ಗಜಲ್
ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************









