ಕಾವ್ಯಯಾನ
ಕೆಂಚಬೆಕ್ಕಿಗೆ ಏನಾಯ್ತು ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿ ಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಇರುವೆ ಸಾಲನು ಹಾ….ರಿ ನೆಗೆದು ಪುಟ್ಟಿಯ ಮನೆಗೆ ಬಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ ಕೆಮ್ಮಿ ಸುಸ್ತಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡವ ಬೆಕ್ಕು ಹೊಯ್ ಕಯ್ ಮಾಡಿ ಕಾಲಿನ ಮೂಳೆ ಮುರಿದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಟ್ರಾಫಿಕ್ ಜಾಮಲಿ ರಸ್ತೆಯ ಕಾದು ಬೋರೂ ಬೋರು ಹೊಡೆದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ನೆತ್ತಿಗೆ ಸಿಟ್ಟು ಸರ್ರನೆ ಏರಿ ಬಾಗಿಲು ಜಡಿದು ಮಲಗಾಯ್ತು.. ********************









