ಗಝಲ್
ಗಝಲ್ ಎ. ಹೇಮಗಂಗಾ ಬೆರಳುಗಳು ಯಾಂತ್ರಿಕವಾಗಿ ಹೂ ಕಟ್ಟುತ್ತಿವೆ ಮನಸೆಲ್ಲೋ ಕಳೆದುಹೋಗಿದೆಕಂಗಳು ಬರುವಿಕೆಯನ್ನೇ ನಿರೀಕ್ಷಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಪ್ರೀತಿ, ಪ್ರೇಮದಲ್ಲಿನ ಸುಖವೇನೆಂದು ತೋರಿಸಿಕೊಟ್ಟವನು ನೀನುಸವಿನೆನಪಲಿ ಅಧರಗಳು ಬಿರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ನಿನಗಾಗೇ ಮಿಡಿಯುವ ಹೃದಯದಲಿ ನೂರೆಂಟು ತವಕ, ತಲ್ಲಣಗಳುಧಮನಿಗಳು ನಿನ್ನ ಹೆಸರನ್ನೇ ಜಪಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಕಣ್ರೆಪ್ಪೆಯೊಳು ಅವಿತಿಹ ಕನಸು ನನಸಾಗಲು ಕಾಯುವ ಕಾಯಕವಿದುಕಾಲದ ಘಳಿಗೆಗಳು ತಮ್ಮಂತೆ ಸರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ವರ್ಷಗಳು ಉರುಳಿದರೇನು ಹೇಮ ಳ ಒಲವಿಗೆಂದೂ ಮುಪ್ಪು ಬಾರದುತನುವಿನ ಕಣಕಣಗಳೂ ಹಂಬಲಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ *****************************









