ಕಾವ್ಯಯಾನ
ಗಝಲ್ ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ? ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತ ಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ? ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆ ಬೆದರಿದ ಮನ ದೃಢತೆ ಕಳೆದುಕೊಂಡಿದೆ ಮರಳಿ ಊರ ಸೇರುವುದು ಹೇಗೆ ? ತಿಳಿದಿಲ್ಲ ಹೊಂಚು ಹಾಕಿದ ಹದ್ದಿನಂತೆ ಎಂದೆರಗುವುದೋ ಎಂದು ಮದ್ದಿಲ್ಲದ ಮಹಾಮಾರಿ ಹೆದರಿಸಿದೆ ಮರಳಿ ಊರ ಸೇರುವುದು ಹೇಗೆ ? ********









