ಬೆಳಗು
ಕವಿತೆ ಬೆಳಗು ವೀಣಾ ನಿರಂಜನ ಈಗಷ್ಟೇ ಏಳುತ್ತಿದ್ದೇನೆಒಂದು ಸುದೀರ್ಘ ನಿದ್ರೆಯಿಂದಇನ್ನೇನು ಬೆಳಕು ಹರಿಯಲಿದೆತನ್ನದೇ ತಯಾರಿಯೊಡನೆ ಪ್ರತಿ ದಿನ ಸೂರ್ಯ ಹುಟ್ಟುತ್ತಾನೆಸೂರ್ಯನೊಂದು ಕಿರಣಕತ್ತಲೆಯ ಎದೆಯ ಹಾದುಬಗೆಯುತ್ತದೆ ಬೆಳಕು ಮೂಡುತ್ತದೆ ಬರೀ ಸೂರ್ಯ ಹುಟ್ಟಿದ್ದುಕೋಳಿ ಕೂಗಿದ್ದುಹಕ್ಕಿ ಕಲರವ ಕೇಳಿದ್ದೇ –ಬೆಳಗಾಯಿತೀಗ ಎಂಬರು ಕಾನು ಕತ್ತಲೆಯ ಸರಿಸಿಭೂಮಿ ಬೆಳಗಿದರಷ್ಟೆ ಸಾಕೇಎದೆಯ ಕತ್ತಲು ಬಗೆಯದೆಬೆಳಗಾಗುವುದೆಂತು ಸಹಸ್ರ ಬೆಳಗುಗಳ ಸೂರ್ಯಹೊತ್ತು ತರುವ ಬೆಳಕಿನ ಕಿರಣಗಳಲ್ಲಿಒಂದು ಕಿರಣ ದಕ್ಕಿದರೂ ಸಾಕುನಡು ನೆತ್ತಿಯ ಸುಟ್ಟು ಕೊಂಡುಸಾರ್ಥಕ ಈ ಬದುಕು. **************************









