ಗಝಲ್
ಗಝಲ್ ನೂರುಲ್ಲಾ ತ್ಯಾಮಗೊಂಡ್ಲು ನಿನ್ನ ಶಹರಿನಲಿ ಬೆಳಕಿಗೆ ಕಾಲು ಮೂಡಿದಾಗ ನೀನಿದ್ದೆಆ ಬೃಂದಾವನದಲಿ ದುಂಬಿ ಮಕರಂದ ಹುಡುಕುವಾಗ ನೀನಿದ್ದೆ ಕಣ್ಣ ಕೊಂಬೆಯ ಮೇಲೆ ನಕ್ಷತ್ರ ಮಿನುಗುವ ಹೊತ್ತುಭರವಸೆಯ ಕಿರಣವೊಂದು ರೆಪ್ಪೆ ಮೇಲೆ ಹರಿದಾಗ ನೀನಿದ್ದೆ ಯಾವುದೊ ವಿಳಾಸವಿಲ್ಲದ ದಾರಿಯಲಿ ಕಾಲುಗಳು ಎಡವಿದವು ನಿಜಆದರೆ ನೀ ಹೊರಳಿ ಹೋಗಿದ್ದ ದಾರಿಯಲಿ ಅತ್ತರು ಘಮಿಸಿದಾಗ ನೀನಿದ್ದೆ ಯಾವುದದು ಮರೆಮಾಚುವ ವಚನ ಕಾಡಿತ್ತೊ ಅರಿಯೆಆದರೂ ನಿನ್ನ ಆ ಮರೆಮಾಚಿಕೆ ವಿಫಲವಾದಾಗ ನೀನಿದ್ದೆ ಗೊತ್ತು ನಿರೀಕ್ಷೆಗಳೆಲ್ಲ ಹುಸಿಯಾಗದು ಎಂದೂ ‘ಸಾಘರ್’ಕಾಡುವಿಕೆಗೂ ಒಂದು ಮಿತಿಯಿದೆ ಅದು ಖಚಿತವಾದಾಗ ನೀನಿದ್ದೆ *******************************************









