ಎಮ್ಮಾರ್ಕೆ ಅವರ ಗಜಲ್
ಕಾವ್ಯಸಂಗಾತಿ ಎಮ್ಮಾರ್ಕೆ ಅವರ ಗಜಲ್ ಬೋಳುಮರವೂ ಭರವಸೆ ತೋರುತಿದೆ ಈಗಚಿಗುರೆಲೆ ಹೊಸತು ಸಂದೇಶ ಸಾರುತಿದೆ ಈಗ ಖಾಲಿ ಕೊಂಬೆ ಮೇಲೀಗ ಕೋಗಿಲೆ ದರ್ಬಾರುಕುಹೂ ಕುಹೂ ಕೂಗೋ ರಾಗ ಕೇಳುತಿದೆ ಈಗ ನೋವು-ನಲಿವುಗಳಿದ್ದಾಗಲೇ ಬಾಳಿಗೊಂದರ್ಥಬೇವು ಬೆಲ್ಲ ರುಚಿಯ ಜಿಹ್ವೆ ನೋಡುತಿದೆ ಈಗ ಸೃಷ್ಠಿ ತಾ ಸೊಬಗು ತೋರೇ ಅದೆಂಥ ಗಾರುಡಿಕ್ರೋಧಿನಾಮ ಘಳಿಗೆ ಶುಭ ಕೋರುತಿದೆ ಈಗ ಕುಂಬಾರನಿಗೆ ಯುಗಾದಿಯೇ ಹೊಸ ವರ್ಷವುರತ್ನಪಕ್ಷಿಯೇ ಕಣ್ಣ ಮುಂದಣ ಹಾರುತಿದೆ ಈಗ ಎಮ್ಮಾರ್ಕೆ
ಎಮ್ಮಾರ್ಕೆ ಅವರ ಗಜಲ್ Read Post »









