ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಏನಿದ್ದರೇನು…? ಪ್ಯಾರಿಸುತ ಈ ದೇಶಕೆ ಏನಿದ್ದರೇನು ನೀನೇ ಇಲ್ಲವಲ್ಲ ಗಾಂಧಿ….? ಖಾಲಿಯಾದ ಕುರ್ಚಿ,ಗಾದಿ,ಖಾದಿ ಕನ್ನಡಕದ ಕಡ್ಡಿ ಎಲ್ಲವೂ ಬೆತ್ತಲೆಯಾಗಿ ಬೆರಗು ಕಂಡು ಸುಮ್ಮನಾದವು ಕೋರ್ಟು,ಕಛೇರಿ, ಶಾಲಾಕಾಲೇಜುಗಳಲ್ಲಿ ನಿನ್ನ ಭಾವಚಿತ್ರವೊಂದು ಮೊಳೆ ಹೊಡೆದ ಆಸರೆಗೆ ಗೋಡೆಯನೇರಿ ಕುಳಿತು ಅದೇ ನಗುವ ಬೀರಿದೆ ಮಾಲೆಯು ಸುಗಂಧ ಸೂಸಿದೆ ಇಷ್ಟೇ ಸಾಲದು ಇನ್ನು ಇದೆ ಗಮನದಲಿ ಕೇಳು..!! ನೀನಿರುವ ಹಾಳೆಯ ಚೂರೊಂದು ಸಾಕು ಅದರಿಂದಲೇ ಇಲ್ಲೆಲ್ಲವು ಬೆಲೆಯುಳ್ಳವಾಗಿವೆ…! ಆದರೆ…? ನಿನ್ನ ಸಿದ್ದಾಂತ ಹೊತ್ತಿಗೆಯಲಿ ಹೊತ್ತಿ ಕರಕಲಾಗಿದೆ ನೀತಿ ಕಲೆತ ಮಂಗಗಳು ಮರವನೇರಿ ಕುಳಿತು ನೀ ಬರುವ ದಾರಿಗೆ ದಿಟ್ಟಿಸಿವೆ ನಿನ್ನ ಬರುವಿಕೆಯ ಸೂಚನೆಗೆ…! ಗಾಢ ಕತ್ತಲು ಕವಿಯುವ ಮೊದಲೇ ಚಪ್ಪಲಿ ಹೊಲೆಯುವನ ಗಾಡಿ ತಳ್ಳುವವನ ಕಣವೆ ಕೂಲಿಯವನ ಇನ್ನಾರದೋ ಮನೆಯ ಚಿಮುಣಿಗೆ ಇಲ್ಲವೇ ….? ನಿನ್ನದೇ ನಿರ್ಮಿಸಿದ ಸ್ಮಾರಕದ ಬೆಳಕಿಗಾದರೂ ಬಂದು ನಿಲ್ಲು ಉಳಿದವರು, ಉಳ್ಳವರು ನಿನ್ನನ್ನು ಗುರುತಿಸಲು ಸೋಲಬಹುದು…! ಕೆಲವು ಕಡೆ ನಿನ್ನ ಅನುಪಸ್ಥಿತಿ ಅವಮಾನಸಿದೆ ಅದೇ ಘೋಷ ಅದೇ ವೇಷ ಮತ್ತದೇ ರೋಷ ಮತ್ತೊಂದಿಷ್ಟು ಉಪವಾಸಗಳ ಅವಶ್ಯಕತೆಯಲ್ಲಿ ನಿನ್ನ ಬೇಡಿಕೆ ಅಪಾರವಾಗಿದೆ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇನಿಯನೆಂದರೆ… ನಿರ್ಮಲಾ ಆರ್. ಇನಿಯನೆಂದರೆ… ಇರುಳಲಿ ನಗುವ ಚಂದಿರನು ಬೆಳದಿಂಗಳಲಿ ನನ್ನೊಂದಿಗೆ ವಿಹರಿಸುವನು ತಾರೆಗಳ ನಡುವಲಿ ಇರುವನು ತಿಳಿ ಹಾಲಿನಂತಹ ಮನದವನು ಇನಿಯನೆಂದರೆ… ಆಗಸದಲಿ ಸದಾ ಮಿನುಗುವನು ದೂರದಿಂದಲೇ ನನ್ಮನದ ಧನಿಯ ಕೇಳುವನು ನನ್ನಂತರಾಳದ ಮಾತ ಅರಿಯುವನು ಪ್ರತಿ ಇರುಳಲಿ ನನಗಾಗಿ ಬರುವನು ಇನಿಯನೆಂದರೆ… ಕನಸ ಕಾಣುವ ಕಂಗಳಿಗೆ ತಂಪನೆರೆವನು ಕಂಡ ಕನಸಿಗೆ ಬಣ್ಣ ಹಚ್ಚುವನು ಕಣ್ಣ ಕಾಡಿಗೆಯ ಕದಿಯುವನು ಕಚಗುಳಿಯನಿಟ್ಟು ಕೆನ್ನೆಯ ರಂಗೇರಿಸುವನು ಇನಿಯನೆಂದರೆ… ಮನವೆಂಬ ಇಣುಕುವನು ತಿಳಿಯ ನೀರಲಿ ಚಹರೆಯ ಬಿಂಬ ಬಿಟ್ಟವನು ನಾ ಕಾಣುವ ಕನಸಲಿ ಪ್ರತಿದಿನ ಬರುವನು ಕನಸಲಿ ಕನಸಾಗೇ ಉಳಿದವನು. *****************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನನ್ನ ಕವಿತೆ ಅಮೃತಾ ಮೆಹಂದಳೆ ನನ್ನ ಕವಿತೆ,ರಾಗ ತಾಳ ಭಾವವಿಲ್ಲದ ಮೂಕ ಗೀತೆವೀಣೆಗೆ ತ೦ತಿ ಮೀಟದಮುರಳಿಗೆ ಕುಹೂ ಹಾಡದ ಶೋಕಗೀತೆಆದರೊಮ್ಮೊಮ್ಮೆ ಹಿಡಿದಿಟ್ಟರೆ ನಿಲ್ಲುವುದುನಗಿಸಿದರೆ ನಕ್ಕು ಅಳಿಸಿದರೆ ಅಳುವುದುಏಕಾ೦ತಕೆ ಜೊತೆ ಹಾಡಿದರೆ ಭಾವಗೀತೆನನ್ನ ಭಾವದ೦ತೆ… ನನ್ನ ಕವಿತೆ,ಬರಿದಾದ ಬಿಳಿಯಾದ ಹಾಳೆಯ೦ತೆನಡುನಡುವೆ ಕಪ್ಪು ಚುಕ್ಕೆಯಾಗುವುದು ಚಿ೦ತೆಚೆಲ್ಲಿದರೆ ಕಣ್ಣುಕುಕ್ಕುವುದು ಬಣ್ಣಬರಿದು ಮನ ಬಿ೦ಬಿಸುವುದು ಬರೀ ಸೊನ್ನೆಹರಿದರೆ ಚೂರು ಮುಚ್ಚಿಟ್ಟರೆ ನೆನಪುಎಚ್ಚರದಿ ಬಿಡಿಸಿದರೆ ಸೆಳೆವ ಚಿತ್ರದ೦ತೆನನ್ನ ಚಿತ್ತದ೦ತೆ… ನನ್ನ ಕವಿತೆ,ಆಗಸದಿ ತೇಲುವ ಮೋಡದ೦ತೆಕೆಲವೊಮ್ಮೆ ಮೈದು೦ಬಿ ಸುರಿಯುವುದು ವರ್ಷದ೦ತೆಒಮ್ಮೆ ಬಿಳುಪು, ಇನ್ನೊಮ್ಮೆ ಕಪ್ಪುಬಣ್ಣ ಬಣ್ಣ ಹೊಳಪು, ತಾರೆಗಳ ನು೦ಗಿದ೦ತೆಮತ್ತೊಮ್ಮೆ ಕಪ್ಪುಕತ್ತಲೆ ಇದ್ದಕ್ಕಿದ್ದ೦ತೆನನ್ನ ಕನಸಿನ೦ತೆ… ನನ್ನ ಕವಿತೆ,ಮನದ ಕನ್ನಡಿಯ೦ತೆ,ದು:ಖದಲಿ ವಿರಹಗೀತೆಸ೦ತಸದಿ ನಲಿವ ಪ್ರೇಮಗೀತೆಇದಿ೦ದು ಹುಚ್ಚಿ, ನಾಳೆ ವಿರಾಗಿನಾಡಿದ್ದು ನಾಚುವ ಮದುಮಗಳುಆಮೇಲೆ ಪ್ರೌಢೆನೋವಿಗೆ ಜೊತೆಗಾತಿನಲಿವಿನಲ್ಲಿ ಸ೦ಗಾತಿನನ್ನ೦ತೆ… ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ಚೈತ್ರಾ ಶಿವಯೋಗಿಮಠ ಕವಿ ಕೆ.ಎಸ್.ಎನ್ ಕ್ಷಮೆ ಕೋರುತ್ತಾ….. ಬರೆದ ಕವಿತೆಯ ಬಿಚ್ಚಿ, ತುಂಡರಿಸಿ ಕೊಯ್ವರು, ಬರೆದುದರೆಲ್ಲದರಲಿ ಬರಿ ತಪ್ಪ ಕಾಣ್ವರು ಯಾವುದೂ ಸರಿ ಇಲ್ಲ ಎಂದಿವರ ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ!! ಭಾವ ಚಂದವಿರಲು, ಈ ಪದವು ಯಾಕೆ? ಪದಗಳೆಲ್ಲವುಕೆ ಸಮ್ಮತಿಯು ಇರಲು, ಭಾವ ತೀವ್ರತೆಯು ಸಾಕೆ? ಎಲ್ಲದಕೂ ಬರಿ ಕೊಂಕು ಎಲ್ಲದಕು ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ!! ಓದೋಕೆ ಲಯವಿರೆ, ಛಂದೋಬದ್ಧ ಇಲ್ಲಂತೆ! ಪ್ರಾಸವಿಲ್ಲದಿರೆ ಓದಲು ತ್ರಾಸಂತೆ.. ಪ್ರಾಸವಿರೆ, ಪ್ರಾಸಕ್ಕೆ ತ್ರಾಸೆಂದು ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ! ಅರ್ಥವಾಗದಿರೆ, ಅರೆ ಇದೆಂಥ ಕವಿತೆ? ಅರ್ಥವಾದರೆ, ಧ್ವನಿಯಿಲ್ಲ ಅದು ಬರಿ ವಾಚ್ಯವಂತೆ! ಎಲ್ಲದಕು ಇವರದು ಅರ್ಥವಿಲ್ಲದ ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ! ಪತ್ರಿಕೆಗೆ ಕಳಿಸಿ ಪ್ರಕಟಿಸಿದರೆ, ಕೀರ್ತಿಯ ಹುಚ್ಚಂತೆ ಈಗೆಲ್ಲ ಬರೆಯುವವರ ಇವರು ಮೆಚ್ಚರಂತೆ! ಬರೆದುದೆಲ್ಲದಕು ಬರೀ ಟಿಪ್ಪಣಿ-ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ! **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ಹುಟ್ಟುವುದಿಲ್ಲ ಸ್ಮಿತಾ ರಾಘವೇಂದ್ರ ಆತ್ಮವೆಂಬ ಅನೂಹ್ಯ ಭಾವಗರ್ಭಗುಡಿಯ ಹೊಕ್ಕು ಹಲವು ಕವಿತೆಗಳು ತಣ್ಣಗೆ ಹೊರ ನಡೆಯುತ್ತವೆ ಕವಿತೆಯ ಹಡೆದ ಮೌನದಂತೆ! ನಭೋಮಂಡಲವ ತಿರು ತಿರುಗಿ ವಿರಮಿಸಿ ಉಸುರಿದಾಗೊಂದು- ನಿಟ್ಟುಸಿರು: ಆತ್ಮಕ್ಕೆ ದಕ್ಕಿದ್ದು ಕಾಯಕ್ಕೆ ದಕ್ಕುವದಿಲ್ಲ! ಅಣು ರೇಣುವಿನಲಿ ಪಲ್ಲವಿಸಿ ತಲೆದೂಗಿ ರಿಂಗಣಿಸಿ ಒಳಗೊಳಗೇ ಭೋರ್ಗರೆದು ಮಂಜುಗಟ್ಟಿದ ಕಣ್ಣ ತೊರೆದು ಅರಿಯದೇ ಉದುರಿದ ಕವಿತೆಯ ಕರುಣೆ- ತೊರೆದ ನಿರಾಳ ಬದುಕಿನ ಕೊನೆಯ ಕವಿತೆಗೆ ಮಾತೂ ಇರುವುದಿಲ್ಲ ಮೂಕ ಮರ್ಮರವೊಂದರ ಅಂತರಾತ್ಮ: ಸೋತ ಕಣ್ಣುಗಳಿಂದ ಸರಿದ ಸುಂದರ ನೋಟ. ಸಾವಿನ ಆಲಿಂಗನ, ಆಲಿಂದ ದಾಟಿ ತಿರುಗಿಯೂ ನೋಡದೇ ನಡೆದ ಕರುಳ ಹಿಂಡಿದ ಕವಿತೆ, ಆತ್ಮ ಸಂಗಾತ ಬಿಂದುವೊಂದಕೆ ಬಂದು ಸೇರಿದ ಭಾವ- ಬೃಹದಾಕಾರ ಚದುರಿ- ವಿವಿಧ ರೂಪಕ ಸೇರಿ ಜಗದ ತುಂಬಾ ಪುಟ್ಟ ಪುಟ್ಟ ಕವಿತೆಯ ಧಾರಣ! ಹುಟ್ಟೂ ಇಲ್ಲದ ಸಾವೂ ಇಲ್ಲದ ನಿರಂತರ ಚಲನೆ ಜಗದ ಏಕೈಕ ಕವಿತೆ ಸಕಲವನೂ ಸಹಿಸುತ್ತದೆ! ಕವಿತೆ ಹುಟ್ಟುವುದಿಲ್ಲ ಸ್ವಯಂ ಹೆರುತ್ತದೆ!! *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದಕ್ಕಿತೆಷ್ಟು ಪ್ರೀತಿ ವಿನುತಾ ಹಂಚಿನಮನಿ (ವೆಲೆಂಟಾಯಿನ್ ಡೇ’ದ ಸಂಭ್ರಮ ಮುಗಿದಾಯ್ತು ಅದರ ಉತ್ತರಾರ್ಧ ಹೀಗೂ ಇರಬಹುದೇ …….) ಲಕ್ಷ್ಮಣ ರೇಖೆ ದಾಟಿದ ಒಂದು ತಪ್ಪಿಗೆ ದಕ್ಷಿಣೆ ತೆರಬೇಕಾಯ್ತು ನೂರೊಂದು ತೆಪ್ಪಗೆ ರಕ್ಷಣೆ ಇಲ್ಲದಾಯ್ತು ಕಾಡಿನಲಿ ತಾಯ್ತನಕೆ ದಕ್ಷ ಸಹನೆ ತ್ಯಾಗದ ಮೂರುತಿ ಸೀತೆಗೆ ಅಕ್ಷಯವಾದ ವನವಾಸ ಪತಿಯ ದೇಣಿಗೆ ಶ್ರೇಷ್ಠ ರಾಧೆಯ ಪ್ರೀತಿಗೆ ಹಂಬಲಿಸಿದವ ಅಷ್ಟ ಮಹಿಷಿಯರಿಗೆ ವಲ್ಲಭನಾದ ಗೋಕುಲದ ಕೃಷ್ಣ ಗೋಪಿಲೋಲನೀತ ದ್ವಾರಕಾಧೀಶನಾಗಿ ಬಾಲ್ಯದ ಗೆಳತಿಯ ಮರೆತ ಪದ್ಮಪತ್ರದ ಜಲಬಿಂದುವಾಗಿ ರಾಧೆಗೆ ದೊರೆತ ಐವರು ಶೂರ ಪತಿಗಳ ಧರ್ಮದ ಹಠಕೆ ದ್ರೌಪದಿಯ ಎದೆಯಾಯ್ತು ಪಗಡೆಯ ಪಠ ಅವಮಾನ ವನವಾಸಗಳೇ ಕೊಡುಗೆ ಸೂರ್ಯ ಚಂದ್ರರೆ ಸಾಕ್ಷಿ ಶೋಷಣೆಗೆ ಅಗ್ನಿಪುತ್ರಿಯ ಜೀವ ಉರಿದ ಬವಣೆಗೆ ಸಲೀಮನ ಪ್ರೇಮದ ಪುತ್ಥಳಿ ಅನಾರ್ಕಲಿ ಅಕಬರನ ಅಂತಸ್ತಿಗಾದಳು ನರಬಲಿ ಜೀವಂತ ಹುಗಿಸಿದ ಅವಳ ಮಹಾಬಲಿ ಜಹಾಂಗೀರನಿಗೆ ಚಕ್ರವರ್ತಿಯ ಪಟ್ಟ ಪ್ರೀತಿಯ ಸಮಾಧಿಯ ಮೇಲೆ ಕಟ್ಟಿ ಶಹಾಜಾನನ ಪ್ರೇಮದಫಲದ ಸೊತ್ತು ಹದಿಮೂರು ಬಾರಿ ಗರ್ಭ ಹೊತ್ತು ಕೊನೆಗೆ ಮಣ್ಣಾದಳು ಹೆತ್ತು ಹೆತ್ತು ತಾಜಮಹಲ ಅವನ ಪ್ರೀತಿಯ ಕುರುಹು ಮುಮ್ತಾಜಳ ಬಲಿದಾನದ ಗುರುತು ಆದಿಲಶಾಹಿಯ ಪಿಸುಮಾತಿನ ಬಲೆಗೆ ಮೊದಲು ಮರುಳಾದ ರಂಭ ಒಲಿದು ಜೀವತೆತ್ತು ಮಲಗಿದಳು ಗೋಲಗುಮ್ಮಜದಿ ಕಾದಿಹಳು ಶತಶತಮಾನ ಗುಮ್ಮಟದಿ ಬಾದಶಹನ ಪ್ರೇಮ ನಿವೇದನೆಗೆ ಒಲವಿನ ನಾಟಕದ ಅಂಕದ ಪರದೆ ಜಾರಿ ನಲುಗಿತು ನಾರಿಯ ಸಮ್ಮಾನ ಬಾರಿಬಾರಿ ತಿಳಿಯದಾದೆಯಾ ನೀ ಜಗದ ನೀತಿ ನಿನ್ನ ಪ್ರೇಮ ತ್ಯಾಗಗಳ ಅಳೆದ ರೀತಿ ನಿನಗೆ ಇದರಲಿ ದಕ್ಕಿತೆಷ್ಟು ಪ್ರೀತಿ? *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ರಾತ್ರಿ ಮೆರವಣಿಗೆ ಪ್ಯಾರಿಸುತ ಹಗಲು ಸರಿದು ಇರುಳು ಕವಿದು ಕಣ್ಣು ಕನಸುಬೇಡಿದೆ ಹೃದಯ ಕಥೆ ಕೇಳಲು ತಣಿವರೆಸಿದೆ ಬೆಚ್ಚಗೆ ಹೊದಿಕೆ ಮೈಗೆ ಮುಡಿಯಲಿನ್ನು ರಾತ್ರಿ ಜೊತೆ ಮೆರವಣಿಗೆ…. ಚುಕ್ಕಿ ಚಂದ್ರನನ್ನು ಓಲೈಸುವಂತೆ ಚಂದ್ರಕಾಂತಿ ಸೂರ್ಯಪ್ರಭೆಯನ್ನು ನಂಬಿರುವಂತೆ ನಾನು ನಿನ್ನನ್ನು ಮಾತ್ರ ನಂಬಿದ್ದೇನೆ ಇಲ್ಲಿ ನನ್ನ ನಿನ್ನ ನಂಬಿಕೆ ಮುಖ್ಯವಲ್ಲ ಪ್ರೀತಿ ಜೀವಂತಿಕೆ ಅಷ್ಟೇ ಮುಖ್ಯವಾಗುವದು…! ಬಿಕೋ ಅನ್ನುತ್ತಿರುವ ರೋಡಿನಲ್ಲಿ ಬೀದಿದೀಪಗಳ ಅಲಂಕಾರ ದಟ್ಟ ವಾಹನಗಳ ವಾದ್ಯಮೇಳ ಅಕ್ಷತೆ ಹಾಕುವಂತೆ ರಪ ರಪ ಮಳೆಯ ಹನಿ ದೀಪದೂಳುಗಳ ಗುಯ್ಯಗುಟ್ಟುವ ಮಂತ್ರಘೋಷ ಅಪ್ಪಟ ಮದುವೆ ಮನೆಯಂತೆ ನೋಟಕ್ಕೆ ಸಿಗುವ ಈ ರಾತ್ರಿ ಅಧ್ಭುತ ಸೃಷ್ಟಿಸಿದೆ…! ಹೀಗೆ ಬಂದು ಹಾಗೆ ಹೋಗುವ ಕನಸುಗಳ ಮೇಲೆ ಅದೇನು ಕವಿತೆ ಬರೆಯಲಿ ಅದೇನೇ ಬರೆದರೂ ಅವಳ ಹಾಜರಾತಿ ಇರುವದು ಅಲ್ಲೊಮ್ಮೆ ಇಲ್ಲೊಮ್ಮೆ ಬರುವ ಸುಳಿವು ಕೊಡುವನೀನು , ಅದೆಂತಹ ಮಾಯಗಾತಿ…! ನನ್ನೆಲ್ಲ ರಾತ್ರಿಯನು ಧಾರೆಯರೆದರೂ ಇನ್ನೂ ಮೀನಾಮೇಷ ಮಾಡುತ್ತಿರುವೆ ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಘನಿತ ಡಾ.ಗೋವಿಂದ ಹೆಗಡೆ ಘನಿತ ಇಬ್ಬನಿಯಲ್ಲಿ ತೊಯ್ದ ಪುಲಕದಲ್ಲಿ ಹೂವು ಇನ್ನೇನು ಆರಿಹೋಗುವ ಆತಂಕದಲ್ಲಿ ಇಬ್ಬನಿ ಬಿಂದು ನೋಡುತ್ತ ನಿಂತ ನಾನು-ನೀನು ಇನ್ನೇನು ಇದೇ ಇಬ್ಬನಿ ನಿನ್ನ ಕಂಗಳ ತೋಯಿಸುತ್ತದೆ ನಿನ್ನ ಮಡಿಲಿಗೆ ನನ್ನ ತಲೆಗೆ ಅವಿನಾ ಸಂಬಂಧ ಅದಕ್ಕೆ ಗೊತ್ತೇ ಈಗ ನೀನು ಸೆಳೆಯುವೆ ಮಡಿಲಿಗೆ ತಬ್ಬಿ ಮುದ್ದಿಸುವೆ ಅದುರುವ ತುಟಿಗಳಲ್ಲಿ “ನಾನಿದೀನಿ ಕಣೋ” ಹೇಳುವ ಹೇಳದಿರುವ ಸಂಭವದಲ್ಲಿ ತಾರೆಗಳು ಕಂಪಿಸಿವೆ ಅಲೆಗಳು ಮರ್ಮರ ನಿಲ್ಲಿಸಿವೆ ಎಷ್ಟೊಂದು ದೇಶಕಾಲಗಳು ಈ ಒಂದು ಕ್ಷಣಕ್ಕಾಗಿ ಮಿಡಿದಿವೆ ತುದಿಗಾಲಲ್ಲಿ, ಮೊರೆದಿವೆ ಇದೇ ಒಂದು ಚಣ ಅದೇ ಇಬ್ಬನಿಯ ಒಂದೇ ಒಂದು ಬಿಂದು ಜಾರಿ ಹನಿಯಲು ನಿನ್ನ ರೆಪ್ಪೆಯ ಅಂಚಿನಿಂದ ನನ್ನ ಎದೆಗೆ ಘನೀಭವಿಸುತ್ತದೆ ಆಗ ಕಾಲದ ಈ ಬಿಂದು ಅನಂತಕ್ಕೆ ಸಲ್ಲುವ ಚಿತ್ರವಾಗಿ ಹಾಗಲ್ಲದೆ ಮುಕ್ತಿಯೆಲ್ಲಿ ಹೂವಿಗೆ ಇಬ್ಬನಿಗೆ ನನಗೆ-ನಿನಗೆ. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ವಸಂತನಾಗಮನ ವಿಜಯ ನಿರ್ಮಲ ವಸಂತನಾಗಮನ ವನರಾಣಿ ನವಕನ್ಯೆಯಾಗಿಹಳು ಹರೆಯದಿ ಮೈದುಂಬಿ ನಗುತಿಹಳು ಭೂದೇವಿ ಸಂಭ್ರಮದಿ ನಲಿದಿಹಳು ವನಬನಗಳೆಲ್ಲ ಹೊಸ ಚಿಗುರು ತುಂಬಿ ಗಿಡಮರಗಳೆಲ್ಲ ಬಣ್ಣ ಬಣ್ಣದ ಹೂ ಗುಚ್ಛದಲಿ ತುಂಬಿ ತುಳುಕುತಿವೆ ಮಾವು ಬೇವು ಜೊತೆಯಾಗಿ ತೋರಣ ಕಟ್ಟಿ ವನವನೆಲ್ಲ ಸಿಂಗರಿಸುತಿದೆ ಮಾಮರದಂದಕೆ ಮನಸೋತ ಕೋಗಿಲೆ ಮಧುರವಾಗಿ ಕುಹೂ ಕುಹೂ ಎನುತಿದೆ ಕಾನನವೆಲ್ಲ ಹಚ್ಚ ಹಸುರಾಗಿ ಸೌಂದರ್ಯ ತುಂಬಿಕೊಂಡು ಹೊಸ ಗಾನಕೆ ತಲೆದೂಗಿವೆ ಹಕ್ಕಿ ಪಕ್ಷಿಗಳು ಇಂಪಾದ ದನಿಯಲಿ ಕೂಗಾಡುತ ತಮ್ಮ ಗೂಡುಗಳಲಿ ಸಂತಸದಿ ಮೆರೆಯುತ ಹಬ್ಬಕೆ ಸಜ್ಜಾಗುತಿವೆ ತಮ್ಮದೇ ಶೈಲಿಯಲಿ ಶಿಶಿರದಲಿ ಸೋತು ಹಣ್ಣೆಲೆಗಳೆಲ್ಲ ಉದುರಿ ಮರಗಳೆಲ್ಲ ಬೋಳಾಗಿ ತುಂತುರು ಹನಿಗಳ ಸಿಂಚನದಲಿ ಮತ್ತೆ ಹೊಸ ಹಸಿರು ಚಿಗುರಲು ಬಂದ ನೋಡಿ ಋತುಗಳ ರಾಜ ವಸಂತ ಹೊತ್ತು ತಂದ ಮತ್ತೆ ಚೈತ್ರ ವನು ಧರೆಗೆಲ್ಲ ನೀಡಿ ಚೈತನ್ಯವನು ವನ ಬನವೆಲ್ಲ ಚಿಗುರಿ ಸಿಂಗಾರದಲಿ ಸೆಳೆಯುತಿದೆ ನೋಡಲಿ ಪ್ರಕೃತಿಯ ಮಡಿಲು ಪ್ರತಿ ಜೀವದಲ್ಲೂ ಆರಾಧನೆ ತುಂಬುತ ರಸಿಕ ಮನಗಳಲಿ ಹೊಸ ಬಯಕೆಗಳ ಸ್ಪುರಿಸುತಿದೆ ನೋಡಲ್ಲಿ ಸೃಷ್ಟಿ ಪಾಲಕನ ಆಗಮನವೇ ವಸಂತ ನಳನಳಿಸುತಿದೆ ವನವೆಲ್ಲ ತುಂಬಿ ಹೂಗಳಿಂದ ಮಲ್ಲಿಗೆ ಸಂಪಿಗೆ ಹೂಗಳರಲಿ ಚೆಲ್ಲಿದೆ ಕಂಪನು ಹರಡುತಿದೆ ವನದ ತುಂಬೆಲ್ಲ ಜನಮನದಲಿ ತುಂಬುತ ಹೊಸ ನವೋಲ್ಲಾಸವನು ಆಸ್ವಾದಿಸುತ್ತಾ ತೊಡಗಲು ಪ್ರೇರೇಪಿಸುವಂತಿದೆ ಪ್ರೇಮೋಲ್ಲಾಸದಲಿ ಪ್ರೇಮಿಗಳನು ಮೂಡುತಿದೆ ಹೊಸ ಚಿಗುರಿನಂದದಿ ಕವಿ ಮನದಲಿ ಹೊಸ ಬಗೆಯ ನವ ಕಾವ್ಯದ ಸೃಷ್ಟಿಗೆ ಹಾಕಿ ಮುನ್ನುಡಿಯನು ವರ್ಣಿಸಿ ಪದಗಳಲಿ ವಸಂತನಾಗಮನವನು ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕಾಮದಹನ ಗೌರಿ. ಚಂದ್ರಕೇಸರಿ ಕಾಮ ದಹನ ಒಡಲು ಬರಿದು ಮಾಡಿಕೊಂಡ ಕಣ್ಣೀರ ಕಡಲು ಬತ್ತಿಸಿಕೊಂಡ ನಿಟ್ಟುಸಿರಲ್ಲೇ ನೋವ ನುಂಗಿಕೊಂಡವಳ ಜೋಳಿಗೆಗೆ ನ್ಯಾಯ ಬಂದು ಬಿದ್ದಿದೆ ಅಂತೂ ಕಾಮ ದಹನವಾಯಿತು. ಏಳು ವರುಷಗಳ ಹೋರಾಟ, ಗೋಳಾಟ ಸುತ್ತಿ, ಸವೆಸಿದ ಮೆಟ್ಟುಗಳೆಷ್ಟೋ ಹತ್ತಿ ಇಳಿದ ಮೆಟ್ಟಿಲುಗಳೆಷ್ಟೋ ಕರುಣೆ ಬದುಕಿದೆ ಇನ್ನೂ ಕಪ್ಪು ಪಟ್ಟಿಯ ಹಿಂದಿರುವ ಕಣ್ಣುಗಳಲಿ                   ಅಂತೂ ಕಾಮ ದಹನವಾಯಿತು. ಬಾಯ ಪಸೆ ಇಂಗುವವರೆಗೂ ಎದೆಯ ಗೂಡ ಗಾಳಿ ಇರುವವರೆಗೂ ನ್ಯಾಯಕ್ಕಾಗಿ ಅಂಗಲಾಚಬೇಕು ದಶಕಗಳವರೆಗೆ ಕಾಯಬೇಕು ಅಂತೂ ಕಾಮ ದಹನವಾಯಿತು ತಮ್ಮ ತಾವು ದಹಿಸಿಕೊಳ್ಳಬೇಕು ಸೀತೆಯರು ವನವಾಸ ಪಡಬೇಕು ದ್ರೌಪದಿಯರು ಸಾಬೀತು ಪಡಿಸಲು ಅತ್ಯಾಚಾರಗಳನ್ನು ದೇಹದ ಮೇಲಾದ ಹಲ್ಲಿನ ರುಜುಗಳ ಕಾಪಿಟ್ಟುಕೊಳ್ಳಬೇಕು ಸಾಕ್ಷಿಗಾಗಿ ಅಂತೂ ಇಂತೂ ಕಾಮ ದಹನವಾಯಿತು *******                    

ಕಾವ್ಯಯಾನ Read Post »

You cannot copy content of this page

Scroll to Top