ಧಾರಾವಾಹಿ ಸಂಗಾತಿ-115 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ಆರೋಗ್ಯದಲ್ಲಿ ವ್ಯತ್ಯಾಸ ಲೋಟದ ತುಂಬಾ ನೀರನ್ನು ತುಂಬಿಕೊಂಡು ಬಂದು ಆ ಹುಡುಗಿ ಸುಮತಿಯ ಕೈಕೆ ಕೊಟ್ಟಳು. ಸುಮತಿ ನೀರನ್ನು ಗಟಗಟನೆ ಕುಡಿದಳು ಆದರೆ ಒಮ್ಮೆಲೇ ವಾಕರಿಕೆ ಬಂದಂತಾಗಿ ಮುಖ ಕಿವುಚಿಕೊಂಡಳು. ಒಂದೇ ಸಮನೆ ನೀರನ್ನು ಕುಡಿದಿದ್ದಕ್ಕಾಗಿ ತಾಯಿಗೆ ಹೀಗೆ ಆಗುತ್ತಿರಬೇಕು ಎಂದು ಮಗಳು ತಾಯಿಯ ಬೆನ್ನನ್ನು ಮೆತ್ತಗೆ ಸವರಿದಳು. ಸುಮತಿಯ ಪರಿಸ್ಥಿತಿಯನ್ನು ಕಂಡು ಮಗಳಿಗೆ ಒಳಗೊಳಗೆ ಏನೋ ಚಿಂತೆ. ಅಮ್ಮನಿಗೆ ಆರೋಗ್ಯದಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಮಗಳಿಗೆ ಅನಿಸಿತು. ಸುಮತಿಯನ್ನು ಒಮ್ಮೆ ಸೂಕ್ಷ್ಮವಾಗಿ ಗಮನಿಸಿದಳು. ಮುಖ ಸ್ವಲ್ಪ ಊದಿರುವಂತೆ ಕಾಣಿಸಿತು. ಕಣ್ಣಿನ ಸುತ್ತಲೂ ಸ್ವಲ್ಪ ಬಾತು ಕೊಂಡಂತೆ ಇದೆ. ಕೈಕಾಲು ಸಹ ಸ್ವಲ್ಪ ಊದಿಕೊಂಡಿದೆ. ಆದಷ್ಟು ಬೇಗ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ತೀರ್ಮಾನಿಸಿ.,…. ಅಮ್ಮ ನಾನು ಬೇಗ ಸ್ನಾನ ಮುಗಿಸಿ ಬರುತ್ತೇನೆ…. ಎಂದು ಹೇಳಿ, ಹತ್ತನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳನ್ನು ಕರೆದು….”ಬೇಗ ತಿಂಡಿ ಮಾಡಿ, ನಾನು ನನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಬೇಕಿದೆ”…. ಎಂದಳು. ಮಕ್ಕಳು ಸರಿ ಎಂದು ತಲೆ ಆಡಿಸಿ ತಿಂಡಿ ಮಾಡಲು ಅಡುಗೆ ಮನೆಗೆ ಹೋದರು. ಅಡುಗೆಯವರು ಊರಿಗೆ ಹೋಗಿದ್ದ ಕಾರಣ ಸದ್ಯಕ್ಕೆ ಮಕ್ಕಳೇ ತಿಂಡಿ ಮಧ್ಯಾಹ್ನಕ್ಕೆ ಅಡುಗೆ ಮಾಡಿಕೊಳ್ಳುತ್ತಿದ್ದರು. ಜೊತೆಗೆ ಸುಮತಿ ಮಗಳು ಸಹಾಯ ಕೂಡ ಸಹಾಯ ಮಾಡುತ್ತಿದ್ದಳು. ಮನಸ್ಸಿನಲ್ಲಿ ಸ್ವಲ್ಪ ಆತಂಕವನ್ನು ತುಂಬಿಕೊಂಡೇ ಮಗಳು ಬೇಗನೆ ಸ್ನಾನ ಮುಗಿಸಿದಳು. ಅನಾಥಾಶ್ರಮದ ಮಕ್ಕಳು ತಾಯಿ ಮಗಳು ಇಬ್ಬರಿಗೂ ಚಪಾತಿ ಟೊಮೇಟೊ ಚಟ್ನಿ ಮಾಡಿ ತಿನ್ನಲು ಕೊಟ್ಟರು. ಸುಮತಿಗೆ ಹೆಚ್ಚು ನಡೆಯಲು ಸಾಧ್ಯವಿಲ್ಲ ಎಂದು ಮಗಳಿಗೆ ಅನಿಸಿತು. ಅನಾಥಾಶ್ರಮದ ಹುಡುಗನೊಬ್ಬನನ್ನು ಕರೆದು ದಾರಿಯಲ್ಲಿ ಹೋಗುವ ಯಾವುದಾದರೂ ಆಟೋರಿಕ್ಷಾವನ್ನು ನಿಲ್ಲಿಸಿ ಅನಾಥಾಶ್ರಮ ಅಂಗಳಕ್ಕೆ ಕರೆದುಕೊಂಡು ಬರುವಂತೆ ಹೇಳಿದಳು. ಸ್ವಲ್ಪ ಹೊತ್ತಿನಲ್ಲೇ ಆಟೋ ಬಂದಿತು. ತಾಯಿಯನ್ನು ಕರೆದುಕೊಂಡು ಮಗಳು ಆಟೋ ಹತ್ತಿದಳು. ದೊಡ್ಡ ಮಕ್ಕಳನ್ನು ಉದ್ದೇಶಿಸಿ…. “ಎಲ್ಲರಿಗೂ ತಿಂಡಿಯನ್ನು ಕೊಟ್ಟು ರೆಡಿಯಾಗಿ, ಬಾಗಿಲಿಗೆ ಬೀಗ ಹಾಕಿಕೊಂಡು ಹತ್ತಿರದಲ್ಲಿರುವ ಡಮ್ ಅಂಡ್ ಢಫ್ ಶಾಲೆಯ ಮೇಲ್ವಿಚಾರಕರ ಕೈಲಿ ಕೀಲಿಯನ್ನು ಕೊಟ್ಟು ಶಾಲೆಗೆ ಹೋಗಿ”…. ಎಂದು ತಿಳಿಸಿದಳು. ಹತ್ತಿರದಲ್ಲಿಯೇ ಸಕಲೇಶಪುರದ ಸರ್ಕಾರಿ ಆಸ್ಪತ್ರೆ ಇದ್ದ ಕಾರಣ ಆಟೋ ಬೇಗನೆ ಆಸ್ಪತ್ರೆಯನ್ನು ತಲುಪಿತು. ಸುಮತಿಯನ್ನು ಆಟೋದಿಂದ ನಿಧಾನವಾಗಿ ಇಳಿಸಿ, ಆಸ್ಪತ್ರೆಯ ವರಾಂಡದ ಬೆಂಚಿನ ಮೇಲೆ ಕುಳ್ಳಿರಿಸಿ, ಕಂಪೌಂಡರ್ ಹತ್ತಿರ ಹೋಗಿ ಚೀಟಿಯನ್ನು ಬರೆಸಿಕೊಂಡು ಬಂದಳು. ನಂತರ ಸುಮತಿಯ ಕೈ ಹಿಡಿದು ನಿಧಾನವಾಗಿ ನಡೆಸಿಕೊಂಡು ಫಿಜಿಷಿಯನ್ ವೈದ್ಯರ ಕೊಠಡಿಯ ಬಳಿಗೆ ಹೋದಳು. ಅಲ್ಲಿಯೇ ಇದ್ದ ಬೆಂಚಿನ ಮೇಲೆ ಸುಮತಿಗೆ ಕುಳಿತುಕೊಳ್ಳಲು ಹೇಳಿ ಸರತಿಯ ಸಾರಿನಲ್ಲಿ ತಾನು ನಿಂತಳು. ಅಟೆಂಡರ್ ಕರೆದಾಗ ತಾಯಿಯನ್ನು ನಿಧಾನವಾಗಿ ಎಬ್ಬಿಸಿ ಒಳಗೆ ಕರೆದುಕೊಂಡು ಹೋದಳು. ಸುಮತಿಯನ್ನು ಕಂಡ ಕೂಡಲೇ ವೈದ್ಯರು…. “ಏನು ಸುಮತಿಯವರೇ ಹೇಗಿದ್ದೀರಾ?… ಎಂದು ಕೇಳಿದರು. ಸುಮತಿ ವೈದ್ಯರ ಮುಖವನ್ನು ನೋಡಿದಳು. ಅವಳಿಗೆ ವೈದ್ಯರ ಮುಖ ಅಸ್ಪಷ್ಟವಾಗಿ ಕಾಣಿಸಿತು. ಕನ್ನಡಕವನ್ನು ತೆಗೆದು ಸೀರೆಯ ಸರಗಿನಿಂದ ಒರಸಿಕೊಂಡು ಪುನಃ ಹಾಕಿಕೊಂಡಳು… “ಸರ್ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿ ಇಲ್ಲ…. ತುಂಬಾ ಆಯಾಸವಾಗುತ್ತಿದೆ… ಏನನ್ನೂ ತಿನ್ನಲು ಸಾಧ್ಯವಾಗುತ್ತಿಲ್ಲ…. ಆಹಾರವನ್ನು ತಿಂದರೆ, ನೀರು ಕುಡಿದರೆ ವಾಂತಿ ಬರುವ ಹಾಗೆ ಆಗುತ್ತಿದೆ”…. ಎಂದಳು. ಸುಮತಿಯನ್ನು ಪರಿಶೀಲಿಸಿದ ವೈದ್ಯರು ಮಗಳನ್ನು ನೋಡುತ್ತಾ…. “ನಾನು ಕೆಲವು ರಕ್ತ ಪರೀಕ್ಷೆ ಹಾಗೂ ಎಕ್ಸರೇ ಪರೀಕ್ಷೆಗೆ ಈ ಚೀಟಿಯಲ್ಲಿ ಬರೆದು ಕೊಡುತ್ತೇನೆ…. ಅಮ್ಮನನ್ನು ಕರೆದುಕೊಂಡು ಹೋಗಿ ಈ ಪರೀಕ್ಷೆಗಳನ್ನು ಮಾಡಿಸಿಕೊಂಡು ಅವುಗಳ ವರದಿಯನ್ನು ತಂದು ನನಗೆ ತೋರಿಸಮ್ಮ”….. ಎಂದು ಹೇಳಿದರು. ಮಗಳು…”ಸರಿ ಸರ್”…. ಎಂದು ಹೇಳುತ್ತಾ ಸುಮತಿಯ ಕೈ ಹಿಡಿದುಕೊಂಡು ನಿಧಾನವಾಗಿ ನಡೆಸಿಕೊಂಡು ರಕ್ತ ಪರೀಕ್ಷೆ ಕೇಂದ್ರದ ಬಳಿಗೆ ಕರೆದುಕೊಂಡು ಹೋದಳು. ರಕ್ತ ಪರೀಕ್ಷೆ ಮಾಡಿಸಿದ ನಂತರ ಎಕ್ಸರೇ ಪರೀಕ್ಷೆ ಮಾಡುವಲ್ಲಿಗೆ ಕರೆದುಕೊಂಡು ಹೋದಳು. ಎಕ್ಸರೇ ಪರೀಕ್ಷಿಸುವಾತ ಎಕ್ಸರೇ ಯಂತ್ರದ ಮುಂದೆ ಸುಮತಿಯನ್ನು ನಿಲ್ಲಿಸಿ, ಪರೀಕ್ಷೆ ಮಾಡಲು ಪ್ರಾರಂಭಿಸಿದರು…. “ಅಮ್ಮಾ ನೀವು ಸೀರೆಯ ಸೆರಗಲ್ಲಿ ಏನನ್ನು ಇಟ್ಟುಕೊಂಡಿದ್ದೀರಿ?…. ಅದನ್ನು ಮಗಳ ಕೈಗೆ ಕೊಡಿ”…. ಎಂದರು. ಆತನ ಮಾತನ್ನು ಕೇಳಿ ಸುಮತಿ…” ಸರ್ ನನ್ನ ಕೈಲಿ ಏನೂ ಇಲ್ಲ”… ಎಂದಳು. ಎಕ್ಸರೇ ಪರೀಕ್ಷಿಸುವಾತ ಸಂಶಯ ಬಂದು ಮತ್ತೆ ಪರೀಕ್ಷಿಸಿದನು. ಏಕೆ ಏನೋ ಅಡ್ಡ ಇರುವಂತೆ ಕಾಣಿಸುತ್ತಿದೆಯಲ್ಲಾ ಎಂದುಕೊಳ್ಳುತ್ತಾ ಮತ್ತೆ ಮತ್ತೆ ಪರೀಕ್ಷಿಸಿದನು. ಎಕ್ಸರೇ ಪರೀಕ್ಷೆ ಮುಗಿದ ನಂತರ ಸ್ವಲ್ಪ ಹೊತ್ತು ಅಲ್ಲಿಯೇ ಹೊರಗೆ ಕಾದು ಕುಳಿತುಕೊಳ್ಳಲು ಹೇಳಿದರು. ಎಕ್ಸರೇ ಪರೀಕ್ಷಿಸುವಾತ ಹೇಳಿದ ಮಾತೇ ಮಗಳ ಕಿವಿಯಲ್ಲಿ ಗುಂಯ್ ಗುಡುತ್ತಿತ್ತು. ಆತ ಏಕೆ ಹಾಗೆ ಹೇಳಿರಬಹುದು? ಎಂದು ಯೋಚಿಸುತ್ತಾ ತಾಯಿಯ ಕೈ ಮೇಲೆ ಕೈ ಇಟ್ಟು…. ಏನು ಇರೋದಿಲ್ಲ ಅಮ್ಮಾ…. ಎಂದು ಹೇಳಿ, ಆತ ಏಕೆ ಹಾಗೆ ಹೇಳಿರಬಹುದು? ಎಂದು ಆಲೋಚಿಸುತ್ತಾ ಕುಳಿತಳು. ಸ್ವಲ್ಪ ಹೊತ್ತು ಕಾದು ಕುಳಿತ ನಂತರ ಎಕ್ಸರೇ ವರದಿ ಬಂದಿತು. ಆತ ಮಗಳನ್ನು ಒಳಗೆ ಕರೆದು…. “ಆದಷ್ಟು ಬೇಗ ನಿನ್ನ ಅಮ್ಮನ ವರದಿಯನ್ನು ವೈದ್ಯರಿಗೆ ತೋರಿಸು… ಹೆಚ್ಚು ತಡ ಮಾಡಬೇಡ”…. ಎಂದು ಹೇಳಿದರು. ಅವರು ಹೇಳಿದ ಮಾತಿನಿಂದ ಮಗಳಿಗೆ ಆತಂಕವಾಯಿತು. ಎಕ್ಸರೇ ಪರೀಕ್ಷಿಸುವವನ ಮುಖವನ್ನು ನೋಡಿದಳು…. “ನಾನು ಇಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ…. ಬೇಗ ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸು ಅವರು ಎಲ್ಲವನ್ನೂ ನಿಮಗೆ ತಿಳಿಸುತ್ತಾರೆ”…. ಎಂದರು. ಅವರು ಹೇಳಿದ ಮಾತನ್ನು ಕೇಳಿ ಆತಂಕದಿಂದಲೇ ತಾಯಿಯ ಕೈಯನ್ನು ಹಿಡಿದು ನಿಧಾನವಾಗಿ ಎಬ್ಬಿಸಿ ವೈದ್ಯರ ಕೊಠಡಿಯ ಬಳಿಗೆ ಕರೆದುಕೊಂಡು ಹೋದಳು. ಅಟೆಂಡರ್ ಕೈಲಿ ವರದಿಯನ್ನು ಕೊಟ್ಟಾಗ ಆತ ಆ ವರದಿಯನ್ನು ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸಿದನು. ಅಟೆಂಡರ್ ಹೊರಗೆ ಬಂದು ತಾಯಿ ಮಗಳು ಇಬ್ಬರನ್ನೂ ವೈದ್ಯರು ಕರೆಯುತ್ತಿದ್ದಾರೆ ಎಂದು ತಿಳಿಸಿದನು. ಇಬ್ಬರೂ ವೈದ್ಯರ ಕೊಠಡಿಯ ಒಳಗೆ ಪ್ರವೇಶಸಿದರು. ಒಳಗೆ ಹೋದಾಗ ವೈದ್ಯರು ಎಕ್ಸರೇ ಫಿಲಂ ಅನ್ನು ಕೂಲಂಕುಶವಾಗಿ ಪರೀಕ್ಷಿಸಿ ನೋಡುತ್ತಿದ್ದರು.ತಾಯಿ ಮತ್ತು ಮಗಳು ಒಳಗೆ ಬಂದಾಗ ಕುಳಿತುಕೊಳ್ಳುವಂತೆ ಹೇಳಿ, ಸುಮತಿಯನ್ನು ಉದ್ದೇಶಿಸಿ…. “ಸುಮತಿ…ಯಾವಾಗನಿಂದ ನಿಮಗೆ ಅಸ್ವಸ್ಥತೆ ಅನಿಸುತ್ತಿತ್ತು? ಎಂದು ಕೇಳಿದರು…. “ಬಹಳ ದಿನಗಳಿಂದ ನನ್ನನ್ನು ಸ್ವಲ್ಪ ಅಸ್ವಸ್ಥತೆ ಕಾಡುತ್ತಿದೆ…. ನಿಮ್ಮ ಸೂಚನೆಯಂತೆ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ…. ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದೇನೆ…. ಕೆಲವೊಮ್ಮೆ ಊಟದಲ್ಲಿ ಪಥ್ಯ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ”…. ಎಂದಳು.
“ಯುಥನೇಶಿಯ…. ದಯಾಮರಣಕ್ಕೆ ಅಸ್ತು” ವೀಣಾ ಹೇಮಂತ್ ಗೌಡ ಪಾಟೀಲ್.
ಬದುಕಿನ ಸಂಗಾತಿ ವೀಣಾ ಹೇಮಂತ್ ಗೌಡ ಪಾಟೀಲ್. “ಯುಥನೇಶಿಯ…. ದಯಾಮರಣಕ್ಕೆ ಅಸ್ತು” ಕಳೆದ ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ದಯಾಮರಣ ಎಂಬ ಕಾನೂನನ್ನು ಜಾರಿಗೆ ತರಲು ಒತ್ತಾಯಿಸಲಾಗುತ್ತಿತ್ತು. ಇದೀಗ ಆ ಕಾನೂನನ್ನು ಕೆಲ ನಿರ್ದಿಷ್ಟ ನಿರ್ದೇಶನಗಳೊಂದಿಗೆ ಆದೇಶ ಮಾಡಲಾಗಿದೆ. ಏನಿದು ದಯಾ ಮರಣ? ವ್ಯಕ್ತಿಯು ಬದುಕಿದ್ದಾಗಲೇ ಆತನ ದೇಹದ ಎಲ್ಲಾ ಅಂಗಗಳು ನಿಷ್ಕ್ರಿಯಗೊಂಡು ಮುಂದೆ ಆತ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಆತನನ್ನು ಜೋಪಾನ ಮಾಡುವವರು ಅಸಹಾಯಕತೆಯಿಂದ ಕೈ ಚೆಲ್ಲಿದಾಗ, ಇನ್ನೆಂದೂ ಆತ ವಾಸಿ ಹೊಂದುವುದಿಲ್ಲ ಎಂಬ ಪರಿಸ್ಥಿತಿಯಲ್ಲಿ ಔಷಧಿ ಇಲ್ಲವೇ ಇಂಜೆಕ್ಷನ್ ನೀಡುವ ಮೂಲಕ ಆತನಿಗೆ ಮರಣವನ್ನು ದಯಪಾಲಿಸುವ ಕಾನೂನಾತ್ಮಕ ಒಪ್ಪಿಗೆಯನ್ನು ದಯಾ ಮರಣ ಎಂದು ಹೇಳಬಹುದು. ಈ ಹಿಂದೆ ಸಾಕಷ್ಟು ಬಾರಿ ಬಹಳಷ್ಟು ಜನ ತಮ್ಮ ಆರೋಗ್ಯ ಸಮಸ್ಯೆಗಳಿಂದ ಬೇಸತ್ತು ಇನ್ನೆಂದೂ ವಾಸಿಯಾಗದ ಕಾಯಿಲೆಗಳಿಂದ ನೊಂದು ದಯಾ ಮರಣಕ್ಕೆ ಅರ್ಜಿ ಹಾಕಿ ರಾಷ್ಟ್ರಪತಿಗಳವರೆಗೆ ಪತ್ರಗಳು ಹೋಗಿದ್ದ ಪ್ರಕರಣಗಳು ಉಂಟು… ಆದರೆ ಭಾರತದ ಜೀವಪರ ಸಂಘಟನೆಗಳು ಈ ದಯಾಮರಣ ಪ್ರಕ್ರಿಯೆಯ ವಿರುದ್ಧ ಹೋರಾಟವನ್ನು ಆರಂಭಿಸಿತ್ತು. ಗೊತ್ತಿದ್ದು ಕೂಡ ಯಾವುದೇ ಒಂದು ಜೀವಿಯ ಬದುಕನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ ಎಂಬುದು ಅವರ ವಾದವಾಗಿತ್ತು…. ಇದು ನಿಜ ಕೂಡ.ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕು ಎಂದು ಕನಸುಗಳನ್ನು ಹೊತ್ತು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣ ಶಾಮ್ ಭಾಗ್ ಎಂಬ ಯುವತಿ ಮುಂಬೈಯ ಕೆ ಎಂ ಆಸ್ಪತ್ರೆಗೆ ನರ್ಸ್ ಆಗಿ ಕೆಲಸಕ್ಕೆ ಸೇರಿದಳು.1973ರ ನವಂಬರ್ 27 ರಂದು ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರುಣಾಳನ್ನು ವಾರ್ಡ್ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೋಹನ್ ಲಾಲ್ ಭಾರ್ತಾ ಎಂಬ ಯುವಕ ಅತ್ಯಾಚಾರ ಮಾಡಲು ಪ್ರಯತ್ನಿಸಿ ಪ್ರತಿರೋಧಿಸಿದ ಆಕೆಯ ಕೊರಳಿಗೆ ಕಬ್ಬಿಣದ ಸರಪಳಿಯಿಂದ ಬಿಗಿದ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ. ಕುತ್ತಿಗೆಗೆ ಬಿಗಿದ ಸರಳಿನಿಂದಾಗಿ ಆಕೆಯ ಮೆದುಳಿಗೆ ಸಂಪರ್ಕ ತಪ್ಪಿ ಆಕೆ ಕೋಮಾಕ್ಕೆ ಜಾರಿದಳು. ಆಸ್ಪತ್ರೆಯ ವೈದ್ಯರ ಸಿಬ್ಬಂದಿಗಳ ಅವಿರತ ಪ್ರಯತ್ನದ ಹೊರತಾಗಿಯೂ ಕೂಡ ಆಕೆ ಚೇತರಿಸಿಕೊಳ್ಳಲಿಲ್ಲ. ಕುಟುಂಬದವರು ಕೂಡ ಹಿಂದೆ ಸರಿದರು.1980 ರಲ್ಲಿ ಆಕೆಯನ್ನು ಆಸ್ಪತ್ರೆಯಿಂದ ಹೊರ ಹಾಕುವ ಪ್ರಯತ್ನವನ್ನು ಮುಂಬೈ ಮಹಾನಗರ ಪಾಲಿಕೆ ಮಾಡಿದರೂ ಅದರ ವಿರುದ್ಧ ಉಗ್ರವಾಗಿ ಧ್ವನಿಯೆತ್ತಿದ ಆಸ್ಪತ್ರೆಯ ನರ್ಸ್ ಗಳ ದೆಸೆಯಿಂದಾಗಿ ಆ ಕಾರ್ಯ ಸ್ಥಗಿತವಾಯಿತು. ಆಸ್ಪತ್ರೆಯ ಒಂದು ಕೋಣೆಯಲ್ಲಿ ಸರಿ ಸುಮಾರು 42 ವರ್ಷಗಳ ಕಾಲ ಆಕೆಯನ್ನು ಮಗುವಿನಂತೆ ಅಲ್ಲಿಯ ನರ್ಸ್ ಗಳು ಜೋಪಾನ ಮಾಡಿದರು. ಆಕೆಯ ಪರಿಸ್ಥಿತಿಯನ್ನು ಕಂಡು ಕೇಳಿ ನೊಂದ ಪಿಂಕಿ ವಿರಾನಿ ಎಂಬ ವಕೀಲರು ಆಕೆಗೆ ದಯಾಮರಣವನ್ನು ನೀಡಬೇಕಾಗಿ ನ್ಯಾಯಾಲಯದ ಮೊರೆ ಹೋದರು. ಆದರೆ ಹಲವಾರು ಪರ ವಿರೋಧಗಳ ಕಾರಣಕ್ಕೆ ದಯಾಮರಣದ ವಿಷಯ ಜನರ ಗಮನವನ್ನು ಸೆಳೆದಿತ್ತು. ಸುಮಾರು 42 ವರ್ಷಗಳ ಕಾಲ ಕೋಮಾದಲ್ಲಿಯೇ ಇದ್ದ ಅರುಣ 2015ರಲ್ಲಿ ನ್ಯೂಮೋನಿಯಾಗೆ ತುತ್ತಾಗಿ ಸಹಜ ಸಾವನ್ನು ಅಪ್ಪಿದರು ಇದೀಗ ಮತ್ತೆ ದಯಾಮರಣದ ಕುರಿತ ವಿಷಯ ಮುನ್ನೆಲೆಗೆ ಬರಲು ಕಾರಣವಾಗಿದ್ದು ಹಾಗೂ ದಯಾಮರಣವನ್ನು ಕಾನೂನು ಬದ್ಧವಾಗಿ ನೀಡಲು ಮುಂದಾಗಿದ್ದು ಕಳೆದ 13 ವರ್ಷಗಳಿಂದ ಕೋಮದಲ್ಲಿದ್ದು ಮುಂದಿನ ದಿನಮಾನಗಳಲ್ಲಿಯೂ ಕೂಡ ಆರೋಗ್ಯದಲ್ಲಿ ಚೇತರಿಕೆ ಕಾಣುವ ಯಾವುದೇ ಲಕ್ಷಣಗಳು ಇಲ್ಲದ ಕಾರಣ ದೆಹಲಿಯ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣವನ್ನು ನೀಡಲು ಒಪ್ಪಿಕೊಂಡಿದ್ದು ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಆರಂಭವಾಗಿವೆ. .ಮೂಲತಃ ದೆಹಲಿಯವರಾದ ಹರೀಶ್ ರಾಣಾ ಅವರು ಚಂಡಿಗಡದ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಇಂಜಿನಿಯರಿಂಗ್ ಕೊನೆಯ ವರ್ಷದಲ್ಲಿ ಓದುತ್ತಿದ್ದರು. 2013 ಆಗಸ್ಟ್ 20ರಂದು ರಕ್ಷಾಬಂಧನದ ದಿನ ಆಕಸ್ಮಿಕವಾಗಿ ತಾವು ಉಳಿದುಕೊಂಡಿದ್ದ ಹಾಸ್ಟೆಲ್ನ ವಸತಿಗೃಹದ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದ ಅವರ ದೇಹದ ಎಲ್ಲ ಭಾಗಗಳು ನಿಷ್ಕ್ರಿಯಗೊಂಡಿದ್ದು ಕಳೆದ 13 ವರ್ಷಗಳಿಂದ ಅವರು ಹಾಸಿಗೆಯಲ್ಲಿಯೇ ಇದ್ದಾರೆ. ಮುಂದೆ ಯಾವುದೇ ಚೇತರಿಕೆಯನ್ನು ಕಾಣುವ ಅವಕಾಶವೇ ಇಲ್ಲದ ಅವರ ಪರಿಸ್ಥಿತಿಯನ್ನು ಕಂಡ ಅವರ ಪಾಲಕರು ಹಲವಾರು ವೈದ್ಯಕೀಯ ಮಂಡಳಿಗಳ ದಾಖಲೆಗಳನ್ನು ಹೊತ್ತು ತಮ್ಮ ಮಗನಿಗೆ ದಯಾಮರಣವನ್ನು ದಯಪಾಲಿಸುವ ಅನುಮತಿ ನೀಡಿ ಎಂದು ಸುಪ್ರೀಂಕೋರ್ಟ್ನ ಮೊರೆ ಹೋಗಿದ್ದರು. ಹಲವಾರು ಪರಿಶೀಲನೆಗಳ ನಂತರ ಅಂತಿಮವಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜೆಪಿ ಪರ್ದಿ ವಾಲಾ ಮತ್ತು ಕೆ ವಿ ವಿಶ್ವನಾಥನ್ ಅವರು ಕುಟುಂಬದ ಒಪ್ಪಿಗೆ ಹಾಗೂ ವೈದ್ಯಕೀಯ ಮಂಡಳಿಗಳ ವರದಿಯನ್ನು ಆಧರಿಸಿ ಮೊನ್ನೆ ಮಾರ್ಚ್ 11, 2026 ರಂದು ಸಂಪೂರ್ಣ ಜೀವಚ್ಚವವಾಗಿರುವ ಹರೀಶ್ ರಾಣಾ ಅವರಿಗೆ ನಿಷ್ಕ್ರಿಯ ದಯಾ ಮರಣ ನೀಡಲು ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರಿಗೆ ಆದೇಶ ನೀಡಿದ್ದಾರೆ. ಈಗಾಗಲೇ ಕೋರ್ಟ್ ಆದೇಶದಂತೆ ಮೊದಲ ಪ್ರಕ್ರಿಯೆ ಆರಂಭವಾಗಿದ್ದು ಅವರಿಗೆ ಬಾಹ್ಯವಾಗಿ ಆಹಾರವನ್ನು ಸೇವಿಸಲು ಬಾಯಿಗೆ ಹಾಕಿರುವ ನಳಿಕೆಗಳನ್ನು ತೆಗೆದು ಹಾಕಿದ್ದು ಹಾಗೂ ದೇಹಕ್ಕೆ ಅಳವಡಿಸಲ್ಪಟ್ಟ ವಿಸರ್ಜನಾ ವ್ಯವಸ್ಥೆಗಳನ್ನು ತೆಗೆದುಹಾಕಲಾಗಿದೆ.ಆತನಿಗೆ ಪಾಲಕರು ಹಾಗೂ ಕುಟುಂಬದವರು ಅಂತಿಮ ವಿದಾಯ ಹೇಳಿದ್ದಾರೆ. ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಹೋದರಿಯರು ಅವರನ್ನು ಕುರಿತು ಎಲ್ಲರನ್ನೂ ಕ್ಷಮಿಸು, ಎಲ್ಲರಿಗೂ ಕ್ಷಮೆ ಕೇಳು ಹಾಗೂ ಶಾಂತಿಯಿಂದ ಹೊರಟುಬಿಡು ಎಂಬ ಅಂತಿಮ ವಾಕ್ಯಗಳನ್ನು ಹೇಳಿ ಅತ್ಯಂತ ಕರುಣಾಪೂರ್ವಕ ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಹತ್ತು ಹಲವಾರು ಕಾಯಿಲೆಗಳಿಂದ ಸಂಪೂರ್ಣ ದೇಹಗಳು ನಿಷ್ಕ್ರಿಯಗೊಂಡು ಮನೋ ದೈಹಿಕ ಯಾತನೆಯನ್ನು ಅನುಭವಿಸುತ್ತಿರುವ, ಬದುಕಿರುವಾಗಲೇ ಸತ್ತಂತೆ ಇರುವ ಹಲವಾರು ಜನರು ಆಸ್ಪತ್ರೆಯ ಮೂಲೆಯ ಬೆಡ್ಗಳಲ್ಲಿ, ಮನೆಗಳಲ್ಲಿ ಇದ್ದು ಅವರಿಗೆ ಮತ್ತು ಅವರ ಯಾತನೆಯನ್ನು ಕಂಡು ಏನೂ ಮಾಡಲಾಗದ ಅಸಹಾಯಕ ಪರಿಸ್ಥಿತಿಯನ್ನು ಅನುಭವಿಸುತ್ತಿರುವ ಅವರ ಕುಟುಂಬದವರಿಗೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ನೆಮ್ಮದಿಯ ನಿಟ್ಟುಸಿರನ್ನು ತಂದಿದೆ. ಯಾವುದೇ ಕಾನೂನುಗಳು ದುರ್ಬಳಕೆಯಾಗಬಾರದು ಎಂಬುದಷ್ಟೇ ಸಮಾಜದ ಕಳಕಳಿ. ಹರೀಶ್ ರಾಣಾಗೆ ಭಾವಪೂರಿತ ವಿದಾಯವನ್ನು ಕೋರುತ್ತಾ ವೀಣಾ ಹೇಮಂತ್ ಗೌಡ ಪಾಟೀಲ್
“ಯುಥನೇಶಿಯ…. ದಯಾಮರಣಕ್ಕೆ ಅಸ್ತು” ವೀಣಾ ಹೇಮಂತ್ ಗೌಡ ಪಾಟೀಲ್. Read Post »
ಧಾರಾವಾಹಿ ಸಂಗಾತಿ-11 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಸವಿತಾ ದೇಶಮುಖ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆಗಣನೀಯಕೊಡುಗೆ ನೀಡಿದ ಹಿರಿಯ ಚೇತನ ಜಯದೇವಿ ತಾಯಿಯವರ ಜೀವನ ತ್ಯಾಗದ ಮತ್ತೊಂದು ಹೆಸರು.ಸಮಾಜ ಸೇವೆಯ ಪಥದಲ್ಲಿ ನಡೆದುಹೋಗುತ್ತಿದ್ದ ಅವರ ಹೆಜ್ಜೆಗಳು ಎಷ್ಟು ದೃಢವಾಗಿದ್ದವೋ, ಅಷ್ಟೇ ಮನೆಯ ಹೊಣೆಗಾರಿಕೆಯನ್ನು ಹೊತ್ತಿದ್ದ ಹೃದಯ ಅಷ್ಟೇ ಮೃದುವಾಗಿತ್ತು. ೧೯೪೨ರ ವೇಳೆ ಅಷ್ಟರಲ್ಲಿ ತಾಯಿಯವರು ಇನ್ನೂ ಮೂರು ಮಕ್ಕಳಿಗೆ ಜನ್ಮ ನೀಡಿದರು…ಇಗ ತಾಯಿಯವರಿಗೆ ಐದು ಜನ ಮಕ್ಕಳಾದರು… ಅತ್ಯಂತ ಸದೃಢ ಸದ್ೃಪಿ ಎರಡು ಗಂಡು ಮಕ್ಕಳು ಪ್ರಭುರಾಜ ಹಾಗು ಬಸವರಾಜ ಜನಿಸಿದರು. ನಂತರ ಒಂದು ಸುಂದರ ಹೆಣ್ಣು ಮಗು ಲಲ್ಲೇಶ್ವರಿ(ನನ್ನ ತಾಯಿ )ಜನ್ಮ ಕೊಟ್ಟರು. ಒಂದೆಡೆ ಸಮಾಜದ ನೋವುಗಳನ್ನು ಕೇಳಿ ಪರಿಹರಿಸಲು ಓಡಾಡುತ್ತಿದ್ದ ತಾಯಿಯವರು, ಮತ್ತೊಂದೆಡೆ ತಮ್ಮ ಪುಟ್ಟ ಮಕ್ಕಳ ಅಳುವಿನಲ್ಲೂ, -ನಗುಮುಖದಲ್ಲೂ ಜೀವನದ ಅರ್ಥವನ್ನು ಕಂಡುಕೊಳ್ಳುತ್ತಿದ್ದರು.ಹಗಲು ಜನರ ನಡುವೆ ತಿರುಗಿ, ರಾತ್ರಿ ಮಕ್ಕಳೊಡನೆ ಸಮಯ ತೆಗೆಯುತ್ತಿದ್ದರು.ಅವರಿಗೆ ವಿಶ್ರಾಂತಿ ಅನ್ನುವುದು ಇರಲಿಲ್ಲ. ಸಮಾಜ ಸೇವೆಎಂಥ ಪವಿತ್ರ ದಾರಿ ಒಂದೆಡೆ ಇದ್ದರೆ, ತಾಯಿಯ ಹೃದಯದ ಕರ್ತವ್ಯ ಮತ್ತೊಂದೆಡೆ ಇತ್ತು. ಆದರೆ ಜಯದೇವಿ ತಾಯಿಯವರು ಯಾವತ್ತೂ ದಣಿಯಲಿಲ್ಲ. ಸಮಾಜದ ಸೇವೆಯ ಜೊತೆಗೆ ಕುಟುಂಬದ ಪ್ರೀತಿಯನ್ನೂ ಸಮಾನವಾಗಿ ಪಾಲಿಸಿಕೊಂಡು ಹೋಗುತ್ತಿದ್ದ ಅವರ ಜೀವನ ನಿಜಕ್ಕೂ ಆದರ್ಶಮಯವಾಗಿತ್ತು.ಒಂದೇ ಸಮಯದಲ್ಲಿ ಸಮಾಜಕ್ಕೆ ದೀಪವಾಗಿಯೂ, ತಮ್ಮ ಮಕ್ಕಳಿಗೆ ಮಮತೆಯ ನೆರಳಾಗಿಯೂ ಬದುಕಿದ ಜಯದೇವಿ ತಾಯಿಯವರ ಜೀವನಗಾಥೆ ತಾಯಿತನದ ಮಹತ್ವವನ್ನು ಹೇಳುವ ಅಮರ ಕಥೆಯಾಗಿದೆ. ಯಾಕೆಂದರೆ ಅವರ ಗಂಡ ಚನ್ನ ಮಲ್ಲಪ್ಪನವರ ಆರೋಗ್ಯವು ಆಗಲೇ ಹದಗೆಡಲಾರಂಭಿಸಿತ್ತು.ಮಧ್ಯ ಮಧ್ಯದಲ್ಲಿ ತಾಯಿಯವರ ಆರೋಗ್ಯವು ಕೈಕೊಡುತ್ತಿತ್ತು.ಗಂಡನ ಸೇವೆ, ಮಕ್ಕಳ ಪೋಷಣೆ,ಸಮಾಜ ಪರ ಕೆಲಸಗಳು, ಸಾಹಿತ್ಯದ ಸೇವೆ, ಸಿದ್ದರಾಮನ ಆರಾಧನೆಯು ಸತತವಾಗಿ ನಡೆದಿರುತ್ತಿತ್ತು. ಎಲ್ಲ ಮನೆಗಳಲ್ಲಿ ಕಂಡುಬರುವಂತೆ, ಜಯದೇವಿ ತಾಯಿಯವರ ಮನೆಯಲ್ಲಿಯೂ ಅಣ್ಣತಮ್ಮಂದಿರ ಮನಸ್ತಾಪಗಳು ಬೆಳೆಯುತ್ತಾ ನಡೆದವು.ಸಣ್ಣಸಣ್ಣ ಮಾತುಗಳಿಂದ ಆರಂಭವಾದ ಭಿನ್ನಾಭಿಪ್ರಾಯಗಳು. ಅಣ್ಣ ತಮ್ಮಂದಿರು ಬೇರೆಯಾಗುವ ಸಂದರ್ಭ ಬಂದಿತು. ಪಾಲು ಮಾಡಲಾಗಿ ಲಿಗಾಡೆಯವರ ದೊಡ್ಡವಾಡಿಯು ಸಣ್ಣ ತಮ್ಮನ ಪಾಲಿಗೆ ಬಂದಿತ್ತು. ಮನೆಯ ಶಾಂತಿ ನಿಧಾನವಾಗಿ ಕರಗುತ್ತ ಹೋಗಿತು. ಒಂದು ದಿನ ಆ ಮನೆಯ ಮೌನವೇ ಹೃದಯವನ್ನು ಕಲುಕುವಂತಾಯಿತು…….ಅತ್ತೆ ಪ್ರಯಾಗಬಾಯಿಯು ಯಾವುದೋ ಕೆಲಸಕ್ಕೆ ಬೇರೆ ಊರಿಗೆ ಹೋಗಿದ್ದರು. ಹಾಗೆ ಗಂಡ ವೈದ್ಯರಿಗೆ ತೋರಿಸಿಕೊಂಡು ಬರಲು ಕೋಲ್ಕತ್ತಾಗೆ ಹೋಗಿದ್ದರು,ಜಯದೇವಿ ತಾಯಿಯವರ ಪುಟ್ಟ ಮಗು ಜ್ವರದಿಂದ ಕಂಗೆಟ್ಟು ಮಲಗಿತ್ತು. ತಾಯಿಯ ಕಣ್ಣುಗಳಲ್ಲಿ ಆತಂಕ, ಹೃದಯದಲ್ಲಿ ಕಳವಳ. ಮಗು ಜ್ವರದಲ್ಲಿ ಮೈ ಸುಡುತ್ತಿತ್ತು……ಆದರೆ ಆ ಮನೆಯಲ್ಲಿದ್ದ ಕೆಲವು ಹೃದಯಗಳು ಆ ನೋವನ್ನು ಅರ್ಥಮಾಡಿಕೊಳ್ಳಲಿಲ್ಲ. ಜ್ವರದಿಂದ ನರಳುತ್ತಿದ್ದ ಆ ಮಗುವಿನ ಕಡೆಗೆ ನಿರ್ಲಕ್ಷ್ಯದ ಕಣ್ಣುಗಳು ತಿರುಗಿದವೇ…….. ಹೊರತು ಮಗುವಿಗೇನು ಆಗಿದೆ ಅಂತ ಕೇಳದೇ ಹೊರಗಡೆ ಹೊರಟು ಹೋದರು. ತಾಯಿಯವರಿಗೆ ಏನು ಮಾಡಬೇಕು ಅನ್ನುವುದು ತಿಳಿಯಲಿಲ್ಲ…. ಹೀಗಾಗಿ ಮನೆಯಲ್ಲಿ ಯಾವುದಾದರೂ ಔಷದವನ್ನು ತರಬೇಕು ಎಂದು ಮೇಲೆಗಡೆ ಕೋಣೆಗೆ ಹೋದಾಗ ಆ ಕೋಣೆಗಳಿಗೆಲ್ಲ ಬೀಗ ಹಾಕಿದ್ದು ನೋಡಿ ಎದೆ ಝಲ್ಲೆಂದಿತ್ತು…….!!?? ತಾಯಿಗೆ ಆ ಕ್ಷಣ ಸ್ಪಷ್ಟವಾಯಿತು — ಇಲ್ಲಿ ಉಳಿದರೆ ತನ್ನ ಮಕ್ಕಳಿಗೆ ಬೇಕಾದ ಮಮತೆ ಮತ್ತು ಆರೈಕೆ ಸಿಗುವುದಿಲ್ಲ ಎಂಬ ಸತ್ಯತಿಳಿದು ಕಣ್ಣೀರು ತಡೆದುಕೊಂಡು, ತನ್ನ ಮಕ್ಕಳನ್ನು ಮುದ್ದಾಗಿ ತಬ್ಬಿಕೊಂಡರು, ಹೊಸ ನಿರ್ಧಾರವನ್ನು ತೆಗೆದುಕೊಂಡರು. ತನ್ನ ಮಕ್ಕಳಿಗಾಗಿ ಒಂದು ಬೇರೆ ಮನೆ ಕಟ್ಟಬೇಕೆಂಬ ಮನಸ್ಸು ಮಾಡಿದರು. ಆ ನಿರ್ಧಾರದಲ್ಲಿ ನೋವು ಇತ್ತು…ಕುಟುಂಬದವರೆಲ್ಲರೂ ಒಂದಾಗಿ ಒಂದು ಕಡೆ ಸಂತೋಷದಿಂದ ನಗುನಗುತ ನಲುವಿನಲಿ ನಲಿಯುತ ಬಾಳಬೇಕೆಂಬುವ ಆಶೆಯಗಳ ವಿಚ್ಛೇದನೆಯ ವೇದನೆ ಅದಾಗಿತ್ತು…….!!! ಹೀಗಾಗಿ ಜಯದೇವಿ ತಾಯಿಯವರು ತಮ್ಮ ನೋವನ್ನು ಮನದಾಳದಲ್ಲಿ ಮರೆಮಾಡಿಕೊಂಡು, ಮಕ್ಕಳ ಭವಿಷ್ಯಕ್ಕಾಗಿ ಹೊಸ ಜೀವನದ ದಾರಿಯನ್ನು ಆರಿಸಿಕೊಂಡರು.ಜ್ವರದಲ್ಲಿದ್ದ ಮಗುವನ್ನು ಎತ್ತಿಕೊಂಡು ತವರು ಮನೆ ಕಡೆ ಹೆಜ್ಜೆ ಹಾಕಿದರು.ಆ ದಿನದಿಂದ ಅವರ ಜೀವನದಲ್ಲಿ ಮತ್ತೊಂದು ಹೊಸ ಹೋರಾಟ ಪ್ರಾರಂಭವಾಯಿತು… ಆದರೆ ಆ ಹೋರಾಟದ ಹಿಂದಿದ್ದ ಶಕ್ತಿ — ತಾಯಿತನದಾಗಿತ್ತು. ತವರು ಮನೆಯಲ್ಲಿ ತಂದೆ ತಾಯಿ ಅತ್ಯಂತ ಆತ್ಮೀಯತೆಯಿಂದ ಬರಮಾಡಿಕೊಂಡು. ಅವರನ್ನು ಸಂತೈಸಿ ಅಳಿಯ ಬಂದ ಮೇಲೆ ಬೇರೆ ಮನೆಗೆ ಹೋಗಲು ಬಿಡದೆ ತಮ್ಮ ಮನೆಯಲ್ಲಿಯೇ ಕೆಳಗಡೆ ಇರಲು ಅನು ಮಾಡಿಕೊಟ್ಟರು. ಅವರ ಮನೆಯ ಎದುರುಗಡೆ ವಾರದ ಮಲ್ಲಪ್ಪನವರ ಮನೆಯಿತ್ತು. ಅವರ ವಾಡೆಯ ಎದುರುಗಡೆ ಜಗ ಖಾಲಿ ಇತ್ತು. ಆ ಜಗವನ್ನು ಖರೀದಿ ಮಾಡಿ ಅಲ್ಲಿಯೇ ಮನೆ ಕಟ್ಟಲು ಪ್ರಾರಂಭಿಸಿದರು.ಆ ಮನೆಗೆ ಅತ್ಯಂತ ಪ್ರೀತಿಯಿಂದ *ಜಯನೀಕೆತನ* ಅಂತ ತಾಯಿಯವರ ಹೆಸರಲ್ಲಿ ಗಂಡ ಚೆನ್ನಮಲ್ಲಪ್ಪನವರು ಮನೆ ಕಟ್ಟಿಸಿದರು. ಇಪ್ಪತ್ತೆರಡು ಕೋಣೆಗಳನ್ನು ಹೊಂದಿರುವ ಭವ್ಯವಾದ ಮನೆ…. ಅರಮನೆಯಂತೆ ವಿಶಾಲವಾಗಿ ಕಟ್ಟಿದರು. ದೂರದಿಂದ ನೋಡಿದವರಿಗೆ ಅದು ಸಾಮಾನ್ಯ ಮನೆ ಅಲ್ಲ, ಒಂದು ದೊಡ್ಡ ಸಂಸ್ಕೃತಿಯ ಸಂಕೇತದಂತೆ ಕಾಣುತ್ತಿತ್ತು.ಮನೆಯ ಒಳಗೆ ಕಾಲಿಟ್ಟ ತಕ್ಷಣ ದೊಡ್ಡ ವಿಶಾಲವಾದ ಶಿವಯೋಗಿ ಸಿದ್ದರಾಮನ ಭಾವಚಿತ್ರದ ದರ್ಶನ ಮಾಡಿ ಒಳಗೆ ಹೋಗಬೇಕಾಗುತಿತ್ತು….._ಸಿದ್ದರಾಮನ ಭಾವ ಚಿತ್ರ ಒಳಗೆ ಹೋದರೆ ವಿಶಾಲವಾದ ಅಂಗಳ ಕಣ್ಣಿಗೆ ಬೀಳುತ್ತಿತ್ತು . ಮನೆಯಲ್ಲಿ ಚೆನ್ನಾಗಿ ಬೆಳಕು ಗಾಳಿ ಆಡಲೆಂದು ಮಧ್ಯದಲ್ಲಿ ತೆರೆದ ಅಂಗಳವಿತ್ತು.ಮನೆಯ ವಿವಿಧ ದಿಕ್ಕುಗಳಿಗೆ ಕೊಣೆಗಳು. ಪ್ರತಿಯೊಂದು ಕೋಣೆಯೂ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿತ್ತು—ಕೆಲವು ವಿಶ್ರಾಂತಿಗಾಗಿ, ಕೆಲವು ಅತಿಥಿಗಳಿಗಾಗಿ, ಇನ್ನೊಂದು ದೇವರ ಮನೆಗಾಗಿ ಮೀಸಲಿದ್ದರೆ ಒಂದು ದೊಡ್ಡ ಅಡಿಗೆಯ ಮನೆ ಇನ್ನೊಂದು ಚಿಕ್ಕ ಅಡಿಗೆ ಮನೆ ಇತ್ತು .ಇನ್ನೊಂದು ಕಾಳುಗಳ ಸಂಗ್ರಹಣೆ ಮಾಡುವ ಕೋಣೆ, ಊಟದ ಮನೆ ಇನ್ನೊಂದು ಮನೆಯ ವಸ್ತ ಒಡವೆಗಳನ್ನು ಕಾಗದ ಪತ್ರಗಳನ್ನು ಬಂಗಾರ ಬೆಳ್ಳಿಯ ಸಾಮಗ್ರಿಗಳನ್ನು ಇಡುವ ಟ್ರೆಝರಿ ಕೋಣೆ ಬೇರೆಯಾಗಿತ್ತು. ಒಂದು ವಿಶಾಲವಾದ ಕೋಣೆ ಬಡ್ಡಿ ವ್ಯವಹಾರದಲ್ಲಿ ಅಡವಿ ಇಟ್ಟುಕೊಂಡ ಸಾಮಗ್ರಿಗಳದ್ದು.(ಈ ಕೋಣೆ ತಾಯಿಯವರಿಗೆ ಇಷ್ಟವಾಗುತ್ತಿರಲಿಲ್ಲ ಏಕೆಂದರೆ ಜನರು ಅನಿವಾರ್ಯತೆಯಲ್ಲಿ ತಂದಿಡುವ ಸಾಮಗ್ರಿಗಳನ್ನು ನೋಡಿದರೆ ಅವರಿಗೆ ಬಹಳ ಕಳಗಳಾಗುತ್ತಿತ್ತು) ಹಾಗೇ ನೆಲಮನೆಯಲ್ಲಿ ಸುಮಾರು 14 ಮುನಿಮರು(ಕಾರಭಾರಿಗಳು )ಕುಳಿತುಕೊಂಡು ಇಡೀ ಆಸ್ತಿಯ ವಹಿವಾಟದ ಲೆಕ್ಕಾಚಾರವನ್ನು ಇಡಲು ಬರುತ್ತಿದ್ದರು .ಅವರಿಗಾಗಿ ಕೆಳಮನೆಯಲ್ಲಿ ಒಂದು ದೊಡ್ಡ ಮನೆ ಕಟ್ಟಲಾಗಿತ್ತು. ಅದರ ಮೇಲ್ಗಡೆ ಇನ್ನೊಂದು ರೂಮು ಹೊರಗಡೆಯಿಂದ ಬಂದು ಹೋಗುವರಿಗಾಗಿ ಆಫೀಸ್ ರೂಮ್ ಅನ್ನು ಮಾಡಲಾಗಿತ್ತು.ಮೊದಲನೇ ಅಂತಸ್ತಿನ ಕೋಣೆಗಳೆಲ್ಲ ಮಕ್ಕಳು- ಸೊಸೆಯಂದಿರಗಾಗಿ ತಮಗಾಗಿ ಮೀಸಲಿದ್ದವು .ಅಲ್ಲಿ ಒಂದು ದೊಡ್ಡ ಹಾಲ್ ಕಟ್ಟಲಾಗಿತ್ತು. ಕೆಳಗಡೆ ಒಂದು ಕೂಡಾ ದೊಡ್ಡ ಹಾಲ್ ಇತ್ತು……ಮನೆಗೆ ಬಂದು ಹೋಗುವ ಅತಿಥಿಗಳಾಗಿ … ಸಂಪತ್ ಭರಿತವಾದ ಮನೆ……..!! ಜಯದೇವ ತಾಯಿಯವರ ವಾಡೆ ಮೊದಲನೇ ಅಂತಸ್ತಿಗೆ ಹೋದರೆ ಎದುರುಗಡೆ ಜಯದೇವಿ ತಾಯಿಯವರ ಕೋಣೆ, ಎಡ ಭಾಗಕ್ಕೆ ಚಿಕ್ಕದೊಂದು ಹೂವೂ ತೋಟವನ್ನು ನಿರ್ಮಿಸಿಕೊಂಡಿದ್ದರು. ಅದಕ್ಕಾಗಿ ಗಾಳಿ ಬೆಳಕು ಆಡಲೆಂದು ಮೇಲೆ ಸ್ಥಳ ಬಿಟ್ಟಿದ್ದರು. ಸುಂದರ ಚಿಕ್ಕ ತೋಟದಲಿ ಹಸಿರು ಗಿಡಗಳು, ಬಣ್ಣ ಬಣ್ಣದ ಹೂಗಳು ಅವುಗಳಲ್ಲಿ ಮುಖ್ಯವಾಗಿ ಟ್ಯೂಬ್ ರೊಜ ಅಂದರೆ ನಿಶಿಗಂಧ ಹೂಗಳು ಬಹಳ ಪ್ರಿಯವಾದ ಹೂಗಳು ತಾಯಿಯವರಿಗೆ … ಇನ್ನೂ ‘ರಾತರಾಣಿ’ಹೂವುಗಳು ‘..ರಾತ್ರಿ ಸುಗಂಧ ಸುಸೂವ ಗಿಡಗಳಿದ್ದವು. ರಾತ್ರಿ ಪರಿಮಳವು ಗಾಳಿಯಲ್ಲಿ ಹರಡಿ ಮನೆಯ ವಾತಾವರಣವನ್ನು ಇನ್ನಷ್ಟು ಮನಮೋಹರ ವಾಗಿಸುತ್ತಿತ್ತು. ‘ಜಯನಿಕೇತನವು’ ಕೇವಲ ಸುಂದರ ಕಟ್ಟಡ ಮಾತ್ರವಲ್ಲ;ಅದು ವೈಭವ, ಸಂಸ್ಕೃತಿ ಮತ್ತು ಆತಿಥ್ಯವನ್ನು ಹೊತ್ತು ನಿಂತಿರುವ ಒಂದು ಜೀವಂತ ಅರಮನೆ ಎಂಬ ಭಾವನೆಯನ್ನು ಮೂಡಿಸುತ್ತಿತ್ತು.*ಜಯನಿಕೇತನ್*ಒಂದು ನಂದನ ವನದಂತೆ ರಾರಾಜಿಸಲಾರಂಭಿಸಿತ್ತು. ಜಯದೇವಿ ತಾಯಿಯವರು ಬಳಸುತ್ತಿದ್ದ ಕನ್ನ ಹಿರಿಯ ಮಗಳು ಮತ್ತು ತಂಗಿಯಂದಿರೇಲ್ಲ ಸೇರಿ ಶಾಲೆಗೆ ಹೋಗಿ ಬರುತ್ತಿದ್ದರು. ಹಿರಿಯ ಮಗಳು ಶಶಿಕಲಾ ತುಂಬಾ ಸುಂದರ ಹಾಗೂ ಜಾಣ ತಾಯಿಯಂತೆ ನಿರ್ಗಳವಾಗಿ ಹಾಡುವ ಹಾಗೂ ಭಾಷಣ ಮಾಡುತ್ತಿದ್ದರು. ಜಯದೇವಿ ತಾಯಿಯವರು ಬಾಲ ಸಿದ್ದರಾಮ ಅಕ್ಕಮಹಾದೇವಿ ಮುಂತಾದ ಶರಣರ ನಾಟಕಗಳನ್ನು ತಾವೇ ಬರೆದು ಮಕ್ಕಳ ಕೈಯಲ್ಲಿ ನಾಡಹಬ್ಬದಲ್ಲಿ ನಟನೆ ಮಾಡಿಸುತ್ತಿದ್ದರು ಮುಖ್ಯ ಪಾತ್ರದಲ್ಲಿ ಮಗಳು ಶಶಿಕಲಾ ಭಾಗವಹಿಸುತಿದ್ದರು. ಸಿದ್ದರಾಮನು ಮಲ್ಲಯ್ಯ ನೀನು ಎಲ್ಲಿ ಅಡಗಿದಿಯಾ ಎಂದು ಪರಿಪರಿಯಾಗಿ ಹಂಬಲಿಸಿ….ನಟನೆ ಮಾಡುತ್ತಿದ್ದ ದೃಶ್ಯವನ್ನು ನೋಡಿ ಧಾರಾಕಾರವಾಗಿ ತಾಯಿಯವರ ಕಣ್ಣೀರು ಹರಿಯಲಾರಂಭಿಸುತ್ತಿತ್ತು. ಭಾವುಕರಾಗುತ್ತಿದ್ದರು. ಅಕ್ಕನ ಪಾತ್ರದಲ್ಲಿ ಮಗಳು……. “ಅಳಿಸಂಕುಲವೇ ಮಾಮರವೇ ನೀವು ಕಣ್ಣಂಡಿರಾ ಎನ್ನ ಚೆನ್ನಮಲ್ಲಿಕಾರ್ಜುನನ್ನು ನೀವು ಕಂಡಿರಾ” ಅಂತ ಅತ್ಯಂತ ಭಾವಕಳಾಗಿ ಮಗಳು ನಟಿಸುತ್ತಿರುವದ ನೋಡಿ ಶರಣೆ ಅಕ್ಕನನ್ನು ನೆನೆದು ಹನಿಗಣ್ಣ ಆಗುತ್ತಿದ್ದರು.ಮಗಳನ್ನು ಅತ್ಯಂತ ಅಭಿಮಾನದಿಂದ ಎದೆಗಪ್ಪಿ ಕೊಳ್ಳುತ್ತಿದ್ದರು.ತಮ್ಮ ಸಂಸ್ಕಾಗಳ ಗೂಡಿನಲಿ ಮಕ್ಕಳಿಗೆ ಬೆಳಿಸಲಾರಂಭೀಸಿದರು. ಜಯದೇವಿ ತಾಯಿಯವರು ತಮ್ಮ ಬದುಕಿನ ಅನುಭವಗಳಿಂದ ಒಂದು ಮಹತ್ವದ ಸತ್ಯವನ್ನು ಅರಿತುಕೊಂಡಿದ್ದರು – ಸಮಾಜದ ಬದಲಾವಣೆ ಮನೆಯೊಳಗೇ ಆರಂಭವಾಗಬೇಕು ಎಂದು. ಅದಕ್ಕಾಗಿಯೇ ಅವರು ತಮ್ಮ ಮಕ್ಕಳನ್ನು ಶರಣ ಸಂಸ್ಕೃತಿಯ ಮೌಲ್ಯಗಳಲ್ಲಿ ಬೆಳೆಸಲು ಆರಂಭಿಸಿದರು. ಮನೆಯೊಳಗೆ ಒಮ್ಮೆ ಇದ್ದ ಮೂಢನಂಬಿಕೆಗಳು, ಅನಾವಶ್ಯಕ ಆಚರಣೆಗಳು ನಿಧಾನವಾಗಿ ಕಣ್ಮರೆಯಾಗಲು ಆರಂಭಿಸಿದವು. ಜಯದೇವಿ ತಾಯಿಯವರು ಯಾವ ಮಡಿ ಮೈಲಿಗೆಯನ್ನು ಒಪ್ಪುತ್ತಿರಲಿಲ್ಲ…. ಜಾತಿ ಧರ್ಮ ನೀಚ ಸಂಕೋಲನದಿಂದ ಹೊರಗಿದ್ದರು.“ಮನುಷ್ಯನಿಗೆ ಮಾನವೀಯತೆಯೇ ದೊಡ್ಡ ಧರ್ಮ” ಎಂದು ತಾಯಿ ಮಕ್ಕಳಿಗೆ ಹೇಳುತ್ತಿದ್ದರು. ಹೆಣ್ಣು ಗಂಡೆಂದು ದೇವರು ಭೇಧ ತೋರಲಾರ ಎನ್ನುತ್ತಿದ್ದರು. ಮುಟ್ಟಾದರೆ ಹೆಣ್ಣನ್ನು ಕೀಳಾಗಿ ನೋಡುವುದು ಖಂಡಿಸುತ್ತಿದ್ದರು ಏಕೆಂದರೆ ತಾಯಿ ಜಗದಂಬೆಯು ಕೂಡ ಹೆಣ್ಣಲ್ಲವೇ ಅಂತ ಕೇಳುತ್ತಿದ್ದರು. ಅದಕ್ಕೆ ದೇವರನ್ನು ಆ ಸಮಯದಲ್ಲಿ ಯಾಕೆ ಮುಟ್ಟಬಾರದು ಅನ್ನುವ ಪ್ರಶ್ನೆ ಅವರದಾಗಿತ್ತು…!!??? ಅವರ ಮಾತುಗಳಲ್ಲಿ ಕೇವಲ ಉಪದೇಶವಿರಲಿಲ್ಲ; ಬದುಕಿನಲ್ಲಿ ಅವರು ಅದನ್ನು ಅನುಸರಿಸುತ್ತಿದ್ದರು. ಮಕ್ಕಳು ಏನನ್ನಾದರೂ ಪ್ರಶ್ನಿಸಿದಾಗ,“ಹೀಗೆ ಮಾಡಬೇಕು ಎಂದು ಹೇಳಿತಿದ್ದರು ಅದರ ಒಳ ಅಡಕವಾದ ಅರ್ಥ ಏನು ಎಂದು ತಿಳಿದುಕೊಳ್ಳಿ ಮೊದಲು ಎಂದು ಪ್ರೋತ್ಸಾಹಿಸುತ್ತಿದ್ದರು. ಹೀಗಾಗಿ ಅವರ ಮನೆ ನಿಧಾನವಾಗಿ ಜ್ಞಾನ, ಸಮಾನತೆ ಮತ್ತು ಪ್ರೀತಿ ತುಂಬಿದ ಶರಣ ಸಂಸ್ಕೃತಿಯ ಮನೆ ಆಗಿ ರೂಪುಗೊಂಡಿತು.ಅತ್ಯಂತ ಸಾಂಪ್ರದಾಯಸ್ತ ಮನೆಯಾದ ಲಿಗಾಡೆ ಮನೆತನದವರು ವೈಚಾರಿಕತೆಯ ಶರಣ ಆಚರಣೆ ಅತ್ತ ತಿರುಗಲಾರಂಭಿಸಿದರು. *ಮೂಢನಂಬಿಕೆಗಳು ಮನುಷ್ಯನ ಮನಸ್ಸನ್ನು ಬಂಧಿಸುತ್ತವೆ… ಶರಣರ ಮಾರ್ಗ ಮನುಷ್ಯನ ಮನಸ್ಸನ್ನು ಮುಕ್ತಗೊಳಿಸುತ್ತದೆ.”* ಆ ಮಾತುಗಳು ಮಕ್ಕಳ ಮನಸ್ಸಿನಲ್ಲಿ ಆಳವಾಗಿ ಬೇರುರರಾಲಂಭೀಸಿದವು.ಅವರು ಕೇವಲ ಮಕ್ಕಳಿಗೆ ತಾಯಿಯಾಗಿರಲಿಲ್ಲ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡ ಶರಣ ಸಂಸ್ಕೃತಿಯ ವಾರಸುದಾರರು ಆಗಿ ಬೆಳೆಯಲು ಆರಂಭಿಸಿದರು.ಹೀಗೆ, ಜಯದೇವಿ ತಾಯಿಯ ಮನೆಅದು ಸಮಾನತೆ, ಜ್ಞಾನ ಮತ್ತು ಮಾನವೀಯತೆಯನ್ನು ಬೆಳೆಸುವ ಒಂದು ಚಿಕ್ಕ ಸಮಾಜ ಆಗಿತ್ತು. ಇದಕ್ಕೆ ಉದಾಹರಣೆ ಎಂದರೆ ಜಯದೇವಿತಾಯಿಯವರ ಐದು ಅತ್ತೆಯಂದಿರು ಸಾಂಪ್ರದಾಯಸ್ಥರು …..ಪಡಸಾಲೆಯಲ್ಲಿ ನಿಂತು ಮಾತನಾಡಿದರೆ ,ಅಂಗಳದಲ್ಲಿ ನಿಂತು ಕುಂಕುಮವನ್ನು ಇಟ್ಟಿರೆ ಸಾವಿರ ಸಲ ಬೈದ ಅತ್ತೆಯಂದರು ….ಮುಂದೆ ತಾಯಿಯವರನ್ನು ಸಭೆ ಸಮಾರಂಭಗಳಿಗೆ ಅತ್ಯಂತ ಆನಂದಭರಿತರಾಗಿ ಕಳುಹಿಸಿ ಕೊಡಲಾರಂಭಿಸಿದರು .ಗಂಡನ ಅನಾರೋಗ್ಯದಲ್ಲಿ ತಾಯಿಯವರಿಗೆ ಸಮಾರಂಭಗಳಿಗೆ ಹೋಗಲು ಮನಸ್ಸಿಇಲ್ಲದಿದ್ದರು …. ಗಂಡ ತಮ್ಮ ಕಾರುಗಳನ್ನು ಕೊಟ್ಟು ಬೇರೆ ಊರುಗಳಿಗೆ ಹೋಗಿ ಭಾಷಣ ಮಾಡಿ ಬರಲು ಒತ್ತಾಯಿಸುತ್ತಿದ್ದರು. ” ಇಲ್ಲಿ ನನ್ನ ನೋಡಿಕೊಳ್ಳಲು ಅನೇಕ ಜನರಿದ್ದಾರೆ…… ಅಲ್ಲಿ ನೀನು ಇಡೀ ಸಮಾಜಕ್ಕೆ ಬೇಕಾಗಿದ್ದೀಯಾ ನೀನು ಹೋಗು “ಅನ್ನುವಷ್ಟರ ಮಟ್ಟಿಗೆ ಅವರು ವೈಶಾಲ್ಯ ಮನೋಭಾವನೆಯನ್ನು ಹೊಂದಿದ್ದರು. ಚೆನ್ನ ಮಲ್ಲಪ್ಪನವರು ಕಾಯಿಲೆಯಲ್ಲಿ ಬಳಲಾರಂಭಿಸಿದ ವೇದನೆಯ ದಿನಗಳು ಅವು…. ವೈದ್ಯರಿಗೆ ತೋರಿಸಲು ದೊಡ್ಡ ದೊಡ್ಡ ಊರುಗಳಿಗೆ ಕಲ್ಕತ್ತಾ ಬೊಂಬೆ ಊರುಗಳಿಗೆ ಹೋಗುವಾಗ ಇಡೀ ರೈಲ್ವೆ ಒಂದು ಬಂಡಿಯಲ್ಲಿ ಅವರಿಗಾಗಿ ಮೀಸಲಾಗಿಡಲಾಗುತ್ತಿತ್ತು. ಹಾಗೇ ಊರುಗಳಿಗೆ ಹೋದಲ್ಲೆಲ್ಲ ಹೆಂಡತಿಗೆ ಅಪ್ಪಟ ರೇಷ್ಮೆ ಸೀರೆ ಹಾಗೂ ವಜ್ರಗಳ ಆಭರಣಗಳನ್ನು ತಂದು
ಸಾವಿಲ್ಲದ ಶರಣರು ಮಾಲಿಕೆ”ಕ್ರಾಂತಿಕಾರ ಸಂತ ಶ್ರೇಷ್ಠ ತತ್ವ ಪದಕಾರ ಶ್ರೀ ತಿಂಥಣಿ ಮೌನೇಶ್ವರರು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಶರಣರ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ “ಕ್ರಾಂತಿಕಾರ ಸಂತ ಶ್ರೇಷ್ಠ ತತ್ವ ಪದಕಾರ ಶ್ರೀ ತಿಂಥಣಿ ಮೌನೇಶ್ವರರು” ಕರ್ನಾಟಕವು ಹಲವು ಶರಣರ ಸಂತರ ದಾರ್ಶನಿಕರ ನೆಲೆಬೀಡು. ಸಂಪ್ರದಾಯಸ್ಥ ವಿಶ್ವ ಕರ್ಮರ ಕುಟುಂಬದಲ್ಲಿ ಜನಿಸಿ ಅತ್ಯಂತ ವೈಚಾರಿಕತೆಯ ವಚನಗಳನ್ನು ರಚಿಸಿ ಸಾಮಾಜಿಕ ಧಾರ್ಮಿಕ ಅಂಕು ಡೊಂಕುಗಳನ್ನು ತಿದ್ದಿ ಟೀಕಿಸುವ ವಿಡಂಬಿಸುವ ತನ್ನ ಹುಟ್ಟು ಕುಲದ ಜನರನ್ನೇ ಟೀಕಿಸಿ ಎಚ್ಚರಿಸುವ ದಿಟ್ಟ ಶರಣ ಸಂಸ್ಕೃತಿಯ ವಾರಸುದಾರ ತಿಂಥಣಿ ಮೌನೇಶ್ವರ ಅಥವಾ ಮೌನಪ್ಪ ಮೌನೋದ್ದಿನ ಎಂಬ ಬೇರೆ ಬೇರೆ ಸಮುದಾಯದ ಪ್ರೀತಿಗೆ ಭಕ್ತಿಗೆ ಪಾತ್ರರಾದವರು ಮೌನೇಶ್ವರರು. ಪೌರಾಣಿಕ ಹಿನ್ನೆಲೆ ಅಂದಿನ ಗುಲಬರ್ಗಾ ಜಿಲ್ಲೆಯ ಇವತ್ತಿನ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವರಗೋನಾಳ ಎಂಬ ಗ್ರಾಮದ ಪಂಚಾಳ ಅಥವಾ ವಿಶ್ವಕರ್ಮ ಕುಲದಂಪತಿಗಳಾದ ಶೇಷಪ್ಪ ಆಚಾರ್ಯ ಮತ್ತು ಶೇಷಮ್ಮರೆಂಬ (ಇವರಿಗೆ ಹಾವಪ್ಪ ಮತ್ತು ಹಾವಕ್ಕ ಎಂದು ಕರೆಯಲಾಗುತ್ತಿತ್ತು) ದಂಪತಿಗಳಿದ್ದರು. ಅವರಿಗೆ ಬಹಳಕಾಲ ಮಕ್ಕಳಾಗಿರಲಿಲ್ಲ. ಶೀಲೆ ಶೇಷಮ್ಮಳು ಆ ಊರಿನ ಆದಿಲಿಂಗೇಶ್ವರ ದೈವಕ್ಕೆ 12 ವರ್ಷಗಳ ಕಾಲ ದಿನನಿತ್ಯವೂ ಬೆಳಗ್ಗೆ ಪೂಜೆಗೈದು ಬರುತ್ತಿದ್ದಳು. ಕೊನೆಗೊಂದುದಿನ ಗಂಡನಿಗೆ ಸಂಶಯ ಬಂದು ಅವಳನ್ನು ಹಿಂಬಾಲಿಸಿದಾಗ ಅವನಿಗೆ ದೃಗ್ಗೋಚರವೇ ಎದುರಾಯಿತು. ಏನೆಂದರೆ ಶೇಷಮ್ಮಳು ಆದಿಲಿಂಗೇಶ್ವರನಿಗೆ ಎಂದಿನಂತೆ ಪೂಜೆಗೈದು ‘ತಂದೆ ಹನ್ನೆರಡು ವರ್ಷಗಳ ಕಾಲ ನಿನ್ನ ಪೂಜೆಗೈದಿರುವೆ ಈಗಲಾದರೂ ಮಕ್ಕಳ ಭಾಗ್ಯವನೀತ್ತು ಸಲಹು ತಂದೆ’ ಎಂದಾಗ ಸಾಕ್ಷಾತ್ ಶಿವನೇ ಪ್ರತ್ಯಕ್ಷವಾಗಿ “ಮಗಳೇ ಶೇಷಮ್ಮ ನೀನು ನನ್ನ ಪನ್ನಂಗಾಭರಣವಾದ್ದರಿಂದ ಆ ಬ್ರಹ್ಮನು ನಿನ್ನ ದೈವದಲ್ಲಿ ಸೃಷ್ಟಿ ಬೆಳೆಸುವ ಸಂತಾನ ಭಾಗ್ಯ ಫಲವನ್ನಿಡುವ ಸಾಹಸ ಮಾಡಲಿಲ್ಲ. ಆದಕಾರಣ ನಾನೇ ನಿನ್ನ ಮಗನಾಗಿ ನಾಳೆಯ ಉಷಾ ಕಾಲದಲ್ಲಿ ನಿನ್ನ ಮಗ್ಗುಲಲ್ಲಿ ಮಲಗಿರುವೆ” ಎಂದು ಹೇಳಿ ಪರಮಾತ್ಮನು ಅಂತರ್ಗತನಾಗುತ್ತಾನೆ. ಇದನ್ನೆಲ್ಲ ಪ್ರತ್ಯಕ್ಷವಾಗಿ ದೇಗುಲದ ಒಂದು ಕಂಬದ ಮರೆಯಲ್ಲಿ ನಿಂತು ನೋಡುತ್ತಿದ್ದ ಶೇಷಮ್ಮಳ ಗಂಡ ಶೇಷಪ್ಪನ ಸಂಶಯವೆಲ್ಲವೂ ದೂರವಾಗಿ ಭಕ್ತಿಯ ಮಹಾಪೂರವು ಅವನ ಮನದಲ್ಲಿ ನೆಲೆಯಾಗುತ್ತದೆ ಎಂಬ ಐತಿಹ್ಯ ಪೌರಾಣಿಕ ಕಥೆಗಳಿಂದ ಮೌನೇಶ್ವರನ ಚಿತ್ರಣ ವ್ಯಕ್ತವಾಗಿದೆ. ನಂತರ ಪರಶಿವನೇ ಅಯೋನಿಜನಾಗಿ ಮೌನೇಶ್ವರರ ಅವತಾರದಿ ಚೆಲುವಿನ, ಚೆಂದದ, ಮುದ್ದಾದ ಮಗುವಿನ ರೂಪದಲ್ಲಿ ವರಪ್ರಸಾದವಾಗಿ ಧರೆಗಿಳಿದು ಬರುತ್ತಾನೆ ಎನ್ನುವ ಐತಿಹ್ಯವೂ ಇದೆ. ಜಗದ್ಗುರು ಶ್ರೀ ಮೌನೇಶ್ವರರು ಬರೀ ಮಹಿಮಾಪುರುಷರಲ್ಲದೆ ಕಾಲಜ್ಞಾನಿಗಳು, ವಚನಕಾರರು, ಸಮನ್ವತಾವಾದಿಗಳು, ಮಹಾನ್ ಮಾನವತಾವಾದಿಗಳೂ ಆಗಿದ್ದಾರೆ. 16ನೇ ಶತಮಾನದಲ್ಲಿ ಬರುವ ಶರಣರ, ವಚನಕಾರರ, ಸಂತರ ಸಾಲಿನಲ್ಲಿ ಮೌನೇಶ್ವರರು ಪ್ರಮುಖ ವಚನಕಾರರಾಗಿ ಕಂಡುಬರುತ್ತಾರೆ. ಮೌನೇಶ್ವರರು ಒಟ್ಟು 796ಕ್ಕೂ ಅಧಿಕ ವಚನಗಳನ್ನು ಬರೆದಿದ್ದಾರೆ. ಮೌನೇಶ್ವರರು ತಮ್ಮ ಎಲ್ಲ ವಚನಗಳಲ್ಲಿ 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಹೆಸರನ್ನು ಅಂಕಿತನಾಮವಾಗಿ ಬರೆದಿರುವುದನ್ನು ಕಾಣಬಹುದು. *ಭಾವೈಕ್ಯತೆಯ ಸಂತ* ಮೌನೇಶ್ವರರು ಹಿಂದೂ ಮುಸಲ್ಮಾನ ಧರ್ಮದ ಭಾವೈಕ್ಯತಾ ಸೂಚಕವಾಗಿ ಹೀಗೆ ಹೇಳಿದ್ದಾರೆ: “ಹಿಂದೂ ತುರುಕರಿಗೆ ಚಂದ್ರಮನೊಬ್ಬನೆ ನಿಂದಿಸಿದವನೇ ಅಧಮನು” ಎಂದು ತಮ್ಮ ವಚನವೊಂದರಲ್ಲಿ ಹೇಳಿದ್ದಾರೆ. ಹಿಂದೂ-ಮುಸ್ಲಿಂ ಸಾಮರಸ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ತಿಂಥಿಣಿಯ ಮೌನೇಶ್ವರರು ತಮ್ಮ ಸರಳ ಸಜ್ಜನಿಕೆಯ ಆಚಾರ ವಿಚಾರಗಳಿಂದಲೇ ಎಲ್ಲರನ್ನೂ ಆಕರ್ಷಿಸಿದ್ದರು. ಇವರು ಲಕ್ಷ್ಮೇಶ್ವರ, ಉಳವಿ, ಕಲ್ಯಾಣ, ವಿಜಯಪುರ, ಶಾಹಪುರ, ಸುರಪುರ, ದೇವದುರ್ಗ, ಲಿಂಗನಬಂಡಿ, ವರವಿ, ಛಬ್ಬಿ, ರಾಚೋಟಿ, ಶಿರಸಂಗಿ, ತಿರುಪತಿ, ಕಾಶಿ, ಮುಂತಾದೆಡೆ ತಿರುಗಾಡಿ, ಸಾಮಾಜಿಕ ಸುಧಾರಣೆಯನ್ನು ಮೆರೆದವರೆಂಬುದು ಇತಿಹಾಸ. ವರವಿ ಮತ್ತು ತಿಂಥಿಣಿ ಸ್ಥಳಗಳಲ್ಲಿ ಇವರ ಹೆಸರಿನ ದೇವಾಲಯಗಳಿವೆ. ಬಿಜಾಪುರದ ಸುತ್ತಮುತ್ತ ಅನೇಕ ಗುಡಿಗಳಿವೆ. ಇವು ಹಿಂದೂ-ಮುಸ್ಲಿಂ ಬೆರೆತ ಶೈಲಿಗಳಲ್ಲಿವೆ. ಮೌನೇಶ್ವರರು ವಿಶ್ವಕರ್ಮ ಸಮಾಜದಿಂದ ಬಂದವರು. ದಕ್ಷಿಣ ಭಾರತದಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಜೀವನದುದ್ದಕ್ಕೂ ಸಾರಿದವರು ಮೌನೇಶ್ವರರೇ. ಅವರ ಒಂದು ಪದ್ಯ ಹೀಗಿದೆ- ‘|| ಓಂ ಏಕಲಾಖ್ ಐಂಸಿ ಹಜಾರ್ ಪಾಂಚೋ ಪೀರ್ ಪೈಗಂಬರ್ ಮೌನಾಧೀನ್ ಜಿತಾಪೀರ್ ಪೈಗಂಬರ್ ಮಾಧೀದೀ ಕಾಶೀಶೀಪತಿ ಗಂಗಾಧರ ಹರ ಹರ ಮಹಾದೇವ||’ ಮಹಮ್ಮದ್ ಪೈಗಂಬರ ಮತ್ತು ಗಂಗಾಧರ ಒಬ್ಬರೇ ಎಂದು ಮೌನೇಶ್ವರರು ಇದರಲ್ಲಿ ಸಾರಿದ್ದಾರೆ. ಈ ಮಾತಿನ ಅಖಂಡಾರ್ಥ ಮೌನೇಶ್ವರರ ಪದ್ಯದಲ್ಲಿದೆ. ಓಂ ಮತ್ತು ಅಲ್ಲಾ ಒಂದೇ ಎಂಬ ಅದ್ವಯಭಾವದ ಸಾಂಸ್ಕೃತಿಕ ಸಿದ್ಧಿಯನ್ನು ಮೊಳಗಿಸಿದ ಮಹಾಮಾನವತಾವಾದಿ, ಸಾಮಾಜಿಕ ಸಂತ ತಿಂಥಿಣಿ ಮೋನಪ್ಪಯ್ಯ! ಜನನ ತಿಂಥಿಣಿ ಮೌನೇಶ್ವರ ಎಂಬ ಹೆಸರಿನಲ್ಲಿ ಪ್ರಸಿದ್ಧಿಪಡೆದ ಇವರು ‘ಬಸವಣ್ಣ’ ಎಂಬ ಅಂಕಿತದಲ್ಲಿ ಹಲವಾರು ವಚನಗಳನ್ನು ಬರೆದಿದ್ದಾರೆ, ಹಂಪೆಯ ಎಮ್ಮೆ ಬಸವಣ್ಣನನ್ನು (ಕ್ರಿ.ಶ. 1510-1570) ವಚನದಲ್ಲಿ ನೆನೆದಿದ್ದಾರೆ. ವಿಜಯಪುರ ಜಿಲ್ಲೆಯ ಗೋಲಗೇರಿ ಎಂಬಲ್ಲಿದ್ದ 16ನೇ ಶತಮಾನದ ಕುರುಬಗೊಲ್ಲಾಳ ನನ್ನು ಮತ್ತೊಂದು ವಚನದಲ್ಲಿ ಸ್ಮರಿಸಿದ್ದಾರೆ. ಇವರೊಂದು ವಚನದಲ್ಲಿ, ಬಿಜಾಪುರದ ಮೊದಲನೆಯ ಆದಿಲ್ಶಾಹನಿಗೆ (ಕ್ರಿ.ಶ. 1557-1580) ಪಟ್ಟಕಟ್ಟಿದ ಪ್ರಸಂಗವನ್ನು ಉಲ್ಲೇಖಿಸಿದ್ದಾರೆ. ಕ್ರಿ.ಶ. 1612ರಲ್ಲಿ ಬಿಜಾಪುರದ ಸುಲ್ತಾನರ ಸುಬೇದಾರ್ ಆಗಿದ್ದ ಅಂಕುಶ ಖಾನನು ಬಾವಿಯೊಂದನ್ನು ಕಟ್ಟಿಸಲು ಯತ್ನಿಸುತ್ತಾನಷ್ಟೆ. ಆದರೆ ಅಲ್ಲಿ ಜಲ ಬರುವುದಿಲ್ಲ. ಆಗ ಮೌನೇಶ್ವರರು ಬಾವಿಗಿಳಿದು ಜಲ ತಂದುದರ ವಿವರಣೆ ಅವರ ವಚನವೊಂದರಲ್ಲಿ ಬರುತ್ತದೆ. ಇವೆಲ್ಲದರ ಆಧಾರದ ಮೇಲೆ ಇವರು 16ನೇ ಶತಮಾನದ ಮಧ್ಯಭಾಗದಿಂದ 17ನೇ ಶತಮಾನದ ಉತ್ತರಾರ್ಧದವರೆಗೆ ಇದ್ದರೆಂಬುದು ರುಜುವಾತು ಆಗುತ್ತದೆ! *ಜೀವನ ಮತ್ತು ಬಾಲ್ಯ ಮೌನೇಶ್ವರರ ತಂದೆ-ತಾಯಿ ಶೇಷಪ್ಪ (ಹಾವಪ್ಪ), ಶೇಷಕ್ಕ (ಹಾವಕ್ಕ) ಎಂಬ ಉಲ್ಲೇಖ ಐತಿಹ್ಯವಾಗಿ ದೊರಕುತ್ತದೆ. ಜಾನಪದದಲ್ಲೂ ಮೌನೇಶ್ವರರ ಬಾಲ್ಯದ ವಿವರಗಳು ತುಂಬಾ ಕಡಿಮೆ. ಅವರ ಬಗ್ಗೆ ಕಥೆ ಐತಿಹ್ಯ ಏನೇ ಇದ್ದರೂ ಮೌನೇಶ್ವರರು- ‘ಇಂದ್ರಿ ಸೂತಕದಿಂದ ಅಂದೆ ನಾನು ಜನಿಸಿದೆನು /ಇಂದು ನಾನು ಕೊಳೆಯಲೆ ಪ್ರಭುದೇವ ನಾ/ ಬಂದಂಥ ಭವಕೆ ಮಿತಿಯಿಲ್ಲ ಪ್ರಭುದೇವರ ನಾ/ ಹಿಂದಿಗಿಂತ ಕಡಿಮೆಯಯ್ಯ ಬಸವಣ್ಣ’/ -ಎಂದು ವಚನವೊಂದರಲ್ಲಿ ಹೇಳಿಕೊಂಡಿದ್ದಾರೆ. ಜಾನಪದ-ಪುರಾಣ ಮುಂತಾದುವು ಅಯೋನಿಜರೆಂದರೆ, ಮೌನೇಶ್ವರರ ವಚನವು ‘ಯೋನಿಜ’ರೆಂದು ಸಾರುತ್ತದೆ. ಎಲ್ಲ ಶರಣರು ಹೊಲೆಯೊಳಗಿಂದಲೇ ಜನ್ಮಿಸಿದರೆಂದು ಹೇಳುವ ಮೌನೇಶ್ವರರು ‘ಕುಲವನೆಲ್ಲಿ ಅರಸುವುದು?’ ಎಂಬ ಪ್ರಶ್ನೆಯನ್ನು ನಮಗೆ ಹಾಕುತ್ತಾರೆ ಶರಣರೇ ನಿಜವಾದ ತಾಯ್ತಂದೆಗಳೆಂಬುದು ಇಲ್ಲಿ ಪ್ರಸಿದ್ಧಾರ್ಥ. ಸಾಹಿತ್ಯ ಸಂಪದ ಮೌನೇಶ್ವರರು ವಚನವೊಂದರಲ್ಲಿ ತನ್ನ ಗುರುಮನೆ ಗೋಗಿನ ಎಂದೂ, ಗುಂಡಿ ಬಸವಯ್ಯ ತಮ್ಮ ಗುರುವೆಂದೂ ಹೇಳಿಕೊಂಡಿದ್ದಾರೆ. ಇಲ್ಲಿಯ ಸೂಚಿತಾರ್ಥಗಳನ್ನು ಗ್ರಹಿಸಿದರೆ ಮೌನೇಶ್ವರರು ಕೆಲವು ಗುರುಗಳ ಬಳಿ ಸಾಧನೆ ಮಾಡಿರಬೇಕು. ಗುರುವಿನ ಮಾರ್ಗದರ್ಶನ ಇಲ್ಲದೆ, ಯಾವೊಬ್ಬ ಶಿಷ್ಯನೂ ಸಾಧಕನಾಗಲಾರನಷ್ಟೆ. ಆದರೆ, ಅಲ್ಲಮಪ್ರಭುದೇವ ಮಾತ್ರ ಇದಕ್ಕೆ ಅಪವಾದ. ಮೌನೇಶ್ವರರು ಅನೇಕ ವಚನಗಳಲ್ಲಿ ಅಲ್ಲಮಪ್ರಭುವಿನ ಹೆಸರನ್ನು ಪದೇಪದೆ ಬಳಸುತ್ತಾರೆ. ಅಲ್ಲಮನು ಯಾವ ಮಾಯೆಗೂ ಸಿಗದೆ, ಎಲ್ಲರೊಳಗಿನ ಮಾಯೆಯನ್ನು ಕಿತ್ತೆಸೆದವನು. ಮೌನೇಶ್ವರರು ಇಂಥ ಅಲ್ಲಮನ ದಾರಿಯಲ್ಲಿ ನಡೆದಿದ್ದಾರೆ. ಒಂದಂತೂ ನಿಜ. ಮೌನೇಶ್ವರರು ಕಠೋರ ತಪಸ್ಸಾಧನೆ ಮಾಡಿ ಅಪೂರ್ವ ಸಿದ್ಧಿಗಳನ್ನು ಪಡೆದಿರಬೇಕು. ಅವುಗಳ ಮೂಲಕ ಪವಾಡಗಳನ್ನೂ ಮಾಡಿರಬೇಕು. ಈಗಲೂ ಜನರ ಬಾಯಲ್ಲಿ ಅವರ ಪವಾಡ, ಮಹಿಮೆಗಳು ರೂಢಿಯಲ್ಲಿವೆ. ಆ ಕಾಲದ ಜನರನ್ನೋ ಸುಲ್ತಾನರನ್ನೋ ಸುಬೇದಾರರನ್ನೋ ಪ್ರಭಾವ ಗೊಳಿಸಬೇಕಾದರೆ ಇಂಥ ಪವಾಡಗಳನ್ನು ಮಾಡಿಯೇ ಸೆಳೆಯಬೇಕಿತ್ತು. ಜನಹಿತಕಾರ್ಯಕ್ಕೆ ಇದೊಂದು ಪೂರ್ವ ಮೀಮಾಂಸೆಯೇ. ಮೌನೇಶ್ವರರಿಗೆ ಅಲೌಕಿಕ ಸಿದ್ಧಿಗಳಿದ್ದಂತೆ ಅಸಾಮಾನ್ಯ ಅನುಭಾವೀ ಜೀವನವೂ ಇತ್ತು. ಅವೆರಡು ಇವರಲ್ಲಿ ಹಾಳತವಾಗಿ ಸೇರಿದ್ದಕ್ಕೆ ಅವರ ಬರಹಗಳೇ ಸಾಕ್ಷಿ. *ಉಪನಯನ ವೈದಿಕ ಸಂಸ್ಕಾರ ಬಾಲ್ಯಾವಸ್ತೆಯಲ್ಲಿ ಜಗದ್ಗುರು ಮೌನೇಶ್ವರರಿಗೆ 8 ವರ್ಷ ತುಂಬಿದಾಗ ವಿಶ್ವಕರ್ಮ ಧರ್ಮದ ವೈದಿಕ ಪರಂಪರೆಯ ಅನುಸಾರ ಗಾಯತ್ರಿ ಮಂತ್ರೋಪದೇಶದೊಂದಿಗೆ ಉಪನಯನವಾಯಿತು. ಗಾಯತ್ರಿ ಮಂತ್ರೋಪದೇಶವಾಗಿ ಅದರ ರಹಸ್ಯಾರ್ಥಗಳು ದೃಗ್ಗೋಚರವಾದುವು. ನಂತರ ಮೌನೇಶ್ವರರು ಸುರಪುರದ ಗುರುಕುಲದಲ್ಲಿ ಶಿವಸ್ವಾಮಿ ಗುರುಗಳ ಬಳಿ 4 ವರ್ಷ, ಸಂಸ್ಕೃತ, ಉರ್ದು, ಕನ್ನಡ ಕಲಿತು ಹಲವಾರು ಶಾಸ್ತ್ರಗಳ ಪರಿಚಯ ಮಾಡಿಕೊಂಡರು. ಜತೆಗೆ ಸದಾನಂದ ಗುರುಗಳ ಸಂಪೂರ್ಣ ಅನುಗ್ರಹವೂ ಮೌನೇಶ್ವರರ ಮೇಲಿತ್ತು. ಈ ನಡುವೆ ಕಾಶೀಯಾತ್ರೆ ಮುಗಿಸಿಬಂದರು. ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ರಾಚೋಟಿಗೆ ಹೋಗಿ ವೀರಭದ್ರದೇವರ ಆರಾಧನೆ ಮಾಡಿದ್ದು ವಿಶೇಷ. ನಂತರ ವರವಿ, ಲಿಂಗನಬಂಡಿಗಳಲ್ಲಿ ಅನೇಕ ಪವಾಡಗಳನ್ನು ಮಾಡಿದರೆಂದು ಪುರಾಣಗಳು ನಿರೂಪಿಸುತ್ತವೆ. ತಂದೆ-ತಾಯಿ ವೃದ್ಧರಾಗಿ ತೀರಿಕೊಂಡ ಮೇಲೆ ಮೌನೇಶ್ವರರು ದೇಶಸಂಚಾರ ಮಾಡುತ್ತ, ಎಲ್ಲ ಸಮುದಾಯದವರ ಕಷ್ಟ-ಕಾರ್ಪಣ್ಯ ನೀಗಿಸುತ್ತ ಸಮಾಜದ ಕೀಲಕಸ್ಥಾನದಲ್ಲಿ ಉಳಿದುಬಿಟ್ಟರು. *ಸಾಹಿತ್ಯ ಮೌನೇಶ್ವರರು ಶತಕಗಳನ್ನೂ ಕಾಲಜ್ಞಾನವನ್ನೂ ಬರೆದಿದ್ದಾರೆ. ದಂಡಕ, ಸುವ್ವಿಹಾಡು, ಜೋಗುಳಪದ, ಆರತಿಪದ, ಮೊಹರಂಗೀತೆ, ಕೋಲುಪದ, ಭಜನೆಹಾಡುಗಳನ್ನ್ನೂ ರಚಿಸಿದ್ದಾರೆ. ಇವರ ಪದಗಳಲ್ಲಿ ಉರ್ದು, ಪರ್ಷಿಯನ್ ಪದಗಳು ವಿಪುಲವಾಗಿವೆ. ಕನ್ನಡ, ಉರ್ದು ಕೂಡುನುಡಿಗಳಂತೂ ಬಹಳಷ್ಟಿವೆ- ಮೌನದೀನ ಪೀರ | ಸದ್ಗುರು ಜಿತಾ ಪೈಗಂಬರ ||ಪ|| ಹಿಂದೂ ಮುಸಲ್ಮೆ ಮನದ ಪ್ರಕಾರ/ ಬಲ್ಲಂಥ ಜ್ಞಾನಿಗೆ ನೀನೊಬ್ಬ ದೇವರ ಆಕಾರ ನಿರಾಕಾರ ಎರಡಕ್ಕೆ ನೀನೆ ಗಂಭೀರ/ ಶೇಕ್ ಸಯ್ಯದ ಮೊಗಲ ಪಠಾಣ ನಾಲ್ಕು ಅವತಾರ ತಾಳಿ ಮಾಡಿದಿ ಉದ್ಧಾರ ||2|| ಈ ಪದ್ಯವು ಮೌನೇಶ್ವರರ ರಚನೆಯ ಬಗೆಯನ್ನು ತಿಳಿಸುತ್ತದೆ. ಅವರು ಹಿಂದೂ-ಮುಸ್ಲಿಂ ಬಂಧುತ್ವವನ್ನು ಒಂದೆಡೆ ಸೇರಿಸಿದವರಷ್ಟೆ. ಹೀಗೆ ಭಾವೈಕ್ಯತೆ ಮತ್ತು ಮತೈಕ್ಯತೆಗಳ ಸಂಕೇತವಾಗಿ ಇವರು ಕಾಣಿಸಿಕೊಂಡರೆಂಬುದು ವಿಶೇಷ. ಮೌನೇಶ್ವರರು 17ನೇ ಶತಮಾನದ ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಸಾಹಿತ್ಯದಲ್ಲಿ ಬಳಸಿಕೊಂಡರು. ಇವರ ಪದ್ಯಗಳಲ್ಲಿ ಉರ್ದುಭಾಷೆ, ಅಭಿವ್ಯಕ್ತಿಗೆ ಅನುಗುಣವಾಗಿ ಕಾಣಿಸಿಕೊಂಡಿದೆ. ಆಡುಮಾತಿನ ಪಲುಕು ಉದ್ದಕ್ಕೂ ಕಾಣಿಸುತ್ತದೆ. ಭಾಷೆಯ ದೃಷ್ಟಿಯಿಂದ ನೋಡಿದರೆ, ಎಷ್ಟೋ ಅಪಪ್ರಯೋಗಗಳು ಇವೆ. ಆದರೆ, ಮೌನೇಶ್ವರರು ಜನಸಾಮಾನ್ಯರಂತೆ ವಚನಗಳನ್ನು ಕಟ್ಟಿದ್ದಾರೆ. ಹಳ್ಳಿಗರು ಬಳಸುತ್ತಿದ್ದ ಹಾಡಿನ ಮಟ್ಟುಗಳ ಜಾಡುಹಿಡಿದು ಅನುಭವಗಳನ್ನು ಸಾರಿದ್ದಾರೆ. ಮೌನೇಶ್ವರರ ವಚನಗಳು ಬಹುತೇಕವಾಗಿ ಕನ್ನಡದ ಅಂಶಗಣಕ್ಕೆ ಹೆಚ್ಚು ಹೊಂದುತ್ತವೆ. ಇವು ಬರಹರೂಪದ ವಚನಗಳಲ್ಲ; ಅವರು ಹಾಡುತ್ತ, ಹೇಳುತ್ತ ಹೋದಂತೆ ಶಿಷ್ಯರು ಸಂಗ್ರಹಿಸಿ ಬರೆದಿಟ್ಟದ್ದೆಂದು ತೋರುತ್ತದೆ! ಮೌನೇಶ್ವರರು ತಮ್ಮ ಬಗೆಗೆ ಹೆಚ್ಚಿಗೇನೂ ಹೇಳಿಕೊಂಡಿಲ್ಲ. ತಾನು ಅಕ್ಕನಾಗಮ್ಮನ ಮಗ ಚೆನ್ನಬಸವಣ್ಣನ ಅವತಾರವೆಂದು ಮಾತ್ರ ವಚನಗಳಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಜನ್ಮ ಯಾವುದೋ ಮುಖ್ಯ ಉದ್ದೇಶಕ್ಕಾಗಿ ಆಗಿದೆಯೆಂದು ಅವರು ತಿಳಿದುಕೊಂಡಿದ್ದರು. ಆ ನಂಬುಗೆ ಅವರಲ್ಲಿ ಪ್ರಬಲವಾಗಿದ್ದುದು ಕಂಡುಬರುತ್ತದೆ. ಅವರ ಮಾತಿದು. ಅಕ್ಕ ನಾಗಲಿಯ ಮಗ ಚಿಕ್ಕ ಚನ್ನಬಸವಣ್ಣ/ ಅಕ್ಕಸಾಲೆಯರ ಒಡಲೊಳಗೆ ಜನಿಸಿ ನಿಂತು/ ರೆಕ್ಕ ಲೆಕ್ಕಕ್ಕೆ ಝುಡತಿಯ ಕೇಳಬೇಕೆಂದು/ ತಕ್ಕಡಿಯ ತ್ರಾಸು ಪಿಡಿದುಕೊಂಡು ನಿಂತಾತನ ಕೂಡ -ಈ ವಚನದಲ್ಲಿ ತಾನು ‘ಅಕ್ಕಸಾಲಿಗ’ ಎಂಬುದನ್ನು ಖಚಿತಪಡಿಸಿದ್ದಾರೆ. ‘ವಿಶ್ವಕರ್ಮ’ ಎಂದು ಪ್ರಸಿದ್ಧಿ ಪಡೆದ ಇವರು ಸಮಾಜದ ಕೀಲಕ ಸ್ಥಾನದಲ್ಲಿದ್ದವರೇ. ಮರದ ಕೆಲಸ ಮಾಡುವವರು ‘ಬಡಗಿ’ಯಾದರೆ ಕಬ್ಬಿಣದ ಕೆಲಸ ಮಾಡುವವರು ‘ಕಮ್ಮಾರ’ರು; ಕಂಚಿನ ಕೆಲಸ ಮಾಡುವವರು ‘ಕಂಚುಗಾರ’ರಾದರೆ, ಶಿಲೆಯ ಕೆಲಸ ಮಾಡುವವರು ‘ಶಿಲ್ಪಿಗರು’. ಇಷ್ಟು ಜನರನ್ನು ವಿಶ್ವಕರ್ಮರೆಂದೇ ಗ್ರಾಮ ಸಮುದಾಯ ಕರೆಯುತ್ತಿತ್ತು. ಸಮುದಾಯದಲ್ಲಿ ಇವರ ಸ್ಥಾನ ಮೇಲ್ಮಟ್ಟದ್ದಾಗಿತ್ತೆಂಬುದನ್ನು ಸಮಸ್ತರೂ ಗುರುತಿಸಿದ್ದಾರೆ. ಇವರ ವೃತ್ತಿಯು ಕೌಶಲಪ್ರಧಾನವಾದುದು. ಪಟ್ಟಣ, ಖೇಡ, ಖರ್ವಡ, ದ್ರೋಣಾಮುಖ ಎಂಬ ವಿವಿಧ ಬಗೆಯ ನಗರ ನಿರ್ವಣದಲ್ಲಿ ಇವರದು ಎತ್ತಿದ ಕೈ. ಅದಕ್ಕನುಗುಣವಾಗಿ ಬಡಿಗೇರ, ಕಮ್ಮಾರರು ಬಳಸುವ ಉಪಕರಣಗಳನ್ನು ವಚನದಲ್ಲಿ ಅಧ್ಯಾತ್ಮದ ಸಂಕೇತವಾಗಿಯೂ ಬಳಸಿ ಕೊಂಡಿದ್ದಾರೆ. ಗ್ರಾಮಜೀವನದ ಕಾಯಕವರ್ಗಕ್ಕೆ ಅನುಗುಣವಾದ ಅಡಿಗಲ್ಲು, ತ್ರಾಸು, ಮೂಸೆ, ಸುತ್ತಿಗೆಯಂಥ ಪರಿಕರಗಳನ್ನು ವಚನಗಳಲ್ಲಿ ಬಳಸಿದ್ದಾರೆ. ‘ಬಡಿಗ, ಕಮ್ಮಾರರು ಪೊಡವಿಗಕರ್ತರು’ ಎಂಬ ಮಾತು ಇದಕ್ಕೆ ಸಾಕ್ಷಿ. ಗುರು ಮೌನೇಶ್ವರ *ಬದುಕೆ ಅನುಭವ ಪಾಠ ಶಾಲೆ* ________________________ ನಮ್ಮ ಬಾಳು ಹೇಗಿರಬೇಕೆಂಬುದನ್ನು ಹಲವಾರು ವಚನಗಳಲ್ಲಿ ಮೌನೇಶ್ವರರು ಹೇಳುತ್ತಾರೆ. ಅವರ ವಚನಗಳು ಶರಣರ ಮಾರ್ಗವನ್ನು ಮುಂದುವರಿಸುತ್ತವೆ. ಅವರು ಹೆಜ್ಜೆಹೆಜ್ಜೆಗೂ ಹಿಂದಿನ ಶರಣರ ನುಡಿಗಡಣವನ್ನು ಮುಂದಿರಿಸಿಕೊಂಡು ಮಾತಾಡುತ್ತಾರೆ. ಅರಿವಿಲ್ಲದೆ ಬಾಳುವೆ ಮಾಡುವುದು ವ್ಯರ್ಥ. ಅಂಥವರಿಗೆ ಎಲ್ಲಿಯ ಗುರು, ಎಲ್ಲಿಯ ದೈವ? ಎಂದು ಒಂದೆಡೆ ಪ್ರಶ್ನಿಸುತ್ತಾರೆ. ಮೌನೇಶ್ವರರಿಗೆ ಹಳ್ಳಿಯ ಸರಳಜೀವನ ತುಂಬಾ ಇಷ್ಟ.
ಧಾರಾವಾಹಿ ಸಂಗಾತಿ-17 ಅರ್ಜುನ ಉವಾಚ ವಿಶ್ವನಾಥ್ ಎನ್ ನೇರಳೆಕಟ್ಟೆ ಕುದುರೆ ಸಂಚಾರಕ್ಕೆ ಸಂಚಕಾರವಾಯಿತು ಆ ಶಿಲೆ! ಈಗ ನಮ್ಮ ಜೊತೆ ನೀಲಧ್ವಜನೂ ಸೇರಿಕೊಂಡಿದ್ದ. ತೆಂಕುದಿಕ್ಕಿನೆಡೆಗೆ ಹೆಜ್ಜೆ ಹಾಕುತ್ತಿತ್ತು ಹಯ. ಮುಂದೆ ಕಾಣುತ್ತಿದ್ದದ್ದು ವಿಂಧ್ಯಾ ಪರ್ವತ. ನಮ್ಮ ಅವಿರತ ಚಲನೆಯನ್ನು ಕಂಡೂ ಚಲನೆಗೆ ಮನಸ್ಸು ಮಾಡದೆ ದೃಢತೆಯೇ ಮೈವೆತ್ತ ಬಗೆಯಲ್ಲಿತ್ತು ಅದರ ನಿಲುವು. ಶೃಂಗವಿತ್ತು. ಕಂದರವಿತ್ತು. ಮಂಜು ಮುಸುಕಿತ್ತು. ಕಾಡು ಬೆಳೆದಿತ್ತು. ಅರಣ್ಯವನ್ನೇ ಆಶ್ರಯಿಸಿಕೊಂಡಿದ್ದ ಜನರನ್ನು ಕಂಡೆವು. ಬಗೆಬಗೆಯ ಪಕ್ಷಿಗಳು ಅಲ್ಲಿದ್ದವು. ವಿಧವಿಧದ ಪ್ರಾಣಿಸಮೂಹಗಳಿದ್ದವು. ಹಾಗೆಯೇ ಮುಂದೆ ಹೋಗುತ್ತಿದ್ದಂತೆ ಋಷಿಗಳ ಆಶ್ರಮಗಳು ಕಣ್ಣಿಗೆ ಕಂಡವು.ವಿಂಧ್ಯಾ ಪರ್ವತದೊಳಗನ್ನು ಪ್ರವೇಶಿಸಿದೆವು. ಕುದುರೆಯನ್ನು ಕೂಡಿಕೊಂಡ ನಾವು, ಕೃಷ್ಣ ಕಿಂಕರರು, ಕಾಲಿಟ್ಟ ಒಡನೆಯೇ ಅಚ್ಚರಿ ಹುಟ್ಟಿಸುವ ಪರಿವರ್ತನೆಗೀಡಾಯಿತು ಆ ಪರ್ವತ ಪ್ರದೇಶ. ದುರ್ಗಮವಾಗಿದ್ದ ದಾರಿಯದು ಸುಗಮವಾಗಿ ತೋರಿತು. ಅದುವರೆಗೂ ನೆಲೆಸಿದ್ದ ಕತ್ತಲು ತೊಲಗಿ ಬೆಳ್ಳನೆಯ ಬೆಳಕು ಮೂಡಿಬಂತು. ನಾವೆಲ್ಲರೂ ಕುದುರೆಯ ಜೊತೆಜೊತೆಗೇ ಇದ್ದೆವು. ತನ್ನ ಇಚ್ಛೆಯನುಸಾರ ಸಾಗುತ್ತಿತ್ತು ಆ ಕುದುರೆ. ಮುಂದೆ ಮುಂದೆ ಹೋದಾಗ ಎದುರಾದದ್ದು ಅತೀವ ವಿಸ್ತಾರದ ಒಂದು ಶಿಲೆ. ಒಂದು ಯೋಜನದಷ್ಟು ಅಗಲವಿದ್ದಿರಬಹುದು ಅದು. ಅದರ ಮೇಲೆಯೂ ನಡೆಯುವೆ ತಾನು ಎಂಬAತೆ ಕಾಲುಗಳನ್ನಿಟ್ಟಿತು ಕುದುರೆ.ಸ್ವಚ್ಛಂದವಾಗಿ ಸಂಚರಿಸುತ್ತಿದ್ದ ಅಶ್ವದ ಸುಗಮ ಸಂಚಾರಕ್ಕೆ ಸಂಚಕಾರ ಎದುರಾದದ್ದು ಆಗಲೇ. ಕಾಲುಗಳನ್ನು ಮೇಲಕ್ಕೆ ಎತ್ತಲಾಗದ, ಎತ್ತಿ ಮುಂದಿಡಲಾಗದ ಸ್ಥಿತಿಯಲ್ಲಿ ಕುದುರೆ ಅಲ್ಲಿಯೇ ನಿಂತುಬಿಟ್ಟಿತು. ಆ ಶಿಲೆಗೆ ಅದರ ಕಾಲುಗಳು ಅಂಟಿಕೊAಡಿವೆಯೋ ಏನೋ ಎಂಬAತೆ ತೋರುತ್ತಿತ್ತು. ನಡೆಯುವುದನ್ನೇ ಮರೆತಂತೆ ಅದು ಅಲ್ಲಿಯೇ ನಿಂತಿತು. ಪೌರ್ಣಮಿಯಂದು ಚಂದ್ರಾಕೃತಿಯ ಒಳಗೆ ಮೊಲವೊಂದು ತಟಸ್ಥವಾಗಿ ತೋರುವಂತೆ ಅಗಲಗಲವಾಗಿದ್ದ ಶಿಲೆಯ ಮೇಲೆ ಈ ಕುದುರೆ ಅಚಲವಾಗಿ ನಿಂತಿತ್ತು. ಗಾಳಿಯ ವೇಗವನ್ನೂ ಮೀರಿ ನಡೆಯುವ ಕುದುರೆ ಈ ಬಗೆಯಲ್ಲಿ ನಿಂತುದನ್ನು ಕಂಡಾಗ ಆಶ್ಚರ್ಯವಲ್ಲದೆ ಇನ್ನೇನು ತಾನೇ ಆಗಲು ಸಾಧ್ಯ!ಕುದುರೆ ಚಲಿಸಲೇಬೇಕಿತ್ತು. ಅದು ಚಲಿಸದೆಯೇ ನಾವು ಚಲಿಸುವಂತಿರಲಿಲ್ಲ. ಚಲಿಸಿದರೂ ಅದಕ್ಕೇನೇನೂ ಸಾರ್ಥಕತೆಯಿರಲಿಲ್ಲ. ಬದುಕು ಎಂದರೆ ಕೆಲವೊಮ್ಮೆ ಹೀಗೆಯೇ. ಇನ್ನೊಬ್ಬರ ಚಲನೆಯಿದ್ದರೆ ಮಾತ್ರ ನಮ್ಮ ಚಲನೆಗೆ ಅರ್ಥವಿರುತ್ತದೆ.ಜೊತೆಗಿದ್ದ ಸೇವಕರನ್ನು ಕುದುರೆಯ ಬಳಿಗೆ ಅಟ್ಟಿದೆ. ಕುದುರೆಯ ಕಾಲುಗಳನ್ನು ಬಿಡಿಸಲು ಹೇಳಿದೆ. ಅಳವು ತೋರಿದ ಆಳುಗಳು ಸೋತು ಅಳುಮೋರೆ ಮಾಡಿದರು.ಏನಾಯಿತಿದು! ಕುದುರೆಗೇಕೆ ಇಂತಹ ದುರವಸ್ಥೆ! ಅದು ಚಲಿಸದಿದ್ದರೆ ಮುಂದಿನ ತಾಣವನ್ನು ಸೇರುವ ಬಗೆ ಹೇಗೆ! ಅಶ್ವಮೇಧ ಯಾಗದ ಗತಿಯೇನಾಯಿತು! ಎಂದೆಲ್ಲಾ ಚಿಂತೆ ಮಾಡಿದ ನನಗೆ ಹೊಳೆದ ಯೋಚನೆ ಮುನಿಶಾಪದ್ದು. ಯಾರೋ ಮುನಿಗಳ ಶಾಪದ ಫಲವೇ ಇದಾಗಿರಬೇಕು ಎನಿಸಿತು. ತಿಳಿದ ಹಿರಿಯರಲ್ಲಿ ಕೇಳಿದರೆ ಒಳಿತು ಎನಿಸಿತು.“ಈ ಸ್ಥಳದಲ್ಲಿ ಸುತ್ತಮುತ್ತ ಋಷಿಗಳ ಆಶ್ರಮವಿದೆಯೇ ಎಂದು ನೋಡಿಬನ್ನಿ” ಎಂದು ಸೇವಕರನ್ನು ಕಳುಹಿಸಿಕೊಟ್ಟೆ. ತಾಣವನ್ನು ಸುತ್ತಾಡಿದ ಅವರು ಸ್ವಲ್ಪ ಸಮಯದಲ್ಲಿಯೇ ನನ್ನ ಬಳಿಬಂದು ಹತ್ತಿರದಲ್ಲಿಯೇ ಒಂದು ಆಶ್ರಮ ಇರುವುದಾಗಿ ಹೇಳಿದರು. ಪ್ರದ್ಯುಮ್ನ, ವೃಷಕೇತು, ಸಾಲ್ವಪತಿ, ಯೌವನಾಶ್ವ, ನೀಲಧ್ವಜ ಇವರೆಲ್ಲರನ್ನೂ ಜೊತೆ ಸೇರಿಸಿಕೊಂಡು ಆ ಆಶ್ರಮವಿದ್ದೆಡೆಗೆ ಹೊರಟೆ. ಹೋಗಿ ತಲುಪಿದೆ.ಶ್ರೇಷ್ಠ ಋಷಿಗಳು ಇರುವ ಪ್ರದೇಶವದು ಎನ್ನುವುದು ಆ ಪರಿಸರವನ್ನು ಈಕ್ಷಿಸಿದಾಗಲೇ ಗೊತ್ತಾಗುವಂತಿತ್ತು. ಬಗೆಬಗೆಯ ಮೃಗಗಳು ಪಕ್ಷಿಗಳು ತಮ್ಮ ವೈರತ್ವವನ್ನು ಮರೆತು ಅನುರಾಗ ಭಾವದಲ್ಲಿ ಸೊಗ ಕಂಡುಕೊಂಡಿದ್ದವು. ಅಗ್ನಿ, ವಾಯು, ಚಂದ್ರ, ವರುಣ ಮೊದಲಾದ ದೇವಾನುದೇವತೆಗಳು ಅಲ್ಲಿ ನೆಮ್ಮದಿಯಿಂದ ನೆಲೆಸಿದ್ದರು. ಅಲ್ಲಿದ್ದ ಎಲ್ಲಾ ಗಿಡ ಮರಗಳಲ್ಲಿಯೂ ಕಾಯಿ ಹಣ್ಣುಗಳ ಸಮೃದ್ಧಿ. ಬಂದವರು ಬಯಸಿದ್ದನ್ನು ಯಾವಾಗಲೂ ನೀಡಲು ಸಿದ್ಧವಾಗಿ ನಿಂತಂತೆ ತೋರುತ್ತಿತ್ತು ವೃಕ್ಷ ತರುಗಳು ನಿಂತ ಭಂಗಿ. ಸದಾಕಾಲವೂ ಸುಗ್ಗಿಯ ಕಾಲ ಎಂಬAತೆ ಪ್ರಕೃತಿ ಕಾಣಿಸುತ್ತಿತ್ತು. ಸುಖದ ಕೊರತೆಯಿದ್ದರೆ ತಾನೇ ದುಃಖ ಹುಟ್ಟುವುದು! ದುಃಖ ಉದ್ಭವಿಸಲು ಅಲ್ಲಿ ಅವಕಾಶವೇ ಇರಲಿಲ್ಲ. ಸುಖವೇ ಎಲ್ಲಾ.ಆಶ್ರಮದ ಒಂದೆಡೆಯಲ್ಲಿ ಒಂದಷ್ಟು ಮುನಿಗಳು ವೇದ ಆಗಮ ಶಾಸ್ತç ಪುರಾಣಗಳ ಪ್ರವಚನ, ಅಧ್ಯಯನದಲ್ಲಿ ನಿರತರಾಗಿದ್ದರು. ಇನ್ನೊಂದಷ್ಟು ಋಷಿಗಳು ಜಪ ತಪಸ್ಸನ್ನು ಗೈಯ್ಯುತ್ತಾ, ಪರಮಾತ್ಮ ಸ್ಮರಣೆಯಲ್ಲಿ ಪವಿತ್ರಾನುಭವ ಪಡೆಯುತ್ತಿದ್ದರು. ಸೂರ್ಯ ನಮಸ್ಕಾರ, ಹರಿಹರ ಸಮಾರಾಧನೆ, ಯೋಗ ಸಾಧನೆ ಮೊದಲಾದವು ನಡೆಯುತ್ತಿದ್ದವು. ಅತಿಥಿಗಳನ್ನು ಆದರದಿಂದ ಸತ್ಕರಿಸುವುದರಲ್ಲಿ ತಲ್ಲೀನರಾಗಿದ್ದರು ಕೆಲವರು.ಆಗಲೇ ನನ್ನ ಕಣ್ಣನ್ನು ಕಾಡಿದ್ದು ತೇಜೋಮಯವಾದ ಒಂದು ದಿವ್ಯಕಾಯ. ಶಾಂತಭಾವವೇ ಮೂರ್ತರೂಪ ಪಡೆದಂತೆ ಕುಳಿತಿದ್ದರು ಮುನಿಶ್ರೇಷ್ಠರೆನಿಸಿಕೊಂಡ ಸೌಭರಿ ಮುನಿಗಳು. ಅಗ್ನಿಯಂತಹ ಪ್ರವರ್ಧಮಾನವಾದ ಬೆಳಕಿನಿಂದ ಕಂಗೊಳಿಸುತ್ತಿದ್ದರು. ಆದರೆ ಸುಡುವವರಲ್ಲ. ಸೂರ್ಯನಂತೆ ಕಾಂತಿಮಯವಾಗಿದ್ದರು. ಆದರೆ ಮೈಸುಡುವ ಬಿಸಿ ಅವರದ್ದಲ್ಲ. ಜಟೆಯನ್ನು ಹೊತ್ತಿದ್ದವರು ಶಿವನಂತೆ ತೋರುತ್ತಿದ್ದರು. ಆದರೆ ನಂಜಿನ ಕಂಠ ಅವರದ್ದಲ್ಲ.ಸಾಷ್ಟಾಂಗ ನಮಸ್ಕರಿಸಿದೆ ಅವರಿಗೆ. ಅಶ್ವಮೇಧ ಯಾಗದ ವಿಚಾರ ಅರುಹಿದೆ. ಈಗ ಕುದುರೆ ಶಿಲೆಯ ಮೇಲೆ ಕಾಲಿಟ್ಟು ತಟಸ್ಥವಾದ ವಿಷಯ ತಿಳಿಸಿದೆ. “ನಿಮ್ಮ ಮಾರ್ಗದರ್ಶನ ಬೇಕು” ಎಂದೆ.ನನ್ನನ್ನು ಲೇವಡಿ ಮಾಡುವ ನಗು ಅವರ ಮೊಗದಲ್ಲಿ ಮೂಡಿತು. ಈ ಪರಿಯ ನಗುವದೇತಕೆ! ಅರ್ಥವಾಗಲಿಲ್ಲ. ಅವರ ಮುಖವನ್ನೇ ನೋಡಿದೆ. ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-32 ಫೆಬ್ರವರಿ ಕಡೆಯ ವಾರದಲ್ಲಿ ನಮಗೆ ವರ್ಗಾವಣೆಯ ಆದೇಶ ಬಂದದ್ದು ಮಾರ್ಚ್ ಆರನೆಯ ತಾರೀಕು ರಿಲೀವ್ ಆಗಬೇಕಿತ್ತು. ಯಾವಾಗಲೂ ಶನಿವಾರ ಮಧ್ಯಾಹ್ನ ರಿಲೀಫ್ ಆಗುವಂತೆ ಬರುತ್ತಿದ್ದ ಆದೇಶ ಈ ಬಾರಿ ಸೋಮವಾರ ಸಂಜೆ ರಿಲೀವ್ ಆಗುವ ಹಾಗೆ ಬಂದಿತ್ತು. ಐದನೆಯ ತಾರೀಕು ಶಿವರಾತ್ರಿ ಬಂದಿದ್ದರಿಂದ ನಾವು ಮೈಸೂರಿಗೆ ಹೋಗಲೇಬೇಕಿತ್ತು. ಹಾಗಾಗಿ ಅಂದೇ ಬಂದು ಅಂದೆ ವಾಪಸ್ ಆಗುವ ಸರ್ಕಸ್ ಸಹ ಮಾಡಿ ಬಿಟ್ಟೆವು. ಆರನೆಯ ತಾರೀಕು ಬೆಳಿಗ್ಗೆ 5:30 ಬಸ್ಸಿಗೆ ಹೊರಟು ಸಕಲೇಶಪುರಕ್ಕೆ ಬಂದೆವು. ಅಂದೇ ನಾವು ಶಾಖಾ ಸಿಬ್ಬಂದಿಗೆ ಊಟ ಕೊಡಿಸುವ ಕಾರ್ಯಕ್ರಮ ಸಹ ಇತ್ತು .ಬೆಳಿಗ್ಗೆ ಹೋಟೆಲ್ನಲ್ಲಿ ತಿಂಡಿ ತಿಂದು ಮಧ್ಯಾಹ್ನ ನಮ್ಮದೇ ಆತಿಥ್ಯದ ಊಟ ಮಾಡಿ ಶಾಖಾಧಿಕಾರಿಗಳನ್ನು ವಿನಂತಿಸಿಕೊಂಡು ನಾಲ್ಕು ವರೆಗೆ ವಿದಾಯ ಸಮಾರಂಭವನ್ನು ಆಯೋಜಿಸಿಕೊಂಡು ಅಂತೂ ಇಂತೂ ಆರು ಗಂಟೆ ಬಸ್ಸಿಗೆ ಮೈಸೂರಿಗೆ ಹತ್ತಿದೆವು ಬಂದು ತಲುಪಿದಾಗ ರಾತ್ರಿ 11:00 ಗಂಟೆ. ಸುಲೋಚನ ಅವರ ಅಕ್ಕನ ಮನೆಯಲ್ಲಿ ಉಳಿದುಕೊಂಡು ಬೆಳಿಗ್ಗೆ ಎದ್ದು ನಂಜನಗೂಡಿಗೆ ಹೋಗಿ ಅಲ್ಲಿಂದ ಚಾಮರಾಜನಗರಕ್ಕೆ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು . ನಾನು ಸೋಮವಾರ ಬೆಳಿಗ್ಗೆ ಅಂದರೆ ಏಳನೆಯ ತಾರೀಕು ಮಾರ್ಚ್ 2000 ರಂದು ನಂಜನಗೂಡಿಗೆ ಡ್ಯೂಟಿ ರಿಪೋರ್ಟ್ ಮಾಡಿಕೊಂಡೆ. ಮಾಮೂಲಿನಂತೆ ಒಂದು ಕೈಯಲ್ಲಿ ಬ್ಯೂಟಿ ರಿಪೋರ್ಟ್ ಮತ್ತೊಂದು ಕೈಯಲ್ಲಿ ಮೈಸೂರಿಗೆ ವರ್ಗಾವಣೆಗೆ ಅರ್ಜಿ. ಅಶೋಕಪುರಂ ರೈಲ್ವೆ ಸ್ಟೇಷನ್ ಗೆ ಹೋಗಿ ಮೂರು ತಿಂಗಳ ಪಾಸ್ ರೆಡಿ ಮಾಡಿಸಿಕೊಂಡು ಹಿಂದಿನ ಕಹಿ ಅನುಭವದ ಆಧಾರದ ಮೇಲೆ ಅಲ್ಲಿಯೇ ಸಹಿ ಮಾಡಿ ಮಹಿಳಾ ಭೋಗಿಗೆ ಹತ್ತಿದೆ. ಅಲ್ಲಿಯೇ ನಮ್ಮ ಶಾಖೆಯ ಜಯಲಕ್ಷ್ಮಿ ಅವರ ಭೇಟಿಯು ಆಯಿತು. ಈಗ ಶಾಖೆ ಮೊದಲಿನಂತೆ ದೇವಸ್ಥಾನದ ಬಳಿಯ ಬಜಾರ್ ರಸ್ತೆಯಲ್ಲಿ ಇರದೆ ತನ ಸ್ವಂತ ಕಟ್ಟಡಕ್ಕೆ ಶಿಫ್ಟ್ ಆಗಿತ್ತು .ನಂತರ ಸಂತೆಗೆ ಹೋಗುವ ದಾರಿಯಲ್ಲಿ ಮಧ್ಯೆ ಬಲಗಡೆ ನಮ್ಮ ಶಾಖಾ ಕಚೇರಿ ಇತ್ತು. ಮುಖ್ಯ ರೈಲ್ವೆ ಸ್ಟೇಷನ್ ನಿಂದ ಶಾಖೆಗೆ ಬರಲು ತಡವಾಗುತ್ತಿದ್ದ ಕಾರಣ ಎಲ್ಲರೂ ಸುಜಾತಪುರಂ ರೈಲ್ವೆ ಸ್ಟೇಷನ್ ನಲ್ಲಿಯೇ ಇಳಿದು ಅಲ್ಲಿ ಓಡಾಡುತ್ತಿದ್ದ ಖಾಸಗಿ ಟೆಂಪೋಗಳಲ್ಲಿ ಹುಲ್ಲಹಳ್ಳಿ ಸರ್ಕಲ್ಗೆ ಬಂದು ಇಳಿಯುತ್ತಿದ್ದೆವು. ಆಗ ಆ ಟೆಂಪೋಗಳಲ್ಲಿ ಚಾರ್ಜ್ ಒಂದು ರೂಪಾಯಿ ಮಾತ್ರ ಇತ್ತು .ಹುಲ್ಲಹಳ್ಳಿ ಸರ್ಕಲ್ ನಿಂದ 3-4 ನಿಮಿಷದ ನಡಿಗೆ ನಮ್ಮ ಶಾಖೆಗೆ. ಸಂಜೆ ಮಾತ್ರ ಮುಖ್ಯ ಸ್ಟೇಶನ್ಗೆ ನಡೆದು ಹೋಗಲು ಸಮಯ ಇತ್ತು. ಕೆಲವೊಮ್ಮೆ ಸುಸ್ತಾಗಿದ್ದಾಗ ಹೊರಡಲು ತಡವಾದರೆ ಅಥವಾ ಸಂತೆಯಲ್ಲಿ ಕೊಂಡ ತರಕಾರಿಗಳಿದ್ದರೆ ಆಗ ಮೂರು ನಾಲ್ಕು ಜನ ಸೇರಿ ಆಟೋದಲ್ಲಿ ಸ್ಟೇಷನ್ನಿಗೆ ಬರುತ್ತಿದ್ದೆವು. ಮೊದಲಿನಿಂದ ಪರಿಚಯವಿದ್ದ ಜಯಲಕ್ಷ್ಮಿ ಮತ್ತು ನಾಗಮಣಿ ಜೊತೆಗೆ ಹೊಸ ಪರಿಚಯವಾದ ಕವಿತಾ ನಿಕ್ಕಮ್ ವಿದ್ಯಾ ಚಂದ್ರಶೇಖರ್ ಮೊದಲಾದವರು. ಆಂಧ್ರಪ್ರದೇಶದ ರಜನಿ ಸಹ ಇಲ್ಲಿಯೇ ಇದ್ದಳು .ಮುಂದೆ ಅವಳು ಪದೋನ್ನತಿ ತೆಗೆದುಕೊಂಡು ಈಗ ಹೈದರಾಬಾದ್ ನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ. ಅಲ್ಲಿಯೇ ಪರಿಚಯವಾದದ್ದು ನಮ್ಮದೇ ಯೂನಿಯನ್ ನಲ್ಲಿ ಇದ್ದ ಇಂದುಮತಿ. ಮೊದಲು ಬಸ್ ನಲ್ಲಿ ಓಡಾಡುತ್ತಿದ್ದಳು ನಂತರ ಅವರ ಸ್ವಂತ ಮನೆ ನಮ್ಮ ಮನೆಯ ಬಳಿಗೆ ಇದುದರಿಂದ ಅಲ್ಲಿಗೆ ಶಿಫ್ಟ್ ಆದ ಮೇಲೆ ನನ್ನ ಜೊತೆಗೆ ರೈಲಿನಲ್ಲಿ ಓಡಾಡಲು ಆರಂಭಿಸಿದಳು. ನನಗೆ ತುಂಬಾ ಆಪ್ತ ಗೆಳತಿ. ಈಗಲೂ ನಮ್ಮ ಸ್ನೇಹ ಅಷ್ಟೇ ಸದೃಢವಾಗಿದೆ ನಂಜನಗೂಡು ನನಗೆ ಕೊಟ್ಟ ಅನರ್ಘ್ಯ ಸ್ನೇಹ ರತ್ನಗಳಲ್ಲಿ ಅವಳು ಒಬ್ಬಳು. ಈ ಹಿಂದೆ ಮಂಡ್ಯದಲ್ಲಿ ನನ್ನೊಂದಿಗೆ ಕೆಲಸ ಮಾಡಿದ್ದ ಮಂಜುಳಾ ಮತ್ತು ಮೊದಲೇ ಪರಿಚಿತರಾಗಿದ್ದ ಶಶಿಕಲಾ ಗಿರಿಜಾ ಇವರೆಲ್ಲ ಇದೇ ಶಾಖೆಯಲ್ಲಿ ಇದ್ದರು ತುಂಬಾ ಸ್ನೇಹ ಮಯ ವಾತಾವರಣ ತುಂಬಾ ಖುಷಿಯಾಗಿತ್ತು.ಹುಲ್ಲಹಳ್ಳಿ ಸರ್ಕಲ್ ನಲ್ಲಿ ಇಳಿದ ತಕ್ಷಣ ಅಲ್ಲಿ ಒಬ್ಬ ಕಾಯಂ ಆಗಿ ಸೈಕಲ್ಲಿನಲ್ಲಿ ಹೂವ ಮಾರುತಿದ್ದ .ಅವನ ಬಳಿ ಹೂವು ಕೊಂಡು ಮುಂದೆ ನಮ್ಮ ಪ್ರಯಾಣ .ಅಲ್ಲೇ ಮಧ್ಯದಲ್ಲಿ ಇದ್ದದ್ದು ಸುಬ್ಬಣ್ಣನ ಹೋಟೆಲ್ ಇಡ್ಲಿ ಚಟ್ನಿ .ಜೊತೆಗೆ ಟೊಮ್ಯಾಟೋ ಗೊಜ್ಜು ಕೊಡುತ್ತಿದ್ದರು ತುಂಬಾ ರುಚಿಯಾಗಿರುತ್ತಿತ್ತು. ಕೆಲವೊಮ್ಮೆ ತಿಂಡಿ ಸರಿಯಾಗಿ ತಿನ್ನದೆ ಬರುತ್ತಿದ್ದಾಗ ಅಥವಾ ತಿಂಡಿ ತಿನ್ನದೇ ಬಂದಾಗ ಅಲ್ಲಿ ಇಡ್ಲಿ ತಿಂದು ಮುಂದುವರೆಯುವುದು. ಇಲ್ಲದಿದ್ದರೆ ವೈಟು ಕಾಫಿ ಕುಡಿದು ಹೋಗುತ್ತಿದ್ದೆವು. ಮಧ್ಯಾಹ್ನ 12 ಗಂಟೆ ಹಾಗೂ ಅಪರಾಹ್ನ ನಾಲ್ಕು ಗಂಟೆಯ ಕಾಫಿ ಅಲ್ಲಿಯೇ ಪಕ್ಕದಲ್ಲಿ ಇದ್ದ ಒಂದು ಮಲಯಾಳಿ ಬೇಕರಿಯಲ್ಲಿ ಬೇಸಿಗೆ ಕಾಲವಾದರೆ ವಿವಿಧ ಹಣ್ಣುಗಳ ಜ್ಯೂಸ್ ಸಹ ಸಿಗುತ್ತಿತ್ತು. ಅಲ್ಲದೆ ಶಾಖೆಯ ಮುಂದೆಯೇ ಒಬ್ಬ ಎಳನೀರು ಮಾರುತ್ತಾ ನಿಂತಿರುತ್ತಿದ್ದ. ಒಟ್ಟಿನಲ್ಲಿ ನಮ್ಮ ಹೊಟ್ಟೆ ಪೂಜೆಗೆ ಮೋಸ ಬಂತು ಇರಲಿಲ್ಲ. ಸ್ವಲ್ಪ ದಿನಗಳಾದ ನಂತರ ಟೆಂಡರ್ ಕರೆದು ನಮ್ಮ ಶಾಖೆಯಲ್ಲಿಯೇ ವಾಹನ ನಿಲುಗಡೆ ಜಾಗದಲ್ಲಿ ಒಂದು ಕ್ಯಾಂಟೀನ್ ಓಪನ್ ಆಯಿತು. ಸತೀಶ್ ಎನ್ನುವವರು ಅದನ್ನು ಆರಂಭಿಸಿದ್ದರು ಬೆಳಗಿನ ಹೊತ್ತು ಏನಾದರೂ ಒಂದು ತಿಂಡಿ ಮಧ್ಯಾಹ್ನ ಅಣ್ಣ ಸಾಂಬಾರ್ ಮಜ್ಜಿಗೆ ಹಾಗೂ ಸಂಜೆಯ ಹೊತ್ತು ಏನಾದರೂ ಕರಿದ ತಿಂಡಿ ಸಿಗುತ್ತಿತ್ತು ಕಾಫಿ ಟೀ ಮಜ್ಜಿಗೆ ಯಾವಾಗಲೂ ಸಿಗುತ್ತಿತ್ತು.ಯಾರಾದರೂ ಒಬ್ಬರು ಊಟ ತರದಿದ್ದರೆ ಕ್ಯಾಂಟೀನ್ ನಲ್ಲಿಯೇ ತರಿಸಿಕೊಳ್ಳುತ್ತಿದ್ದೆವು. ಇಬ್ಬರು ಮೂವರು ತಂದಿಲ್ಲದಿದ್ದಾಗ ಹುಲ್ಲಹಳ್ಳಿ ಸರ್ಕಲ್ ನಲ್ಲಿ ಇದ್ದ ರಾಮಪ್ರಸಾದ್ ಹೋಟೆಲಿಗೆ ಹೋಗುತ್ತಿದ್ದೆವು. ಶನಿವಾರ ಮಧ್ಯಾಹ್ನದ ಹೊತ್ತು ಮೂರು ಗಂಟೆಗೆ ರೈಲು ಇದ್ದುದರಿಂದ ಪ್ರತಿ ಶನಿವಾರ ಯಾವುದಾದರೂ ಹೋಟೆಲ್ ಗೆ ಅಥವಾ ಕ್ಯಾಂಟೀನ್ ನವರು ಚೆನ್ನಾಗಿರುವ ತಿಂಡಿ ಮಾಡಿದರೆ ಅದನ್ನೇ ತಿಳಿದುಕೊಳ್ಳುತ್ತಿದ್ದೆವು ಅಂದು ಡಬ್ಬಿ ತರುವುದು ನಮಗೆಲ್ಲಾ ನಿಷಿದ್ಧ. ಹೊಸ ವ್ಯವಹಾರಗಳ ವಿಭಾಗದಲ್ಲಿ ಇದ್ದ ಉನ್ನತ ದರ್ಜೆ ಸಹಾಯಕರು ವರ್ಗಾವಣೆಯಾಗಿ ಹೋಗಿದ್ದರಿಂದ ಮಾರ್ಚ್ ವರ್ಷಾಂತ್ಯದ ಬಿಜಿ ಸಮಯವೂ ಆಗಿದ್ದರಿಂದ ನನ್ನನ್ನು ಹೊಸ ವ್ಯವಹಾರ ವಿಭಾಗಕ್ಕೆ ನಿಯುಕ್ತಿಗೊಳಿಸಿದರು. ಅಲ್ಲಿ ಶ್ರೀವತ್ಸ ಮತ್ತು ಮಹಾದೇವನ್ ಅವರು ಸಹಾಯಕರು. ನಾಗರಾಜ್ ಅವರು ಸಹಾಯಕ ಆಡಳಿತ ಅಧಿಕಾರಿಗಳು ಆಗ ತುಂಬಾ ಪ್ರಪೋಸಲ್ಗಳು ಬರುತ್ತಿತ್ತು ಕೆಲಸವು ಹೆಚ್ಚು ಇರುತ್ತಿತ್ತು ವರ್ಷಾಂತ್ಯವಾದ್ದರಿಂದ ಕೆಲವೊಂದು ರಜೆಯ ದಿನ ಭಾನುವಾರಗಳಲ್ಲೂ ಬರಬೇಕಿತ್ತು. ಶನಿವಾರವಂತೂ ಸಂಜೆಯ ರೃಲಿಗೇ ವಾಪಸ್ ಆಗುತ್ತಿದ್ದುದು. ಆದರೂ ಸಹ ತುಂಬಾ ಖುಷಿಯ ವಾತಾವರಣ. ಎಲ್ಲರೂ ಹೊಂದಿ ಕೆಲಸ ಮಾಡುತ್ತಿದ್ದರಿಂದ ಹೆಚ್ಚು ಹೊರೆ ಎನಿಸುತ್ತಿರಲಿಲ್ಲ. ನಾಲ್ಕೈದು ತಿಂಗಳ ಬಳಿಕ ಶಾಖಾಧಿಕಾರಿಗಳು ಅವರ ಕೊಠಡಿಗೆ ಕರೆಸಿ ನನ್ನನ್ನು ವಿಕ್ರಯ ವಿಭಾಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಆಗ ಆ ವಿಭಾಗದಲ್ಲಿ ಒಬ್ಬರೇ ಉನ್ನತ ಶ್ರೇಣಿ ಸಹಾಯಕರು ಪ್ರಸಾದ್ ಎಂಬುವವರು ಇದ್ದು ಸಹಾಯಕರು ಯಾರು ಇರಲಿಲ್ಲ. ಹಾಗಾಗಿ ನನ್ನನ್ನು ಅಲ್ಲಿಯೇ ಕೆಲಸ ಮಾಡಲು ವಿನಂತಿಸಿರು. ನನಗೆ ಹೊಸ ವ್ಯವಹಾರ ಹಾಗೂ ವಿಕ್ರಯ ವಿಭಾಗಗಳಲ್ಲಿ ಕೆಲಸ ಮಾಡಿ ಅನುಭವ ಇದ್ದುದು .ಸಕಲೇಶಪುರದಲ್ಲಿ ಸ್ವಲ್ಪ ದಿನಗಳ ಕಾಲ ಕಚೇರಿ ಸೇವಾ ವಿಭಾಗದಲ್ಲಿ ಮಾಡಿದ್ದೆ. ಆದರೆ ಪಾಲಿಸಿ ಸೇವಾ ವಿಭಾಗದಲ್ಲಿ ಕೆಲಸ ಮಾಡುವ ಅವಕಾಶವೇ ದೊರೆತಿರಲಿಲ್ಲ .ಹಾಗಾಗಿ ಶಾಖಾಧಿಕಾರಿಗಳಿಗೆ ಮುಂದಿನ ಬದಲಾವಣೆಯ ಸಮಯದಲ್ಲಿ ನನಗೆ ಪಾಲಿಸಿ ಸೇವಾ ವಿಭಾಗವನ್ನೇ ಕೊಡಬೇಕು ಎಂದು ಕೋರಿಕೊಂಡೆ ಅವರು ಸಹ ಒಪ್ಪಿಕೊಂಡರು.ವಿಕ್ರಯ ವಿಭಾಗದಲ್ಲಿ ಪ್ರಸಾದ್ ಮತ್ತು ನಾನು ಒಳ್ಳೆಯ ಸೇವೆ ಸಲ್ಲಿಸಿದ್ದೆವು. ಇಬ್ಬರೂ ಒಳ್ಳೆಯ ಕೆಲಸಗಾರರಾದ್ದರಿಂದ ಹಂಚಿಕೊಂಡು ಮಾಡುತ್ತಿದ್ದೆವು. ೨೦೦೦ ನನಗೆ ಅಷ್ಟೇನೂ ಖುಷಿಯದ್ದಾಗಿರಲಿಲ್ಲ. ಅಮ್ಮನ ಆರೋಗ್ಯ ಆಗಾಗ್ಗೆ ಹದಗೆಟ್ಟು ಆಸ್ಪತ್ರೆಗೆ ಸೇರಿಸುವುದು ಕರೆದುಕೊಂಡು ಬರುವುದು ನಡೆದೇ ಇತ್ತು. ಆದರೂ ಛಾಯ ಮತ್ತು ಪ್ರಸನ್ನ ಅವರು ಪಿರಿಯಾಪಟ್ಟಣದಲ್ಲಿ ಮಾಡಿದ್ದ ಮನೆಗೆ ಹೋಗಿ ಸ್ವಲ್ಪ ದಿನ ಇದ್ದು ಬಂದಿದ್ದರು. ನಾವೂ ಒಂದೆರಡು ಬಾರಿ ಹೋಗಿ ಬಂದಿದ್ದೆವು. ಕೊನೆಗೆ ಯಾವ ಪ್ರಯತ್ನವೂ ಫಲ ಕೊಡದೆ ಜನವರಿ ೬ ೨೦೦೦ ದಂದು ನಮ್ಮನ್ನೆಲ್ಲಾ ಬಿಟ್ಟು ಅಮ್ಮ ಹೊರಟೇ ಬಿಟ್ಟಳು. ಅಂದು ಸೋಮವಾರ . ಹಿಂದಿನವಾರ ರಜೆ ಹಾಕಿ ಅಮ್ಮನ ಜೊತೆಯಲ್ಲೇ ಇದ್ದೆ. ಅಂದು ರೈಲಿನಲ್ಲಿ ಹೊರಟು ಕಛೇರಿ ತಲುಪುವಷ್ಟರಲ್ಲಿ ಫೋನ್ ಬಂದಿದೆ. ನಾನು ತಲುಪಿದ ಕೂಡಲೇ ತುಂಬಾ ಸೀರಿಯಸ್ ವಾಪಸ್ ಹೋಗಿ ಎಂದು ಸ್ಕೂಟರ್ ನಲ್ಲಿ ಕರೆದುಕೊಂಡು ಬಂದು ಬಸ್ ಹತ್ತಿಸಿದರು. ಮೈಸೂರಲ್ಲಿ ರವೀಶ್ ಬಂದು ಮನೆಗೆ ಕರೆದುಕೊಂಡು ಬಂದರು.ಊರುಗಳಿಂದ ಎಲ್ಲಾ ಬಂದು ಸೇರಿ ಅಮ್ಮನನ್ನು ಅಂತಿಮ ಬಾರಿಗೆ ಕರೆದುಕೊಂಡು ಹೊರಟಾಗ ಸಂಜೆ. ನಾನು ದಿನಾ ವಾಪಸಾಗುವ ರೈಲು ಕೂ ಅಂತ ಕೂಗ್ತಿತ್ತು. ಶಾಖಾಧಿಕಾರಿಗಳು ಕೆಲವರು ಸ್ನೇಹಿತರು ಸುಲೋಚನಾ ಎಲ್ಲ ಬಂದಿದ್ದರು. ಈಗಲೂ ಸಂಜೆ ರೈಲಿನ ಕೂಗು ಕಿವಿಗೆ ಬಿದ್ದಾಗಲೆಲ್ಲಾ ಅಂದಿನ ಆ ಸಂಜೆಯ ಮಡುಗಟ್ಟಿದ ದುಃಖ ಮರುಕಳಿಸುತ್ತದೆ.ಈಗಲೂ ಇದನ್ನು ಬರೆಯುವಾಗ ಕಣ್ಣು ತುಂಬಿ ನೀರು ಹರಿದು ಮಂಜಾಗುತ್ತಿದೆ. ಸಧ್ಯಕ್ಕೆ ನಿಲ್ಲಿಸುವೆ.(ಮುಂದಿನ ವಾರಕ್ಕೆ ಮುಂದುವರೆಯುವುದು) ಸುಜಾತಾ ರವೀಶ್
ಧಾರಾವಾಹಿ ಸಂಗಾತಿ-114 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ತಳಮಳ ಮಕ್ಕಳಿಗೆ ಊಟವನ್ನು ಬಡಿಸಿ ನಂತರ ತಾನು ತಟ್ಟೆಯಲ್ಲಿ ಅನ್ನ-ಸಾರು, ಹೀರೇಕಾಯಿ ಪಲ್ಯವನ್ನು ಬಡಿಸಿಕೊಂಡು ಅನ್ನಕ್ಕೆ ಸಾರನ್ನು ಹಾಕಿ ಕಲಸಿ ಪಲ್ಯ ಸೇರಿಸಿ ಮೂವರಿಗೂ ಒಂದೊಂದು ತುತ್ತು ತಿನಿಸಿ ತಾನು ಊಟ ಮಾಡಿದಳು. ಅಮ್ಮ ಊಟ ಮಾಡುವ ಮುನ್ನ ಅಮ್ಮನ ಕೈಯಿಂದ ಒಂದೊಂದು ತುತ್ತು ತಿನ್ನುವುದೆಂದರೆ ಮಕ್ಕಳಿಗೆ ಪಂಚಪ್ರಾಣ. ಸುಮತಿ ಮಾಡುತ್ತಿದ್ದ ಅಡುಗೆಯೂ ಅಷ್ಟೇ ರುಚಿಕರವಾಗಿರುತ್ತಿತ್ತು. ಒಮ್ಮೊಮ್ಮೆ ಮನೆಯಲ್ಲಿ ಏನೂ ಇಲ್ಲದಿದ್ದಾಗ ಒಣ ಮೆಣಸಿನಕಾಯಿಯನ್ನು ಕೆಂಡದ ಮೇಲೆ ಹಾಕಿ ಸುಟ್ಟು ಈರುಳ್ಳಿಯನ್ನು ಸಣ್ಣ ಸಣ್ಣದಾಗಿ ಹೆಚ್ಚಿ ಹುಣಸೆಹಣ್ಣನ್ನು ಸೇರಿಸಿ ಸ್ವಲ್ಪ ಉಪ್ಪು ಹಾಕಿ ಕಿವುಚಿ ಅಮ್ಮ ಮಾಡವ ಗೊಜ್ಜು ಬಹಳ ರುಚಿಕರವಾಗಿರುತ್ತದೆ ಎಂದು ಹೇಳುತ್ತಾ ಮಕ್ಕಳು ಬೆರಳುಗಳನ್ನು ಚಪ್ಪರಿಸಿ ನೆಕ್ಕುತ್ತಾ ಆಸ್ವಾದಿಸುತ್ತಿದ್ದರು. ಊಟದ ನಂತರ ಮಕ್ಕಳು ಚಾಪೆ ಹಾಸಿ ಸುಮತಿಯ ಕೈಯನ್ನು ದಿಂಬಾಗಿಸಿಕೊಂಡು ಮಲಗಿ ಅಮ್ಮ ಹೇಳುವ ಕಥೆಯನ್ನು ಕೇಳುತ್ತಾ ಮಕ್ಕಳು ನಿದ್ರೆಗೆ ಜಾರಿದರು. ಸುಮತಿ ಬೆಳಗ್ಗೆ ಬೇಗನೆ ಎದ್ದು ತಿಂಡಿ ಮಾಡಿದಳು. ಭಾನುವಾರ ಬೆಳಗ್ಗೆ ಸುಮತಿಯ ಜೊತೆ ಮೂವರು ಮಕ್ಕಳು ಶಾಲೆಗೆ ಹೊರಟರು. ಮಕ್ಕಳು ಬಂದರೆ ಸುಮತಿಗೆ ಸ್ವಲ್ಪ ನಿರಾಳವಾಗಿರುತ್ತಿತ್ತು. ತೋಟದ ಕೂಲಿ ಕೆಲಸಗಾರರ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಲು ಮಕ್ಕಳು ಅವಳಿಗೆ ನೆರವಾಗುತ್ತಿದ್ದರಿಂದ ಅಷ್ಟು ಆಯಾಸವಾಗುತ್ತಿರಲಿಲ್ಲ. ಶಾಲೆಗೆ ಹೊರಡುವ ಮುನ್ನ ಮಧ್ಯಾಹ್ನದ ಊಟಕ್ಕೆ ಬೇಕಾದ ಬುತ್ತಿ ತುಂಬಿಕೊಳ್ಳುತ್ತಿದ್ದರು. ಅಲ್ಲಿನ ಬಂಗಲೆಯ ಮೇಲ್ವಿಚಾರಕ ಬಂಗಲೆಯ ಸುತ್ತಲಿರುವ ಹಣ್ಣಿನ ಗಿಡಗಳಿಂದ ಹಣ್ಣುಗಳನ್ನು ಕಿತ್ತು ತಂದು ಕೊಡುವರು.. ಆ ಹಣ್ಣುಗಳನ್ನು ಶಾಲೆಯ ಮಕ್ಕಳಿಗೂ ಕೊಟ್ಟು ಸುಮತಿ ಮತ್ತು ಮಕ್ಕಳು ತಿನ್ನುತ್ತಿದ್ದರು. ಸಂಜೆ ಹೊತ್ತಿಗೆ ಶಾಲೆಯಿಂದ ಹೊರಟು ಮಾತನಾಡುತ್ತಾ ಅಮ್ಮನ ಕೈಹಿಡಿದು ಮಕ್ಕಳು ಜೊತೆಗೆ ನಡೆಯುವರು. ದಾರಿ ಹೋಕರಿಗೆ ಈ ತಾಯಿ ಮಕ್ಕಳ ಬಾಂಧವ್ಯ ಕಂಡು ಸಂತಸವಾಗುತ್ತಿತ್ತು. ಸುಮತಿ ಟೀಚರಿಗೆ ಹಣ ಐಶ್ವರ್ಯ ಇಲ್ಲದಿದ್ದರೇನು, ಮಕ್ಕಳು ಆಕೆಗೆ ನೆರಳಾಗಿ ಇರುವರು ಎಂದು ಹೇಳಿಕೊಳ್ಳುತ್ತಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಾ ನಡೆದರೆ ಸುಮತಿಗೆ ದಾರಿ ಸಾಗುವುದು ತಿಳಿಯುತ್ತಿರಲಿಲ್ಲ. ಮನೆ ತಲುಪಿದ ಮೇಲೆಯೂ ಮಕ್ಕಳು ಸುಮತಿಯ ಹಿಂದೆ ಮುಂದೆ ಸುಳಿದಾಡುತ್ತಾ ಕೀಟಲೆ ಮಾಡುತ್ತಾ ನಗಿಸುತ್ತಾ ಕಾಲ ಕಳೆಯುವರು. ಮಾರನೇ ದಿನ ಬೇಗನೆ ಎದ್ದು ಮಗಳು ಹೊರಡಲು ಅನುವಾದಳು. ವಾರಕ್ಕೊಮ್ಮೆ ಮಗಳು ಬರುವಾಗ ಎಷ್ಟು ಸಂಭ್ರಮಿಸುತ್ತಿದ್ದಳೋ ಅವಳನ್ನು ಕಳುಹಿಸಿಕೊಡುವಾಗ ಸುಮತಿಗೆ ಅಷ್ಟೇ ಸಂಕಟವಾಗುತ್ತಿತ್ತು. ಹೀಗೆ ಕೆಲವು ತಿಂಗಳುಗಳು ಕಳೆದವು. ಸುಮತಿಗೆ ಈಗ ಮೊದಲಿಗಿಂತ ಆಯಾಸ ಹೆಚ್ಚಾಗುತ್ತಿತ್ತು. ಒಂದು ದಿನ ಸುಮತಿ ಬೆಳಗಿನ ಬಸ್ಸಿನಲ್ಲಿ ಎರಡನೇ ಮಗಳು ಕೆಲಸ ಮಾಡುತ್ತಿದ್ದ ಅನಾಥಾಶ್ರಮದ ಕಡೆಗೆ ಹೊರಟಳು. ಮೂರನೇ ಮಗಳು ಬಸ್ಸು ಹತ್ತಲು ಅಮ್ಮನಿಗೆ ಸಹಾಯ ಮಾಡಿದಳು. ಸುಮತಿಯ ಬದಲಿಗೆ ಶಾಲೆಗೆ ಹೋಗಬೇಕಾಗಿದ್ದ ಕಾರಣ ಅವಳು ತಾಯಿಯೊಂದಿಗೆ ಸಕಲೇಶಪುರಕ್ಕೆ ಹೊರಡಲಿಲ್ಲ. ಒಂದು ದಿನವೂ ಶಾಲೆಯ ಕೆಲಸ ತಪ್ಪಿಸುವಂತೆ ಇರಲಿಲ್ಲ. ತಪ್ಪಿದರೆ ಎಲ್ಲಿ ಕೆಲಸ ಕೈಬಿಟ್ಟು ಹೋಗುವುದೋ ಎನ್ನುವ ಭಯ ಸುಮತಿಯನ್ನು ಸದಾ ಕಾಡುತ್ತಿತ್ತು. ವರಮಾನಕ್ಕೆ ಇದೊಂದೇ ಮಾರ್ಗವಿತ್ತು. ಎರಡನೇ ಮಗಳು ಈಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದಾಳೆ. ಅವಳಿಗೆ ಸಿಗುವ ಸಂಬಳದಿಂದ ಮನೆಯ ಪೂರ್ತಿ ಖರ್ಚು ವೆಚ್ಚಗಳನ್ನು ಸರಿತೂಗಿಸಲು ಸಾಧ್ಯವಾಗುತ್ತಿರಲಿಲ್ಲ. ಅದೂ ಅಲ್ಲದೇ ಇತ್ತೀಚೆಗೆ ಕೆಲವು ತಿಂಗಳುಗಳಿಂದ ತಾನೇ ಅವಳು ಕೆಲಸಕ್ಕೆ ಹೋಗುತ್ತಿರುವುದು. ಜೊತೆಗೆ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿದ್ದಾಳೆ. ಹಾಗಾಗಿ ನನ್ನ ಬದಲು ಈ ಮಗಳಾದರೂ ಶಾಲೆಗೆ ಹೋಗಲೇಬೇಕು ಎಂದು ಆಲೋಚಿಸಿ ಮೂರನೇ ಮಗಳನ್ನು ಶಾಲೆಗೆ ಹೋಗುವಂತೆ ತಿಳಿಸಿದಳು. ಸಕಲೇಶಪುರ ನನಗೆ ಗೊತ್ತಿಲ್ಲದ ಊರಲ್ಲ. ಮಗಳು ಕೆಲಸ ಮಾಡುತ್ತಿರುವ ಅನಾಥಾಶ್ರಮ ಹುಡುಕುವುದು ಕಷ್ಟವೇನಲ್ಲ ಎಂದೂ ಮಗಳಿಗೆ ತಿಳಿಸಿದಳು. ಆದರೆ ಸಕಲೇಶಪುರದ ಬಸ್ ನಿಲ್ದಾಣ ಬಂದಾಗ ಬಸ್ಸಿಂದ ಕೆಳಗಿಳಿಯಲು ಸುಮತಿ ಬಹಳ ಕಷ್ಟ ಪಡಬೇಕಾಯಿತು. ಒಂದೊಂದು ಹೆಜ್ಜೆ ಇಡುವುದೂ ಅವಳಿಗೆ ಕಷ್ಟಕರವೆನಿಸುತ್ತಿತ್ತು. ಬಸ್ ನಿಲ್ದಾಣದಿಂದ ಮಗಳು ಇರುವ ಅನಾಥಾಶ್ರಮದ ಬಳಿಗೆ ಹೋಗಲು ಹೆಚ್ಚು ದೂರವೇನೂ ಇರಲಿಲ್ಲ. ಎಂದಿಲ್ಲದ ಇಂದೇಕೋ ಅವಳ ಕಣ್ಣುಗಳಿಗೆ ಎಲ್ಲವೂ ಮಸುಕಾಗಿ ಕಾಣುತ್ತಿತ್ತು. ತಡವರಿಸುತ್ತಾ ಹೇಗೋ ಮಗಳು ವಾಸವಿದ್ದ ಅನಾಥಾಶ್ರಮದ ಬಾಗಿಲ ಮುಂದೆ ಬಂದು ನಿಂತಳು. ತಲೆ ಸುತ್ತು ಬಂದಂತೆ ಅನುಭವವಾಯಿತು. ಅಲ್ಲಿಯೇ ಮೆಟ್ಟಿಲ ಮೇಲೆ ಕುಳಿತಳು. ಸ್ವಲ್ಪ ಸುಧಾರಿಸಿದ ನಂತರ ಮೆಲ್ಲನೆ ಎದ್ದು ಬಾಗಿಲನ್ನು ತಟ್ಟಿದಳು. ಅನಾಥಾಶ್ರಮದ ಮಕ್ಕಳಲ್ಲಿ ಒಬ್ಬ ಹುಡುಗಿ ಬಂದು ಬಾಗಿಲು ತೆರೆದಳು…. ಯಾರು ನೀವು? ಯಾರು ಬೇಕಿತ್ತು ನಿಮಗೆ? ಎಂದು ಕೇಳಿದಳು. ಆ ಹುಡುಗಿಯ ಮುಖ ಸುಮತಿಗೆ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಹಾಗಾಗಿ ತನ್ನ ಮಗಳ ಹೆಸರನ್ನು ಹೇಳಿ…”ಅವರು ಇಲ್ಲಿದ್ದಾರೆಯೇ”…. ಎಂದು ಕೇಳಿದಳು. ಒಳಗೆ ಕುಳಿತು ಆಶ್ರಮಕ್ಕೆ ಬೇಕಾದ ದಿನಸಿಗಳ ಪಟ್ಟಿಯನ್ನು ಮಾಡುತ್ತಿದ್ದ ಸುಮತಿಯ ಎರಡನೇ ಮಗಳು ಅಮ್ಮನ ಧ್ವನಿ ಕೇಳಿದಂತಾಗಿ ಎದ್ದು ಹೊರಗೆ ಬಂದಳು. ಓಹ್!! ಅಮ್ಮ ಬಂದಿದ್ದಾಳೆ…. ಎಂದು ಹೇಳುತ್ತಾ ಕೋಣೆಯಿಂದ ಹೊರ ಬಂದ ಮಗಳ ಮುಖದಲ್ಲಿ ಮಂದಹಾಸ ಮೂಡಿತು. ಆದರೆ ಮರುಕ್ಷಣವೇ ಅವಳ ಹಣೆಯಲ್ಲಿ ಗೆರೆಗಳು ಮೂಡಿದವು. ಅಮ್ಮ ಏಕೆ ಇಷ್ಟು ಬೆಳಗ್ಗೆ ನನ್ನನ್ನು ಹುಡುಕಿಕೊಂಡು ಬಂದಿದ್ದಾಳೆ? ನಾನು ಮನೆಗೆ ಹೋಗಿ ಬಂದು ಒಂದೆರಡು ದಿನಗಳಷ್ಟೇ ಆಗಿವೆ ಎಂದುಕೊಳ್ಳುತ್ತಾ ಅಚ್ಚರಿಯಿಂದ ಅಮ್ಮನನ್ನು ಒಮ್ಮೆ ನೋಡಿದಳು. ಓಡು ನಡಿಗೆಯಲ್ಲಿ ಸುಮತಿಯ ಬಳಿ ಬಂದು ಕೈಹಿಡಿದುಕೊಂಡು, … “ನಾನು ಇಲ್ಲೇ ಇರುವುದು…. ಅಮ್ಮ ಒಳಗೆ ಬಾ”…. ಎಂದಳು. ಮಗಳ ಧ್ವನಿ ಕೇಳಿ ಸುಮತಿ ಅವಳೆಡೆಗೆ ನೋಡಿದಳು. ಅವಳ ಮುಖ ಅಸ್ಪಷ್ಟವಾಗಿ ಕಂಡಿತು. ಕಣ್ಣುಗಳು ಹನಿಗೂಡಿದವು. ಮಗಳ ಕೈ ಹಿಡಿದು ತಡವರಿಸುತ್ತಾ ಅನಾಥಾಶ್ರಮದ ಒಳಗೆ ಹೆಜ್ಜೆ ಇಟ್ಟಳು. ಕುತೂಹಲದಿಂದ ಯಾರಿರಬಹುದೆಂದು ನೋಡಲು ಅನಾಥಾಶ್ರಮದ ಮಕ್ಕಳೆಲ್ಲ ಅಲ್ಲಿ ಬಂದು ಸೇರಿದರು….”ಇವರು ನನ್ನ ತಾಯಿ”…. ಎಂದು ಮಕ್ಕಳಿಗೆ ಪರಿಚಯಿಸಿದಳು. ಮಕ್ಕಳೆಲ್ಲರೂ….”ನಮಸ್ತೆ ಅಮ್ಮಾ”….ಎಂದು ಕೈ ಮುಗಿದರು. ಸುಮತಿ ಮುಗುಳ್ನಕ್ಕಳಷ್ಟೇ, ಮಾತನಾಡಲು ಅವಳಿಂದ ಸಾಧ್ಯವಾಗಲಿಲ್ಲ. ಇದನ್ನರಿತ ಮಗಳು ತನ್ನ ಕೋಣೆಯ ಕಡೆಗೆ ಅಮ್ಮನನ್ನು ಕರೆದುಕೊಂಡು ಹೋದಳು. ಸುಮತಿಯ ಕೈಗಳು ನಡುಗುತ್ತಿದ್ದವು. ಬಾಯಿ ಒಣಗಿತ್ತು. ಏನೋ ಹೇಳಲು ಮುಂದಾದಳು ಆದರೆ ಧ್ವನಿ ಗಂಟಲಿನಿಂದ ಆಚೆ ಬರಲಿಲ್ಲ. ಅಮ್ಮನ ಈ ಸ್ಥಿತಿಯನ್ನು ಕಂಡು ಮಗಳಿಗೆ ತುಂಬಾ ಗಾಬರಿಯಾಯಿತು. ಮೂರು ಬೆಂಚುಗಳನ್ನು ಸೇರಿಸಿ ಮಂಚದಂತೆ ಮಾಡಿಕೊಂಡಿದ್ದ ಹಾಸಿಯ ಮೇಲೆ ಅಮ್ಮನನ್ನು ಕುಳ್ಳಿರಿಸಿ, ಒಬ್ಬ ಹುಡುಗಿಯನ್ನು ಕರೆದು ಸ್ವಲ್ಪ ನೀರನ್ನು ತರುವಂತೆ ತಿಳಿಸಿದಳು.
ಧಾರಾವಾಹಿ ಸಂಗಾತಿ-10 ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯಕೊಡುಗೆ ನೀಡಿದ ಮಹಾಚೇತನ ಸವಿತಾ ದೇಶಮುಖ ಭಾಗ- 10ಜಯದೇವಿ ತಾಯಿಯವರ ಜೀವನ ವೃತ್ತಾಂತ ಜಯದೇವಿತಾಯಿಯವರು *೧೯೩೪ರಲ್ಲಿ ವೀರಶೈವ ಸಾಹಿತ್ಯ ಸಭೆಯ ಅಧ್ಯಕ್ಷರಾಗಿ …….ಸ್ತ್ರೀ ಜಾಗೃತಿ ,ಮಹಿಳೆಯರ ಪ್ರಗತಿಯ ಕುರಿತು ಮಾತನಾಡುತ್ತ …….“ಮಹಿಳೆಯರು ಮನೆ ಕೆಲಸದಲ್ಲಿ ಜೇಡರ ಹುಳುವಿನಂತೆ ಬಂಧಿಸಿಕೊಂಡಿದ್ದಾಳೆ….ಓದು ಬರಹಗಳಿಗೆ ಸಮಯ ಉಳಿಸಿಕೊಳ್ಳದೆ ದುಡಿಯುತ್ತಿರುತಾಳೆ ….,ಅವಳಿಗೆ ದುಡಿಮೆ ಆರ್ಥಿಕ ಆದಾಯವಿಲ್ಲದ ಕಾರಣ ಅವಳು ಪರಾವಲಂಬನೆ ಆಗಿ ಬದುಕುತ್ತಿದ್ದಾಳೆ ಕೀಳರಮಿಯ ಭಾವನೆಯಲ್ಲಿ ಬಳಲುತ್ತಿದ್ದಾಳೆ…..!!!! ಇಂಥ ಅವಹೇಳನಕರ ಭಾವನೆಗಳು ಅಜ್ಞಾನದಿಂದ ಉಂಟಾದದ್ದು…. ಈ ತಾರತಮ್ಯದ ಅಜ್ಞಾನವನ್ನು ಅತ್ಯಅಮೂಲ್ಯವಾದಂಥ ವಚನ ಸಾಹಿತ್ಯದ ಅಭ್ಯಾಸದಿಂದ ವಚನಗಳ ಸತತ ಮನನ ಗೊಳಿಸಿಕೊಳ್ಳುವುದರಿಂದ ದಾಸ್ಯತ್ವಭಾವನೆಗಳಿಂದ ದೂರಗೊಳ್ಳಬಹುದಾಗಿದೆ… !!! ಮಹಿಳೆಯರು ಶಿಕ್ಷಣ ಪಡೆದು ಸಾಹಿತ್ಯ ಬರವಣಿಗೆಯಲ್ಲಿ ತೊಡಗಿಕೊಂಡು ಸ್ವಾವಲಂಬನ ಬದುಕು ಸಾಗಿಸುವ ಮೂಲಕ ದಾಶ್ಯತ್ವದ ನೆಲೆಗಳ ಮಧ್ಯದಲ್ಲಿ ತನ್ನದೇ ಆದ ಬದುಕನ್ನು ಸ್ಥಾಪಿಸಬೇಕು . ಮಹಿಳೆಯರಲ್ಲಿ ಜಾಗೃತಿ ಉಂಟು ಮಾಡುವುದೇ ನಮ್ಮ ಸಭೆಗಳ ಉದ್ದೇಶವಾಗಿರಬೇಕು ಅಂತ ಹೇಳಿದರು .ಮಹಿಳೆಯರು ತಮ್ಮ ಗೌರವವನ್ನು …. ಕೇವಲ ಆಚರಣೆಗಳಿಗೆ ಸೀಮಿತ ಗೊಳಿಸಿಕೊಳ್ಳಬಾರದು ಸದಾ ತಮ್ಮ ಅಭಿವೃದ್ಧಿಗಾಗಿ ಕೆಲಸ ಮಾಡಬೇಕೆಂದು” ಜಯದೇವಿ ತಾಯಿಯವರು ಬಯಸುತ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಂದಿನ ಸಂಪ್ರದಾಯಿಕ ಕುಟುಂಬ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ಪುರುಷ ಸಮಾಜದ ಸಮವಾಗಿ ಸಭೆ ಸಮಾರಂಭಗಳನ್ನು ಪಾಲ್ಗೊಳ್ಳುವುದೇ ವಿರಳವಾಗಿತ್ತು .ಹೆಣ್ಣು ಮಕ್ಕಳು ಶಿಕ್ಷಣ ಕಲಿತರೆ ಮನೆ ಕೆಲಸ ಮಾಡುವುದಿಲ್ಲ ಎಂದು ಅವಳನ್ನು ಹಿಂದಿಟ್ಟಿದ್ದರು. ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳನ್ನು ಸಾಮಾಜಿಕ ರಂಗದಿಂದ ಹಿಂದೆಸರಿಸುವ ಎಲ್ಲ ಗೊಡ್ಡು ಆಚರಣೆಗಳನ್ನು ಮೌಢ್ಯತೆಗಳನ್ನು ಹೇರಿ ಮಹಿಳೆಯರು ಭಯ ಬೀಳುವಂತೆ ಮಾಡುತ್ತಿದ್ದ ಕಾಲ ಅದಾಗಿತ್ತು.. ಶೈಕ್ಷಣಿಕವಾಗಿ ಎಷ್ಟೇ ಸಮಾನತೆಯನ್ನು ಒದಗಿಸಿತ್ತೇವೆ ಅಂತ ಬ್ರಿಟಿಷರು ಹೇಳುತ್ತಿದ್ದರು ಆಗಿನ ಕಾಲದಲ್ಲಿ ಹೆಣ್ಣು ಮಗಳು ನಾಲ್ಕು ಗೋಡೆಯ ಮಧ್ಯೆ ಅವಳ ಜೀವನವನ್ನು ನಡೆಸಬೇಕು ಕುಟುಂಬವನ್ನು ನಿಭಾಯಿಸಿಕೊಂಡು ಮಕ್ಕಳನ್ನು ಹೆತ್ತು ಬೆಳೆಸಬೇಕು ಅನ್ನುವ ಕಾಲ ಅದಾಗಿತ್ತು…. ಅಂತಹದರಲ್ಲಿ ತಾಯಿಯವರು ಹೆಣ್ಣು ಮಕ್ಕಳು ಜೇಡರ ಹುಳದಂತೆ ಬಲೆಯಲ್ಲಿ ಸಿಕ್ಕಿ ಬಿಳದೆ ಅದನ್ನು ಬಿಡಿಸಿ ಹೊರಗೆ ಬರಬೇಕು ಸಾಹಿತ್ಯವನ್ನು ಓದಬೇಕು.ಬರವಣಿಗೆ ಮಾಡಬೇಕು ತನ್ನ ಸರ್ವತೋ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳಬೇಕು ,ತನ್ನದೇ ಆದ ಜೀವನವನ್ನು ನಿರ್ಮಿಸಬೇಕು ಅನ್ನುವ ದೀರೋದ್ಯಾತ ಕರೆಯನ್ನು ಜಯದೇವಿತಾಯಿಯವರು ಹೆಣ್ಣು ಮಕ್ಕಳಿಗೆ ಕೊಡುತ್ತಿದ್ದರು.…ಆಗಿನ ದಿನಗಳಲ್ಲಿ,!!! ಅವರು ತಮ್ಮ ಭಾಷಣಗಳಲ್ಲಿ ಹೆಣ್ಣು ಮಕ್ಕಳ ಅಭಿವೃದ್ಧಿ ಬಗ್ಗೆ ಪ್ರಸ್ತಾಪಿಸುವದಷ್ಟೇ ಅಲ್ಲದೆಸ್ವಂತ ಸೊಲ್ಲಾಪುರದಲ್ಲಿ ವೃದ್ಧಾಶ್ರಮ ಅನಾಥ ಆಶ್ರಮಗಳನ್ನು ಕೇವಲ ಹೆಣ್ಣು ಮಕ್ಕಳಿಗಾಗಿ ತೆರೆದರು. ಅವರಿಗೆ ಪೂಜೆ ಭಜನೆ ಅನೇಕ ಸಮಾಜಪರ ಚಟುವಟಿಗಳಿಗಾಗಿ ಅನುಕೂಲಗಳನ್ನು ಮಾಡಿಕೊಟ್ಟರು. ವೃದ್ಧರು… ಅನಾಥ ಹೆಣ್ಣು ಮಕ್ಕಳ ಮನಸ್ಸಿನ ನೆಮ್ಮದಿಗಾಗಿ ವಚನ ಸ್ಪರ್ಧೆಗಳನ್ನು ಅನೇಕ ವಿವಿಧ ರೀತಿಯ ಚಟುವಟಿಕೆಗಳನ್ನು ಏರ್ಪಡಿಸುತಿದ್ದರು. ೧೯೩೫ರಲ್ಲಿ ಶಿಕ್ಷಣಕ್ಕಾಗಿ ಹರಡೇಕರ್ ಮಂಜಪ್ಪನವರು ” ಅಕ್ಕಮಹಾದೇವಿ ಜಯಂತಿ* ಬಸವ ಜಯಂತಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾರಾರಂಭಿಸಿದರು ಅಕ್ಕನ ಬೆಳಗನ್ನು ಅಲ್ಲಲ್ಲಿ ಸ್ಥಾಪಿಸಿದ್ದರು. ಮಹಿಳೆಯರ ಪ್ರಚಲಿತ ವಿದ್ಯಮಾನಗಳನ್ನು ಅರಿತುಕೊಂಡು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲಿ ಅನ್ನುವ ಉದ್ದೇಶಕ್ಕಾಗಿ ಹರಡೇಕರ್ ಮಂಜಪ್ಪನವರ ಕನ್ನಡ ಪತ್ರಿಕೆಯನ್ನು ವೀರಶೈವ ಮಹಿಳಾ ಜ್ಞಾನ ಮಂದಿರಕ್ಕೆ ತರಿಸುತ್ತಿದ್ದರು. ಹೀಗಾಗಿ ತಾಯಿಯವರು ಕನ್ನಡಕ್ಕೆ ಚಿರಪಚಿತರಾಗಿದ್ದರು . ಹಾಗೆ ಹರಡೆಕರ ಮಂಜಪ್ಪನವರೊಂದಿಗೆ ಸ್ವಾತಂತ್ರದ ಹೋರಾಟ ಸ್ತ್ರೀ ವಿಮೋಚನೆಯ ಬಗ್ಗೆ ಅನೇಕ ಸಲ ಭೇಟಿ ಮಾಡಿದ್ದರು. ಜಯದೇವಿ ತಾಯಿಯವರು ಸ್ವಾತಂತ್ರ ಹೋರಾಟ ಹಾಗೂ ಹೆಣ್ಣು ಮಕ್ಕಳ ಸ್ವಾತಂತ್ರ್ಯಕ್ಕಾಗಿ ಆಯೋಜಿಸಲಾಗುವ ಎಲ್ಲ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು .*೨೪-೪-೧೯೩೯ *ರಂದು ವೀರಶೈವ ಮಹಾಸಭೆಯ ಮಹಿಳಾ ಪರಿಷತ್ತಿನ ಅಧ್ಯಕ್ಷ ಯಾದರು. ಸಭೆಯಲ್ಲಿ ಮಾತನಾಡುತ್ತಾ…*ಎಲ್ಲ ಸ್ತ್ರೀ ಪುರುಷರು ಸಮಾನರು…… ಸ್ತ್ರೀಯು ಪತಿಯ ಅರ್ಧಾಂಗಿಣಿಯಾಗಿ ಮನೆ ಕೆಲಸವನ್ನೆಲ್ಲ ಮಾಡುವಂತೆ ಪತಿಯು ಸಹ ಅವಳಷ್ಟೇ ಜವಾಬ್ದಾರಿ ಹೊಂದಿರುತ್ತಾರೆ ಇಬ್ಬರು ಸರಿ ಹಂಚಿಕೊಂಡು ಕುಟುಂಬವನ್ನು ನಡೆಸಿಕೊಂಡು ಹೋದರೆ ಸ್ವರ್ಗವನ್ನೇ ಧರೆಗೆ ಇಳಿಸಬಹುದು.. ನಮ್ಮಹಿಂದಿನ ಸಂಸ್ಕೃತಿಯನ್ನು ಮರೆಯದೇ ಸಮಾನತೆ ಯೊಂದಿಗೆ ನಡೆಯಬೇಕು. ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರಿಗೆ ಶಿಕ್ಷಣದ ಅನುಕೂಲ ಸಾಕಷ್ಟು ಒದಗಿ ಬಂದಿದೆ ಅದನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಾರಿದರು. *೧೯೪೦ರಲ್ಲಿ * ಜಯದೇವಿ ತಾಯಿಯವರು ಸ್ವಂತ ಜಗವನ್ನು ಖರೀದಿಸಿ* ಜಯದೇವಿ ಕನ್ಯಾ ಶಾಲೆ*ಅಥವಾ *ಕನ್ನಡ ಕನ್ಯಾ ಶಾಲೆ *ಎಂದು ಆ ಶಾಲೆಗೆ ಮರು ನಾಮಕರಣ ಮಾಡಿದರು .ಮುಂದೆ ಮರಾಠಿ ಅಭಿಮಾನಿಗಳು ಕೆಲವರು ಈ ಶಾಲೆಯಲ್ಲಿ ಮರಾಠಿ ಕಲಿಸಲು ಇಚ್ಚಿಸಿದರು. ಕನ್ನಡ ಶಾಲೆ ತೆಗೆದು ಮರಾಠಿ ಆರಂಭಿಸುವುದಾದರೆ ನನ್ನ ಹೆಸರನ್ನು ತೆಗೆದು ಸಿದ್ದರಾಮನ ಹೆಸರು ಶಾಲೆಗೆ ಬರಲಿ ಎಂದು ಹೇಳುವ ಮೂಲಕ ಕನ್ನಡತನವನ್ನು ಎತ್ತಿ ಹಿಡಿಯುತ್ತಾರೆ. ಅಂತಯೇ ಅವರು ಕನ್ನಡದ ಮಾತೆ ಅಂತ ಕರೆಯಲಾಯಿತು. *೧೯೪೦ ರಲ್ಲಿ *ಆಂಧ್ರದ ಸದಾಶಿವಪೇಠದಲ್ಲಿ ಜರುಗಿದ ಬಸವ ಜಯಂತಿ ಕಾರ್ಯಕ್ರಮಕ್ಕೆ ಹೋಗಿ ಬಸವ ಶರಣರು ಶರಣೀಯರಲ್ಲಿ ಇದ್ದ ಸಮಾನತೆಯ ಬಗ್ಗೆ ಭಾಷಣ ಮಾಡಿದರು . *೧೯೪೧ರಲ್ಲಿ *ಉದುಗೀರದಲ್ಲಿ ನಡೆದ ಅಕ್ಕನ ಹುಣ್ಣಿಮೆಯ ಕಾರ್ಯಕ್ರಮಕ್ಕೆ ಹೋಗಿ ಮೂರು ದಿನ ಅಲ್ಲಿಯೇ ಉಳಿದು ಅಧ್ಯಕ್ಷತೆ ವಹಿಸಿ ಸ್ತ್ರೀ ಜಾಗೃತಿ, ಕಾರ್ಯಕ್ರಮ ಹಮ್ಮಿಕೊಂಡರು .ಅದೇ ಸಮಯದಲ್ಲಿ *ಪ್ರಭುರಾವ್ ಕಂಬಳಿ ಬಾಬಾ *ಅವರ ಪರಿಚಯ ಆಯಿತು. ಶರಣ ಸಂಸ್ಕೃತಿ ಮತ್ತು ಸಮಾಜಪರ ಕಾರ್ಯಗಳಲ್ಲಿ ಸಹಕಾರ ನೀಡುವವರಾಗಿದ್ದರು ಕಂಬಳಿಬಾಬಾರು. ೧೯೪೧ ರಲ್ಲಿ ಹೈದ್ರಾಬಾದಿನಲ್ಲಿ ನಡೆದ ನಾಲ್ಕನೇ *ವೀರಶೈವ ಮಹಾಸಭೆಯ ಪ್ರಾಂತೀಯ ಸಮ್ಮೇಳನದ *ಅಧ್ಯಕ್ಷತೆಯ ಸ್ಥಾನವನ್ನು ವಹಿಸಿದ್ದರು. *ಹೆಣ್ಣು ಬಾಲ್ಯದಲ್ಲಿ ತಂದೆಯ ಆಶ್ರಯದಲ್ಲಿ ಯೌವನದಲ್ಲಿ ಗಂಡನ ಆಶ್ರಯದಲ್ಲಿ ವಯಸ್ಸಾದ ನಂತರ ಮಗನ ಆಶ್ರಯದಲ್ಲಿ ಕಳೆಯುತ್ತಾಳೆ. ತಂದೆ ಇಲ್ಲದವರ ,ಮದುವೆಯಾದರು ಮಕ್ಕಳಿಲ್ಲದ ಮಹಿಳೆಯರ ಸಮಸ್ಯೆಗೆ ಪರಿಹಾರವೇನು??!ಹೆಣ್ಣಿಗೆ ಸೌರಕ್ಷಣೆ ಕೊಡುವುದು ಸಮಾಜದ ಹೊಣೆಯಲ್ಲವೇ….??!!!ವೃದ್ಧೆಯಾಗಿ ಅನಾಥರಾದವರಿಗೂ ಸಂರಕ್ಷಣೆ ಕೊಡುವುದು ಸಮಾಜದ ಹೊಣೆಅಲ್ಲವೇ??!! ಅನಾಥ ವಿಧವೆ ಅಸಹಾಯಕರ ಬದುಕಿಗೆ ಒಂದು ನೆಲೆಯನ್ನು ಒದಗಿಸಲು ಯಾವ ವ್ಯವಸ್ಥೆಯನ್ನು ಮಾಡಲಿದ್ದೀರಿ” ಎಂದು ಸಮಾಜವನ್ನು ಪ್ರಶ್ನಿಸಿದರು. ೧೯೪೫ ಜಾಗತಿಕ ಮಹಿಳಾ ವರ್ಷವನ್ನು ಸಾರಿತ್ತು.೧೨-೯-೧೯೪೫ರಂದು*ವಿಜಯಪುರದಲ್ಲಿ *ನಡೆದ ಮಹಿಳಾ ಪರಿಷತ್ತಿನ ಉದ್ಘಾಟನೆಯ ಭಾಷಣಕಾರ್ತಿಯಾಗಿ ಬಂದರು. ಹೆಣ್ಣುಮಕ್ಕಳು ಸ್ವಾಭಾವಿಕವಾಗಿ ಭಾವುಕರು ಭಾವನೆಯೇ ಜೀವನವೆಂದು ನಂಬಿಕೊಂಡವರು ಅವರು ಜೀವನದ ವಿವಿಧ ಸನ್ನಿವೇಶಗಳಲ್ಲಿ ಹೊಂದಾಣಿಕೆ ಮನೋಭಾವವುಳ್ಳವರು ತಮಗೆ ಒದಗಿ ಬರುವ ಕಷ್ಟದ ಅನುಭವಗಳನ್ನು ಅಭಿವ್ಯಕ್ತಗೊಳಿಸಲು ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳುತ್ತಾ …..ಸಮಾಜದ ಮಹಿಳೆಯರ ಅಸಹಾಯಕತೆ ಸ್ಥಾನಮಾನ ಹಾಗೂ ಆಕೆಯ ಭದ್ರತೆಯ ಕುರಿತು ಜನರನ್ನು ಎಚ್ಚರಿಸಿದ್ದರು. ಆಗ ಧಾರವಾಡದಲ್ಲಿ ಕರ್ನಾಟಕ ಸಂಘದ ಆಚರಣೆ ಹಮ್ಮಿಕೊಂಡಾಗ…. ಮುಖ್ಯ ಅತಿಥಿಯಾಗಿ ಜಯದೇವಿ ತಾಯಿಯವರು ಪಾಲ್ಗೊಂಡಿದ್ದರು . “ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಗೌರವದಿಂದ ಕಾಣುವುದರ ಜೊತೆಗೆ ಶೋಷಣೆ ಮಾಡುತ್ತಾ ಬಂದಿರುವುದು ವಾಸ್ತವ್ಯ ಸಂಗತಿ. ಸದಾ ಕಾಲ ಮಹಿಳೆಯರನ್ನು ಹೀನವಾಗಿ ಕಂಡು ಶೋಷಣೆಯ ಬಲಿಪಶು ಮಾಡುತ್ತಾರೆ .ಇಂಥ ಸಂಸ್ಕೃತಿಯ ನೆಲೆಯಲ್ಲಿ ಬೆಳೆದು ಬಂದ ಭಾರತೀಯ ಕುಟುಂಬಗಳು ಸಾಕಷ್ಟಿವೆ .ಬ್ರಿಟಿಷರ ಶಿಕ್ಷಣ ಪ್ರಭಾವದ ಹಿನ್ನೆಲೆಯಲ್ಲಿ ವಿದ್ಯಾವಂತ ಹಾಗೂ ಶ್ರೀಮಂತ ವರ್ಗದ ಕುಟುಂಬದ ಸ್ತ್ರೀ ಪುರುಷರು ಶಿಕ್ಷಣವನ್ನು ಪಡೆದುಕೊಂಡು ಆಧುನಿಕ ಸಮಾಜದ ನಿರ್ಮಾಣಕ್ಕೆ ಕಾರಣರಾದವರು.ಉನ್ನತ ಶಿಕ್ಷಣ ಪಡೆದ ಮಹಿಳೆಯರು ಹಲವು ಭಾಷೆಗಳನ್ನು ಬಲ್ಲವರಾಗಿರುತ್ತಾರೆ. ಅವರು ನಮ್ಮನಾಡಿನ ಉತ್ತಮವಾದ ಸಾಹಿತ್ಯವನ್ನು ಅನ್ಯ ಭಾಷಿಗರಿಗೆ ತಿಳಿಸಬೇಕು. ಸ್ತ್ರೀಯರು ಪುರುಷರಂತೆ ಲೌಕಿಕ ಅಲೌಕಿಕ ಎರಡನ್ನು ಸಾಧಿಸಲು ಸಾಧ್ಯ. ಮಾನವ ಕುಲದ ಮುನ್ನಡೆಗೆ ಕಾರಣರಾಗಲು ಸಾಧ್ಯವೆನ್ನುತಿದ್ದರು. ಅದೇ ರೀತಿ ಪ್ರತಿಯೊಂದು ಹೆಣ್ಣು ಮಗಳು ಮುಂದೆ ಬಂದು ಸಮಾಜಕ್ಕಾಗಿ ಕೊಡುಗೆಯನ್ನು ಕೊಡಬೇಕು ಎಂದು ಕೇಳಿಕೊಂಡರು. ಜಯದೇವಿ ತಾಯಿಯವರು* ಪಂಡರಪುರದ ವಿಶ್ವ ಹಿಂದೂ ಪರಿಷತ್ತಿನಲ್ಲಿ *ಭಾಗವಹಿಸಿದಾಗ ಒಬ್ಬ ಭಾಷಣಗಾರರು “ಘೋರ ಕುಂಬಾರ್ ಗಡಗಿ ಕೊಡಲಿ…. ತುಕಾರಾಂ ಕಾಳು ಕೊಡಲಿ…..” ಎಂದು ಹೇಳುತ್ತಾ ಎಲ್ಲ ಸಂತರನ್ನು ಅವರವರ ಗುಣ ಕಾಯದಿಂದ ನೆನೆಯುತ್ತ ಕೇವಲ ಶ್ರೇಷ್ಠ ಪುರುಷ ಸಂತರದಷ್ಟೇ ನೆನೆದರು. ಆಗ ಜಯದೇವಿ ತಾಯಿಯವರು ತಮ್ಮ ಭಾಷಣದಲ್ಲಿ “ಸಕ್ಕೂಬಾಯಿಯನ್ನು ಕರೆಯಿರಿ ಕಾಳು ಬೀಸಿ ಕೊಡಲಿ….. ರುಕುಮಾಬಾಯಿಯನ್ನು ಕರೆಯಿರಿ ಟೊಂಕದ ಮೇಲೆ ಕೈ ಇಟ್ಟುಕೊಂಡು ಉಪಚಾರಗಳನ್ನು ನೋಡಿಕೊಳ್ಳಲಿ ……ಇಂಥ ಸಂತಿನಿಯರನ್ನು ನೀವು ಮರೆಯೋದೇಕೆ…??!!! ಎಂದು ಪ್ರಶ್ನಿಸಿದರು .ಮಹಿಳೆಯರ ಸಾಧನೆಯನ್ನು ಸ್ಮರಿಸುತ್ತ ಸಮಾಜದ ವ್ಯವಸ್ಥೆಯನ್ನು ತಾವಿದ್ದ ಸ್ಥಳದಲ್ಲಿ ಟೀಕಿಸುತ್ತಿದ್ದರು. ಸಂತಿಣೀಯರ ಸಾಧನೆಯನ್ನು ಗೌಣ್ಯ ಮಾಡಿ ಅವಳನ್ನು ಮನೆ ಕೆಲಸಕ್ಕೆ ಸೀಮಿತಗೊಳಿಸುತ್ತಿದ್ದ ವ್ಯವಸ್ಥೆಯನ್ನು ಸಹಿಸುತ್ತಿರಲಿಲ್ಲ …….!! ಹರಸೀದೆ ನಿನದಾಟಿ ನಿನ್ಹಾಡಿ ತಾಯವ್ವಬರದೇನ ಮನತುಂಬಿ ಪಾಡಿ ನಮವ್ವಬರದೇನ ಮನೆ ತುಂಬಿ ನಿನ್ಹೆಸರಲೆಕರೆದೇನ ತಾಯಿ ಪದವೆಂದು…. ಎಂದು ಹಾಡುತ್ತಾ ತಾಯಿಯಂದಿರಿಗಾಗಿ ಪದಗಳನು ಬರೆದ ತಾಯಿಯ ಪದಗಳ ಎಂಬ ಕವನ ಸಂಕಲನವು ಪ್ರಚಲಿತವಾಯಿತು . ಹೆಣ್ಣು ಮಕ್ಕಳು ಹುಟ್ಟಿದರೆ ಮನೆಯಲ್ಲಿ ನಡುಗಂಬಗಳು ಸಹ ನಡುಗುತ್ತವೆ ……ಅದೇ ಗಂಡು ಮಕ್ಕಳು ಹುಟ್ಟಿದಾಗ ಗಜಭೀಮ ಹುಟ್ಟಿದನೆಂದು ಬಾಗಿಲಿನ ಚಿಲಕ ಬೋಧಿಗಳೆಲ್ಲ ನಗುತ್ತವೆ……. ಅನ್ನುವುದನ್ನು ತಾಯಿಯವರು ಖಡಾ ಖಂಡಿತವಾಗಿ ವಿರೋಧಿಸುತ್ತಿದ್ದರು. ಹೆಣ್ಣು ಮಕ್ಕಳು ಹುಟ್ಟಿದಾಗ ತಾಯಿ ಅಳಬಾರದು ನೊಂದುಕೊಳ್ಳಬಾರದು ಹೆಣ್ಣು ಜಗದ ಕಣ್ಣು ಎಂದು ತಮ್ಮ ಪದದಲ್ಲಿ ಹೇಳುತ್ತಾರೆ . ಹೆಣ್ಣು ಹುಟ್ಟಿತೆಂದು| ಕಣ್ಣೀರ ಕರಿಬ್ಯಾಡ ಸಣ್ಣಗಾಗಬ್ಯಾಡ ಮನದಾಗ -ತಾಯವ್ವ ಹೆಣ್ಣಿನ ಜಗದ ಕಣ್ಣ!! ಅವರು ಹೋದ ಪ್ರತಿಯೊಂದು ಸಭೆಗಳಲ್ಲಿ“ಹೆಣ್ಣು ಹೆಣ್ಣಲ್ಲ ಹೆಣ್ಣು ರಕ್ಕಸಿಯಲ್ಲಹೆಣ್ಣು ಸಾಕ್ಷಾತ್ ಕಪಿಲಸಿದ್ಧಮಲ್ಲಿಕಾರ್ಜುನ ನೋಡ” ಎಂದು ಶಿವಯೋಗಿ ಸಿದ್ದರಾಮೇಶ್ವರರು ಹೇಳುವ ಮಾತು ಹೇಳಲು ಎಂದು ಮರೆಯುತ್ತಿರಲಿಲ್ಲ. ಶರಣ ಶ್ರೇಷ್ಠರಾದ ಸೊಲ್ಲಾಪುರದ ಶ್ರೀ ಸಿದ್ಧರಾಮರು ನುಡಿದ ಈ ವಚನದಲ್ಲಿ ಎರಡು ಮಾತುಗಳು ಎದ್ದು ಕಾಣುತ್ತವೆ ಹೆಣ್ಣಿನಲ್ಲಿದ್ದ ದೈವತ್ವವನ್ನು ಶರಣರು ಸ್ಪಷ್ಟಪಡಿಸಿದ್ದಾರೆ .ಅವಳ ಸತ್ಯ ಸೇವೆ ಪ್ರೇಮ ತ್ಯಾಗ ಅಹಿಂಸೆಗಳ ಸ್ವರೂಪ ಎಂದು ಸತ್ವ ಸಾಮರ್ಥ್ಯಗಳಿಂದಲೂ ಕ್ರಿಯಾಚಾರದಿಂದ ಕನ್ನಡ ನಾಡಿನಲ್ಲಿ ಪ್ರಸ್ತಾಪಿಸಿದ್ದಾಳೆ ಎಂದು ಈ ಪರಂಪರೆಯು ಜಾಗೃತಗೊಳ್ಳಬೇಕು. ಈ ತೇಜೋಮಯ ಬಲ ಮೈಮನದಲ್ಲೂ ಬೇರೂರಬೇಕು .ಈ ನಮ್ಮ ಶರಣ ಸಂಸ್ಕೃತಿಯು ಎಲ್ಲಡೆಯು ಹರಡಬೇಕೆಂದು ಪ್ರತಿಪಾದಿಸಿದರು. ಹೆಣ್ಣಿನ ಕಳವಳ ಕೇಳಿ ತಾ ಕರಗ್ಯಾನಅಣ್ಣ ಮಾಡ್ಯಾನ ಪಾವನ -ಹೆಣ್ಣಿನಪುಣ್ಯ ಕಟಕೊಂಡ ಬಸವಣ್ಣ !! ಹೆಣ್ಣು ಜೀವಕ ಅಕ್ಕ ಹೊಸಗಣ್ಣ ನೀ ಕೊಟ್ಟಿಎಣ್ಣ್ಯಾಗಿ ಬತ್ತಿಯಾಗಿ ದೀಪಾಗಿ -ದೀಪ್ತಿಯಾಗಿಅಣಿ ಮಾಡಿ ಕೊಟ್ಟೀನಿ ಕಿರು ನುಡಿ!! ಅಂತ ಹೀಗೆ ಅನೇಕ ಪದಗಳನ್ನು ಹೆಣ್ಣಿನ ಬಗ್ಗೆ ಬರೆದರು. ತಾಯಿಯವರು ಈಗಾಗಲೇ ತಮ್ಮ ನಿರ್ಗಳ ವಾಕ್ ವೈಖರಿಯಿಂದ ಮತ್ತು ನಿಷ್ಕಲ್ಮಶ ವ್ಯಕ್ತಿತ್ವದಿಂದ ನಾಡಿನ ಜನಮನದ ಮನೆಮಾತಾದರು. ಅದೇ ರೀತಿ ಸೊಲ್ಲಾಪುರದಲಿ ವಚನ ಸಾಹಿತ್ಯ ಹಾಗೂ ಗಾಂಧಿ ಪ್ರಭಾವದಿಂದ ಸುಶಿಕ್ಷಿತ ಶ್ರೀಮಂತ ಕುಟುಂಬದಲ್ಲಿ ಬೆಳೆದು ಬಂದ ಜಯದೇವಿ ತಾಯಿಯವರು ದಲಿತ ಅಭಿವೃದ್ಧಿ ಮಹಿಳಾ ಸ್ವಾತಂತ್ರ ಸಮಾನತೆ ಸಾಕ್ಷರತೆಗಾಗಿ ಶ್ರಮಿಸಿದರು . ಸವಿತಾ ದೇಶಮುಖ
ಸಾವಿಲ್ಲದ ಶರಣರುಮಾಲಿಕೆ “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಶರಣರ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ” ಭವ್ಯ ಭಾರತದ ಇತಿಹಾಸವು ತೆರೆದಿಟ್ಟ ಅಪ್ಪಟ ರಾಷ್ಟ್ರ ಪ್ರೇಮಿ ಸೇನಾನಿ ಹೈದ್ರಾಬಾದ ಕರ್ನಾಟಕದ ಹುಲಿ ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ. ಮಹದೇವಪ್ಪ ರಾಂಪುರೆ (1920-1973) ಒಬ್ಬ ಭಾರತೀಯ ರಾಜಕಾರಣಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಘದ (H.K.E. Society) ಸ್ಥಾಪಕರು, ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜ್ ಅನ್ನು 1963ರಲ್ಲಿ ಸ್ಥಾಪಿಸಿ, ಆ ಭಾಗದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ; ಅವರು ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ, ಕಲಬುರಗಿ ಲೋಕಸಭಾ ಸದಸ್ಯರಾಗಿ ಮೂರು ಭಾರಿ ಸೇವೆ ಸಲ್ಲಿಸಿದ್ದಾರೆ. ಸಂಕ್ಷಿಪ್ತ ಜೀವನ ಚರಿತ್ರೆ: ಜನನ ಮತ್ತು ಆರಂಭಿಕ ಜೀವನ: ಮಹದೇವಪ್ಪ ರಾಂಪುರೆ ಅವರು 1920ರಲ್ಲಿ ಜನಿಸಿದರು.ತಾಯಿ ಗುರುದೇವಿ ತಂದೆ ಯಶವಂತಪ್ಪ ರಾಂಪುರೆ ಮಹದೇವಪ್ಪ ರಾಮಪುರೆ ಅವರು 6 ಜನ ಅಣ್ಣ – ತಮ್ಮಂದಿರು ಹಾಗೂ ಒಬ್ಬಳೆ ಒಬ್ಬಳು ತಂಗಿ. ಆರಂಭಿಕ ಶಿಕ್ಷಣವನ್ನು ಸೊಲ್ಲಾಪುರದಲ್ಲಿ ಮುಗಿಸಿದರು. ಇವರ ಅಜ್ಜನವರು ಸುಮಾರು ನಾಲ್ಕು ನೂರು ಎಕರೆ ಭೂಮಿಯನ್ನು ಹೊಂದಿದ್ದರು. ಮೂಲತಃ ಸೋಲಾಪುರ ಜಿಲ್ಲೆಯ ಕುಂಬಾರಿ ಗ್ರಾಮದಲ್ಲಿ ಒಂದು ಅಡತಿ ಅಂಗಡಿ ಕೃಷಿ ವ್ಯಾಪಾರ ಮಾಡಿಕೊಂಡಂತಹ ಶ್ರೀಮಂತ ಮನೆತನವಾಗಿತ್ತು. ಶ್ರೀ ಮಹದೇವಪ್ಪ ರಾಮಪುರೆ ಅವರು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಸ್ವಾತಂತ್ರ್ಯ ಹೋರಾಟದೊಳಗೆ ಧುಮುಕಿದರು. ಮಹಾರಾಷ್ಟ್ರದಲ್ಲಿ ಇವರ ಮೇಲೆ ಬ್ರಿಟಿಷ್ ಸರ್ಕಾರ ವಾರಂಟ್ ಜಾರಿ ಮಾಡಿದ ಮೇಲೆ ಸಂಘರ್ಷವನ್ನು ಮುನ್ನಡೆದ ಬೇಕೆಂಬ ಯೋಚನೆ ಹಂಬಲದಿಂದ ಕಲಬುರ್ಗಿಗೆ ಬಂದರು . ತಮ್ಮ 26 ನೆಯ ವಯಸ್ಸಿನಲ್ಲಿ ಹೈದ್ರಾಬಾದ ಸರಕಾರದ ಎಂ ಎಲ್ ಸಿ ಆಗಿ ಆಯ್ಕೆಯಾದರು ಮುಂದೆ ಕರ್ನಾಟಕ ಏಕೀಕರಣವಾದ ಮೇಲೆ ಕರ್ನಾಟಕದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಉಪಸಭಾಪತಿಯಾಗಿ ಆಯ್ಕೆಯಾದರು. ರಾಜಕೀಯ ಜೀವನ: ಶ್ರೀ ಮಹದೇವಪ್ಪ ರಾಂಪುರೆ ಅವರು ಮೂಲತಃ ಸಮಾಜವಾದಿ ಎಡಪಂಥೀಯ ವೈಚಾರಿಕ ನೆಲೆಯಲ್ಲಿ ಬೆಳೆದವರು. ಡಾ ಎಂ ಎನ್ ರಾಯ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು. ಕರ್ನಾಟಕದ ನವ ನಿರ್ಮಾಪಕ ಶ್ರೀ ಎಸ್ ನಿಜಲಿಂಗಪ್ಪನವರ ಬಲಗೈ ಬಂಟನಾಗಿ ಕಾರ್ಯ ಮಾಡಿದವರು. ಶ್ರೀ ಚಂದ್ರಶೇಖರ ಪಾಟೀಲ ಶ್ರೀ ವೀರೇಂದ್ರ ಪಾಟೀಲ ಮುಂತಾದ ಯುವ ನಾಯಕರ ಜೊತೆಗೂಡಿ ಹೈದ್ರಾಬಾದ ಕರ್ನಾಟಕದ ಸಮಗ್ರ ಏಳ್ಗೆಗೆ ಕನಸು ಕಂಡವರಲ್ಲಿ ಪ್ರಮುಖರು ಹಾಗೂ ರಜಾಕಾರ ಹಾವಳಿ ಎದುರಿಸಿದ ಸೇನಾನಿಯಾಗಿದ್ದರು. ಇವರು ಶ್ರೀಮತಿ ತಾರಾದೇವಿ ಅವರನ್ನು ವಿವಾಹವಾದರು.ಇವರಿಗೆ. 5 ಜನ ಗಂಡುಮಕ್ಕಳು 3 ಜನ ಹೆಣ್ಣುಮಕ್ಕಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ನಂತರ ರಾಜಕೀಯ ಪ್ರವೇಶಿಸಿದರು. ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ (1956-1957) ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ (1957-1970) ಸೇವೆ ಸಲ್ಲಿಸಿದರು. ಶ್ರೀ ಎಸ್ ನಿಜಲಿಂಗಪ್ಪನವರ ಮೊರಾರ್ಜಿ ದೇಸಾಯಿ ಡಾ ಎಂ.ಎನ್ ರಾಯ್ ಡಾ ನೀಲಂ ಸಂಜೀವ ರೆಡ್ಡಿ ಮುಂತಾದವರ ಜೊತೆಗೆ ರಾಜಕೀಯ ಒಡನಾಟವನ್ನು ಹೊಂದಿದ್ದರು. ತೀವ್ರಗಾಮಿ ಸತ್ಯ ಸಮತೆ ಶಾಂತಿ ಪ್ರೀತಿ ಮಂತ್ರ ಜಪಿಸಿದ ರಾಜಕೀಯ ಮುತ್ಸದ್ಧಿ. ಇವರ ಲೋಕ ಸಭೆಯಲ್ಲಿ ಮಾತನಾಡುವ ವೈಖರಿ ಕಂಡು ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣ ಅವರು ಶ್ರೀ ಮಹದೇವಪ್ಪ ರಾಮಪುರೆ ಅವರನ್ನು ಶ್ರೇಷ್ಠ ಸಂಸತ್ತ ಪಟು ಎಂದು ಬಣ್ಣಿಸಿದ್ದಾರೆ. ಶಿಕ್ಷಣಕ್ಕೆ ಕೊಡುಗೆ: ಡಾ ಡಿ ಸಿ ಪಾವಟೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಣದ ಬೆಳವಣಿಗೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇದರ ಫಲವಾಗಿ 1963ರಲ್ಲಿ ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಿದರು. ಪ್ರಮುಖ ಕೊಡುಗೆಗಳು: H.K.E. ಸೊಸೈಟಿ: ಇದರ ಸಂಸ್ಥಾಪಕರು .ಇದಕ್ಕೂ ಮುಂಚೆ ದೊಡ್ಡಪ್ಪ ಅಪ್ಪ ಅವರ ಶ್ರೀ ಶರಣ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ನೂರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. M.R. ಮೆಡಿಕಲ್ ಕಾಲೇಜ್: ಭಾರತದ ಖಾಸಗಿ ವೈದ್ಯಕೀಯ ಕಾಲೇಜಾಗಿ, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಮಾನ್ಯತೆ ಪಡೆದು, ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುತ್ತಿದೆ. ದೂರದೃಷ್ಟಿ ಈ ಭಾಗದ ಜನರ ಕಲ್ಯಾಣಕ್ಕಾಗಿ ಶಿಕ್ಷಣ ಮತ್ತು ಆರೋಗ್ಯದ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂಬ ದೂರದೃಷ್ಟಿಯನ್ನು ಹೊಂದಿದ್ದರು. ವಂಶಪರಂಪರೆ: ಅವರ ದೂರದೃಷ್ಟಿ ಮತ್ತು ಶ್ರಮದಿಂದ ಸ್ಥಾಪಿಸಲಾದ ಸಂಸ್ಥೆಗಳು ಇಂದಿಗೂ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಇವರ ಮೂರು ಜನ ಗಂಡು ಮಕ್ಕಳು ವೈದ್ಯರಾಗಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಸಲ್ಲಿಸಿದ್ದಾರೆ. ಇಂತಹ ಒಬ್ಬ ಸೃಜನಶೀಲ ವೈಚಾರಿಕ ಚಿಂತಕ ಶಿಕ್ಷಣ ಪ್ರೇಮಿ ಅಪ್ಪಟ ದೇಶ ಭಕ್ತ 1973 ರಲ್ಲಿ ತಮ್ಮ 53 ನೆಯ ವಯಸ್ಸಿನಲ್ಲಿ ಬಯಲಾದರು. ಇಂತಹ ದಿವ್ಯ ಜ್ಯೋತಿ ಇಂದಿಗೂ ಬೆಳಗುತ್ತಿದೆ ನಮ್ಮೆಲ್ಲರ ಮಧ್ಯೆ. __________________________ *ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ
ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-31 ಈ ಮನೆಯ ಬಾಲ್ಕನಿಯಲ್ಲಿ ನಿಂತರೆ ಇಡೀ ಸಂತೆಯೇ ಕಾಣುತ್ತಿತ್ತು ಗುರುವಾರದ ದಿನ ಬಂತು ಬೆಳಗ್ಗೆ 6 ಗಂಟೆಯಿಂದಲೇ ಜನಗಳ ಗಾಡಿಗಳ ಓಡಾಟ ಮತ್ತೆ ಸಂಜೆಯವರೆಗೂ ಇದೇ ರೀತಿ ರಸ್ತೆ ಬ್ಯುಸಿ ಇರುತ್ತಿತ್ತು. ಸಂಜೆ ಸಂತೆ ಕೆ ಬಂದ ಕೆಲವು ಸಹೋದ್ಯೋಗಿಗಳು ಮನೆಗೆ ಬರುತ್ತಿದ್ದರು ಹಳೆಯ ಮನೆಯ ಬಳಿಯಿದ್ದ ಪರಿಚಿತರು ಬರುತ್ತಿದ್ದರು ಹಾಗಾಗಿ ಗುರುವಾರ ನಾವು ಸಂಜೆ ತುಂಬಾ ಬ್ಯುಸಿ ಆಗಿಬಿಡುತ್ತಿದ್ದೆವು. ಅದೇ ರಸ್ತೆಯ ಕೊನೆಯಲ್ಲಿ ಬಸ್ ಡಿಪೋ ಇದುದರಿಂದ ಬಹಳಷ್ಟು ಬಸ್ ಓಡಾಟ ಸದಾ ಇರುತ್ತಿತ್ತು .ಹೀಗಾಗಿ ಬಾಲ್ಕನಿ ಸದಾ ಧೂಳಾಗಿಯೇ ಇರುತ್ತಿತ್ತು . ಆಗ ಪುಟ್ಟ ಮಗುವಾಗಿದ್ದ ನನ್ನ ತಂಗಿಯ ಮಗ ನಿಶ್ಚಯ್ ಗಂತೂ ಓಡಾಡುತ್ತಿದ್ದ ಆ ಕೆಂಪು ಬಸ್ ಗಳನ್ನು ನೋಡುವುದೇ ಒಂದು ಖುಷಿ.ಈ ಮನೆಯಲ್ಲಿ ಇದ್ದಾಗಲೇ ನಮ್ಮ ಅತ್ತೆ ಮಾವ ಸಹ ಬಂದು ಒಂದು ವಾರ ಇದ್ದರು ನಮ್ಮ ಅತ್ತೆಯ ತಾಯಿಯ ಮನೆ ಸಕಲೇಶಪುರದ ಹತ್ತಿರದ ಊರೇ ಆದ್ದರಿಂದ ಅಲ್ಲಿಗೂ ಒಮ್ಮೆ ಹೋಗಿ ಬಂದರು. ನನ್ನ ಮೈದುನ ಹಾಗೂ ಓರಗಿತ್ತಿ ಸಹ ಒಮ್ಮೆ ಇಲ್ಲಿಗೆ ಬಂದಿದ್ದರು. ಅವರೊಂದಿಗೆ ನಾವು ಹೊರನಾಡು ಹೋಗಿ ದೇವಿ ದರ್ಶನ ಮಾಡಿ ಬಂದೆವು ದಿನವೇ ಐ ಆರ್ ಡಿ ಎ ಬಿಲ್ ಸಹ ಮಂಡಿಸಲ್ಪಟ್ಟು ಇದ್ದಕ್ಕಿದ್ದಂತೆ ಆ ದಿನ ಸ್ಟ್ರೈಕ್ ಕೊಟ್ಟಿದ್ದರು ಹಾಗಾಗಿ ರಜೆಯ ಬದಲು ಸ್ಟ್ರೈಕ್ ನಲ್ಲಿ ಭಾಗವಹಿಸುವ ಹಾಗೆ ಆಯಿತು. ಏನಿದು ಐಆರ್‌ಡಿಎ ಬಿಲ್? ಇದುವರೆಗೆ ಏಕಸ್ವಾಮ್ಯವಾಗಿ ಇದ್ದ ಭಾರತೀಯ ಜೀವವೀಮನಿಗಮ ಮತ್ತು ವಿಮಾ ವಲಯ ಈಗ ಒಂದು ಪ್ರಾಧಿಕಾರದ ಮಿತಿಗೆ ಒಳಪಟ್ಟು ಹೊರಗಿನ ಸಂಸ್ಥೆಗಳು ಸಹ ಜೀವವಿಮ ವಹಿವಾಟು ನಡೆಸಲು ಅರ್ಹವಾಗುತ್ತಿದ್ದವು. ಭಾರತೀಯ ಜೀವ ವಿಮಾ ನಿಗಮದ ಸಾರ್ವಭೌಮತ್ವಕ್ಕೆ ಉಂಟಾಯಿತು. IRDAI ಎನ್ನುವುದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವಾಯತ್ತ ಮತ್ತು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಮಾ ಕ್ಷೇತ್ರವನ್ನು (Insurance Sector) ನಿಯಂತ್ರಿಸುವ ಮತ್ತು ಅಭಿವೃದ್ಧಿಪಡಿಸುವ ಸರ್ವೋಚ್ಚ ಸಂಸ್ಥೆಯಾಗಿದೆ.ಇದನ್ನು 1999 ರಲ್ಲಿ ‘IRDA ಕಾಯ್ದೆ’ಯ ಅಡಿಯಲ್ಲಿ ರಚಿಸಲಾಯಿತು.ಮಲ್ಹೋತ್ರಾ ಸಮಿತಿಯ ಶಿಫಾರಸಿನ ಮೇರೆಗೆ IRDAI ಅಸ್ತಿತ್ವಕ್ಕೆ ಬಂದಿತು.ಕೇಂದ್ರ ಕಚೇರಿ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿದೆ. IRDAI ಸ್ಥಾಪನೆಯ ಹಿಂದೆ ಪ್ರಮುಖವಾಗಿ ಮೂರು ಉದ್ದೇಶಗಳಿವೆ:ವಿಮಾದಾರರ ಹಿತರಕ್ಷಣೆ: ವಿಮೆ ಮಾಡಿಸಿದ ಗ್ರಾಹಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡುವುದು.ಕ್ಷೇತ್ರದ ನಿಯಂತ್ರಣ: ವಿಮಾ ಕಂಪನಿಗಳು ಸರಿಯಾದ ನಿಯಮಗಳನ್ನು ಪಾಲಿಸುತ್ತಿವೆಯೇ ಎಂದು ಮೇಲ್ವಿಚಾರಣೆ ಮಾಡುವುದು.ಅಭಿವೃದ್ಧಿ: ವಿಮಾ ಕ್ಷೇತ್ರವು ವ್ಯವಸ್ಥಿತವಾಗಿ ಬೆಳೆಯಲು ಪೂರಕವಾದ ವಾತಾವರಣ ನಿರ್ಮಿಸುವುದು.IRDAI ಈ ಕೆಳಗಿನ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ:ಪರವಾನಗಿ ನೀಡುವುದು: ಹೊಸ ವಿಮಾ ಕಂಪನಿಗಳಿಗೆ ವ್ಯವಹಾರ ನಡೆಸಲು ಪರವಾನಗಿ (License) ನೀಡುವುದು ಮತ್ತು ಅದನ್ನು ನವೀಕರಿಸುವುದು.ನಿಯಮಗಳ ರೂಪಣೆ: ವಿಮಾ ಪಾಲಿಸಿಗಳು ಹೇಗೆ ಇರಬೇಕು, ಪ್ರೀಮಿಯಂ ದರಗಳು ಮತ್ತು ಕ್ಲೈಮ್ (Claim) ಇತ್ಯರ್ಥದ ಬಗ್ಗೆ ನಿಯಮಗಳನ್ನು ರೂಪಿಸುವುದು.ದೂರುಗಳ ಪರಿಹಾರ: ವಿಮಾ ಕಂಪನಿ ಮತ್ತು ಗ್ರಾಹಕರ ನಡುವೆ ವಿವಾದ ಉಂಟಾದಾಗ ಅದನ್ನು ಬಗೆಹರಿಸಲು ವೇದಿಕೆ ಕಲ್ಪಿಸುವುದು.ಬಂಡವಾಳದ ಮೇಲ್ವಿಚಾರಣೆ: ವಿಮಾ ಕಂಪನಿಗಳು ಗ್ರಾಹಕರ ಹಣವನ್ನು ಹಿಂತಿರುಗಿಸಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯ ಹೊಂದಿವೆಯೇ ಎಂದು ಪರಿಶೀಲಿಸುವುದು.ತರಬೇತಿ ಮತ್ತು ಶಿಕ್ಷಣ: ವಿಮಾ ಏಜೆಂಟ್‌ಗಳಿಗೆ ಬೇಕಾದ ಅರ್ಹತೆ ಮತ್ತು ತರಬೇತಿಯ ಮಾನದಂಡಗಳನ್ನು ನಿಗದಿಪಡಿಸುವುದು. ಅಂದಿನ ದಿನಗಳಲ್ಲಿ ಈ ವಿದ್ಯಮಾನಗಳು ತುಂಬಾ ಆತಂಕವನ್ನು ಹುಟ್ಟಿಸಿದ್ದು ಮುಂದಿನ ದಿನಗಳು ಹೇಗೋ ಏನೋ ಎಂಬ ದಿಗಿಲು ಸಹ ಉಂಟಾಗಿತ್ತು. ಆದರೆ ಜೀವ ವಿಮಾನ ನಿಗಮ ತನ್ನ ಸಮರ್ಥ ಆರ್ಥಿಕ ನೀತಿ ಹಾಗೂ ದಕ್ಷ ಆಡಳಿತ ವಿಧಾನಗಳಿಂದ ಈ ಹೊರಗಿನ ಸ್ಪರ್ಧೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಹೆಮ್ಮೆಯಿಂದ ಹೇಳಬಹುದು. ಜೂನ್ 1999ರಲ್ಲಿ ನನ್ನ ತಂಗಿ ಪ್ರಯಾಣ ವಿವಾಹ ಆಯಿತು. 15 ದಿನಗಳ ಕಾಲ ರಜೆ ತೆಗೆದುಕೊಂಡು ಹೋಗಿ ಮದುವೆ ಮುಗಿಸಿ ಬಂದಾಯಿತು. ಮದುವೆ ತಿಂಡಿಗಳನ್ನು ಇಟ್ಟಿದ್ದ ಬ್ಯಾಗ್ ಸಕಲೇಶಪುರಕ್ಕೆ ಬರುವಾಗ ಮರೆತು ಬಂದಿದ್ದೆವು. ರವೀಶ್ ಸಹ ಅಂದು ನನ್ನ ಜೊತೆಗೆ ಬಂದುಬಿಟ್ಟಿದ್ದರು ಇನ್ನು ತಿಂಡಿಗಳು ಮಿಸ್ ಆಗುತ್ತದೆ ಎಂದು ಅಷ್ಟು ಆಯಾಸವಾಗಿದ್ದರು ಸಹ ಮಧ್ಯಾಹ್ನವೇ ನಮ್ಮ ತಂದೆ ಅದನ್ನೆಲ್ಲ ತೆಗೆದುಕೊಂಡು ಸಕಲೇಶಪುರಕ್ಕೆ ಬಂದಿದ್ದರು. ಅದನ್ನು ನೆನೆಸಿಕೊಂಡರೆ ಈಗಲೂ ಕಣ್ಣು ತುಂಬಿ ಬರುತ್ತದೆ ಆ ಪ್ರೀತಿಗೆ ಯಾವುದು ತಾನೇ ಸಾಟಿಯಾದೀತು?ಅಣ್ಣ ಅಲ್ಲಿದ್ದಾಗಲೇ ನವ ವಿವಾಹಿತ ಜೋಡಿಯು ಸಹ ಸಕಲೇಶಪುರಕ್ಕೆ ಬಂದಿದ್ದರು ಅಲ್ಲಿ ಸುತ್ತ ಮುತ್ತಲಿನ ಹಾರ್ಲೆ ಎಸ್ಟೇಟ್ ಟೀ ಫ್ಯಾಕ್ಟರಿ ಅವೆಲ್ಲವನ್ನು ಆಗ ಹೋಗಿ ನೋಡಿಕೊಂಡು ಬಂದೆವು. ಸುಲೋಚನಾ ಸಹ ನಮ್ಮೊಂದಿಗೆ ಆಗ ಬಂದಿದ್ದರು.ಮದ್ದೂರಿನಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಇದ್ದ ನನ್ನ ತಂಗಿ ಔಅಯಳಿಗೆ ಮದುವೆಯ ನಂತರ ಹುಣಸೂರಿಗೆ ವರ್ಗ ಆಯಿತು. ಅವಳ ಪತಿ ಪ್ರಸನ್ನ ಅವರು ಸಹ ಜೀವವಿಮನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕೆಆರ್ ನಗರಕ್ಕೆ ಸೇರಿದಂತಿದ್ದ ಬೆಟ್ಟದ ಪುರದಲ್ಲಿ ಇದ್ದರು. ಅವರು ನಮಗೆ ಬ್ಯಾಚ್ ನ ಹಿಂದಿನ ಮೊದಲ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿ ಸಹಾಯಕರಾಗಿ ಆಯ್ಕೆಯಾದವರು ನಂತರ ಅಭಿವೃದ್ಧಿ ಅಧಿಕಾರಿಯಾಗಿ ಬದಲಾವಣೆ ತೆಗೆದುಕೊಂಡಿದ್ದರು .ಇಬ್ಬರಿಗೂ ಮಧ್ಯದ ಜಾಗವಾದ ಪಿರಿಯಾಪಟ್ಟಣದಲ್ಲಿ ಮನೆ ಮಾಡಿದ್ದರು.ಅಲ್ಲಿ ಕಚೇರಿ ಸೇವಾ ವಿಭಾಗಕ್ಕೆ ನನಗೆ ಬದಲಾವಣೆ ಸಿಕ್ಕಿತು ಆಗ ಹಿಂದಿ ದಿನಾಚರಣೆಯ ಸಂದರ್ಭ ಬಂದಿತ್ತು. ಆಗ ಸುಮಾರು ಸ್ಪರ್ಧೆಗಳನ್ನು ಏರ್ಪಡಿಸಿ ಎಲ್ಲರೂ ಭಾಗವಹಿಸಲು ಅನುಕೂಲವಾಗುವ ಹಾಗೆ ಒಂದು ಅಂತ್ಯಾಕ್ಷರಿ ಸ್ಪರ್ಧೆಯನ್ನು ಸಹ ಏರ್ಪಡಿಸಿದೆವು ನಾನು ಮತ್ತು ಸುಲೋಚನಾ ಸೇರಿ ಅದನ್ನು ನಡೆಸಿಕೊಟ್ಟವು ಅಲ್ಲಿ ಎಲ್ಲರಿಗೂ ಅದು ತುಂಬಾ ಇಷ್ಟವಾಗಿತ್ತು. ಹೀಗೆ ಒಂದು ಕನ್ನಡದ ಅಂತ್ಯಾಕ್ಷರಿ ಮಾಡಿ ಎಂದು ಹೇಳಿ ಅಲ್ಲಿನ ಅಭಿವೃದ್ಧಿ ಅಧಿಕಾರಿಗಳು ಬಹುಮಾನದ ಪ್ರಾಯೋಜಕತ್ವ ವಹಿಸಿಕೊಂಡರು. ಆಗೊಮ್ಮೆ ಕನ್ನಡ ಅಂತ್ಯಾಕ್ಷರಿಯನ್ನು ಸಹ ನಡೆಸಿಕೊಟ್ಟಿದ್ದೆವು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು ಅವುಗಳಿಗೆ ಬಹುಮಾನಗಳನ್ನು ಆರಿಸಿ ತರುವುದು ಇವೆಲ್ಲವೂ ತುಂಬಾ ಖುಷಿ ಕೊಟ್ಟ ಕೆಲಸ. ನನಗೆ ಸಹಾಯಕ ಆಗಿದ್ದ ರಘು ಅವರು ಅಲ್ಲಿನ ಅಂಗಡಿಗಳ ಮಾಲೀಕರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಒಳ್ಳೆಯ ಚೌಕಾಸಿ ನಡೆಸಿ ಗುಣಮಟ್ಟದ ಸಾಮಾನುಗಳನ್ನು ಆದಷ್ಟು ರಿಯಾಯಿತಿಯಲ್ಲಿ ಕೊಂಡು ಬರುತ್ತಿದ್ದೆವು.ನಾವು ಹೋಗಿದ್ದಾಗ ಉಮೇಶ್ ಭಟ್ ಎನ್ನುವವರು ಅಲ್ಲಿನ ಉಪ ಶಾಖಾಧಿಕಾರಿಗಳಾಗಿದ್ದವು ಅವರು ನಟಿ ವಿನಯ ಭಟ್ ಅವರ ಕುಟುಂಬ ಸ್ನೇಹಿತರು ಒಮ್ಮೆ ಸಕಲೇಶಪುರದ ಬಳಿ ಶೂಟಿಂಗ್ ಗೆ ಬಂದಿದ್ದ ವಿನಯ ಭಟ್ ಅವರು ಅವರ ಮನೆಗೆ ಬಂದಿದ್ದರಂತೆ. ಆಗ ನಮ್ಮ ಶಾಖೆಯ ಎಲ್ಲರೂ ಅವರ ಮನೆಗೆ ಹೋಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದರಂತೆ ನಾನು ಸುಲೋಚನಾ ಆಗ ರಜೆ ಹಾಕಿ ಮೈಸೂರಿಗೆ ಬಂದು ಬಿಟ್ಟಿದ್ದೆವು. ಹಾಗಾಗಿ ನಮಗೆ ಆ ಭೇಟಿ ಸಾಧ್ಯವಾಗಲಿಲ್ಲ ನಮಗೆ ಪುಸ್ತಕದ ಮೇಲಿನ ಪ್ರೀತಿ ನೋಡಿ ಉಮೇಶ್ ಭಟ್ ಅವರು ಹಸ್ತ ಸಾಮುದ್ರಿಕೆಯ ಬಗ್ಗೆ ಇದ್ದ ಒಂದು ಇಂಗ್ಲಿಷ್ ಪುಸ್ತಕವನ್ನು ನಮಗೆ ಅವರು ವರ್ಗವಾಗಿ ಹೋಗುವಾಗ ಉಡುಗೊರೆಯಾಗಿ ಕೊಟ್ಟಿದ್ದರು. ಅವರು ಹೋದ ನಂತರ ಮೈಸೂರಿನ ಬ್ರಾಂಚ್ ಒಂದರಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದ ರಾಜೇಂದ್ರ ಪ್ರಸಾದ್ ಎನ್ನುವವರು ಉಪಶಾಖಾಧಿಕಾರಿಗಳಾಗಿ ಬಂದಿದ್ದರು. ನಾವು ವಾಪಸ್ ಮನೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ರವೀಶ್ ಅವರನ್ನು ಕರೆದುಕೊಂಡು ಹೋಗಿ ಸಕಲೇಶಪುರದ ವಿಶೇಷವಾದ ಕಾಫಿ ಬೊಡ್ಡೆಯ ಅಲಂಕಾರಿಕ ಸಾಮಗ್ರಿಗಳನ್ನು ಕೊಳ್ಳಲು ಸಹಾಯ ಮಾಡಿದ್ದರು. ಅವುಗಳಲ್ಲಿ ಒಂದು ಈಗಲೂ ನಮ್ಮ ಮನೆಯಲ್ಲಿ ಇದೆ ಸಕಲೇಶಪುರದಲ್ಲಿ ಕೆಲಸ ಮಾಡಿದ ದಿನಗಳ ನೆನಪಿನ ಕುರುಹಾಗಿ. ಛಾಯಾ ಮತ್ತು ಪ್ರಸನ್ನ ನಿರ್ಮಲ ಟ್ರಾವೆಲ್ಸ್ ನ ಮಧ್ಯ ಇಂಡಿಯಾ ಪ್ರವಾಸಕ್ಕೆ ಹೋಗಲು ಯೋಜನೆ ಮಾಡಿದರು. ನಮ್ಮ ತಂದೆ ತಾಯಿ ಹಾಗೂ ಪ್ರಸನ್ನ ಅವರ ತಂದೆ ತಾಯಿ ಅವರುಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇತ್ತು ನಮಗೂ ಹೇಗೂ ಎಲ್ ಟಿ ಸಿ ದೊರೆಯುತ್ತಿದ್ದರಿಂದ ನಾನು ಮತ್ತು ರವೀಶ್ ಸಹ ಹೊರಡಲು ನಿಶ್ಚಯಿಸಿದೆವು. ಭಾರತೀಯ ಜೀವವಿಮಾನ ನಿಗಮದಲ್ಲೇ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರಸನ್ನ ಅವರ ಅಣ್ಣ ಪ್ರಭಾಕರ್ ಹಾಗೂ ಅವರ ಪತ್ನಿ ಶಾಮಲಾ ಮತ್ತು ಮಗಳು ಪ್ರೇರಣಾ ಸಹ ನಮ್ಮ ಜೊತೆಗೆ ಸೇರಿಕೊಂಡರು. ಹೀಗೆ ಹನ್ನೆರಡು ಜನಗಳ ನಮ್ಮ ಗುಂಪು ಮಂಗಳೂರಿನಿಂದ ಹೊರಟ ಆ ಪ್ರವಾಸದಲ್ಲಿ ಸೇರಿದೆವು ತುಂಬಾ ಚೆನ್ನಾಗಿ ನಡೆದ ಪ್ರವಾಸ ಈಗಲೂ ಒಂದು ಸವಿ ನೆನಪು. ನಾವು ಸಕಲೇಶಪುರದಿಂದಲೇ ಮಂಗಳೂರಿಗೆ ಹೋಗಿದ್ದೆವು ಮತ್ತು ಮಂಗಳೂರಿನಿಂದಲೇ ಮತ್ತೆ ವಾಪಸ್ಸಾದೆವು. ಅವರೆಲ್ಲ ಹೊರಡುವಾಗ ಮಂಗಳೂರಿಗೆ ಬಂದಿದ್ದರು. ವಾಪಸ್ ಆಗುವಾಗ ಹುಬ್ಬಳ್ಳಿಯಿಂದಲೇ ಮೈಸೂರಿಗೆ ವಾಪಸ್ ಹೋದರು. ನನ್ನ ಕಡೆಯ ತಂಗಿ ವೈಶಾಲಿ ಮತ್ತು ಮುರಳಿ ಮಗು ಚಿಕ್ಕವನಿದ್ದುದರಿಂದ ಬರಿ ಮಂಗಳೂರು ಪ್ರವಾಸಕ್ಕೆ ಮಾತ್ರ ಜೊತೆಯಾಗಿ ನಂತರ ಮೈಸೂರಿಗೆ ವಾಪಸ್ ಆದರು. ಹಾಗೆ ಹೀಗೆ ಎನ್ನುವಂತೆ ದಿನಗಳು ಕಳೆದು ಮುಂದಿನ ಪದೋನ್ನತಿಗಳ ಸಮಯ ಬಂದೇ ಬಿಟ್ಟಿತು. ಆ ಬಾರಿ ಅದು ತಡವಾಗಿ ಮಾರ್ಚ್ ತಿಂಗಳ ತನಕ ಎಳೆದುಕೊಂಡು ಹೋಗಿದ್ದು. ಬಹಳ ಕಾಲದಿಂದ ನಿರೀಕ್ಷೆ ಇದ್ದ ವರ್ಗಾವಣೆ ಪಟ್ಟಿ ಪ್ರಕಟವಾಗಿತ್ತು ನನಗೆ ನಂಜನಗೂಡಿಗೆ ಸಿಕ್ಕಿತ್ತು ಸ್ವಲ್ಪವೇ ಅಂತರದಿಂದ ಸುಲೋಚನಾ ಅವರಿಗೆ ನಂಜನಗೂಡು ತಪ್ಪಿ ಹೋಗಿ ಚಾಮರಾಜನಗರಕ್ಕೆ ವರ್ಗಾವಣೆ ಸಿಕ್ಕಿತು. ಓಡಾಡಬಹುದಾಗಿತ್ತು ಅವರ ಮನೆ ನಂಜನಗೂಡಿನಲ್ಲಿ ಇದ್ದುದರಿಂದ. ಸ್ವಲ್ಪ ಸಮಾಧಾನ ಅಷ್ಟೇ. ಆದರೆ ಮತ್ತೊಂದು ಸಮಸ್ಯೆ ಎದುರಾಗಿತ್ತು.ನಾವಿದ್ದ ಮನೆಯ ಮಾಲೀಕ ತುಂಬಾ ಸಾಲದ ಸುಳಿಗಳಿಗೆ ಸಿಕ್ಕಿಕೊಂಡು ಮನೆ ಕೋರ್ಟ್ ಆದೇಶದಲ್ಲಿ ಇತ್ತು. ನಾವು ಕೊಟ್ಟಿದ್ದ ಮುಂಗಡ ಹಣ 15000 ವಾಪಸ್ ಮಾಡುವ ಸ್ಥಿತಿಯಲ್ಲಿ ಆತ ಇರಲಿಲ್ಲ .ಆದರೆ ನಾವು ಮನೆಯನ್ನು ಬಿಡಲೇಬೇಕಿತ್ತು. ಕೆಲವರು ಕೊಟ್ಟ ಸಲಹೆಯಂತೆ ಒಂದೆರಡು ಹಳೆಯ ಸಾಮಾನುಗಳನ್ನು ಅಲ್ಲಿಯೇ ಬಿಟ್ಟು ಮನೆಯ ಬೀಗವನ್ನು ಸಕಲೇಶಪುರದಲ್ಲೇ ಇದ್ದ ರವೀಶ್ ಅವರ ಊರಿನವರೇ ಆದ ಸತ್ಯ ಮತ್ತು ಮೋಹನ್ ಅವರಿಗೆ ಕೊಟ್ಟು ಬಂದೆವು. ಆ ಕಾಲಕ್ಕೆ ೧೫೦೦೦ ಸಣ್ಣ ಮೊತ್ತವೇನಲ್ಲ. ವಾಪಸ್ಸು ಬಾರದಿದ್ದರೆ ಹೇಗಪ್ಪಾ ಅಂತಲೂ ಚಿಂತೆ. ಆದರೆ ನಮ್ಮ ತಂದೆ ಮಾತ್ರ ಭರವಸೆ ಇಟ್ಟುಕೊಂಡು ಹೇಳುತ್ತಿದ್ದರು ಕಷ್ಟಪಟ್ಟು ದುಡಿದ ಹಣ ಖಂಡಿತ ವಾಪಸ್ ಬಂದೆ ಬರುತ್ತದೆ ಎಂದು ಅವರ ಆಶೀರ್ವಾದದಂತೆ ಒಂದೆರಡು ತಿಂಗಳ ಬಳಿಕ ಆ ಮನೆಯನ್ನು ಬೇರೊಬ್ಬರು ಕೊಂಡುಕೊಂಡು ಮುಂಗಡ ಹಣ ವಾಪಸ್ ಕೊಟ್ಟು ಕೀ ಪಡೆದುಕೊಂಡರಂತೆ. ಫೋನ್ ಮಾಡಿ ತಿಳಿಸಿದ ಮೇಲೆ ರವೀಶ್ ಅವರು ಹೋಗಿ ಹಣ ತೆಗೆದುಕೊಂಡು ಬಂದರು ಮನಸ್ಸಿಗೆ ಸ್ವಲ್ಪ ನಿರಾಳವಾಯಿತು. ಮೊದಲು ನಾವಿದ್ದ ಮನೆ ಕಟ್ಟಿದ್ದಾಗ ವಾರ್ಡ್ರೋಬ್ ಕೆಲಸಗಳನ್ನು ಮಾಡಿರಲಿಲ್ಲ ಹೀಗಾಗಿ ನಾವು ವಾಪಸ್ ಬರುವಾಗ ಮತ್ತೆ ಮನೆಗೆ ಪೇಂಟ್ ಮಾಡಿಸಿ ವಾರ್ಡ್ರೋಬ್ ಗಳನ್ನು ಮಾಡಿಸಿಕೊಂಡು ಬಂದೆವು..(ಮುಂದಿನವಾರಕ್ಕೆ) ಸುಜಾತಾ ರವೀಶ್






