಬದ್ಧರಾಗುವುದಾಗಿದೆ. ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ. ಜಾತ್ಯತೀತ– ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ. ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವು ಜಾತ್ಯತೀತತೆಯು ಭಾರತ ಸಂವಿಧಾನದ ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ. ಪ್ರಜಾಸತ್ತಾತ್ಮಕ– ಪ್ರಜಾಸತ್ತಾತ್ಮಕವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ. ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಗಣತಂತ್ರ– ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದ ಗಣತಂತ್ರದಲ್ಲಿ, ಆ ರಾಜ್ಯದ ಮುಖ್ಯಸ್ತನನ್ನು ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಆರಿಸಲಾಗುವುದು. ರಾಷ್ಟ್ರಪತಿಯನ್ನು ೫ ವರ್ಷಗಳ ಒಂದು ನಿರ್ಧಿಷ್ಟ ಅವಧಿಗೆ ಚುನಾಯಿಸಲಾಗುವುದು..! ******************************************* ಕೆ.ಶಿವು.ಲಕ್ಕಣ್ಣವರ
ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ ಹತ್ತಿದ ಚೌಡಾರ್ ಕೆರೆಯ ಚಳುವಳಿಯು, ಅನೇಕ ವರ್ಷಗಳ ನಂತರ, ಕೆಳವರ್ಗಗಳ ಪರವಾಗಿ ವಿಜಯ ಸಾಧಿಸು ವುದರೊಂದಿಗೆ ಪರ್ಯವಸಾನ ಹೊಂದಿತು. ಅಸ್ಪೃಶ್ಯರನ್ನು ಸಮಾಜ ನಡೆಸಿಕೊಳ್ಳುತ್ತಿದ್ದ ಕ್ರೂರ ರೀತಿಗೆ ಮೂಲ ಕಾರಣ ‘ಮನುಸ್ಮೃತಿ’ ಎಂದು ಅಂಬೇಡ್ಕರ್ ನಂಬಿದ್ದರು. ಮನುಸ್ಮೃತಿಯನ್ನು ಇದೇ ಚಳುವಳಿಯಲ್ಲಿ ವಿಧ್ಯುಕ್ತವಾಗಿ ದಹನ ಮಾಡಲಾಯಿತು. ಈ ಕೃತಿಯನ್ನು ಹೀಗೆ ಸಾರ್ವಜನಿಕವಾಗಿ ಅವಮರ್ಯಾದೆ ಮಾಡುವುದರ ಮೂಲಕ ಅಂಬೇಡ್ಕರರ ಅನುಯಾಯಿಗಳು ಸಮಾನತೆಯ ಹಕ್ಕು ಪ್ರತಿಪಾದನೆ ಮಾಡಬಯಸಿದ್ದರು. ಆದರೆ, ಹಿಂದೂ ಧರ್ಮದ ಅನುಯಾಯಿಗಳಲ್ಲಿ ಮನುಸ್ಮೃತಿಯ ಮಹತ್ವವೇನು ಎಂಬುದೇ ಅಸ್ಪಷ್ಟ ಹಾಗೂ ವಿವಾದಿತ ವಿಷಯವಾದ್ದರಿಂದ, ಅದರಲ್ಲಿಯೂ ಮುಖ್ಯವಾಗಿ ಮನುಸ್ಮೃತಿಯನ್ನು ಹಿಂದೂ ಧರ್ಮಶಾಸ್ತ್ರಗಳಲ್ಲಿ ಒಂದಾಗಿ ಪರಿಗಣಿಸದೇ ಇದ್ದು, ಹಳ್ಳಿಗಾಡುಗಳಿಂದ ಹೊರಗೆ ಅದಕ್ಕೆ ಧಾರ್ಮಿಕ ಮಹತ್ವವೂ ಇಲ್ಲದಿದ್ದುದರಿಂದ, ಈ ಉದ್ದೇಶ ನೆರವೇರಿತೋ ಇಲ್ಲವೂ ಎಂಬುದು ಚರ್ಚಾಸ್ಪದ. ಮೊದಲೇ ತಮ್ಮ ಚಟುವಟಿಕೆಗಳಿಂದ ಸಂಪ್ರದಾಯಶೀಲ ಹಿಂದೂಗಳ ಅಸಮಾಧಾನವನ್ನು ಗಳಿಸಿದ್ದ ಅಂಬೇಡ್ಕರ್ , ೧೯೩೧-೩೨ ರಲ್ಲಿ ಮತ್ತಷ್ಟು ಅಪ್ರಿಯರಾದರು. ಅವರೇ ಹೇಳಿಕೊಂಡಂತೆ, ಭಾರತದ ಹಿಂದುಗಳು ಅತ್ಯಂತ ದ್ವೇಷಿಸುವ ವ್ಯಕ್ತಿಯಾದರು. ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಚುನಾವಣಾ ಕ್ಷೇತ್ರಕ್ಕಾಗಿ ಪಟ್ಟು ಹಿಡಿದದ್ದೇ ಈ ಅಸಮಾಧಾನಕ್ಕೆ ಕಾರಣವಾಗಿತ್ತು. ಮಹಾತ್ಮ ಗಾಂಧಿ ಹಾಗೂ ಕಾಂಗ್ರೇಸ್ ಪಕ್ಷದ ಧೋರಣೆ ಇದಕ್ಕೆ ವಿರೋಧವಾಗಿತ್ತು. ಗಾಂಧಿ ಹಾಗೂ ಅಂಬೇಡ್ಕರರಲ್ಲಿ ಈ ವಿಷಯದ ಮೇಲೆ ಎರಡನೆಯ ದುಂಡು ಮೇಜಿನ ಪರಿಷತ್ತಿನಲ್ಲಿ ಚಕಮಕಿಯೂ ನಡೆದಿತ್ತು. ಹಿಂದೂ ಸಮಾಜದಿಂದ ಜಾತಿಪದ್ಧತಿ ಹಾಗೂ ತಾರತಮ್ಯ ವನ್ನು ನಿರ್ಮೂಲನ ಮಾಡುವ ಪರವಾಗಿದ್ದ ಗಾಂಧಿ, ದಲಿತರ ಹಿತರಕ್ಷಣೆಗಾಗಿ ದನಿಯೆತ್ತಿದ ಮೊದಲಿಗರಲ್ಲಿ ಒಬ್ಬರಾಗಿದ್ದರೂ, ಬ್ರಿಟಿಷರಿಗೆ ಈ ವಿಷಯದಲ್ಲಿ ಹಿಂದೂಗಳನ್ನು ಜಾತಿಯ ಆಧಾರದ ಮೇಲೆ, ರಾಜಕೀಯವಾಗಿ ಒಡೆಯಲು ಅವಕಾಶ ಕೊಡಬಾರದೆಂಬುದು ಅವರ ನಿಲುವಾಗಿತ್ತು. ೧೯೩೨ರಲ್ಲಿ ಬ್ರಿಟಿಷರು ಜಾರಿಗೆ ತಂದ ಕೋಮುವಾರು ಕಾನೂನಿನಲ್ಲಿ ಅಸ್ಪೃಶ್ಯರಿಗೆ ಪ್ರತ್ಯೇಕ ಕ್ಷೇತ್ರವನ್ನು ಮಂಜೂರು ಮಾಡಲಾಯಿತು. ಇದಕ್ಕೆ ಪ್ರತಿಭಟನೆಯಾಗಿ ಗಾಂಧಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಫಲವಾಗಿ, ಅಂಬೇಡ್ಕರ್, ಕಾಂಗ್ರೇಸ್ ಮತ್ತು ಸನಾತನ ಹಿಂದೂ ಮುಖಂಡರೊಂದಿಗೆ ಚರ್ಚಿಸಿ, ಕೊನೆಗೂ ಪ್ರತ್ಯೇಕ ಕ್ಷೇತ್ರ ಹಾಗೂ ಕೋಟಾ ಬೇಡಿಕೆಯನ್ನು ಕೈಬಿಟ್ಟರು.ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷವು, ಅಸ್ಪೃಶ್ಯರಿಗೆ ಪ್ರಾತಿನಿಧ್ಯವನ್ನು ಹೆಚ್ಚುಮಾಡಲು ಒಪ್ಪಿಕೊಂಡಿತು. ಹಿಂದೂ ಧಾರ್ಮಿಕ ಮುಖಂಡರುಗಳು ಅಸ್ಪೃಶ್ಯತೆಯ ಹಾಗೂ ಜಾತ್ಯಾಧಾರಿತ ತಾರತಮ್ಯದ ವಿರುದ್ಧವಾಗಿ ಹೆಚ್ಚು ಹೆಚ್ಚಾಗಿ ದನಿಯೆತ್ತ ತೊಡಗಿದರು. ಇಂದು ಡಾ. ಅಂಬೇಡ್ಕರ್ ಅವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಮುಕ್ತ ಕಂಠದಿಂದ ಹೇಳಲಾಗುತ್ತಿದೆ.ಇದೇ ವೇಳೆಗೆ ಸ್ವತಂತ್ರವಾದ ಅನೇಕ ದೇಶಗಳು ಸಾರ್ವಜನಿಕರ ಹಕ್ಕುಗಳನ್ನು ಕಾಪಾಡಲು ಅಸಮರ್ಥರಾದ ಹಿನ್ನೆಲೆಯಲ್ಲಿ ಭಾರತದ ಈ ಸಂವಿಧಾನ ಎದ್ದು ಕಾಣುತ್ತದೆ ಹಾಗೂ ಇದಕ್ಕೆ ಡಾ. ಅಂಬೇಡ್ಕರ್ ಕೊಡುಗೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಳ್ಳಲಾಗಿದೆ. ಜಾತಿ ಪದ್ಧತಿಯ ಪುನರ್ವಿಮರ್ಶೆ ನಡೆಸಲು ಸನಾತನಿ ಹಿಂದೂಗಳ ಅನಾಸಕ್ತಿಯಿಂದ, ಭ್ರಮನಿರಸನವಾದಂತೆ ಅನ್ನಿಸಿದ್ದು ಹಾಗೂ ಮಹತ್ವದ ರಾಜಕೀಯ ವಿಷಯಗಳಲ್ಲಿ ಗಾಂಧಿಯವರ ಅಭಿಪ್ರಾಯಗಳಿಗೆ ಮಣಿಯಬೇಕಾಗಿ ಬಂದದ್ದು, ಅಂಬೇಡ್ಕರರನ್ನು ಅಸಮಾಧಾನಕ್ಕೀಡು ಮಾಡಿತು. ಪ್ರತ್ಯೇಕ ಚುನಾವಣಾ ಕ್ಷೇತ್ರದ ವಿಷಯದಲ್ಲಿ ಎದುರಿಸಿದ ಪ್ರತಿಭಟನೆ ಮತ್ತು, ಕೆಲವು ದೇವಸ್ಥಾನಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶ ಇನ್ನೂ ನಿಷಿದ್ಧವಾಗಿರುವುದು ಭಾಗಶಃ ಇವುಗಳ ಫಲವಾಗಿ, ಅಂಬೇಡ್ಕರ್ ತಮ್ಮ ಯೋಜನೆಯನ್ನು ಬದಲಾಯಿಸಿದರು. ತಮ್ಮ ಅನುಯಾಯಿಗಳ ಜೀವನಮಟ್ಟವನ್ನು ಹೆಚ್ಚಿಸಿ ಕೊಂಡು , ರಾಜಕೀಯ ಅಧಿಕಾರವನ್ನು ಗಳಿಸುವತ್ತ ಲಕ್ಷ್ಯವಿಡಬೇಕೆಂದು ಆದೇಶಿಸಿದರು.ಜೊತೆಗೆ, “ಹಿಂದೂ ಧರ್ಮದಲ್ಲಿ ಅಸ್ಪೃಶ್ಯರ ಏಳಿಗೆ ಅಸಾಧ್ಯವಾದ್ದರಿಂದ ಅವರು ಬೇರೆಧರ್ಮಕ್ಕೆ ಮತಾಂತರಗೊಳ್ಳಬೇಕು”ಎಂಬ ಆಲೋಚನೆ ಮಾಡತೊಡಗಿದರು. ಇದಕ್ಕೆ ಹಿಂದೂ ಸಮಾಜ ದಿಂದ,ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆ ವರ್ಷದಲ್ಲಿ ಅಂಬೇಡ್ಕರ್ ಖಾಸಗಿ ಜೀವನದಲ್ಲಿ ಕೆಲವು ಮಹತ್ವದ ಘಟನೆಗಳು ಘಟಿಸಿದವು: ಅಂಬೇಡ್ಕರರನ್ನು ಮುಂಬಯಿಯ ಸರಕಾರೀ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ನೇಮಕ ಮಾಡಿಕೂಳ್ಳಲಾಯಿತು. ನಂತರ ಅಂಬೇಡ್ಕರರು ತಮ್ಮದೇ ಆದ ಸ್ವಂತ ಮನೆ ಮಾಡಿ, ೫೦,೦೦೦ಕ್ಕೂ ಹೆಚ್ಚಿನ ಪುಸ್ತಕಗಳ ಗ್ರಂಥಾಲಯವನ್ನು ಕಟ್ಟಿಕೊಂಡರು. ಇದೇ ವರ್ಷ ಅವರ ಪತ್ನಿ ರಮಾಬಾಯಿಯವರು ಮರಣ ಹೊಂದಿದರು. ೧೯೦೮ರಲ್ಲಿ ಅವರ ಮದುವೆಯಾದಾಗ ಅಂಬೇಡ್ಕರ್ ವಯಸ್ಸು ಹದಿನಾರಾದರೆ, ಅವರ ಹೆಂಡತಿ ಕೇವಲ ಒಂಭತ್ತು ವರ್ಷದವರಾಗಿದ್ದರು. ಅವರಿಗೆ ಹುಟ್ಟಿದ ಐದು ಮಕ್ಕಳಲ್ಲಿ ಉಳಿದದ್ದು ಒಬ್ಬರೇ. ಅಂಬೇಡ್ಕರ್ ರವರು ಈ ಭೂಮಿ ಮೇಲೆ ಜನಿಸದಿದ್ದರೆ ಇಂದು ಅನೇಕ ಅಸ್ಪೃಷರ ಸ್ಥಿತಿ ಊಹಿಸಲೂ ಅಸಾಧ್ಯ. ಅಸ್ಪೃಶ್ಯ ರಿಗೆ ನ್ಯಾಯ ಒದಗಿಸಲು ಅವರು ಪಟ್ಟ ಶ್ರಮ ನಿಜಕ್ಕೂ ಶ್ಲಾಘನೀಯ. ಅವರ ನಡೆ ನುಡಿ ಆದರ್ಶ ಪ್ರತಿಯೊಬ್ಬರಿಗೂ ಆದರ್ಶಪ್ರಾಯ. *************************** ಆಶಾ ಸಿದ್ದಲಿಂಗಯ್ಯ .
ಯುಗ ಯುಗಾದಿ ಕಳೆದರೂ..!
ಯುಗಾದಿ ವಿಶೇಷ ಬರಹ ಯುಗ ಯುಗಾದಿ ಕಳೆದರೂ..! ಯುಗ ಯುಗಾದಿ ಕಳೆದರೂ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. ಹೊಂಗೆ ಹೂವ ತೊಂಗಳಲಿ, ಭೃಂಗದ ಸಂಗೀತ ಕೇಳಿ ಮತ್ತೆ ಕೇಳ ಬರುತಿದೆ. ಬೇವಿನ ಕಹಿ ಬಾಳಿನಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ. ವರುಷಕೊಂದು ಹೊಸತು ಜನ್ಮ, ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ. ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ, ನಮಗೆ ಏಕೆ ಬಾರದು? ಎಲೆ ಸನತ್ಕುಮಾರ ದೇವ, ಎಲೆ ಸಾಹಸಿ ಚಿರಂಜೀವ, ನಿನಗೆ ಲೀಲೆ ಸೇರದೂ. ಯುಗ ಯುಗಗಳು ಕಳೆದರೂ ಯುಗಾದಿ ಮರಳಿ ಬರುತಿದೆ. ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. # ಅಂಬಿಕಾತನಯದತ್ತ ……………………………………………. ಯುಗಾದಿ ಹಬ್ಬದ ಮಹತ್ವವೂ..! ಯುಗಾದಿ ಹಬ್ಬ ಆಗಲೇ ಬಂದಿದೆ. ಜನರು ಹೇಗೆ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಮತ್ತು ವಿಶೇಷ ಆಚರಣೆಗೆ ಹೇಗೆ ಸಿದ್ಧರಾಗಬೇಕು. ಯುಗಾದಿಯ ವಿಶೇಷ ಆಚರಣೆ ಏನು ಎಂಬುದರ ವಿವರಣೆ ಇಲ್ಲಿದೆ… ಯುಗಾದಿ ಹಬ್ಬದ ಮಹತ್ವ, ಇತಿಹಾಸ, ಮತ್ತು ಆಚರಿಸುವ ವಿಧಾನ..! ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಯುಗಾದಿ ಆಚರಣೆ ಎದುರಿಗಿದೆ. ಮುಂಬರುವ ಮಂಗಳವಾರ ಏಪ್ರಿಲ್ 13 ನೇ ತಾರೀಕಿನಂದು ಈ ವರ್ಷದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ತಮಿಳುನಾಡು ಮತ್ತು ಕೇರಳದಲ್ಲಿ ವಿಷು ಎಂದು ಈ ಹಬ್ಬವನ್ನು ಕರೆಯಲಾಗುತ್ತದೆ. ಇನ್ನು, ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ ಎಂದು ಕರೆಯುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ ಎಂದರೆ, ಪಾಡ್ಯಮಿ ದಿವಸ ಗುಡಿ ಏರಿಸುವುದು ಎಂದರ್ಥ. ಅಂದರೆ, ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ಗುಡಿ ಎಂದು ಮೂಲೆಯಲ್ಲಿ ಇರಿಸುವ ಸಂಪ್ರದಾಯವಿದೆ. ಇದು ಹೊಸ ವರ್ಷದ ಆಗಮಕ್ಕೆ ಸಂಕೇತವಾಗಿದೆ. ಜೊತೆಗೆ ಮನೆಯಲ್ಲಿ ವೀಶೆಷ ಪೂಜೆಯನ್ನೂ ಕೈಗೊಳ್ಳಲಾಗುತ್ತದೆ. ಪೂಜೆ ಅಂದರೆ ಬೇರೇನೂ ಅಲ್ಲ. ನಮ್ಮ ಬದುಕಿನ ಹೊಸ ಜೀವನದ ಮುಖ್ಯ ವಿಚಾರಗಳು ಹೇಗಿರಬೇಕೆಂಬ ವಿಧಾನದ ಕ್ಯಾಲೆಂಡರ್ ಅಷ್ಟೇ. ಯುಗಾದಿ ಹಬ್ಬ ಅಂದಾಕ್ಷಣ ಹೊಸ ವರ್ಷ ಪ್ರಾರಂಭದ ದಿನ. ಹೊಸ ವರ್ಷದ ಜೊತೆಗೆ ಹೊಸ ಭರವಸೆ ಮತ್ತು ಹೊಸ ಚೈತನ್ಯ ತುಂಬುವ ದಿನ. ಯುಗ, ಅಂದರೆ ವಯಸ್ಸು ಮತ್ತು ಆದಿ ಅಂದರೆ ಪ್ರಾರಂಭ ಎಂಬುದಾಗಿ ‘ಯುಗಾದಿ’ ಎಂಬ ಹೆಸರೂ ಬಂದಿದೆ. ಯುಗಾದಿ ಆಚರಣೆ– ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಇದು ಚೈತ್ರ ನವರಾತ್ರಿಯ ಮೊದಲ ದಿನವೂ ಹೌದು. ಚಳಿಗಾಲದ ಅಂತ್ಯ ಮತ್ತು ಸುಗ್ಗಿಯ ಋತುವಿನ ಆರಂಭದಲ್ಲಿ ಯುಗಾದಿ ಹಬ್ಬ ಬರುವುದು. ಚಂದ್ರಮನ ಯುಗಾದಿ 2021 ದಿನಾಂಕ ಮತ್ತು ಮುಹೂರ್ತ ಸಮಯವೂ– ಯುಗಾದಿ ಹಬ್ಬ 2021 ರ ಏಪ್ರಿಲ್ 12 ನೇ ತಾರೀಕು ಪ್ರತಿಪದ ತಿಥಿಯಂದು ಬೆಳಿಗ್ಗೆ 7:59 ಕ್ಕೆ ಆರಂಭಗೊಳ್ಳುತ್ತದೆ. ಮರುದಿನ ಏಪ್ರಿಲ್ 13 ನೇ ತಾರೀಕು ಬೆಳಿಗ್ಗೆ 10.16 ರ ಸಮಯಕ್ಕೆ ಮುಕ್ತಾಯಗೊಳ್ಳುತ್ತದೆ ಹಿಂದೂ ಸಾಂಪ್ರದಾಯದಂತೆ. ಈ ಆಚರಣೆ ಗೊಡ್ಡು ಆಚರಣೆ ಆದರೆ ಯಾವ ಫಲವೂ ಇಲ್ಲ. ಸರ್ವವಿಧದ, ಸರ್ವ ಜಾತಿ ಜನಾಂಗದ ಜನರ ಒಗೂಡಿಕೆವೊಂದೆಗೇ ಆಚರಣೆ ಆಗಬೇಕು. ಹಬ್ಬಕ್ಕೆ ಸಿದ್ಧತೆಗಳು– ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಮನೆಯನ್ನು ಸ್ವಚ್ಛಗೊಳಿಸಿ ಮನೆಯ ಮುಂದೆ ರಂಗೋಲಿಯನ್ನಿಟ್ಟು ಹಬ್ಬಕ್ಕೆ ಬೆಳಿಗ್ಗೆಯಿಂದಲೇ ಮೆರಗುಗೊಳಿಸಲಾಗುತ್ತದೆ. ಯುಗಾದಿಯಂದು ಹೊಸ ಬಟ್ಟೆ, ಹೊಸ ವಿಚಾರ ಹೊಸ ಭರವಸೆಯತ್ತ ಇಡೀ ವರ್ಷ ಸಾಗಲಿ ಎಂಬ ನಂಬಿಕೆಯ ಜೊತೆ ಮುನ್ನಡೆಯವ ಹೆಜ್ಜೆಯಾಗಿರುತ್ತದೆ ಯುಗಾದಿ. ಯುಗಾದಿ ಹಬ್ಬದ ಆಚರಣೆ ಹೇಗೆ?– ಬೆಳಗ್ಗೆ ಬೇಗ ಎದ್ದು ಮನೆಯಲ್ಲಿ ಸಡಗರ, ಸಂಭ್ರಮ. ಮನೆಯ ಅಂಗಳವನ್ನು ಸ್ವಚ್ಛಗೊಳಿಸಿ ರಂಗಿನ ರಂಗೋಲಿ ಬಿಡಿಸುತ್ತಾರೆ. ಬೆಳಿಗ್ಗೆ ಎಣ್ಣೆ ಹಚ್ಚಿ ಸ್ನಾನ ಮಾಡಿ ಶುದ್ಧಗೊಳ್ಳುತ್ತಾರೆ. ಮನೆಯ ಎದುರಿನ ಬಾಗಿಲು, ದೇವಾಲಯದ ಬಾಗಿಲಿಗೆ ಮಾವಿನ ಎಲೆಗಳ ಹಾರ (ತಳಿರು ತೋರಣ) ಮಾಡಿ ಹೂವಿನ ಅಲಂಕಾರ ಮಾಡಲಾಗುತ್ತದೆ. ಯುಗಾದಿ ದಿನದಂದು ಸಂತೋಷದ ಪ್ರತೀಕವಾಗಿ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾಗಿ ಬೇವನ್ನು ಬೆರೆಸಿ ಪ್ರಸಾದವಾಗಿ ಸೇವಿಸುತ್ತಾರೆ. ಇದಿಷ್ಟೇ ಆದರೆ ಸಾಲದು ಹೊಸ ಸವಂತವನು ಹೊಸ ಜೀವನದ ಭರವಸೆಯೊಂದಿಗೆ ಆಚರಣೆಯಾಗಬೇಕು. ಸರ್ವರಳೊಂದುಗೂಡಿ ಬದುಕಿನ ಆಚರಣೆ ಆಗಬೇಕು. ಆ ಮಾತ್ರ ಈ ಯುಗಾದಿ ಆಚರಣೆಗೆ ಮಹತ್ವ ಬರುವುದು..! ************************ ಕೆ.ಶಿವು.ಲಕ್ಕಣ್ಣವರ
ಯುಗ ಯುಗಾದಿ ಕಳೆದರೂ..! Read Post »
ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ, ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ ವೈವಿಧ್ಯತೆ ಎಷ್ಟೆಂದರೆ ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು. ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ ಅಥವಾ ಕೆಲವು ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ ನಡೆದಿರುವ ನಿರಂತರ ವಲಸೆ. 20ನೇ ಶತಮಾನದ ಕೊನೆಯ ದಶಕದಲ್ಲಿ ಭಾರತದ ಮಹಾನಗರಗಳಿಗೆ ಲಗ್ಗೆ ಇಟ್ಟ ಐಟಿಬಿಟಿ ಕಂಪನಿಗಳು ಈ ನಗರಗಳ ಬದುಕನ್ನು ಅನಾಮತ್ತಾಗಿ ಎತ್ತಿ ಪಲ್ಟಿ ಮಾಡಿದವು. ವಿದೇಶಿ ಮೂಲದ ಕಂಪನಿಗಳ ಮೂಲಕ ಹಣದ ಹೊಳೆ ಇಲ್ಲಿ ಹರಿಯಲಾರಂಭಿಸಿದಂತೆ ಅದರ ಉಪ ಉತ್ಪನ್ನವಾಗಿ ಹಳ್ಳಿಯ, ಸಣ್ಣ ಪಟ್ಟಣಗಳ ಯುವಜನತೆ ನಗರಗಳಿಗೆ ಗುಳೆ ಬಂದಿತು. ಅವರ ಮೂಲ ಊರುಗಳಲ್ಲಿ ಮಧ್ಯವಯಸ್ಸು ಮೀರಿದವರಷ್ಟೇ ಇರುವುದು ಅಂದಿನ ವಾಸ್ತವವಾಗಿತ್ತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಆರ್ಥಿಕ, ರಾಜಕೀಯ ಬದಲಾವಣೆಗಳಾದರೆ, ಅದಕ್ಕಿಂತ ತೀವೃ ಪರಿಣಾಮಗಳು ಸಾಮಾಜಿಕವಾಗಿ ಕಂಡು ಬಂದವು. ಅದರಲ್ಲಿ ವಿಶೇಷವಾಗಿ ನಮ್ಮ ಹಬ್ಬ- ಹರಿದಿನಗಳ ಆಚರಣೆಯಲ್ಲಾದ ಬದಲಾವಣೆಗಳು. ನಮ್ಮ ಬಹುತೇಕ ಹಬ್ಬಗಳನ್ನು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತ ಈಗ ದಶಕಗಳೇ ಕಳೆದಿವೆ. ನಗರಗಳಲ್ಲಿ ಒದಗುವಿಕೆ, ಸಮಯಾವಕಾಶ, ರಜೆ, ಬಿಡುವು ಮೊದಲಾದ ವೈಯುಕ್ತಿಕವಾಗಿ ಮನೆಯ ಸದಸ್ಯರ ಅನುಕೂಲತೆಗಳಿಗೆ ತಕ್ಕಂತೆ ಹಿಗ್ಗುವ, ಕುಗ್ಗುವ ಅಥವಾ ಇಲ್ಲವಾಗುವ ಒಂದು ವಿಶೇಷ ದಿನ ಹಬ್ಬದ ದಿನ. ಗ್ರಾಮೀಣ ಭಾಗಗಳಲ್ಲಿ ಅದು ಕಟ್ಟುನಿಟ್ಟಿನ ಆಚರಣೆ , ಸಂಪ್ರದಾಯ, ರೀತಿ-ರಿವಾಜು, ಪರಂಪರೆಗಳ ಒಟ್ಟೂ ಮೊತ್ತ. ಅನೇಕ ಬಾರಿ ಊರಿಗೆ ಊರೇ ಭಾಗವಹಿಸಿ ಸಂಭ್ರಮಿಸುವ ಊರ ಹಬ್ಬ. ನಮ್ಮ ಸಂವಿಧಾನ ‘ ಇಂಡಿಯಾ ದಟ್ ಈಸ್ ಭಾರತ್ ‘ ಎಂದು ನಮ್ಮ ದೇಶವನ್ನು ಗುರುತಿಸಿದೆಯಷ್ಟೇ. ಅದರಂತೆ ಇಂಡಿಯಾ ಆಧುನಿಕ, ನಗರ ಕೇಂದ್ರಿತ ದೇಶವನ್ನು ಪ್ರತಿನಿಧಿಸಿದರೆ ಭಾರತ ಅದಕ್ಕೆ ತದ್ವಿರುದ್ಧವಾದ ಹಿಂದುಳಿದ, ಗ್ರಾಮೀಣ ದೇಶವನ್ನು ಪ್ರತಿನಿಧಿಸುತ್ತದೆಯೋ ಎಂಬಷ್ಟು ಕಂದಕ ಈ ಹಬ್ಬ-ಹರಿದಿನಗಳ ಆಚರಣೆಯಲ್ಲಿ ಇತ್ತೀಚೆಗೆ ಕಾಣುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ. ನಗರಗಳಲ್ಲಿ ಹಬ್ಬಗಳೆಂದರೆ ಜೋರಾದ ಹೂ-ಹಣ್ಣುಗಳ ಮಾರಾಟ, ಬೇಕರಿಗಳಲ್ಲಿ ತರಹೆವಾರು ಸಿಹಿತಿನಿಸುಗಳ ಜೋಡಣೆ, ಅಂಗಡಿಗಳಲ್ಲಿ ಭರಾಟೆಯ ಸೇಲ್, ಡಿಸ್ಕೌಂಟುಗಳ ಆಕರ್ಷಣೆ, ಹೊಟೆಲ್ಲುಗಳಲ್ಲಿ ಹಬ್ಬದಡಿಗೆಯ ಊಟ…ಎಲ್ಲವೂ ದುಬಾರಿ. ಇಲ್ಲಿಗೆ ನಿಲ್ಲದೆ ಈ ಹಬ್ಬಗಳ ಸಡಗರ ದೇವಾಲಯಗಳಿಗೂ ವಿಸ್ತರಿಸಿದೆ. ಮೊದಲಾದರೆ ಕೆಲ ಹಬ್ಬಗಳಲ್ಲಿ ಮಾತ್ರ ಅಭಿಷೇಕ, ಹೋಮಗಳು ದೇವಾಲಯಗಳಲ್ಲಿ ನಡೆಯುತ್ತಿದ್ದವು. ಇಂದು ಹೆಚ್ಚವರಿ ಗಳಿಕೆಗಾಗಿ ಎಲ್ಲ ಹಬ್ಬಗಳಿಗೂ ಅವು ನಡೆಯುತ್ತವೆ. ನಗರಗಳ ಹಬ್ಬಗಳೆಂದರೆ ದುಂದು, ಖರ್ಚು, ಹೆಚ್ಚು ಕಸ, ಮಾಲಿನ್ಯ ಎಂಬಂತಾಗಿದೆ ಪರಿಸ್ಥಿತಿ. ಇದಕ್ಕೆ ಹಬ್ಬಗಳ ಮಾರನೇ ದಿನ ಬೀದಿಗಳನ್ನು ಸ್ವಚ್ಛಗೊಳಿಸಲು ಹೆಣಗುವ ಪೌರಕಾರ್ಮಿಕರ ಬವಣೆಯೇ ಸಾಕ್ಷಿ. ಈ ಕಾರಣದಿಂದ ಗ್ರಾಮೀಣ ಭಾಗದಲ್ಲಿ ನಡೆಯುವ ಸರಳ, ನೆಲಮೂಲ ಸಂಸ್ಕೃತಿಯ. ಆಚರಣೆಯಾದ, ಪರಿಸರ ಸ್ನೇಹಿ ಹಬ್ಬಗಳು ನನಗಿಷ್ಟ. ಭಾರತೀಯ ಋತುಮಾನಕ್ಕೆ ಅನುಗುಣವಾಗಿ ಬರುವ ಯುಗಾದಿ ವರ್ಷದ ಮೊದಲ ಹಬ್ಬ. ಪ್ರಕೃತಿಯ ನಲಿವಿನಲ್ಲಿ ನಾವೂ ಜೊತೆಯಾಗುವ ಹಬ್ಬ. ನಮ್ಮ ಎಲ್ಲ ಹಬ್ಬಗಳೂ ಪ್ರಕೃತಿಗೆ ಪೂರಕವಾಗಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು. ಇದಕ್ಕೆ ಯುಗಾದಿಯೂ ಹೊರತಲ್ಲ. ವಸಂತನ ಆಗಮನವನ್ನು ಪ್ರಕೃತಿಯು ಹೊಸ ಹೂ-ಹಣ್ಣುಗಳನ್ನು ಒದಗಿಸುವುದರ ಮೂಲಕ ಸಂಭ್ರಮಿಸಿದರೆ, ಅವುಗಳನ್ನು ಬಳಸಿ, ವ್ಯಂಜನಗಳನ್ನು ತಯಾರಿಸಿ ಮನೆ-ಮಂದಿ, ಊರು-ಕೇರಿ ಸವಿದು ಸಂಭ್ರಮ ಪಡುತ್ತವೆ. ಅಂದು ತಯಾರಾಗುವ ಪದಾರ್ಥಗಳಾದರೂ ಎಂಥವು! ನಾವು ಚಿಕ್ಕವರಿದ್ದಾಗ ಮಾವಿನಕಾಯಿ ಚಿತ್ರಾನ್ನ, ಮಾವಿನ ಉಪ್ಪಿನಕಾಯಿ, ಅಮಟೆಕಾಯಿಯ ಹುಳಿಸಿಹಿಪಲ್ಯ, ಹೋಳಿಗೆ, ಕಡಲೆ ಬೇಳೆಯ ಸಿಹಿತಿನಿಸು ಮಾಲ್ದಿ, ಉದ್ದಿನ ಕಾಳಿನ ಷಂಡಿಗೆ ಇತ್ಯಾದಿ. ಜೊತೆಗೆ ಹದಮಜ್ಜಿಗೆ ಎಂದು ಕರೆಯಲ್ಪಡುವ ಮಸಾಲೆ ಮಜ್ಜಿಗೆ ಇವು ಮುಖ್ಯವಾದ ಕೆಲವು. ಇವನ್ನೆಲ್ಲ ಸಾಂಪ್ರದಾಯಿಕ ರುಚಿಕಟ್ಟಿನಲ್ಲೇ ಮಾಡುತ್ತಿದ್ದ ಅಮ್ಮನ ಕೈ ಅಡುಗೆಯ ರುಚಿಯೇ ರುಚಿ. ಇದನ್ನು ಅಪ್ಪ-ಅಮ್ಮ, ಅಕ್ಕ-ಅಣ್ಣಂದಿರೊಂದಿಗೆ ಜೊತೆಯಾಗಿ ನೆಲದ ಮೇಲೆ ಮಣೆಯಲ್ಲಿ ಕೂತು ಹಿತ್ತಲ ಬಾಳೆ ಎಲೆಯಲ್ಲಿ ಉಂಡರೆ ಹಬ್ಬದ ಮಜವೇ ಬೇರೆ. ಯುಗಾದಿ ಹಬ್ಬದಲ್ಲಿ ಮೊದಲು ಮನೆಯಲ್ಲಿ ಮಾಡುತ್ತಿದ್ದುದು ಹಿರಿಯರ ಪೂಜೆ. ಇದೊಂದು ಭಾವನಾತ್ಮಕ ಸಂದರ್ಭ. ನಾವು ಕಾಣದ ನಮ್ಮ ಅಜ್ಜ, ಮುತ್ತಜ್ಜಂದಿರನ್ನು ಸಾಂಕೇತಿಕವಾಗಿ ಹೊಸ ಬಟ್ಟೆ ಇಟ್ಟು, ಅವರಿಗೆ ದೊಡ್ಡ ಬಾಳೆ ಎಲೆಯಲ್ಲಿ ಎಡೆ ಇಟ್ಟು ಮನೆಯ ಎಲ್ಲರೂ ಆರತಿ ಮಾಡಿ ಕೈಮುಗಿಯುವಾಗ ಗಂಟಲುಬ್ಬಿ ಬರುವಂತೆ ದುಃಖ. ಕಣ್ಣರಿಯದಿದ್ದರೂ ಕರುಳು ಅರಿಯುವ ಬಾಂಧವ್ಯ. ಆ ಕ್ಷಣಕ್ಕೆ ಸಂಭ್ರಮವೆಲ್ಲ ಮರೆಯಾಗಿ ಅಲ್ಲಿ ನೆಲೆಸುತ್ತಿದ್ದುದು ಗಂಭೀರ ಮೌನ. ಇಂಥ ಆಚರಣೆಗಳು ನನ್ನನ್ನು ಸೋಲಿಸುತ್ತವೆ. ಬದುಕಿನ ವಿರಾಟ್ ದರ್ಶನವಾಗುವುದು ಇಂಥ ನಾಜೂಕಿನ ಸಂದರ್ಭದಲ್ಲಿ. ಆಗ ಚಿಕ್ಕವರಾದ ನಾವು ಧರಿಸುತ್ತಿದ್ದ ಹೊಸ ಬಟ್ಟೆಯ ಮೋಹಕ್ಕೂ ಮೀರಿ ಕಾಣದ ಹಿರಿಯರ ಅವ್ಯಕ್ತ ಇರುವು ನಮ್ಮನ್ನು ಹಿಡಿದು ಕಂಪಿಸುತ್ತಿತ್ತು. ಅಂದಿನ ದಿನವಿಡೀ ಕೆಲಸದ ಹೈರಾಣು ಬದುಕಿನಲ್ಲಿ ಇಂಥ ಒಂದು ದಿನ ಮರೆಯದೇ ಹಿರಿಯರನ್ನು ನೆನೆಯುವ ಆ ನಿರಾಡಂಬರ ಸಂಪ್ರದಾಯದಲ್ಲಿ ನನಗೆ ಅಳಿದ ಮೇಲೂ ಉಳಿದ, ಉಳಿಯಲೇಬೇಕಾದ ಪ್ರೀತಿಯ ದ್ಯೋತಕವಷ್ಟೇ ಕಾಣುತ್ತದೆ. ದೇವರ ಕೋಣೆಯಲ್ಲಿ ಇಷ್ಟು ನಡೆದು ಬಾಗಿಲಾಚೆ ದಾಟಿದರೆ ಮತ್ತೆ ನಾವು ಚಿಮ್ಮುವ ನಡಿಗೆಯ ಮಕ್ಕಳೇ. ನನ್ನ ಅಮ್ಮ,” ಅಜ್ಜ- ಅಮ್ಮನಿಗೆ ಪೂಜೆ ಮಾಡ್ರಿ” ಎಂದು ಮೆಲುದನಿಯಲ್ಲಿ ನೀಡುತ್ತಿದ್ದ ಹುಕುಂ ಹಿಂದೆ ಅವರ ಬಗ್ಗೆ ಇದ್ದ ಗೌರವಾದರಗಳ ಭಾವ ಇಂದಿಗೂ ಕಿವಿಯಲ್ಲಿ ಅನುರಣಿಸುತ್ತದೆ. ಇಂಥ ಅಮ್ಮ ನಮಗೆಂದೂ ಕಹಿ ಬೇವನ್ನು ತಿನ್ನಿಸಿಯೇ ಇರಲಿಲ್ಲ. ಮಾಲ್ದಿಯಲ್ಲಿ ಬೇವಿನ ಹೂಗಳನ್ನು ಹಾಕಿ ತಿನ್ನಲು ಕೊಡುತ್ತಿದ್ದರು. ಮಕ್ಕಳ ಬದುಕಲ್ಲಿ ಸಿಹಿಯ ಪಾಲೇ ಹೆಚ್ಚಿರಲಿ ಎಂಬುದು ಎಲ್ಲ ತಾಯಂದಿರ ಹಾರೈಕೆಯಲ್ಲವೇ? ಅತ್ತೆಯ ಮನೆಯಲ್ಲಿ ಹಬ್ಬದ ಆರಂಭ ಕಹಿಬೇವು- ಬೆಲ್ಲವನ್ನು ತಿನ್ನುವುದರೊಂದಿಗೆ! ಇದನ್ನು ವಿಧಿಯೆನ್ನಿ ಬೇಕಾದರೆ. ಬದುಕಲ್ಲಿ ಕಹಿ- ಸಿಹಿ ಎರಡನ್ನೂ ಸಮನಾಗಿ ಸ್ವೀಕರಿಸಬೇಕು ಎಂಬ ತತ್ವದ ಈ ಆಚರಣೆ ನನಗೆ ಇಷ್ಟವಾಗಿ ಮುಂದುವರೆಸಿದೆ. ಪ್ರತಿ ವರ್ಷ ಬೇವಿನ ಎಲೆಯ ಚಿಕ್ಕ ತುಣುಕನ್ನು ತಿಂದು ಮೈ ಮುಖ ಹಿಸುಕುವ ಮಗನಿಗೆ ಜೀವನ ಹೀಗೆ. ಕಹಿಯನ್ನು ಅನುಭವಿಸಲೇಬೇಕು ಎಂದು ಹೆಳುತ್ತೇನೆ. ಈ ಸಂಪ್ರದಾಯ ಬಿಟ್ಟರೆ ಅಂಥ ಮುತ್ತಿನಂಥ ಮಾತು ಹೇಳುವ ಪ್ರಮೇಯವೆ ಬರದಲ್ಲ! ನಮಗೆ ಯುಗಾದಿಯ ಇನ್ನೊಂದು ವಿಶೇಷವೆಂದರೆ ಸಂಜೆಯ ಚಂದ್ರದರ್ಶನ. ನಮ್ಮ ಮನೆಯಿದ್ದ ಉದ್ದನೆಯ ಮುಖ್ಯ ರಸ್ತೆಯ ಉದ್ದಕ್ಕೂ ಕೈಯಲ್ಲಿ ಊದಿನಕಡ್ಡಿ ಹಚ್ಚಿ ಹಿಡಿದುಕೊಂಡು ಪೂರ್ವ ಆಗಸದತ್ತ ಮುಖ ಮಾಡಿ ನಿಂತ ಸಾಲು ಸಾಲು ಜನ. ಪಾಡ್ಯದಂದು ತೆಳು ಗೆರೆಯಂತಿರುವ ಚಂದ್ರ ಸುಲಭವಾಗಿ ಗೋಚರಿಸಲಾರ. ಶುಭ್ರ ಆಕಾಶವಿದ್ದರೆ ಚುರುಕು ಕಣ್ಣುಗಳು ಬೆಳ್ಳಿಯ ಕೂದಲೆಳೆಯನ್ನು ಗುರುತಿಸಿದಾಕ್ಷಣ ಉಸಿರು ಬಿಗಿ ಹಿಡಿದು ಕಾಯುತ್ತಿದ್ದವರಲ್ಲಿ ಮಿಂಚಿನ ಸಂಚಾರ ವಾಗುತ್ತಿತ್ತು. ಆಗ ಎಲ್ಲರ ತೋರು ಬೆರಳುಗಳೂ ಅದೇ ದಿಕ್ಕಿಗೆ ಚಾಚಿರುತ್ತಿದ್ದವು. ಕಂಡವರ ಮುಖದಲ್ಲಿ ಅರಳುತ್ತಿದ್ದ ಸಂತಸಕ್ಕೆ ಪಾರವಿರಲಿಲ್ಲ. ಕಾಣದಿದ್ದವರಲ್ಲಿ ಕೆಲವರು ಸಪ್ಪಗಾಗಿ ಒಪ್ಪಿಕೊಂಡರೂ ಕೆಲವರಿಗೆ ಕಾಣದಿದ್ದನ್ನು ಒಪ್ಪಿಕೊಳ್ಳಲಾಗದ ಬಿಗುಮಾನ. ಬೀದಿಯಲ್ಲಿ ಪರಸ್ಪರ ಮಾತನಾಡದವರೂ ಚಂದ್ರನ ಕಾಣಲು, ಕಾಣಿಸಲು ಒಂದಾಗುತ್ತಿದ್ದ ಅಪರೂಪದ ಕ್ಷಣವದು. ಬಹಳ ಹೊತ್ತಿನವರೆಗೂ ಅಲ್ಲಿ ಚಂದ್ರದರ್ಶನದ ಸುತ್ತಲೇ ಮಾತುಕತೆಗಳು ನಡೆಯುತ್ತಿದ್ದವು. ಕಳೆದ ಕೆಲ ವರ್ಷಗಳ ಚಂದ್ರದರ್ಶನದ ನೆನಪುಗಳು ತಾಜಾ ಆಗುತ್ತಿದ್ದವು. ಮತ್ತೆ ಇಂಥ ಭೇಟಿಗೆ ಒಂದು ವರ್ಷ ಕಾಯಬೇಕಲ್ಲ ಎಂಬ ಕಾರಣಕ್ಕೋ ಏನೋ ಯಾರಿಗೂ ಬೇಗನೇ ಅಲ್ಲಿಂದ ಕದಲಲು ಆಗುತ್ತಿರಲಿಲ್ಲ. ಕೊನೆಗೆ ಹಿರಿಯರೊಬ್ಬರು ನಡೀರಿ ದೇವರಿಗೆ ದೀಪ ಹಚ್ಚಬೇಕು ಎಂದಾಗ ಮತ್ತೊಮ್ಮೆ ಗಡಿಬಿಡಿ ಶುರುವಾಗುತ್ತಿತ್ತು. ಹಕ್ಕಿಗಳು ಗೂಡು ಸೇರುವಾಗಿನ ಕಲಕಲ ಮನೆಯವರೆಗೂ ಸಂಚರಿಸಿ ನಿಧಾನಕ್ಕೆ ಬೀದಿ ಮೊದಲಿನಂತಾಗುತ್ತಿತ್ತು. ಸಂಜೆ ಮನೆಯ ಹಿರಿಯರಿಗೆ ನಮಸ್ಕರಿಸುವುದರೊಂದಿಗೆ ಹಬ್ಬ ಮುಗಿಯುತ್ತಿತ್ತು. ಈ ಒಂದು ದಿನಕ್ಕಾಗಿ ವಾರಗಳಿಂದ ಆರಂಭವಾಗುತ್ತಿದ್ದ ಮನೆಯ ಸ್ವಚ್ಛತೆ, ಅಟ್ಟದ ಧೂಳು ಕೊಡವುವುದು, ತಿಂಡಿ- ತಿನಿಸುಗಳನ್ನು ಮಾಡಲು, ತುಂಬಲು ಬೇಕಾದ ಪಾತ್ರೆಗಳನ್ನು ತೊಳೆಯುವುದು, ಸಾಮಾನುಗಳನ್ನು ಪಟ್ಟಿ ಮಾಡಿಕೊಂಡು ಶಾನಭಾಗರ ಅಂಗಡಿಗೆ ಹೋಗಿ ಕೊಟ್ಟು ಬರುವುದು, ನಸುಕಿನಲ್ಲೇ ಬಂದು ಬಾಗಿಲಿಗೆ ಹೂ ಸಿಕ್ಕಿಸಿ ಅದೃಶ್ಯವಾಗುವ ವರ್ತನೆಯ ಹೂ ಮಾರುವವಳಿಗೆ ಹಬ್ಬಕ್ಕೆ ಎಲ್ಲರಿಗೂ ಒಂದೊಂದು ದಂಡೆ ಮಲ್ಲಿಗೆ ಹೂ ಇರಬೇಕು ಎಂದು ಹೇಳಲು ಹಬ್ಬಕ್ಕೆ ಎರಡು ದಿನ ಮೊದಲು ಬೇಗ ಎದ್ದು ಕಾದು ಕುಳಿತುಕೊಳ್ಳುವುದು, ಮನೆಯ ಮುಂಭಾಗದ ಅಂಗಳ ಸಾರಿಸಿ ಯಾವ ರಂಗೋಲಿ ಇಡಬೇಕು ಎಂದು ರಂಗೋಲಿ ಬಿಡಿಸಿ ಸಂಗ್ರಹಿಸಿಟ್ಟುಕೊಂಡ ಪುಸ್ತಕವನ್ನು ಗಣಿತವೋ, ವಿಜ್ಞಾನವೋ ಅಭ್ಯಾಸ ಮಾಡಿದಂತೆ ಬಿಡಿಸಿ ಬಿಡಿಸಿ ಕಲಿತುಕೊಳ್ಳುವುದು….ಮುಂತಾಗಿ ಮನೆಯ ಎಲ್ಲರಿಗೂ ಕೆಲಸವೋ ಕೆಲಸ !! ಹಬ್ಬದ ದಿನ ಬೆಳಿಗ್ಗೆ ಬೇಗನೇ ಎದ್ದು ಕೊಟ್ಟಿಗೆಯಲ್ಲಿದ್ದ ಸಗಣಿಯನ್ನು ಬಾಚಿ ಹಳೆಯ ಬಕೀಟಿಗೆ ತುಂಬಿ ನೀರು ಸುರುವಿ ಕೈಯಾಡಿಸುತ್ತ ಅಂಗಳ ಸಾರಣೆಗೆ ಬೇಕಾಗುವ ಹದಕ್ಕೆ ಗಂಜಲ ತಯಾರಿಸುವುದನ್ನು ನಿಷ್ಠೆಯಿಂದಲೇ ಮಾಡುವುದು. ಅದರ ವಾಸನೆಗೆ ಯಾವತ್ತೂ ‘ ಇಶ್ಯಿ’ ಎನಿಸಲೇ ಇಲ್ಲ. ಅಂಗಳದ ಒಂದು ತುದಿಯಿಂದ ತಂಬಿಗೆಯಲ್ಲಿ ಸ್ವಲ್ಪ ಸ್ವಲ್ಪವೇ ಹಾಕುತ್ತ ಕಡ್ಡಿಹಿಡಿಯಲ್ಲಿ ನಯವಾಗಿ ಕಸಬರಿಗೆಯ ಒಂದು ಕಡ್ಡಿಯ ಗುರುತೂ ಬರದಂತೆ ಹರಡುತ್ತ ಅಂಗಳ ಪೂರ್ತಿ ಬಳಿದರೆ ನನಗೂ, ಅಮ್ಮನಿಗೂ ಖುಷಿ. ಇವೆಲ್ಲ ನಾವು ನೋಡಿ ಕಲಿತ ಪುಟ್ಟ ಜವಾಬ್ದಾರಿಗಳು. ಅದಕ್ಕಾಗಿ ಅಮ್ಮನ ಮುಖದಲ್ಲಿ ಆ ಸಂತಸದ ನಗು ಉಕ್ಕುತ್ತಿತ್ತು ಎಂದು ಈ ತಾಯಿಗೆ ಈಗ ಅರಿವಾಗಿದೆ. ಅದೆಂಥ ತುಂಬು ಬದುಕು!! ಈಗ ಬದಲಾಗಿದೆ ಎಂದೆನಲ್ಲವೇ? ಅಡುಗೆಗಳು ಬಹುತೇಕ ಹಾಗೇ ಇವೆ. ಮಾಲ್ದಿ ಹೆಚ್ಚು ಇಷ್ಟ ಪಡದ ಕಾರಣ ಮೆನುವಿನಿಂದ ಕಣ್ಮರೆಯಾಗಿದೆ. ಹೊಸತಾಗಿ ಕೆಲವು ಸೇರ್ಪಡೆಯಾಗಿವೆ. ಈಗಲೂ ಸಂಜೆ ಊದಿನಕಡ್ಡಿ ಹಚ್ಚಿಕೊಂಡು ಟೆರೇಸಿನ ಮೇಲೆ ಹೋಗಿ ಚಂದ್ರನನ್ನು ಹುಡುಕುತ್ತೇನೆ. ಕಂಡರೆ ಎಲ್ಲ ಮೊದಲಿನಂತೆ..ಮಗ ಅಣಕಿಸಿದಾಗ ಹೇಳುತ್ತೇನೆ. ಇದು ನಮ್ಮ ಪರಂಪರೆಯ ಭಾಗ. ಬಿಟ್ಟರೆ ಕಳೆದು ಹೋಗಿಬಿಡುತ್ತದೆ. ಅನುಸರಿಸಿದರೆ ಕಳೆದ ಕಾಲವನ್ನು ಕಟ್ಟಿ ಹಾಕಿದ ಸಂತೋಷ ಆ ಕ್ಷಣಕ್ಕೆ ಆಗುತ್ತದೆ. ಹೆಚ್ಚೇನಿಲ್ಲ. ಇದನ್ನು ವ್ಯಾಮೋಹವೆನ್ನಿ. ಗೊಡ್ಡು ಎಂದು ಮೂಗು ಮುರಿಯಿರಿ. ಬೇಸರವಿಲ್ಲ. ಹೊಟೆಲ್ಲುಗಳಲ್ಲಿ ದುಬಾರಿ ಬಿಲ್ ತೆತ್ತು ಬೀಗುವ ಹಬ್ಬಕ್ಕಿಂತ ಇಂಥ ಬಾಗುವ ಹಬ್ಬವೇ ನನಗೆ ಪ್ರಿಯ. ಅಡುಗೆಯನ್ನು ಹಂಚಿ ತಿನ್ನುವುದು ಹಳ್ಳಿಗಳ, ಸಣ್ಣ ಪಟ್ಟಣಗಳ ಸುಂದರ ಅಭ್ಯಾಸ. ಅದೇ ನೆವದಲ್ಲಿ ಹಾಲು- ಹೈನು ಸಮೃದ್ಧವಾಗಿ ನೀಡುವ ಆಕಳಿಗೆ ಒಂದು ಎಡೆ, ಮನೆ ದೇವರಿಗೆ ಒಂದು, ಹಿತ್ತಲಲ್ಲಿರುವ ಭೂತನ/ ಚೌಡಿ ಕಟ್ಟೆಗೆ ಒಂದು, ಊರು ದೇವರಿಗೆ ಒಂದು, ಹಿರಿಯರಿಗೆ ಒಂದು, ಹೊಸ್ತಿಲುಗಳಿಗೆ ಒಂದು..ಹೀಗೆ ಎಲ್ಲರನ್ನೂ- ಎಲ್ಲವನ್ನೂ ನೆನೆಯುವ ಸತ್ಸಂಪ್ರದಾಯವನ್ನು ಅಮ್ಮ ಅನುಸರಿಸಿಕೊಂಡು ಬಂದಿದ್ದರು.. ಇದನ್ನು ಬಿಡಲಾರದ ನಾನು ಮನೆಗೆ ಹಾಲು ಕೊಡುವವರಿಗೆ, ಅವರ ಮನೆಯ ಆಕಳಿಗೆ, ಎದುರು ಇರುವ ದೇವಸ್ಥಾನಕ್ಕೆ ಕೊಡುತ್ತೇನೆ. ಅಂದು ದೇವಾಲಯ ತುಂಬಿ ತುಳುಕುವುದರಿಂದ ಪಾಪ ಭಟ್ಟರಿಗೆ ಮನೆಗೆ ಹೋಗಲೂ ಪುರಸೊತ್ತಿರುವುದಿಲ್ಲ. ಪ್ರತಿ ಹಬ್ಬದಲ್ಲೂ ಅವರಿಗೆ ನಮ್ಮ ಮನೆಯದೇ ಊಟ. ಜೊತೆಗೆ ದೇವಾಲಯದ ಸುತ್ತಲೂ ಇರುವ ಉದ್ಯಾನ ನೋಡಿಕೊಳ್ಳುವ ಮಾಲಿಗಳಿಗೂ. ಸಂಪ್ರದಾಯ ಗೊಡ್ಡಲ್ಲ. ಅದನ್ನು ನಾವು ಅರ್ಥಪೂರ್ಣವಾಗಿ ಮುಂದುವರೆಸಿಕೊಂಡು ಹೋಗಬಹುದು. ಹಬ್ಬದ ನೆವದಲ್ಲಿ ಇಷ್ಟೆಲ್ಲ ನೆನಪಾಗಿ ಮನಸ್ಸು ಒದ್ದೆಯಾಯಿತು. ಹೊಸ ವರ್ಷ ದುಡಿಯುವ ಕೈಗಳಿಗೆ ಬಲವನ್ನೂ,
ಯುಗಾದಿ ವಿಶೇಷ ಬರಹ ಕೊನೆಗೂ ಸಿಕ್ಕ ಸದ್ಗುರು 1993 – 94 ರ ಮಾತದು. ನಾವಾಗ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಾಗ ವಿಜ್ಞಾನ ವಿಷಯ ಬೋಧಿಸಲು ಹೊಸ ಶಿಕ್ಷಕರೊಬ್ಬರ ಆಗಮನವಾಯಿತು. ಹಳ್ಳಿ ಶಾಲೆ. ಹಳ್ಳಿ ಹುಡುಗರಾಗಿದ್ದ ನಮಗೆ ಅವರ ಮಾತು – ಕತೆ, ರೀತಿ – ನೀತಿ & ಎಲ್ಲಕ್ಕೂ ಮಿಗಿಲಾಗಿ ಅವರ ಸ್ಟೈಲ್ ಅತ್ಯಾಕರ್ಷಿಸಿತು. ಮೊದಲ ನೋಟದಲ್ಲೇ ವಿದ್ಯಾರ್ಥಿಗಳ ಮನ ಗೆದ್ದ ಅವರು ನಮ್ಮ ಪಾಲಿಗೆ ಸ್ಟೂಡೆಂಟ್ ಐಕಾನ್ ಎನಿಸಿದರು. ಅವರು ಪಾಠ ಹೇಳುತ್ತಿದ್ದ ರೀತಿ, ಬೋಧಿಸುವ ಪರಿ, ಸದಾ ಹಸನ್ಮುಖತೆಯಿಂದಲೇ ಮನವರಿಕೆ ಮಾಡಿಸುತ್ತಿದ್ದ ಅವರ ತಾಳ್ಮೆ, ತಪ್ಪು ಮಾಡಿದಾಗ ಹೊಡೆಯದೆ – ಬೈಯದೇ, ಯಾರೊಬ್ಬರ ಮನಸ್ಸಿಗೂ ನೋವಾಗದಂತೆ ನಯವಾಗಿ ತಿದ್ದಿ – ತೀಡುತ್ತಿದ್ದ ತಾಯ್ಮಮತೆಯ ಅವರ ಅಂತಃಕರಣ, ಬೋರ್ ಎನಿಸಿದಾಗ ಹಾಡು ಹೇಳಿ ರಂಜಿಸಿ ಪಾಠ ಮುಂದುವರೆಸುತ್ತಿದ್ದ ಕ್ರಮ … ಥೇಟ್ ರಾಜ್ ಕುಮಾರ್ ವಾಯ್ಸಲ್ಲೂ ಒಮ್ಮೊಮ್ಮೆ ಮಾತಾಡಿ, ಹಾಡ್ಹೇಳಿ, ಜೋಕ್ಸೇಳಿ ನಕ್ಕು ನಗಿಸಿ ಬೋಧಿಸುತ್ತಿದ್ದ ಅವರ ಬತ್ತದ ಉತ್ಸಾಹ, ಯಾವುದೇ ಕ್ರೀಡೆ – ಆಟೋಟದಲ್ಲೂ ವಿದ್ಯಾರ್ಥಿಗಳೊಂದಿಗೆ ತಾವೂ ಭಾಗವಹಿಸಿ ಹುರಿದುಂಬಿಸುತ್ತಿದ್ದ ಉತ್ಸುಕತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಸಂದರ್ಭದಲ್ಲಿ ತಾವೇ ನೃತ್ಯ ನಿರ್ದೇಶನ ಮಾಡಿ ವಿದ್ಯಾರ್ಥಿಗಳೊಂದಿಗೆ ವೇದಿಕೆಯಲ್ಲಿ ತಾವೂ ಕೂಡ ಒಂದು ನೃತ್ಯಕ್ಕೆ ಹೆಜ್ಜೆ ಹಾಕುತ್ತಿದ್ದ ಅವರ ಬಹುಮುಖಿ ಪ್ರತಿಭೆ … ಹೀಗೆ ಒಂದೇ ಎರಡೇ ಎಲ್ಲವೂ ಅದ್ಭುತ – ಅಮೋಘ. ಅವರ ವ್ಯಕ್ತಿತ್ವವೇ ಅಂಥದ್ದು. ಎಂಥಾ ವಿದ್ಯಾರ್ಥಿಗಾದರೂ ಎಷ್ಟೇ ವರುಷಗಳಾದರೂ ಮರೆಯಲಾಗದಂತಹ ಛಾಪು ಮೂಡಿಸುವಂಥದ್ದು. ಹಾಗಾಗಿಯೇ ನಾವು ಅವರನ್ನ ಸದಾ ಸ್ಮರಿಸುತ್ತಲೇ ಇರುತ್ತಿದ್ದೆವು. ನಮ್ಮ SSLC ಪರೀಕ್ಷೆ ಮುಗಿಯುತ್ತಿದ್ದಂತೆಯೇ ಅವರು ಆ ಶಾಲೆಯಿಂದ ನಿರ್ಗಮಿಸಿ ಬಿಟ್ಟಿದ್ದರು. ಎಲ್ಲಿಗೆ ಹೋದರು, ಯಾವ ಊರಿನಲ್ಲಿ ಜಾಬ್ ಮಾಡುತ್ತಿದ್ದಾರೆ ಎಂಬ ಕುರಿತು ಆ ಶಾಲೆಯ ಸಿಬ್ಬಂದಿಯವರಿಗಾಗಲಿ ಅಥವಾ ಯಾವೊಬ್ಬ ವಿದ್ಯಾರ್ಥಿಗಾಗಲಿ ಮಾಹಿತಿ ಇರಲಿ ಸುಳಿವು ಸಹ ಸಿಗಲಿಲ್ಲ . ಫೋನ್ ಮೂಲಕವಾದರೂ ಪತ್ತೆ ಹಚ್ಚೋಣವೆಂದರೆ ನಮ್ಮದು ಆಗ ಫೋನೇ ಇಲ್ಲದ ಕಾಲ, ನಮ್ಮೂರಲ್ಲಿ ಆಗ ಯಾರ ಮನೆಯಲ್ಲೂ ಲ್ಯಾಂಡ್ ಲೈನ್ ಕೂಡ ಇರಲಿಲ್ಲ . ಅಂತೆಯೇ ನಮ್ಮ ಆ ಗುರುಗಳ ಬಳಿ ಕೂಡ .. ಹಾಗಾಗಿ Long Period Communication Gap ಆಯ್ತು … ಹೈಸ್ಕೂಲ್ ಮತ್ತು M.Phil ವಿದ್ಯಾಭ್ಯಾಸದ ನಡುವಣ ಪಯಣದಲ್ಲಿ ಹತ್ತು ಹಲವು ಮೇರು ಶಿಕ್ಷಕರ ದಿಗ್ದರ್ಶನವೂ ಆಯ್ತು. ಆದರೂ, ಸುಮಾರು 25 ವರ್ಷಗಳೇ ಕಳೆದರೂ ಅವರನ್ನು ಕಾಣುವ ತವಕ ಮಾತ್ರ ಮನದಲ್ಲಿ ಮನೆ ಮಾಡಿತ್ತು. ಅದೂ ಕೂಡ ಒಂದು ಅಚ್ಚರಿಯ ಸಂಗತಿಯಾಗಿ ಮನವ ಕಾಡಿತ್ತು … ಮರೆಯಲಾಗದ ಯುಗಾದಿ : ಆ ತವಕಕ್ಕೆ ಪ್ರತಿಯಾಗಿ ಕಿಂಚಿತ್ತು ಫಲ ಎಂಬಂತೆ ಆ ಯುಗಾದಿಯ ದಿನದಂದು ಒಂದಷ್ಟು ಆ ಮಹನೀಯರ ಇರುವಿಕೆಯ ಮೂಲದ ಮಾಹಿತಿ ಲಭಿಸಿತ್ತು. 2018 ರ ಯುಗಾದಿಯಂದು ಹಂಪಿ – ಹೊಸಪೇಟೆಯ ಕಡೆ ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸಿದ್ದೆ. 2 ದಿನ ಅಲ್ಲಿಯೇ ತಂಗಿದ್ದ ನಾವು ವಾಪಸ್ ಊರಿಗೆ ಬರುತ್ತಿದ್ದಾಗ ನಮ್ಮ ಮಿತ್ರರೊಬ್ಬರ ಬಳಿ ಆಕಸ್ಮಾತ್ ಆಗಿ ನಮ್ಮ ಆ ಗುರುವಿನ ಬಗ್ಗೆ ಪ್ರಸ್ತಾಪಿಸಿದೆ. ಅದಕ್ಕವರು – ಅಯ್ಯೋ ನೀವು ಇಷ್ಟು ದಿನ ಹುಡುಕುತಿದ್ದ ನಿಮ್ಮ ಗುರುಗಳು ಅಲ್ಲೇ ಹಗರಿಬೊಮ್ಮನ ಹಳ್ಳಿಯ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಇದಾರಂತೆ, ಅಷ್ಟು ಮಾತ್ರ ನನಗೆ ಗೊತ್ತು. ಆದರೆ ಪಕ್ಕಾ ಅಡ್ರೆಸ್ ಆಗಲಿ ಅಥವಾ ಫೋನ್ ನಂಬರ್ ಆಗಲಿ ನಂಗೊತ್ತಿಲ್ಲ … ಆನ್ ದಿ ವೇ ಬರ್ತಾ ಪತ್ತೆ ಹಚ್ಕೊಂಡು ಬನ್ನಿ ಎಂದರು…. ಅದೇ ಜಾಡು ಹಿಡಿದು ಅಲ್ಲಿಗೆ ಹೋದ್ವಿ . ಕೆಲವರನ್ನು ಕೇಳಲಾಗಿ ಗೊತ್ತಿಲ್ಲ ಎಂಬ ಉತ್ತರ. ಇನ್ನೇನು ನಿರಾಸೆಯಿಂದ ಹೊರಡುವ ಹೊತ್ತಿಗೆ ಕೊನೆಯ ಪ್ರಯತ್ನವೆಂಬಂತೆ ಒಂದು ಪ್ರಾವಿಜನಲ್ ಸ್ಟೋರ್ನಲ್ಲಿ ವಿಚಾರಿಸಿದಾಗ – ” ಮೊದಲು 1 ವರ್ಷದ ಹಿಂದೆ ಅವರು ಇಲ್ಲೇ ಪಕ್ಕದ ಕೇರಿಯಲ್ಲಿ ಇದ್ರು. ಈಗ ಎಲ್ಲಿದ್ದಾರೋ ಗೊತ್ತಿಲ್ಲ ” ಅಂದು ಬಿಟ್ಟಾಗ ನಿಜಕ್ಕೂ ಒಂದಿಷ್ಟು ಖುಷಿ ಮತ್ತಿಷ್ಟು ಬೇಸರವೆನಿಸಿತು. ಅವರ ಫೋನ್ ನಂಬರ್ ಏನಾದ್ರೂ ಇದ್ರೆ ಕೊಡ್ತಿರಾ ಸರ್ ಎಂದೆವು. ಇಲ್ಲ ಎಂದ ಅವರು ಕೊಂಚ ಬಳಿಕ … ಅವರ ಅಳಿಯ ಒಬ್ರ ನಂಬರ್ ಇದೆ ಕೊಡ್ತಿನಿ, ಬೇಕಾದ್ರೆ ಅವರ ಬಳಿ ವಿಚಾರಿಸಿ ನೋಡಿ ಎಂದರು. ನಿಟ್ಟುಸಿರು ಬಿಟ್ಟ ನಾವು ಕೂಡಲೇ ನಂಬರ್ ಪಡೆದು ಫೋನಾಯಿಸಿದರೆ ಅವರೊಡನೆಯೇ ನಮ್ಮ ಗುರುಗಳೂ ಸಹ ಇದ್ದರು … ಸಂತಸಕ್ಕೆ ಪಾರವೇ ಇರಲಿಲ್ಲ. ಪರಿಚಯ ಹೇಳಿಕೊಂಡೆ …ಒಂದಷ್ಟು ಕುಶಲೋಪರಿಯೂ ಆಯಿತು.. “ಎಂಥಾ ಕೆಲಸ ಆಯ್ತಲ್ಲ, ನಾವು ಹಗರಿಬೊಮ್ಮನಹಳ್ಳಿಯಲ್ಲೇ ವಾಸವಿದ್ದೇವೆ. ಇನ್ನೊಮ್ಮೆ ಈ ಕಡೆ ಬಂದಾಗ ಮನೆಗೆ ಬಾ. ಖುದ್ದು ಭೇಟಿಯಾಗೋಣ ಗಂಗಾಧರ್, ನಾವೀಗ ಸಂಕ್ರಾಂತಿ ಪ್ರಯುಕ್ತ ಹೊಸಪೇಟೆ ಹತ್ತಿರದ ಹುಲಿಗಿ ಗ್ರಾಮಕ್ಕೆ ಬಂದಿದ್ದೇವೆ. ಮತ್ತೊಮ್ಮೆ ಖಂಡಿತಾ ಭೇಟಿ ಆಗೋಣ ” ಎಂದ್ಹೇಳಿ ತಮ್ಮ ಮೊಬೈಲ್ ನಂಬರ್ ಕೊಟ್ಟು ಅಡ್ರೆಸ್ ಹೇಳಿ ಫೋನ್ ಮೂಲಕವೇ ಬೀಳ್ಕೊಟ್ಟರು…. ಅಂತೂ.. , ಮುಖಭೇಟಿಯಾಗದಿದ್ದರೂ ಮತ್ತೊಮ್ಮೆ ಸಿಗುವ ಭರವಸೆಯೊಂದಿಗೆ ಅಲ್ಲಿಂದ ಸೀದಾ ಊರಿಗೆ ತೆರಳಿದೆವು … ಈಗ ನೆನಪಾದಲೆಲ್ಲಾ ಫೋನ್ ಮಾಡುತ್ತೇನೆ. ಆ ದಾರಿಯಲ್ಲಿ ಪ್ರಯಾಣಿಸಿದಾಗಲೆಲ್ಲಾ ಅವರ ಮನೆಗೆ ಹೋಗಿ ಬರುತ್ತೇನೆ. ಆ ನಮ್ಮ ಮನೋ ಮಂದಿರದ ಗುರುಗಳ ಹೆಸರು ” ಶ್ರೀಯುತ ಕುಮಾರ್ ಸ್ವಾಮಿ ಹಿರೇಮಠದ್ “ ವೃತ್ತಿ ಪ್ರೇಮವೊಂದನ್ನೇ ಗುರಿಯಾಗಿಸಿಕೊಂಡು ಬೋಧಿಸುವ ಇಂತಹ ಶಿಕ್ಷಕರ ಸಂಖ್ಯೆ & ಸೇವೆ ಈಗ ವಿರಳವೇ ಸರಿ … ಇಂತಹ ವಿರಳ ಗುರು ಮರಳಿ ಸಿಕ್ಕ 2018 ರ ಯುಗಾದಿಯ ಎಂದಿಗೂ ಮರೆಯಲಾಗದು. ಪ್ರತಿ ಯುಗಾದಿಗೂ ಅವ್ಯಾಹತ ಆ ಗುರುವಿನ ಸ್ಮರಣೆ. ತಸ್ಮೈ ಶ್ರೀ ಗುರುವೇ ನಮಃ … ********************************** ಗಂಗಾಧರ್ ಬಿ.ಎಲ್ ನಿಟ್ಟೂರ್
ಯುಗಾದಿ ವಿಶೇಷ ಬರಹ ಯುಗಾದಿ ಯುಗಾದಿ ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಒಂದು ಅತ್ಯುನ್ನತ ಸಾಂಸ್ಕೃತಿಕ ಮಹತ್ವವಿದೆ. ಆದುದರಿಂದಲೇ ಭಾರತೀಯರು ತಮ್ಮ ಹೊಸವರುಷದ ದಿನವೂ ಯುಗಾದಿಯ ದಿನದಿಂದಲೇ ಆರಂಭವಾಗುತ್ತದೆ ಎಂದು ನಂಬುತ್ತಾರೆ. ಗ್ರಾಮೀಣರ ಆಡುಮಾತಿನ ಲ್ಲಿ ಹೇಳುವುದಾದರೆ ಯುಗಾದಿಯು ‘ಉಗಾದಿ’ ಎನಿಸಿಕೊಳ್ಳುತ್ತದೆ. ಯುಗಾದಿ ಹಬ್ಬ ಶಿಶಿರ ಋತು ಕಳೆದು ವಸಂತನಾಗಮನದ ಮೊದಲ ಹಬ್ಬ. ಇದು ಭಾರತೀಯರ ಪಾಲಿಗೆ ನವಮನ್ವಂತರ, ಅಲ್ಲದೆ ಇದು ಭಾರತೀಯರಾದ ನಮ್ಮ ಪಾಲಿಗೆ ಹೊಸ ವರುಷದ ಮೊದಲ ದಿನ. ಯುಗಾದಿಯನ್ನು ಚಾಂದ್ರಮಾನ- ಸೌರಮಾನ ಹೀಗೆ ಎರಡು ಬಗೆಯಲ್ಲಿ ಆಚರಿಸುವ ಪದ್ಧತಿಯಿದೆ. ಚಂದ್ರನ ಚಲನೆಯನ್ನು ಗುರುತಿಸಿ ಮಾಡುವ ಪದ್ದತಿಗೆ ಚಾಂದ್ರಮಾನ ಯುಗಾದಿ ಎನ್ನುವರು. ಸೂರ್ಯ ಮೇಷ ರಾಶಿಗೆ ಬಂದಾಗ ಸೌರಮಾನ ಯುಗಾದಿಯನ್ನು ಆಚರಿಸುವರು. ದಕ್ಷಿಣ ಭಾರತೀಯರು ಚಾಂದ್ರಮಾನ ವನ್ನು ಅನುಸರಿಸಿ ಚೈತ್ರ ಶುದ್ಧ ಪಾಡ್ಯಮಿಯಂದು ಯುಗಾದಿ ಆಚರಿಸುವರು. ಬೇವು- ಬೆಲ್ಲ ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನು ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು.ಬೇವು ಬೆಲ್ಲವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ… ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ| ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ|| ಅದರರ್ಥ ಹೀಗಿದೆ– “ನೂರು ವರುಷಗಳ ಆಯುಷ್ಯ, ಸದ್ರಢ ಆರೋಗ್ಯ ,ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ”. ಯುಗಾದಿ ಹಬ್ಬದಂದು ಬೇವು ಬೆಲ್ಲ ತಿನ್ನುವ ಆಚರಣೆಯು ಒಂದು ವಿಶಿಷ್ಟ ಪರಿಕಲ್ಪನೆಯೇ ಸರಿ. ಸಿಹಿ-ಕಹಿ,ಸುಖ- ದು:ಖ, ನಲಿವು,ನೋವು ಎಂಬ ಮಾತಿನಂತೆ ಜೀವನದಲ್ಲಿ ಇವೆರಡರ ಇರುವಿಕೆ ಅಗತ್ಯ ವಾಗಿದೆ. ಆಗ ಮಾತ್ರ ಜೀವನ ಸುಗಮವಾಗಿ ಸಾಗಲು ಸಾಧ್ಯ. ಆದರೆ ಕಷ್ಟಕ್ಕಿಂತ ಸುಖವೆ ಬೇಕು ಎಂದು ಬಯಸುವವರು ಹೆಚ್ಚಿರುವ ಪರಿಸ್ಥಿತಿಯಲ್ಲಿ ಕಷ್ಟವನ್ನು, ಕಹಿಯನ್ನು, ನೋವನ್ನು ಬಯಸುವವರೇ ಇಲ್ಲವೆನ್ನುವಂತಾಗಿದೆ. ಆದರೆ ಜೀವನ ಎನ್ನುವುದು ಕಷ್ಟ ಸುಖಗಳ ಸಂಯೋಜನೆಯಾಗಿದೆ. ಹಾಗಾಗಿ ಇವೆರಡು ಒಂದನ್ನೊಂದು ಬಿಟ್ಟಿರಲಾರವು. ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬುದು ಯುಗಾದಿ ಹಬ್ಬದ ಮುಖ್ಯ ಉದ್ದೇಶವಾಗಿದೆ. ಅಲ್ಲದೆ ಜೀವನದಲ್ಲಿ ಏನೇ ಏರುಪೇರಾದರೂ ಸರ್ವರೂ ಸುಖದಿಂದ, ಸಮನ್ವಯದಿಂದ ಒಟ್ಟಾಗಿ ಬಾಳಬೇಕೆನ್ನುವ ಆಶಯವೂ ಇದರಲ್ಲಿದೆ. ಯುಗಾದಿ ಬಂದಿತೆಂದರೆ ಎಲ್ಲೆಡೆಯಲ್ಲಿ ಸಂತೋಷ, ಸಂಭ್ರಮ ತುಂಬಿ ತುಳುಕುತ್ತಿರುತ್ತದೆ. ಚೈತ್ರ ಮಾಸದಿಂದ ವಸಂತ ಋತು ಶುರುವಾಗುತ್ತದೆ. ವನಗಳೆಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯ ವರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುತ್ತದೆ. ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ ಬಲ್ಲಿದರೆಂಬ ತಾರತಮ್ಯವಿಲ್ಲದೆ ಎಲ್ಲಾ ಹಿಂದೂಗಳು ಆಚರಿಸುತ್ತಾರೆ. ರೈತರು ಎತ್ತುಗಳನ್ನು ಅಲಂಕರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ವನ್ನು ಭಾರತ ಪರ್ವದಲ್ಲಿ ಬೇರೆ ಬೇರೆ ಹೆಸರಿನಿಂದ ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಗುಜರಾತ್,ಮಹಾರಾಷ್ಟ್ರದಲ್ಲಿ ಯುಗಾದಿಯ ದಿನ ಪ್ರತಿಯೊಂದು ಮನೆಯ ಮುಂದೆ ಗುಡಿಯನ್ನು ನಿಲ್ಲಿಸುವ ಪದ್ದತಿ ಇರುವುದರಿಂದ ಯುಗಾದಿಯನ್ನು ಗುಡಿಪಾಡ್ಯ ಎಂದು ಕರೆಯುವರು. ಗುಡಿ ಎಂದರೆ ಧ್ವಜ. ಒಂದು ಕೋಲಿನ ತುದಿಗೆ ರೇಷ್ಮೆ ಬಟ್ಟೆ ಏರಿಸಿ ಅದರ ಮೇಲೆ ಬೆಳ್ಳಿ ಅಥವಾ ಹಿತ್ತಾಳೆಯ ಸಣ್ಣ ಬಿಂದಿಗೆಯನ್ನು ಕಟ್ಡಿ ಬೇವು ಮತ್ತು ಮಾವಿನ ಎಲೆಗಳಿಂದ ಅಲಂಕರಿಸುವರು. ಮಹಾಭಾರತದಲ್ಲಿ ಇದರ ಪ್ರಸ್ತಾಪವಿದೆ. ಸಿಹಿತಿನಿಸು…… ಒಬ್ಬಟ್ಟು ಅಥವಾ ಹೊಳಿಗೆ ಬಹಳ ದಿನ ಇರದೇ ಕೊಡುವುದೆಂದು ಕಡಲೆ ಅಥವಾ ತೊಗರಿ ಬೆಳೆಯ ಹೂರಣದಲ್ಲಿ ಮಾಡುವರು. ಇದನ್ನೆ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆಯುತ್ತಾರೆ. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆವರು. ಯುಗಾದಿಯ ಖಗೋಳ ಘಟನೆಗಳು ಯುಗಾದಿಯ ಸಂದರ್ಭದಲ್ಲಿ ಭೂಮಿಯ ಆಕ್ಸೆಸ್ ವಾಲುತ್ತದೆ. ಉತ್ತರ ಗೋಳಾರ್ಧವು ಹೆಚ್ಚಿನ ಪ್ರಮಾಣದ ಸೂರ್ಯನ ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಈ ಸಮಯದಲ್ಲಿ ಭೂಮಿಯು ಹೆಚ್ಚು ಉಷ್ಣತೆಗೆ ಒಳಗಾಗುತ್ತದೆ. ಆದ್ದರಿಂದ ಮನುಷ್ಯರಿಗೆ ಹೆಚ್ಚು ಶಾಖದ ಅನುಭವಾಗುತ್ತದೆ. ಅದನ್ನು ಸಹಿಸುವ ಶಕ್ತಿಯನ್ನು ಯುಗಾದಿ ಆಚರಣೆ ನೀಡುತ್ತದೆ. ಖಗೋಳ ಶಾಸ್ತ್ರದ ಪ್ರಕಾರ ಯುಗಾದಿಯ ಹಿಂದಿನ ದಿನ ಅಮವಾಸ್ಯೆ ಯಾಗಿರುತ್ತದೆ. ಹೊಸ ಸಂವತ್ಸರದ ಪ್ರಾರಂಭದ ದಿನ ಇದು. ವಸಂತ ಋತುವಿನ ಪ್ರಾರಂಭದ ದಿನ ಇದಾಗಿರುತ್ತದೆ. ಇನ್ನು “ವಸಂತ ಕಾಲ ಬಂದಾಗ ಮಾವು ಚಿಗುರಲೇ ಬೇಕು” ಎಂಬ ಹಾಡಿನಂತೆ ಪ್ರಕೃತಿಯೂ ಕೂಡ ಚಿಗುರೆಲೆಗಳಿಂದ ಹೊಸ ಋತುವಿನ ಸ್ವಾಗತ ಕೋರಲು ಸಜ್ಜಾಗಿರುವ ಸಮಯ ಇದಾಗಿದೆ. ಈ ಸಮಯದಲ್ಲಿ ಮರಗಳ ಎಲೆಗಳು ಉದುರುತ್ತದೆ, ಹೊಸ ಚಿಗುರು ಪ್ರಾರಂಭವಾಗುತ್ತದೆ. ಹಾಗಾಗಿ ಹೊಸತನದ ಸಂಕೇತವನ್ನು ಪ್ರಕೃತಿಯೂ ಕೂಡ ನೀಡಲು ಪ್ರಾರಂಭಿಸುವ ಸುದಿನ ಇದು. ಪಂಚಾಂಗದ ಪ್ರಕಾರ ಯುಗಾದಿಯ ದಿನದಂದು ಹೊಸ ಹಿಂದೂ ಕ್ಯಾಲೆಂಡರ್ ಪ್ರಾರಂಭವಾಗುತ್ತದೆ. ಹಿಂದೂ ಕ್ಯಾಲೆಂಡರ್ ಕೇವಲ ಸಾಂಪ್ರದಾಯಿಕವಾಗಿ ಮಾತ್ರವೇ ಮಹತ್ವಪೂರ್ಣ ವಾದುದಲ್ಲ. ಆದರೆ ಇದು ವೈಜ್ಞಾನಿಕವಾಗಿಯೂ ಮತ್ತು ಖಗೋಳ ಶಾಸ್ತ್ರದ ಪ್ರಕಾರವೂ ಕೂಡ ಹಲವು ಗ್ರಹಗಳ ಕ್ಷಣಗಳನ್ನು ವಿವರಿಸುವ ಸಂಪರ್ಕ ಸಾಧನವಾಗಿದೆ. ನಮ್ಮ ಭಾರತೀಯ ಶ್ರೇಷ್ಠ ಗಣಿತಜ್ಞರೆನಿಸಿರುವ ಭಾಸ್ಕರಾಚಾರ್ಯರ ಪ್ರಕಾರ ಯುಗಾದಿಯ ಸೂರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆ ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ. ಈ ರೀತಿಯಾಗಿ ಯುಗಾದಿಯು ನಾಡಿಗೆ ಮಾತ್ತವಲ್ಲದೆ, ಇಡೀ ವಿಶ್ವಕ್ಕೆ ಉಜ್ವಲತೆಯನ್ನು ಜನತೆಗೆ ಸುಖ ಶಾಂತಿಯನ್ನು ನೀಡುವ ವಜ್ರಸಮಾನ ಸಮಯ. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸವರುಷಕೆ ಹೊಸಹರುಷವ ಹೊಸತು-ಹೊಸತು ತರುತಿದೆ…… ಎಂಬ ದ.ರಾ.ಬೇಂದ್ರೆ ಯವರ ಹಾಡಿನ ಸಾಲಿನಂತೆ ನಾವೆಲ್ಲರೂ ಯುಗಾದಿಯ ನಿಜ ಅರ್ಥ ಅರಿತು ಸಹಕಾರ, ಸಹಬಾಳ್ವೆಯಿಂದ ಹಬ್ಬವನ್ನು ಆಚರಿಸೋಣ. ****************************************************** ಅಕ್ಷತಾ ಜಗದೀಶ.
ಯುಗಾದಿ ವಿಶೇಷ ಬರಹ ಯುಗಾದಿಯ ಸವಿ ಅಲ್ರಿ..ನನಗೊಂದು ಹೊಸ ಸೀರಿಬೇಕು.ಯಾಕಂದ್ರ ಹೊಸ ವರ್ಷದ ಸಂಭ್ರಮಕ ಎಲ್ಲವೂ ಹೊಸದಾಗಿರಬೇಕು ಅನ್ನು ತ್ತಿದ್ದರು ಅವನೇನು ತಲಿ ಕೆಡಸಿಕೊಂಡಿರಲಿಲ್ಲ. ಅಲ್ಲೆ ಕಪಾ ಟ ತುಂಬ ಇರೋ ಸಾರಿ ಮೊದಲ ಉಟ್ಟ ಹರಿ,ಆ ಮ್ಯಾಲೆ ಹೊಸಾದು ತಗೊಳಾಕಂತ. ಸುಮ್ಮನ ಯಾಕ ಖರ್ಚು ಎಷ್ಟ ರ ಜಿಪುಣ ಅದಿರಿ ನೀವು? ನಾ ಎನಾರ ಬಂಗಾರ ಕೇಳಿನೇ ನು? ಅದನಂತೂ ಹಾಕ್ಕೊಂಡು ಅಡ್ಡಾಡೋ ಯೋಗ ಇಲ್ಲ ನನಗ.ಬರಿ ಸೀರಿವಳಗಾದ್ರೂ ಖುಷಿ ಪಡೋಣ ಅಂದ್ರ ಅದಕೂ ಹಿಂಗ ಅಂತಿರಿ. ಗೆಳತೆರ ಮುಂದ ಮರ್ಯಾದಿ ತಗಿಬ್ಯಾಡ್ರಿ? ಹಾಂಗಲ್ಲ ಮಾರಾಯ್ತಿ, ನನ್ನ ಅಂಗಿ ಪ್ಯಾಂಟ್ ನಮ್ಮ ಮದವ್ಯಾಗಿಂದು. ಇನ್ನು ಹಾಂಗ ಅದಾವ ನಾ ಎನ ರ ಹೊಸಾದು ಇಷ್ಟವರ್ಷದಾಗ ಹೊಲಸಿನೇನ? ಇದ್ದುದ ರಾಗ ಮಾಡಕೊಂಡ ಹೊಂಟಿಲ್ಲೆನ ಅದಕ ಎಲ್ಲ ಹಬ್ಬ, ಅಮಾಸಿ,ಹುಣ್ಣಮಿಗೆ ಅರಬಿ ತಗೊಳ್ಳೊದು ಕಡಮಿ ಮಾ ಡು ನನ್ನ ಕಿಸೆ ಮೊದಲ ಹರದೈತಿ. ಆತ ಬಿಡ್ರಿ? ಹೆಚ್ಚ ಮಾತ ಬೇಡ.ನಿಮಗ ಕೊಡಸಾಕ ಮನ ಸಿಲ್ಲ ಅಂತ ಡೈರೆಕ್ಟ ಹೇಳಿಬಿಡ್ರಿ.ಎಲ್ಲರ ಮನಿಯಾಗ ಹಬ್ಬಕ್ಕ ಬಟ್ಟಿ,ಬಂಗಾರ ಹಾಕ್ಕೊಂಡು ಹಬ್ಬ ಮಾಡಿದ್ರ,ನಮ್ಮ ಮನಿ ಯಾಗ ಹಳೆ ಸೀರ್ಯಾಗ ಹೊಸವರ್ಷಾನ ಬರಮಾಡಕೋ ಭಾಗ್ಯ ಸಿಕ್ಕಿದ್ದು ನನ್ನ ಹಣೆಬರ ಇಷ್ಟ ಅಂತಾತು.ಉಡಾಂಗಿ ಲ್ಲ,ತೊಡಾಂಗಿಲ್ಲ ಎನ್ನುತ್ತ ಬಿರುಸಿಲೆ ಒಳನಡೆದೆ. ಹಬ್ಬ ಅಂದ ಮ್ಯಾಲೆ ಸ್ವಲ್ಪರ ತಯಾರಿಬೇಕು.ಬೆಲ್ಲ,ಬೇವು,ಕಬ್ಬು ಮಾವು ಹೊಸ ಫಲಗಳ ಪೂಜಿಸಾಕ ರೆಡಿ ಮಾಡತಿದ್ದೆ. ಅವನು ನಾನು ಬೆರೆತಿದ್ದು ಕಷ್ಟದ ಸಮಯದಾಗ. ಬದುಕಿಗೆ ಯಾರ ಆಶ್ರಯವಿಲ್ಲದೇ ಇರುವೆಯಂತೆ ಹಗುರಾದ ಆನೆ ಯಂತೆ ಭಾರವಾದ ಎಲ್ಲ ಸುಖವ ಸಮನಾಗಿ ಹಂಚಿಕೊಂ ಡು ಹೆಜ್ಹೆಯಿಟ್ಟವರು. ದೈವದ ಸಂಕಲ್ಪವೇ ಕೈ ಹಿಡಿದು ಮುನ್ನಡೆಸಿದೆ. ಕಷ್ಟ ಸುಖಗಳಿಗೆ ಸಮನಾಗಿ ಬೆರೆಯುವ ಮನೋಭಾವ ಎಲ್ಲರಲ್ಲಿ ಬರಲೆಂದು, ಚಾಂದ್ರಮಾನ ಯುಗಾದಿ ಹೊಸ ಸಂವತ್ಸರಕ್ಕೆ ಪಾದಾರ್ಪಣೆ ಮಾಡುವಾ ಗ ನಮ್ಮಲ್ಲಾಗುವ ಬದಲಾವಣೆಗಳು ಇಡೀ ಜೀವನದ ಮೇಲೆ ಪರಿಣಾಮ ಬಿರುವಂತಹ ಸುಸಂದರ್ಭ.ಇದೆಲ್ಲ ಗೊತ್ತಿದ್ದು ಎಲ್ಲ ಬೇಡವೆನ್ನುವವನ ಕಂಡು ಮಾತಾಡಿ ಉಪಯೋಗವಿಲ್ಲವೆಂದು ಸುಮ್ಮನಾದೆ. ಮಕ್ಕಳು ಅಪ್ಪನೊಂದಿಗೆ ತಳಿರುತೋರಣ ಕಟ್ಟುವಲ್ಲಿ ಬ್ಯೂಜಿ.ನಾನು ಅಡಿಗೆ ತಯಾರಿಯಲ್ಲಿ ಮನೆಯೋ ನವ ಮದುಮಗಳಂತೆ ಶೃಂಗಾರ ಮಾಡಿದ್ದು ಖಷಿ ತಂದಿತ್ತು. ಎಲ್ಲವಿದ್ದರೂ ಅವನ ಪ್ರೇಮದ ಮಾತುಗಳು ಸುಳಿಯದಿ ದ್ದರೆ,ಬೇವು ಮಾತ್ರ ಒಡಲ ಸೇರಿ ಬೆಲ್ಲದ ಸವಿಯ ಇಲ್ಲವಾ ಗಿಸಿದಂತೆ. ಹೊಸ ಪಂಚಾಂಗದ ಮುನ್ನುಡಿ ನಂಬುವವರ ರಾಶಿಗಳ ಬಲಾಬಲದ ಪಠಣ.ನಲಿವೆಂಬುದು ನಮ್ಮಲ್ಲಿ ಸದಾ ಜೇನುಗೂಡು ಕಟ್ಟಿದಂತೆ. ಪೂಜೆಯ ಸಿದ್ದತೆ ಮುಗಿದ ಮೇಲೆ ರೆಡಿಯಾಗಲು ಇದ್ದುದ ರಲ್ಲೆ ಸೀರೆಗಾಗಿ ಹುಡುಕಾಟ. ಎದುರಿಗೊಂದು ಪಾಕೀಟು. ಆಶ್ಚರ್ಯ ಇದೇನೆಂದು ಬಿಚ್ಚಿದರೆ ‘ಸೀರೆ’ನನಗಿಷ್ಟವಾದ “ತಿಳಿನೀಲಾಕಾಶ” ಆಗಿಂದ ಅಂದಿದ್ದೆಲ್ಲ ಬರಿ ತಮಾಷೆ, ರೇಗಿಸುವ..ಬುದ್ದಿ ಇನ್ನು ಹೋಗಿಲ್ಲ. ಅದೆಲ್ಲ ಸತ್ಯ ಅಂತ ಬೈದೆನಲ್ಲ ಎನ್ನುತ ಸೀರೆ ಕವರ್ ಸಮೇತ ರೀ…ಇದು ನನಗಾ? ಮತ್ತೆ ಹೇಳಲೇ ಇಲ್ಲ? ಅಯ್ಯೋ ಗುಂಡಿ ನಿನ್ನ ಗುಣ ನನಗಲ್ಲದೆ ಇನ್ನಾರಿಗೆ ಗೊತ್ತಾಗೊದು? ಮನೆಯ ಮಹಾಲಕ್ಷ್ಮಿ ಕಣೇ ನೀನು.ಸದಾ ನಗುನಗುತಾ ಓಡಾಡಿಕೊಂಡಿದ್ದರೆ ಅದೇ ನನಗೆ ಸ್ವರ್ಗ. ಯುಗಾದಿಯು ಕಹಿ ನೆನಪುಗಳ ಮರೆಸಲಿ, ಸಿಹಿನೆನಪುಗಳನ್ನು ಹಚ್ಚಿಸಲಿ. ನಮ್ಮಿಬ್ಬರ ಬಾಳಲಿ ವಿರಸಗಳು ಸುಳಿಯದಿರಲಿ ಚಿನ್ನಾ. ಬೇವು-ಬೆಲ್ಲದಂತೆ ಎನ್ನುತ ಮುದ್ದಿಸಿದವನ ಪ್ರೀತಿಯಲಿ ಯುಗಾದಿಯ ಸವಿಯ ಮೆಲ್ಲುತ್ತಿದ್ದೆ…. ********* ಶಿವಲೀಲಾ ಹುಣಸಗಿ
ಯುಗಾದಿ ವಿಶೇಷ ಬರಹ ಕಹಿ ಜಾಸ್ತಿ ತಿಂದ್ರೆ ವರ್ಷ ಪೂರ್ತಿ ಸಿಹಿಯಂತೆ ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ವರ್ಷದ ಆರಂಭ ಯುಗಾದಿ. ಸಂವತ್ಸರವೊಂದು ಮುಗಿದು ಮತ್ತೊಂದು ಸಂವತ್ಸರಕ್ಕೆ ಕಾಲಿಡುವ ಸಮಯ ಅರವತ್ತು ಸಂವತ್ಸರಗಳ ಈ ಚಕ್ರದಲ್ಲಿ ಈಗ ನಾವು ೩೫ ರ ಪ್ಲವ ನಾಮ ಸಂವತ್ಸರದಲ್ಲಿ ಇದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯ ಆಚರಣೆ ಬಂದಮೇಲೆ ತಿಥಿ ನಕ್ಷತ್ರ ಸಂವತ್ಸರಗಳ ಲೆಕ್ಕಾಚಾರ ಅಷ್ಟಾಗಿ ನಮ್ಮ ದೈನಂದಿನ ಬದುಕಿನಲ್ಲಿ ಉಳಿದುಕೊಂಡಿಲ್ಲ. ಅದರಲ್ಲಿ ಯುಗಾದಿಯ ಆಚರಣೆ ಸ್ವಲ್ಪ ಮುಂಚೂಣಿಯಲ್ಲಿದೆ ಅನ್ನಬಹುದೇನೋ. ಯಾಕೆಂದರೆ ನಾವು ಹೊಸವರ್ಷವನ್ನು ಡಿಸೇಂಬರ್ 31ರಂದು ಸಂಪದ್ಭರಿತವಾಗಿ ಆಚರಿಸುತ್ತೇವೆ. ಅದೇನೇ ಇದ್ದರೂ ವಾಸ್ತವದ ಲೆಕ್ಕಾಚಾರ ಕಾಲಮಾನ ಬದಲಾಗಲಾರದು. ಹೂ ಹೀಚು ಹಣ್ಣುಗಳಿಂದ ಪ್ರಕೃತಿ ಹೊಸ ಹೊಸ ಬಗೆಯ ಉಡುಗೆ ತೊಟ್ಟು ಸಂಭ್ರಮಿಸುವ ಕಾಲ ಈಗಲೇ. ಇಯರ್ ಎಂಡ್ ಅಂತ ಈಗಲೂ ಲೆಕ್ಕಾಚಾರ ಮಾರ್ಚ್ ತಿಂಗಳನ್ನೇ ಹೇಳೋದು. ಯುಗಾದಿಯ ನಂತರ ವಿಪರೀತವಾಗುವ ತಾಪಮಾನ. ಹಲವಾರು ರೋಗ ರುಜಿನಗಳನ್ನು ತರುತ್ತದೆ. ನೂರಕ್ಕೂ ಹೆಚ್ಚು ಔಷಧೀಯ ಗುಣವಿರುವ ಬೇವು, ಇದರ ಸೇವನೆಯಿಂದ, ಬರುವ ರೋಗಗಳನ್ನು ತಡೆಗಟ್ಟಬಹುದು. ಮತ್ತು ಬೆಲ್ಲ ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಜೊತೆಗೆ ಬೆಲ್ಲವನ್ನೂ ತಿನ್ನುವ ವೈಜ್ಞಾನಿಕ ಕಾರಣವೂ ನಮಗಿಲ್ಲಿ ಸಿಗುತ್ತದೆ. ಈಗಲೂ ಹಳ್ಳಿಗಳಲ್ಲಿ ಬೆಲ್ಲ ತಿಂದು ನೀರು ಕುಡಿಯುವ ಪದ್ಧತಿ ಇದೆ. ಮಲೆನಾಡಿನ ಜೋರು ಮಳೆಗೆ ಜೀವ ಉಳಿಸಿಕೊಳ್ಳಲು ಹೆಣಗಾಡುವ ಬೇವಿನಗಿಡ ಅಪರೂಪದ ಅತಿಥಿ. ಹಬ್ಬದ ಮುಂಚಿನ ದಿನವೇ ಯಾರ ಮನೆಯಲ್ಲಿ ಬೇವಿನ ಗಿಡವಿದೆ ಎನ್ನುವ ತಲಾಷ್. ಕಣ್ಣು ಉಜ್ಜುತ್ತಲೇ ಬೇವಿನ ಎಲೆ ಕಿತ್ತು ತರುವ ಕಾಯಕ. ಹೆಚ್ಚು ಎಲೆ ತಂದರೆ ಹೆಚ್ಚು ತಿನ್ನಿಸುತ್ತಾಳೆ ಅಮ್ಮ ಎಂದು ಚೂರೇಚೂರು ಹಿಡಿದು ಬರುವ ಹುಷಾರಿತನ. ಇದೇನು ಇಷ್ಟು ಹನಿ ಇನ್ನೂ ಬೇಕು ಎನ್ನುವ ಅಮ್ಮ ಮತ್ತೆ ತರುವ ವರೆಗೂ ಬಿಡ್ತಿರಲಿಲ್ಲ. ಅಮ್ಮ ಅದೆಷ್ಟು ಕಹಿ ತಿನ್ನಿಸುತ್ತಾಳೋ ಇಂದು ಎಂದು ನಮ್ಮ ನಮ್ಮೊಳಗೆ ಚರ್ಚೆ ಹೇಗೆ ತಪ್ಪಿಸಿಕೊಳ್ಳುವದೆಂದು. ಎಲ್ಲಾ ಹಬ್ಬಗಳಲ್ಲೂ ಸಂಭ್ರಮ ಸೂಸುವ ಮುಖದಲ್ಲಿ ಆವತ್ತು ಸ್ವಲ್ಪ ಮಂಕು. ತುಪ್ಪದಲ್ಲಿ ಹುರಿದು ಜೊತೆಗಿಷ್ಟು ಬೆಲ್ಲ ಇಟ್ಟು ದೇವರಿಗೆ ಕೈಮುಗಿದು ತಿನ್ನಿ ಎನ್ನುತಿದ್ದಳು. ಈ ದಿನ ಕಹಿ ಜಾಸ್ತಿ ತಿಂದವರಿಗೆ ಬದುಕಿನಲ್ಲಿ ಸಿಹಿ ಜಾಸ್ತಿ ಎನ್ನುವ ಅಮ್ಮನ ನುಡಿಗಟ್ಟಿಗೆ ಹೆದರಿ ತಟ್ಟೆಯಲ್ಲಿದ್ದ ಬೇವಿನ ಎಲೆಗಳೆಲ್ಲ ಖಾಲಿ. ಕಿವುಚಿದ ಮುಖದಲ್ಲಿ ಪೆಚ್ಚು ನಗು. ಅಪ್ಪ ಪೂಜೆಗೆ ಇಟ್ಟ ಪಂಚಾಂಗ ತೆಗೆದು ತಿಥಿ, ವಾರ,ನಕ್ಷತ್ರ,ವಾರ್ಷಿಕ ಹಬ್ಬಗಳನ್ನು ಓದುತ್ತಿದ್ದರು. ಆಗಲೇ ನಮಗೆ ವರ್ಷ ಭವಿಷ್ಯ ಓದಲು ಕಾತರ. ಯಾರು ಮೊದಲು ಓದುವುದು ಪೂರ್ಣ ವರ್ಷದ ಭವಿಷ್ಯವೀಗ ನಮ್ಮ ಕೈಯೊಳಗೆ ಇದೆ ಎನ್ನುವ ಕೆಟ್ಟ ಕುತೂಹಲ. ಮತ್ತೆ ತಿಳಿದು ಕೊಳ್ಳುವ ಗಡಿಬಿಡಿ. ಯಾರಾದರೂ ಒಬ್ಬರು ಎಲ್ಲರ ಭವಿಷ್ಯವನ್ನು ದೊಡ್ಡದಾಗಿ ಓದಬೇಕು ಎನ್ನುವಲ್ಲಿಗೆ ಅದಕ್ಕೊಂದು ಪರ್ಯಾಯ ವ್ಯವಸ್ಥೆ. ಅಪ್ಪನ ರಾಶಿಯಿಂದ ಶುರುವಾದ ಭವಿಷ್ಯ ಸುಮಾರು ಒಂದು ತಾಸುಗಳ ಕಾಲ ನಡೆಯುವ ಈ ಪ್ರಕ್ರಿಯೆಯಲ್ಲಿ ಇಡೀ ವರ್ಷದ ಬದುಕೇ ಕಣ್ಮುಂದೆ ನಿಂತು ಕುಣಿದ ಭಾವ. ಗೊತ್ತಿದ್ದವರದ್ದೆಲ್ಲ ಓದಿ ಎಲ್ಲರ ಹಣೆಬರಹ ಬಲ್ಲವರಂತೆ ಪೋಸು. ಕಲಹ,ಪ್ರೀತಿ, ಸಂತಾನ ಭಾಗ್ಯ,ಕಂಕಣ ಭಾಗ್ಯ, ಧನಹಾನಿ,ಮಾನ ಹಾನಿ. ಇದನ್ನೆಲ್ಲಾ ಪರಿಹರಿಸಲು ಸರಿದೂಗಿಸಲು ಅಲ್ಲೊಂದು ಸಣ್ಣ ತಯಾರಿ. ಒಂದಕ್ಕೊಂದು ತಾಳೆಯಾಗದ ಭವಿಷ್ಯ ಫಲಕ್ಕೆ ಚಿಂತಿತ ಮನಸು,ಮುಸಿ ಮುಸಿ ನಗು. ಒಟ್ಟಿನಲ್ಲಿ ಈ ವರ್ಷ ಮಿಶ್ರಫಲ ಎಂದಾಗ ಒಂತರ ಮಿಶ್ರಭಾವ. ವರ್ಷಾರಂಭದ ವಾಸ್ತವ ಮತ್ತು ಕಲ್ಪನೆಗಳ ಬದುಕಿಗೆ, ಅಮ್ಮನ ಅಡುಗೆಯ ಹೋಳಿಗೆ ಸಿಹಿಯೊಡನೆ ಸಣ್ಣ ಆರಂಭ. ಅಳು ನಗು ಕಿತ್ತಾಟ ಪ್ರೀತಿ ಇಂದು ನೀವು ಏನೇ ಮಾಡಿದರೂ ವರ್ಷ ಪೂರ್ತಿ ಅದೇ ಇರುತ್ತೆ ನಿಮ್ ಪಾಲಿಗೆ ಎನ್ನುವ ವಾರ್ನಿಂಗ್ ಗೆ ಎಲ್ಲ ಮರೆತ ಭರಪೂರ ಪ್ರೀತಿ. ಹಬ್ಬಗಳು ಯಾವುದೇ ಇರಲಿ ಆರೋಗ್ಯ,ಪ್ರೀತಿ, ನಿಷ್ಠೆ,ನಂಬಿಕೆಗಳ ಜೊತೆಗೆ ಬಂಧಗಳ ಬೆಸೆಯುವುದೇ ಎಲ್ಲ ಹಬ್ಬದ ಉದ್ದೇಶ ಎನ್ನುವುದು ನಾವು ಅರಿಯಬೇಕಾದ ಸತ್ಯ. ಯೇ ಕಹಿ ಜಾಸ್ತಿ ತಿನ್ನು ಇಲ್ಲ ಅಂದ್ರೆ ಬದುಕು ಸಿಹಿಯಾಗಿ ಇರಲ್ಲ ಅನ್ನೋದನ್ನ ಮಗನಿಗೆ ಹೇಳೋದನ್ನ ಮರೆತಿಲ್ಲ ನಾನು ಯಾಕೆಂದ್ರೆ ನಂಬಿಕೆಯೇ ಬದುಕು. ************************************** ಸ್ಮಿತಾ ಭಟ್









