ಕಾವ್ಯಯಾನ
ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************









