ಗಜಲ್
ಗಜಲ್ ಅರುಣಾ ನರೇಂದ್ರ ಅವನು ನನ್ನದೆಯಲ್ಲಿ ದೀಪ ಹಚ್ಚಿಟ್ಟಿದ್ದಾನೆ ಸಖಿಮುಚ್ಚಿದ ಕದ ತೆರೆದು ಕತ್ತಲೆ ಬಚ್ಚಿಟ್ಟಿದ್ದಾನೆ ಸಖಿ ನಮ್ಮಿಬ್ಬರ ಪ್ರೀತಿಯನು ಮುಗಿಲೆತ್ತರಕ್ಕೆ ಹಿಡಿದಿದ್ದಾನೆತುಟಿದೆರೆಯದೆ ಒಲವಿನ ಮಾತುಗಳ ಬಿಚ್ಚಿಟ್ಟಿದ್ದಾನೆ ಸಖಿ ಮೊಗ್ಗುಗಳಿಗೆ ನಗುವ ಕಲಿಸುವ ಖಯಾಲಿ ಅವನದುಒಡಲ ಹೊದರಿನಲಿ ನೋವುಗಳ ಮುಚ್ಚಿಟ್ಟಿದ್ದಾನೆ ಸಖಿ ಅಂಗಳದ ಹಣತೆಗಳಿಗೆ ಅವನದೇ ಕಣ್ಣ ಹೊಳಪುಚುಚ್ಚುವ ಮುಳ್ಳುಗಳ ಲೆಕ್ಕಿಸದೆ ಹೂವ ಮುತ್ತಿಟ್ಡಿದ್ದಾನೆ ಸಖಿ ಬೆಳ್ಳಗಿರುವ ಬೆಳಕಿಗೂ ಬಣ್ಣ ಬಳಿಯುತ್ತಾರಲ್ಲ ಅರುಣಾಬರುವ ಬೇಸರಿಕೆಗಳನು ತಡೆದು ಅಲ್ಲಲ್ಲೇ ಹತ್ತಿಟ್ಟಿದ್ದಾನೆ ಸಖಿ **************************









