ಗಝಲ್
ಗಝಲ್ ಪ್ರಭಾವತಿ ಎಸ್ ದೇಸಾಯಿ ಪ್ರೀತಿಯ ಆಳ ಹರವು ತಿಳಿದಿಲ್ಲ ಸಾವೇ ದೂರವಿರುಕಡಲು ಈಜಿ ದೇಹವು ದಣಿದಿಲ್ಲ ಸಾವೇ ದೂರವಿರು ಮಧುಶಾಲೆಯಲಿ ನೆಮ್ಮದಿ ಹುಡುಕುತಿರುವೆ ತಡೆಯ ಬೇಡಸುಖ ಪಡೆಯುವ ಸರದಿಯು ಬಂದಿಲ್ಲ ಸಾವೇ ದೂರವಿರು ಕೊರೆವ ಚಳಿ ನಡುಗುತಿದೆ ತನು ನೆನಪ ಬಾಹು ಬಂಧನದಲಿಹೊದ್ದ ಒಲವ ಕಂಬಳಿ ಹರಿದಿಲ್ಲ ಸಾವೇ ದೂರವಿರು ಮೋಹನ ಮುರಳಿ ಗಾನಕೆ ಮನ ಸೋತು ಬಂದೆ ನದಿ ತಟಕೆಹೃದಯ ತಣಿಸುವ ಮಾತು ಮುಗಿದಿಲ್ಲ ಸಾವೇ ದೂರವಿರು ತಾಮಸದ ಕರಿ ನೆರಳು ಕರಗಿ ಅರಿವಿನ”ಪ್ರಭೆ” ಹರಡಲಿಮೋಹದ ಕವಚ ಸರಿದಿಲ್ಲ ಸಾವೇ ದೂರವಿರು. ****************************************









