ಗಝಲ್ ಸಂಗಾತಿ
ಗಝಲ್ ಡಾ.ಗೋವಿಂದ ಹೆಗಡೆ ತಪ್ಪು ನನ್ನದೇ ಗೆಳತಿ,ಬಿಡದೆ ಚುಂಬಿಸಿದೆ ಕೊಳ್ಳಿಯನ್ನು ಊದಿ ಊದಿ ಉರಿಸಬಾರದಿತ್ತು ಹೀಗೆ ನಿನ್ನ ಒಡಲನ್ನು ಎದೆಯ ಆಳ-ಅಗಲಗಳ ನಾನೇಕೆ ಕುಗ್ಗಿಸಿಕೊಂಡೆ ಅಗ್ಗವಾಗಿಸಬಾರದಿತ್ತು ಹೀಗೆ ನನ್ನ ನಿಲುವುಗಳನ್ನು ಕಂಬನಿಯಿಂದಲ್ಲವೇ ಕಿಲುಬೆದೆಯ ತೊಳೆಯುವುದು? ನಿಚ್ಚಳ ನೋಡಬೇಕಿನ್ನು ಹರಿದೆಲ್ಲ ಪೊರೆಗಳನ್ನು ಹಸಿದಿರುವೆನೆಂದು ಸಿಕ್ಕಿದ್ದನ್ನೆಲ್ಲ ತಿನ್ನಲಾದೀತೇನು ಉಳಿಸಿಕೊಳ್ಳಲೇಬೇಕು ನೀನು ಕೊಟ್ಟ ಒರೆಗಳನ್ನು ಬಿದ್ದಾಗಲೂ ನಾನು ನಾನೇ ಮರೆಯಬಾರದು, ಸಖೀ ಉಳಿಸುವೆ ಉಡುಗಲು ಬಿಡದೆ ಎದೆಯ ಪಿಸುದನಿಗಳನ್ನು =============









