ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಘನಿತ ಡಾ.ಗೋವಿಂದ ಹೆಗಡೆ ಘನಿತ ಇಬ್ಬನಿಯಲ್ಲಿ ತೊಯ್ದ ಪುಲಕದಲ್ಲಿ ಹೂವು ಇನ್ನೇನು ಆರಿಹೋಗುವ ಆತಂಕದಲ್ಲಿ ಇಬ್ಬನಿ ಬಿಂದು ನೋಡುತ್ತ ನಿಂತ ನಾನು-ನೀನು ಇನ್ನೇನು ಇದೇ ಇಬ್ಬನಿ ನಿನ್ನ ಕಂಗಳ ತೋಯಿಸುತ್ತದೆ ನಿನ್ನ ಮಡಿಲಿಗೆ ನನ್ನ ತಲೆಗೆ ಅವಿನಾ ಸಂಬಂಧ ಅದಕ್ಕೆ ಗೊತ್ತೇ ಈಗ ನೀನು ಸೆಳೆಯುವೆ ಮಡಿಲಿಗೆ ತಬ್ಬಿ ಮುದ್ದಿಸುವೆ ಅದುರುವ ತುಟಿಗಳಲ್ಲಿ “ನಾನಿದೀನಿ ಕಣೋ” ಹೇಳುವ ಹೇಳದಿರುವ ಸಂಭವದಲ್ಲಿ ತಾರೆಗಳು ಕಂಪಿಸಿವೆ ಅಲೆಗಳು ಮರ್ಮರ ನಿಲ್ಲಿಸಿವೆ ಎಷ್ಟೊಂದು ದೇಶಕಾಲಗಳು ಈ ಒಂದು ಕ್ಷಣಕ್ಕಾಗಿ ಮಿಡಿದಿವೆ ತುದಿಗಾಲಲ್ಲಿ, ಮೊರೆದಿವೆ ಇದೇ ಒಂದು ಚಣ ಅದೇ ಇಬ್ಬನಿಯ ಒಂದೇ ಒಂದು ಬಿಂದು ಜಾರಿ ಹನಿಯಲು ನಿನ್ನ ರೆಪ್ಪೆಯ ಅಂಚಿನಿಂದ ನನ್ನ ಎದೆಗೆ ಘನೀಭವಿಸುತ್ತದೆ ಆಗ ಕಾಲದ ಈ ಬಿಂದು ಅನಂತಕ್ಕೆ ಸಲ್ಲುವ ಚಿತ್ರವಾಗಿ ಹಾಗಲ್ಲದೆ ಮುಕ್ತಿಯೆಲ್ಲಿ ಹೂವಿಗೆ ಇಬ್ಬನಿಗೆ ನನಗೆ-ನಿನಗೆ. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ವಸಂತನಾಗಮನ ವಿಜಯ ನಿರ್ಮಲ ವಸಂತನಾಗಮನ ವನರಾಣಿ ನವಕನ್ಯೆಯಾಗಿಹಳು ಹರೆಯದಿ ಮೈದುಂಬಿ ನಗುತಿಹಳು ಭೂದೇವಿ ಸಂಭ್ರಮದಿ ನಲಿದಿಹಳು ವನಬನಗಳೆಲ್ಲ ಹೊಸ ಚಿಗುರು ತುಂಬಿ ಗಿಡಮರಗಳೆಲ್ಲ ಬಣ್ಣ ಬಣ್ಣದ ಹೂ ಗುಚ್ಛದಲಿ ತುಂಬಿ ತುಳುಕುತಿವೆ ಮಾವು ಬೇವು ಜೊತೆಯಾಗಿ ತೋರಣ ಕಟ್ಟಿ ವನವನೆಲ್ಲ ಸಿಂಗರಿಸುತಿದೆ ಮಾಮರದಂದಕೆ ಮನಸೋತ ಕೋಗಿಲೆ ಮಧುರವಾಗಿ ಕುಹೂ ಕುಹೂ ಎನುತಿದೆ ಕಾನನವೆಲ್ಲ ಹಚ್ಚ ಹಸುರಾಗಿ ಸೌಂದರ್ಯ ತುಂಬಿಕೊಂಡು ಹೊಸ ಗಾನಕೆ ತಲೆದೂಗಿವೆ ಹಕ್ಕಿ ಪಕ್ಷಿಗಳು ಇಂಪಾದ ದನಿಯಲಿ ಕೂಗಾಡುತ ತಮ್ಮ ಗೂಡುಗಳಲಿ ಸಂತಸದಿ ಮೆರೆಯುತ ಹಬ್ಬಕೆ ಸಜ್ಜಾಗುತಿವೆ ತಮ್ಮದೇ ಶೈಲಿಯಲಿ ಶಿಶಿರದಲಿ ಸೋತು ಹಣ್ಣೆಲೆಗಳೆಲ್ಲ ಉದುರಿ ಮರಗಳೆಲ್ಲ ಬೋಳಾಗಿ ತುಂತುರು ಹನಿಗಳ ಸಿಂಚನದಲಿ ಮತ್ತೆ ಹೊಸ ಹಸಿರು ಚಿಗುರಲು ಬಂದ ನೋಡಿ ಋತುಗಳ ರಾಜ ವಸಂತ ಹೊತ್ತು ತಂದ ಮತ್ತೆ ಚೈತ್ರ ವನು ಧರೆಗೆಲ್ಲ ನೀಡಿ ಚೈತನ್ಯವನು ವನ ಬನವೆಲ್ಲ ಚಿಗುರಿ ಸಿಂಗಾರದಲಿ ಸೆಳೆಯುತಿದೆ ನೋಡಲಿ ಪ್ರಕೃತಿಯ ಮಡಿಲು ಪ್ರತಿ ಜೀವದಲ್ಲೂ ಆರಾಧನೆ ತುಂಬುತ ರಸಿಕ ಮನಗಳಲಿ ಹೊಸ ಬಯಕೆಗಳ ಸ್ಪುರಿಸುತಿದೆ ನೋಡಲ್ಲಿ ಸೃಷ್ಟಿ ಪಾಲಕನ ಆಗಮನವೇ ವಸಂತ ನಳನಳಿಸುತಿದೆ ವನವೆಲ್ಲ ತುಂಬಿ ಹೂಗಳಿಂದ ಮಲ್ಲಿಗೆ ಸಂಪಿಗೆ ಹೂಗಳರಲಿ ಚೆಲ್ಲಿದೆ ಕಂಪನು ಹರಡುತಿದೆ ವನದ ತುಂಬೆಲ್ಲ ಜನಮನದಲಿ ತುಂಬುತ ಹೊಸ ನವೋಲ್ಲಾಸವನು ಆಸ್ವಾದಿಸುತ್ತಾ ತೊಡಗಲು ಪ್ರೇರೇಪಿಸುವಂತಿದೆ ಪ್ರೇಮೋಲ್ಲಾಸದಲಿ ಪ್ರೇಮಿಗಳನು ಮೂಡುತಿದೆ ಹೊಸ ಚಿಗುರಿನಂದದಿ ಕವಿ ಮನದಲಿ ಹೊಸ ಬಗೆಯ ನವ ಕಾವ್ಯದ ಸೃಷ್ಟಿಗೆ ಹಾಕಿ ಮುನ್ನುಡಿಯನು ವರ್ಣಿಸಿ ಪದಗಳಲಿ ವಸಂತನಾಗಮನವನು ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕಾಮದಹನ ಗೌರಿ. ಚಂದ್ರಕೇಸರಿ ಕಾಮ ದಹನ ಒಡಲು ಬರಿದು ಮಾಡಿಕೊಂಡ ಕಣ್ಣೀರ ಕಡಲು ಬತ್ತಿಸಿಕೊಂಡ ನಿಟ್ಟುಸಿರಲ್ಲೇ ನೋವ ನುಂಗಿಕೊಂಡವಳ ಜೋಳಿಗೆಗೆ ನ್ಯಾಯ ಬಂದು ಬಿದ್ದಿದೆ ಅಂತೂ ಕಾಮ ದಹನವಾಯಿತು. ಏಳು ವರುಷಗಳ ಹೋರಾಟ, ಗೋಳಾಟ ಸುತ್ತಿ, ಸವೆಸಿದ ಮೆಟ್ಟುಗಳೆಷ್ಟೋ ಹತ್ತಿ ಇಳಿದ ಮೆಟ್ಟಿಲುಗಳೆಷ್ಟೋ ಕರುಣೆ ಬದುಕಿದೆ ಇನ್ನೂ ಕಪ್ಪು ಪಟ್ಟಿಯ ಹಿಂದಿರುವ ಕಣ್ಣುಗಳಲಿ                   ಅಂತೂ ಕಾಮ ದಹನವಾಯಿತು. ಬಾಯ ಪಸೆ ಇಂಗುವವರೆಗೂ ಎದೆಯ ಗೂಡ ಗಾಳಿ ಇರುವವರೆಗೂ ನ್ಯಾಯಕ್ಕಾಗಿ ಅಂಗಲಾಚಬೇಕು ದಶಕಗಳವರೆಗೆ ಕಾಯಬೇಕು ಅಂತೂ ಕಾಮ ದಹನವಾಯಿತು ತಮ್ಮ ತಾವು ದಹಿಸಿಕೊಳ್ಳಬೇಕು ಸೀತೆಯರು ವನವಾಸ ಪಡಬೇಕು ದ್ರೌಪದಿಯರು ಸಾಬೀತು ಪಡಿಸಲು ಅತ್ಯಾಚಾರಗಳನ್ನು ದೇಹದ ಮೇಲಾದ ಹಲ್ಲಿನ ರುಜುಗಳ ಕಾಪಿಟ್ಟುಕೊಳ್ಳಬೇಕು ಸಾಕ್ಷಿಗಾಗಿ ಅಂತೂ ಇಂತೂ ಕಾಮ ದಹನವಾಯಿತು *******                    

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯದಿನಕ್ಕೊಂದು ಕವಿತೆ ರೇಖಾ ವಿ.ಕಂಪ್ಲಿ ಕವಿತೆ ನಿನಗೊಂದು ಖಲಾಮು ಇದ್ದರೆ ಸಾಕೆ ಇಲ್ಲ ಕವಿ ಬೇಕೇ? ಬರಿ ಕವಿ ಇದ್ದರೆ ಸಾಕೆ ಇಲ್ಲ ಭಾವನೆ ಬೇಕೇ? ಭಾವನೆಯೊಂದಿದ್ದರೆ ಸಾಕೆ ಇಲ್ಲ ಭಾಷೆ ಬೇಕೇ? ಭಾಷೆ ಒಂದು ಇದ್ದರೆ ಸಾಕೆ ಬರವಣಿಗೆ ಬೇಕೇ? ಬರಿ ಬರವಣಿಗೆ ನಿನಗೆ ಸಾಕೆ ಇಲ್ಲ ಓದುಗನೊಬ್ಬ ಬೇಕೇ? ಓದುಗನೊಬ್ಬ ಇದ್ದರೆ ಸಾಕೆ? ಕವಿತೆ ಕೊನೆಯಲಿ ಹಾಡಿ ಹೇಳಿತು ಮೆಲ್ಲಗೆ ಎಲ್ಲವು ಬೇಕು ಎನಗೆ..

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ವೈರಸ್ ಅಶ್ವಥ್ ಏನೋ ಬಲ್‌ಶಾಲಿ ಅನ್ಕೊಂಡ್‌ಬುಟ್ಟು ಬೇಕಾದ್ದೆಲ್ಲ ಮಾಡ್ಕೊಂಡ್‌ಬುಟ್ಟು ಭೂತಾಯ್‌ ಮುಂದ್‌ ಗತ್ತು ಗಮ್ಮತ್ತು ವೈರಸ್‌ ಬಂತು ಮಂಡಿಯೂರು ಅಂತು ನವರಂಗೀ ಮಾಧ್ಯಮ್‌ಗಳಾಗೆ ಪಟತೆಕ್ಕಂಡ್‌ ವಾಲಾಡುವಾಗೇ ಕಣ್ಣಿಗ್‌ ಕಾಣ್ದಿರ್ ಅಣುವೊಂದ್‌ ಬಂತು ಕೈಕಾಲ್‌ ಕಟ್ಕಂಡ್‌ ಮನೆಲ್ಕೂರ್‌ ಅಂತು ಜಗತ್ತೆಲ್ಲಾ ಚಿಂದಿ ಚೂರಾದ್ರೂನೇ ಕಣ್ಣಾಗ್‌ ಕಣ್ಣಿಟ್‌ ನೋಡೋದಾಗ್ದೇನೆ ಕಿಂಚಿತ್‌ ಅನ್ನೋ ವೈರಸ್ಸೇ ಬರ್‌ಬೇಕಾತು ನಮ್‌ ಸಂಬಂಧ್‌ಗೋಳ್‌ ಏನಂತ ತಿಳ್‌ಸ್ತು ನಮ್‌ ಕೈತೊಳ್ಕೊಂಡ್ರಷ್ಟ್‌ ಸಾಕಾಗಲ್ಲ ಮನ್ಸ್‌ ಉಜ್ಜುಜ್ಜಿ ತೊಳ್ಕೊಬೇಕೆಲ್ಲ ವದ್ದ್‌ ವೋಡ್ಸೋಕ್‌ ಮುಂಚೆ ವೈರಸ್ಸನ್ನ ಎತ್ತ್‌ ಹಿಡೀಬೇಕಾಗೈತೆ ಮನ್ಸತ್ವಾನಾ ********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ದಿನಕ್ಕೊಂದು ಕವಿತೆ ನನ್ನೊಳಗೊಂದು ನಾನು ಅಂಜನಾ ಹೆಗಡೆ ನಾ ಹುಟ್ಟುವಾಗಲೇ ನನ್ನೊಂದಿಗೆ ಹುಟ್ಟಿದ ಕವಿತೆಯೊಂದು ಇದ್ದಕ್ಕಿದ್ದಂತೆ ಎದುರಿಗೆ ಬಂದು ನಿಂತಿತು ಥೇಟು ನನ್ನಂತೆಯೇ ಕಾಣುವ ಅದಕ್ಕೊಂದು ಉದ್ದನೆಯ ಬಾಲ…. ನಾ ಹೋದಲ್ಲೆಲ್ಲ ನನ್ನದೇ ವೇಗದಲ್ಲಿ ಹಿಂದೆಮುಂದೆ ಸುತ್ತುತ್ತಿತ್ತು ಬಾಲದ ಸಮೇತ ಉದ್ದಜಡೆಯ ಹೆಣ್ಣೊಂದು ಹೆಗಲೇರಿದ ಭಾರ ಅಯ್ಯೋ!! ಹೆಣ್ಣುಕವಿತೆಯೇ ಹೌದು…. ಸುಲಿದ ಬೆಳ್ಳುಳ್ಳಿಗಳನ್ನೆಲ್ಲ ಪ್ಲಾಸ್ಟಿಕ್ಕಿನ ಮೇಲಿಟ್ಟು ಜೋರಾಗಿ ಜಜ್ಜಿದೆ ಬಾಲವೂ ಅಲ್ಲಾಡಿತು ಯಾವ ಕೋಪಕ್ಕೆ ಬೆಳ್ಳುಳ್ಳಿ ಬಲಿ!! ಬಾಲ ನಕ್ಕಂತೆ ಭಾಸವಾಗಿ ಸಣ್ಣದೊಂದು ಅವಮಾನ ಈರುಳ್ಳಿಗೆ ಕರಗಿದ ಕಣ್ಣೀರು ಬಾಲದ ತುದಿಗೆ ಅಂಟಿಕೊಂಡಿತು ಅಲ್ಲಾಡುತ್ತಿಲ್ಲ…. ಕೊಂಚ ಕರಗಿದೆ ಯಾವ ತಾಪ ಯಾರ ಎದೆಯ ಮೇಲೋ ಒಗ್ಗರಣೆಯ ಬಿಸಿ ಕುಕ್ಕರಿನ ಕೂಗು ಯಾವುದಕ್ಕೂ ಜಗ್ಗದ ಗಟ್ಟಿ ಬಾಲವಿದು…. ಈಗ ಸಣ್ಣದೊಂದು ಬಾಂಧವ್ಯ ಬಾಲದೊಂದಿಗೆ…. ತುಳಿಯದಂತೆ ನಿಭಾಯಿಸಬೇಕು!! ನನ್ನದಲ್ಲದ ಚಲನೆಯೊಂದು ಬೆನ್ನಿಗಂಟಿ ಜೀವಂತ ಸದಾ ಅಂಟಿಕೊಂಡಿರಲಿ ಹೆಣ್ಣಾಗಿ ಕವಿತೆ ಚಲನೆಯಾಗಿ…. ನಾನಾಗಿ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ದಿನಕ್ಕೊಂದು ಕವಿತೆ ಸಜೀವ ಡಾ.ಗೋವಿಂದ ಹೆಗಡೆ ಕವಿತೆ ನನ್ನ ಲೋಕಕ್ಕೆ ಬಂದಾಗಿನಿಂದ ಜೊತೆಗಿದೆ ಕಿಸೆಯ ಕನ್ನಡಕ ಪೆನ್ನು ಪರ್ಸುಗಳಂತೆ ನನ್ನದಾಗಿ ಅಷ್ಟೇ ಅಲ್ಲ ಎದೆಯ ಲಬ್ ಡಬ್ ಗಳಗುಂಟ ನಾಡಿಗಳಲ್ಲಿ ಹರಿದಿದೆ ಉಸಿರ ತಿದಿಯಲ್ಲಿ ಯಾತಾಯಾತ ಆಡಿದೆ ಕಣ್ಣಾಗಿ ಕಂಡು ಕಿವಿಯಾಗಿ ಕೇಳಿ ನರಮಂಡಲದಲ್ಲಿ ಗ್ರಹಿಸಿ ಸ್ಪಂದಿಸಿ ನನ್ನ ಭಾಗವೇ ಬೇಲಿಸಾಲಿನ ಹೂಗಳಿಗೆ ಕೈ ಆಡಿಸಿ ನಕ್ಕು ಹಕ್ಕಿಗಳ ಪಕ್ಕ ಹಾರಿ ತಾರೆಗಳಿಗೆ ಕಣ್ಮಿಟುಕಿಸಿ ಅಲೆ-ದಂಡೆಗಳಗುಂಟ ಅಲೆದು ಮರುಳು ಮನೆ ಕಟ್ಟಿ ಕುಣಿದು ಮೈಪಡೆದ ಕವಿತೆ ಹಾಗಲ್ಲದೆ ಕವಿತೆ ಕವಿತೆ ಹೇಗೆ ನಾನು ಜೀವಂತ ಹೇಗೆ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಅರಳು ಹುರಿದಂತೆ ನುಡಿವವರೆದುರು ನಾನಾಗಿರುವೆ ಉಗ್ಗ ಅಣಕಿಸಿದರು ಅವರೆಲ್ಲ ನನ್ನನ್ನೀಗ ನಾನಾಗಿರುವೆ ಮೂಕ ಸ್ತುತಿ-ನಿಂದೆಗಳ ಮೀರಿ ಮುಂದೆ ಹೋಗಬೇಕು ಬದುಕಲು ಒಳದನಿಯ ಹೊರತೆಲ್ಲ ಸ್ವರಗಳಿಗೆ ನಾನಾಗಿರುವೆ ಬಧಿರ ಕತ್ತಲನ್ನೇ ಬೆಳೆದರು ಅವರು ನಡುವೆ ನೀನೊಂದು ಹಣತೆ ಒಳಿತಾಯಿತು ಜಡ ಜಂಜಡಗಳಿಗೆ ನಾನಾಗಿರುವೆ ಕುರುಡ ತಮ್ಮ ದಾರಿಯಲ್ಲೇ ಎಲ್ಲರೂ ಸಾಗಬೇಕೆಂಬ ವರಾತವೇಕೆ ದಾರಿ ಕಡಿಯುವೆ ನಾನೇ, ಉಳಿದಂತೆ ನಾನಾಗಿರುವೆ ಹೆಳವ ನನ್ನ ಕತ್ತಿನ ಪಟ್ಟಿ ಹಿಡಿದರೇನು ಒಲ್ಲದುದ ಮಾಡೆಂದು ‘ಜಂಗಮ’ ಸಾಕ್ಷಿ,ಅಹಿತವೆಸಗದಂತೆ ನಾನಾಗಿರುವೆ ಚೊಂಚ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಶಂಕರಾನಂದ ಹೆಬ್ಬಾಳ ಬಡತನದ ಬವಣೆ ನೋವು ನಲಿವುಗಳಲಿ ಕಂಡೆ ಒಳಿತು ಕೆಡಕುಗಳ ನಿತ್ಯಸತ್ಯವ ಆಂತರ್ಯದಲಿ ಕಂಡೆ….!!! ಬಣ್ಣನೆಗೆ ನಿಲುಕದ ಮಾರ್ಮಿಕ ಕಟುಸತ್ಯಗಳ ಜೊತೆ ಜೀವಂತ ಹೆಣದಂತೆ ಬದುಕಿ ಇರುವವರಲಿ ಕಂಡೆ…!!! ಸೋತು ಸೊರಗಿ ಮೂಕವಾದ ಬದುಕಿನಲಿ ಸುಕ್ಕುಗಟ್ಟಿದ ಚರ್ಮ ಬತ್ತಿದ ಬೆವರಿನಲಿ ಕಂಡೆ…!!! ಹರಿದ ಚಿಂದಿ ಬಟ್ಟೆಗಳ ನಡುವೆ ನಾಳೆ ಶ್ರೀಮಂತನಾಗುವೆ ಎನ್ನುವ ಕನಸ ಹೊತ್ತುಕೊಂಡಿರುವ ಬಡವರಲಿ ಕಂಡೆ…!!! ಕೊನೆತನಕ ದುಡಿದರು ಬಡತನ ದೂರಾಗಲಿಲ್ಲ ಎಂಬ ಅಭಿನವನ ಮಾತು ಸುಳ್ಳಲ್ಲ ಎನ್ನುವರ ಮನದಲಿ ಕಂಡೆ…!!! ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನನ್ನೊಳಗೆ ನೀನಿರುವಾಗ… ಬಿದಲೋಟಿ ರಂಗನಾಥ್ ನನ್ನೊಳಗೆ ನೀನಿರುವಾಗ ಭಯದ ಬೆಂಕಿಯನ್ನು ಹಾರುವುದು ಕಷ್ಟವೇನಲ್ಲ ಸುಡುವ ನೆಲದ ತಂಪಿಗೆ ನೀನೆ ಬರೆದ ಪ್ರೇಮ ಪತ್ರವಿರುವಾಗ ಕಾಮನ ಬಿಲ್ಲು ಮಾತಾಡುವುದು ಕಷ್ಟವೇ ಅಲ್ಲ ಪರಿಷೆಯಲ್ಲು ಧ್ಯಾನ ನೇರಗೆರೆಯ ಮೇಲೆ ನಿಂತಿರುವಾಗ ಮನಸು ಯಾವ ಮೂಲೆಯಿಂದ ಪಲ್ಲಟಗೊಳ್ಳುವುದು ಹೇಳು ? ನಗುವ ಚಂದಿರನ ಮುದ್ದಿಸಿದ ನೀನು ಪ್ರೇಮದ ಹೂವಿನ ಸುಗಂಧವ ಮೂಸದೇ ಹೋದೆ ನಿನ್ನೊಳಗಿನ ದಾರಿಯ ಮೇಲೆ ಬೆಳೆದ ಮುಳ್ಳುಗಳು ಚುಚ್ಚುವಾಗ ಜಾತಿಯ ಬಣ್ಣಕೆ ಕಣ್ಣು ಮಂಜಾಗಿದ್ದು ಹೃದಯದ ಕಣಿವೆಗಳಲ್ಲಿ ಕಂದರ ತೋಡಿದ ನೀನು ನನ್ನೆಲ್ಲವನ್ನೂ ಬೀಳಿಸಿಯೇ ಹೋದೆ ನಡೆದ ಅಷ್ಟೂ ದೂರ ತಲೆಯೆತ್ತಿ ನಿಂತ ಭಾವ ಮುರುಟಿ ನೆಲ ನೋಡುವುದ ಕಂಡೆ ನಿನ್ನ ನಗುವಿನ ಅಲೆಗಳು ನನ್ನ ಹೃದಯವೆಂಬ ಸಾಗರದಲ್ಲಿ ಎದ್ದಿರುವಾಗ ನೆಲದ ಕಣ್ಣಲ್ಲಿ ನೀರಾದರೂ ಎಲ್ಲಿ ಬತ್ತೀತು ಹೇಳು. ನಿನ್ನದೇ ಚಿತ್ರ ಗಾಳಿಯಲ್ಲಿ ಬರೆದು ನೋಡುತ್ತಲೇ ಇರುವೆ ಅದು ಬಣ್ಣ ಬಣ್ಣದ ಕನಸುಗಳನ್ನು ಬಿಡಿಸುತ್ತಲೇ ಇದೆ. ***********************

ಕಾವ್ಯಯಾನ Read Post »

You cannot copy content of this page

Scroll to Top