ಕಾವ್ಯಯಾನ
ಗಝಲ್ ವೆಂಕಟೇಶ್ ಚಾ ಭವಿಷ್ಯದ ಬದುಕಿನ ಚಿತ್ರಪಟ ಹಸಿರಾಗಿದೆ ನಾವಿಬ್ಬರೂ ಜೊತೆಯಾದಾಗ ನಿಸರ್ಗವು ಹೊಸ ಬದುಕಿಗೆ ಸಾಕ್ಷಿಯಾಗಿದೆ ನಾವಿಬ್ಬರೂ ಜೊತೆಯಾದಾಗ|| ಬಾಹುಗಳ ಬಂಧನವು ಮತ್ತಷ್ಟು ಗಟ್ಟಿಗೊಂಡಿದೆ ತಂಗಾಳಿಯ ತಂಪಿನಲಿ ಮಣ್ಣಿನ ಕಂಪಿಗೆ ಮನಸ್ಸು ಹೂವಾಗಿದೆ ನಾವಿಬ್ಬರೂ ಜೊತೆಯಾದಾಗ|| ಹೆಜ್ಜೆಗಳು ಜೊತೆಯಾಗಿ ಲಜ್ಜೆಯಿಲ್ಲದೆ ಸುಂದರ ಪಯಣ ಬೆಳೆಸಿವೆ ಮುಂಗಾರು ಮಳೆಗೆ ದಾರಿಯು ಹಸನಾಗಿದೆ ನಾವಿಬ್ಬರೂ ಜೊತೆಯಾದಾಗ || ನಂಬಿಕೆಯ ಕೊಡೆಯೊಂದು ರಕ್ಷಣೆಯ ಹೊಣೆಯನ್ನು ಹೊತ್ತಿದೆ ಬಹುದಿನಗಳ ಕನಸು ಹಣ್ಣಾಗಿ ನನಸಾಗಿದೆ ನಾವಿಬ್ಬರೂ ಜೊತೆಯಾದಾಗ || ಅಗೋ,ಮುಂಬರುವ ದಿನಗಳ ತುಂಬಾ ನೆರಳು ಬೆಳಕಿನ ಚೆಂದದ ಆಟ ‘ಚಾಗಿ’ಯ ಕಲ್ಪನೆಯ ಬದುಕು ನಿಜವಾಗಿದೆ ನಾವಿಬ್ಬರು ಜೊತೆಯಾದಾಗ || ********









