ಈ ವಾರದಿಂದ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
ಗಜಲ್
ಗಜಲ್ ಪ್ರಭಾವತಿ ಎಸ್ ದೇಸಾಯಿ ಬಾನಲಿ ಹಾರುವ ಪತಂಗದ ನೂಲು ಕೆಳಗಿಟ್ಟಿರುವೆ ಶಿವಾತೊಗಲು ಗೊಂಬೆಗಳ ಆಡಿಸುವ ಸೂತ್ರ ಮೇಲಿಟ್ಟಿರುವೆ ಶಿವಾ ಕುರುಡು ಕಾಂಚಾಣವು ತಿಪ್ಪೆಯಲಿ ಬಿದ್ದು ಒದ್ದಾಡುತಿದೆಹಸಿವು ಇಂಗಿಸುವ ಆ ಶಕ್ತಿ ನೇಗಿಲಿಗೆ ಕೊಟ್ಟಿರುವೆ ಶಿವಾ ಸಂತೆಯಲಿ ಜೀವಾನಿಲ ಸಿಗದೆ ಪ್ರಾಣಪಕ್ಷಿ ಬಿಕ್ಕುತಿದೆಪ್ರಕೃತಿಯ ಒಡಲಲಿ ಪ್ರಾಣವಾಯು ಮುಚ್ಚಿಟ್ಟಿರುವೆ ಶಿವಾ ಅವನಿಯ ಹುಳು ಹೆಮ್ಮೆಯಲಿ ಶಶಿ ಅಂಗಳದಲಿ ತೆವಳುತಿದೆಇಳೆಯ ನಂದನವನ ನಾಶ ಮಾಡಿ ಮಸಣ ಕಟ್ಟಿರುವೆ ಶಿವಾ ಜಗದ ಸೃಷ್ಟಿಯ ಸೊಬಗು ಕಾಣದೆ “ಪ್ರಭೆ” ಯ ಮನ ನರಳುತಿದೆಮುಗ್ಧ ಜೀವಿಗಳ ಬದುಕಿಗೆ ಕಿಚ್ಚನ್ನು ಇಟ್ಟಿರುವೆ ಶಿವಾ *********************
ಗಜಲ್
ಗಜಲ್ ಎ . ಹೇಮಗಂಗಾ ರೋಗಿಗಳ ಶುಶ್ರೂಷೆಯಲಿ ನಿರತರಾಗಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟುನಿರೋಗಿಯಾಗಲೆಂದು ಶ್ರಮಿಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ನಮಗೂ ಬದುಕಿದೆ ಎಂಬುದನೇ ಮರೆತು ಬದುಕಬೇಕಿದೆ ಇಂದುಹಗಲಿರುಳು ನಿರುತ ದುಡಿಯುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಕಡುವೈರಿ ವೈರಾಣು ಮಹಾಮಾರಿಯಾಗಿ ಪಂಥಾಹ್ವಾನ ನೀಡಿದೆರಣಕಲಿಯಂತೆ ಹೋರಾಡುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ಸಾವಿನ ಕಬಂಧಬಾಹು ಉಸಿರುಗಟ್ಟಿಸಿದೆ ವಯೋಭೇದವಿಲ್ಲದೇಪಾರಾಗುವ ದಾರಿಯ ಅರಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ತೂಗುಗತ್ತಿ ಎಂದು ಬೀಳುವುದೋ ಭಯ ಬೇರೂರಿದೆ ಎದೆಯಲ್ಲಿಜೀವಗಳ ಉಳಿಸಲು ಪಣ ತೊಟ್ಟಿದ್ಧೇವೆ ಪ್ರಾಣವನ್ನು ಪಣಕ್ಕಿಟ್ಟು **************************
ಗಜಲ್
ಗಜಲ್ ಸಿದ್ಧರಾಮ ಹೊನ್ಕಲ್ ಏಳು ದಶಕಗಳೇ ಕಳೆದವು ಹೊಸ ಮಳೆಯು ಸುರಿಯಲಿಲ್ಲ ನೋಡು ಸಾಕಿಭೂತಾಯಿ ಮಕ್ಕಳ ಬಂಜೆತನ ಹಿಂಗಲೇಯಿಲ್ಲ ನೋಡು ಸಾಕಿ ದುಡಿ ದುಡಿದು ನೊಂದ ರೈತನ ಮುಖದಲ್ಲಿ ನಗೆಯು ಅರಳಲಿಲ್ಲಜಗಕೆ ಅನ್ನ ಹಾಕುವವರ ಬಾಯಿಯೇ ಸಿಹಿಯಾಗಲಿಲ್ಲ ನೋಡು ಸಾಕಿ ಗಾಂಧಿ ಕಂಡ ಗ್ರಾಮೀಣ ಭಾರತದ ಕನಸುಗಳೆಲ್ಲ ಜಾರಿ ಕಡಲ ಪಾಲಾದವು ಈ ಮಣ್ಣಲಿಹಳ್ಳಿ ಹಳ್ಳಿಗಳೆಲ್ಲ ಗುಳೇ ಎದ್ದು ಹೋಗಿ ಸುಖವೆಂಬುದೇ ಸುಳಿಯಲಿಲ್ಲ ನೋಡು ಸಾಕಿ ಕುರ್ಚಿಯ ಕನಸಿನಲಿ ಸ್ವಾರ್ಥದ ಸೆಳವಿನಲಿ ದೇಶ ನಮ್ಮ ನಮ್ಮವರಲ್ಲಿಯೇಹರಾಜಾಯಿತುಅಧಿಕಾರದ ಅಮಲಿನಲ್ಲಿ ರೈತರ ನೆಮ್ಮದಿಗೆ ಯಾರು ಪೂರ್ಣ ಚಿಂತಿಸಲಿಲ್ಲ ನೋಡು ಸಾಕಿ ‘ಹೊನ್ನಸಿರಿ’ ಭೂತಾಯಿ ಮಕ್ಕಳ ಆಶೋತ್ತರಗಳಿಗೆ ಉತ್ತರ ಎಲ್ಲಿಹದುಸ್ವಾರ್ಥದ ಈ ಪಡಿಪಾಟಲಿಗೆ ಬಂಡೆಳದೇ ಫಲ ದೊರಕುವದಿಲ್ಲ ನೋಡು ಸಾಕಿ ***************************************************








