ನನ್ನೊಳಗೆ!

ನನ್ನೊಳಗೆ!

ಕನಸಿನೂರಿಂದ…. -ಕನಸಿನೂರಿನವ ಮತ್ತದೆ ದ್ವಂದ್ವ! ಚಿತ್ತಭಿತ್ತಿಯಲಿ ಸ್ಥಿರವಾಗಿ ಉಳಿದ ಅ ಮೊಗವನೆಲ್ಲಿ ಕಂಡೆ, ಪಡೆಯದೆಲೆ ಕಳೆದುಕೊಂಡೆ? ನೆನಪಿಸಿಕೊ ಹೃದಯ ಕವಾಟವೆ ಕಣ್ಣೊಳಗೆ ಬಿಂಬವಾಗಿ ಎದೆಯೊಳಗೆ ಕಂಬವಾಗಿ ನರನಾಡಿಗಳಲಿ ಜೀವ ಮಿಡಿತವಾಗಿ ನಿಂತಾ ಮೊಗವ ಎಲ್ಲಿ ಕಂಡೆ ಹೇಗೆ ಕಳೆದುಕೊಂಡೆ. ಮೊದಲ ನೋಟದಲೇನು ತುಂಬಿಕೊಂಡೆ ಆ ಮುದ್ದು ಮೊಗದ ನಕ್ಷತ್ರಗಳ ಕಣ್ಣುಗಳನೊ  ಅದರೊಳಗಿನ ಬೆಳಕನ್ನೊ? ಆ ಬಿರಿಯದೆ ಬಿಗಿದ ತುಟಿಗಳ ಹಿಂದಿನ ಮೌನವನೊ? ಬಹಳ ವರುಷಗಳ ಹಿಂದೆ ಆ ಮುಖವನ್ನು ಮೊದಲ ಬಾರಿಗೆ ನೋಡಿದೆ. ಅದೇಕೊ ಆ  ಮುಖ […]

ಕಾವ್ಯಯಾನ

ಗಝಲ್ ದೀಪಾಜಿ ಮನದಬಾಗಿಲ ಕದಲಿಸಿದರೆ ಏನರ್ಥ ಸಾಕಿ, ಒಳನುಸುಳುವ ಇಚ್ಛೆ ಇಲ್ಲದವರು ಬಯಲ ದಾಟಿ ಬರಬಾರದಿತ್ತು.. ಅಂಗಾತ ಮಲಗಿದ ರಸ್ತೆ ದಾಟಿ ಬಾಗಿಲ ವರೆಗೂ ಬಂದು ಕದತಟ್ಟದೆ ಹಿಂತಿರುಗುತ್ತೇನೆಂದರೆ ಏನರ್ಥ ಸಾಕಿ.. ಮೊಗ ನೋಡಿ ಮಾತನಾಡಲಾಗದವರು ಕಾರ್ಮೋಡದ ಮಧ್ಯದ ಕೊಲ್ಮಿಂಚಿನಂತ ಮಾತು ಆರಂಭಿಸಲು ಬರಬಾರದಿತ್ತು..ಬಿದಿಗೆ ಚಂದಿರನಂತೆ ಬಂದು ನಿಂತು ಕಾಯ್ದು,ಕದ ತೆರೆಯುವಾಗ ಬೆನ್ನುಮಾಡಿ ಹೊರಟರೆ ಏನರ್ಥ ಸಾಕಿ.. ಬೆರಳಿಗೆ ಬೆರಳ ಕಸಿಮಾಡಿದಾಗ ಹುಸಿ ಮುನಿಸಮಾಡಿ ಕೊಸರಾಡಲು ಬರಬಾರದಿತ್ತು.. ಮರುಳ ಮಾಡಿ ಕರುಳ ಹಿಂಡಿ,ಮಂಡಿ ಹಚ್ಚಿ ಕುಳಿತು ಬೆರಳ‌ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

 (ಶಿವಮೊಗ್ಗ ಜಿಲ್ಲೆ ಹಲವಾರು ಚಳವಳಿಗಳ ಉಗಮಸ್ಥಾನವಾಗಿದೆ. ಇವತ್ತಿಗೂ ಶಿವಮೊಗ್ಗ ಜಿಲ್ಲೆಯ ಜನರ ಮನಸ್ಸುಗಳು ಪ್ರಗತಿಪರವಾಗಿಯೇ ಆಲೋಚಿಸುತ್ತಿವೆ. ಈ ಪ್ರಗತಿಪರ ಮನಸ್ಸುಗಳ ಮೂಲ ಬೇರು ಜಿಲ್ಲೆಯಲ್ಲಿ ಹುಟ್ಟಿದ ಚಳವಳಿಗಳಲ್ಲಿ ಅಡಗಿದೆ. ಈ ಕುರಿತು “ ಶಿವಮೊಗ್ಗ ಜಿಲ್ಲೆಯ ಚಳವಳಿಗಳು” ಎಂಬ ಹೆಸರಿನಲ್ಲಿ ಡಾ.ಸಣ್ಣರಾಮರವರು ಸವಿಸ್ತಾರವಾಗಿ ಪತ್ರಿಕೆಗೆ ಬರೆಯಲಿದ್ದಾರೆ.) ಡಾ.ಸಣ್ಣರಾಮ ಭಾಗ-ಒಂದು.     ಮನುಷ್ಯ ವಿಕಾಸದ ಹಂತದಿಂದಲೇ ಒಬ್ಬ ಮತ್ತೊಬ್ಬನಂತಿಲ್ಲ, ಆಲೋಚನ ರೀತಿ, ಗ್ರಹಿಕೆ, ಪ್ರತಿಕ್ರಿಯೆ, ದೈಹಿಕ ಸ್ವರೂಪ, ಬಣ್ಣ ಹೀಗೆ ಎಲ್ಲಾ ಬಗೆಯಲ್ಲಿಯೂ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನತೆ ಇರುತ್ತದೆ. […]

ಲಹರಿ

ಮಳೆಯಲ್ಲಿ ನೆನೆದ ನೆನಪು ಪ್ರಮೀಳಾ ಎಸ್.ಪಿ. ” ಮಳೆ”… ಈ ಪದಕ್ಕೂ ಅದು ಸುರಿಯುವಾಗ ಕೊಡುವ ಅನುಭವಕ್ಕೂ ,ಪ್ರಕೃತಿಯಲ್ಲಿ ,ಉಂಟಾಗುವ ಬದಲಾವಣೆಗೂ ನಮ್ಮ ಬದುಕಿನಲ್ಲಿ ತರುವ ಸ್ಥಿತ್ಯಂತರಕ್ಕೂ ಹೇಳಲಾಗದ ಅವಿನಾಭಾವ ಸಂಬಂಧವಿದೆ.ಮಳೆ ಬರುತ್ತಿದೆ ಎಂದರೆ ಒಬ್ಬೊಬ್ಬರ ಯೋಚನಾ- ಲಹರಿ ಒಂದೊಂದು ರೀತಿ ಹರಿಯುತ್ತದೆ.ಹಿಂದೆಲ್ಲಾ ಹಳ್ಳಿಗಳಲ್ಲಿ ಮಳೆಗಾಲದ ಆರಂಭವಾಗುವ ಮುಂಚೆ ದನಕರುಗಳಿಗೆ ಹುಲ್ಲು ಸೊಪ್ಪು ಹೊಂದಿಸಿಕೊಂಡು;ಮನೆಗೆ ಸೌದೆ,ಬೆರಣಿ ಹಿತ್ತಲಿನಲ್ಲಿ ನೆನೆಯದ ಹಾಗೆ ಇಟ್ಟುಕೊಂಡು, ಹಪ್ಪಳ ಉಪ್ಪಿನಕಾಯಿ,ಹಿಟ್ಟು ಬೇಳೆ ಬೆಲ್ಲ ಕೂಡಿಟ್ಟುಕೊಂಡು,ಹೊಲಕ್ಕೆ ಗೊಬ್ಬರ ಚೆಲ್ಲಿ ,ಉಕ್ಕೆ ಪಾಕವಾಗಿಸಿ ಮಳೆಗಾಗಿ ಕಾಯುತ್ತಿದ್ದರು […]

ಕಾವ್ಯಯಾನ

ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ ಸಿಗುವ ಜಾಗ! ಮನೆಯಲ್ಲಿ ಮಕ್ಕಳು ನೋಡಿಯಾರು ಬೀದಿಯಲಿ ಜನ ನಕ್ಕಾರು! ಗುಡಿಯ ಪೂಜಾರಿದುರುಗುಟ್ಟಿಯಾನುಕಚೇರಿಯಲ್ಲಿ ನಗೆಗೆಆಹಾರವಾದೇನು! ಅದಕೆಯಾರೂ ನೋಡದ, ಯಾರಿಗೂಕಾಣದ ಏಕಾಂತದ ಜಾಗವೊಂದು ಬೇಕಿದೆಕಣ್ಣೀರ ಕಟ್ಟೆ ಒಡೆಯಲು.

ರಾಜ್ಯೋತ್ಸವದ ನೆಪದಲ್ಲೆರಡು ಮಾತು.

ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು  ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ:  ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೆÃಜಗೊಂಡಂತೆ ನಮಗೆ ಬಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ.ಇಂತಹ ನಿರಾಶಾದಾಯಕ  ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಇತ್ತೀಚೆಗೆ ನಡೆದ ಕಳಸಾಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ […]

ಚರ್ಚೆ

ಟಿಪ್ಪು ಸುಲ್ತಾನನ ಇತಿಹಾಸ ಪಠ್ಯದಿಂದ ತೆಗೆಯುವುದು ಎಷ್ಟು ಸರಿ ? ಡಾ.ಮಹಾಲಿಂಗ ಪೋಳ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಹಲವು ರಾಜ ಸಂಸ್ಥಾನಗಳ ಬೀಡಾಗಿತ್ತು.ಅವು ತಮ್ಮದೇಯಾದ ಗಡಿಯನ್ನು ಹೊಂದಿದ್ದವು.ತಮ್ಮ ಸಂಸ್ಥಾನದ ಗಡಿಯನ್ನು ವಿಸ್ತರಿಸಲಿಕ್ಕೆ ಪಕ್ಕದ ರಾಜ್ಯಗಳ ಮೇಲೆ ದಾಳಿ ಮಾಡುತಿದ್ದವು.ಅಲ್ಲದೇ ತಮ್ಮದೇಯಾದ ಸಂಸ್ಕೃತಿಯ ಪ್ರಸಾರಕ್ಕೆ ಕ್ರಮ ಕೈಗೊಳ್ಳುತ್ತಿದ್ದವು.ಇದು ರಾಜಪ್ರಭುತ್ವ ಚಾಲ್ತಿಯಾದಾಗಿನಿಂದ ಬಂದದ್ದು.ಟಿಪ್ಪು ಕೂಡ ಈ ನಾಡಿನಲ್ಲಿ ಒಂದು ಸಂಸ್ಥಾನದ ರಾಜನಾಗಿದ್ದವ.ಅವನ ಸಂಸ್ಥಾನದ ಪ್ರದೇಶ ವಿಸ್ತರಿಸಲು ಪಕ್ಕದ ರಾಜ ಸಂಸ್ಥಾನಗಳ ಮೇಲೆ ದಾಳಿ ಮಾಡಿದ ಸರಿ.ಹಲವು ವಿರೋಧಿಗಳನ್ನು ಕೊಂದ ಸರಿ.ಈ […]

ಸಣ್ಣಕಥೆ

ಪ್ರೀತಿ ಆನಂದ್ ಕೊರಟಿ ಆಫೀಸಿಗೆÉ ತಡವಾಗುತ್ತಿದೆ, ಬೇಗ ಹೋಗಬೇಕು…’ ಅವನು ತನ್ನ ಕೋಟನ್ನು ಭುಜದ ಮೇಲೆ ಹಾಕಿಕೊಳ್ಳುತ್ತಾ ಜೋರಾಗಿ ಹೇಳಿದ. ಮೆಟ್ಟಿಲುಗಳನ್ನು ಇಳಿದು ಮನೆಯಿಂದ ಹೊರಗೆ ಓಡುತ್ತಾ ಹೊರಟ. ಅವನು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಂತೆ, ಅವಳು ಓಡುತ್ತಾ ಮೆಟ್ಟಿಲಿಳಿದು ಬಂದಳು. ‘ತಡಿ, ತಡಿ….’ ಎಂದು ಕೂಗಿದಳು, ಆದರೆ ಅಷ್ಟರಲ್ಲಿ ಅವನು ಹೊರಟು ಹೋಗಿದ್ದ. ಅವಳ ಮುಖ ಮುದುರಿದ ಕಾಗದದಂತೆ ಆಯಿತು. ‘ಅವನು ಹೋಗುವಾಗ ನನಗೆ ಮುತ್ತಿಕ್ಕುವುದನ್ನು ಮರೆತ’ ತನಗೆ ಆದ ನೋವಿನಿಂದ ನಡುಗುವ ಧ್ವನಿಯಲ್ಲಿ ಪಿಸುಗುಟ್ಟಿದಳು. ಅವಳು […]

ಶಾನಿಯ ಡೆಸ್ಕಿನಿಂದ….

ಹನ್ನೆರಡು ರಾಶಿಯೊಳಗೊಂದು ರಾಶಿ ಚಂದ್ರಾವತಿ ಬಡ್ಡಡ್ಕ ಧನ ಲಾಭ, ಮಿತ್ರರಿಂದ ಸಂತಸ, ಮೇಲಧಿಕಾರಿಯಿಂದ ಪ್ರಶಂಸೆ – ಹೀಗೆ ಪತ್ರಿಕೆಗಳಲ್ಲಿ ಬರೆದಿರುವ ನನ್ನ ದಿನ ಭವಿಷ್ಯ ಓದಿ ನಾನೇದರೂ ನನ್ನ ದಿನವನ್ನು, ಆಹಾ! ಬಹಳ ಒಳ್ಳೆಯ ದಿನವೆಂದು ತುಂಬ ಸಂತೋಷ ಮತ್ತು ಸಮಾಧಾನದಿಂದ ಆರಂಭಿಸಿದೆನೆಂದಾದರೆ ಕೆಟ್ಟೆ. ಯಾಕೆಂದರೆ ಒಂದೇ ಒಂದು ದಿನವೂ ನನ್ನ ಭವಿಷ್ಯ ಸರಿ ಇರುವುದಿಲ್ಲ. ಧನಲಾಭ ಅಂತ ಬರೆದಿದ್ದ ದಿನ, ಇರೋ ದುಡ್ಡೆಲ್ಲ ಖರ್ಚಾಗುತ್ತದೆ. (ಬಹುಶಃ ನಿನ್ನಿಂದಾಗಿ ಇತರರಿಗೆ ಧನಲಾಭ ಎಂದಾಗಬೇಕೋ…) ಮಿತ್ರರಿಂದ ಸಂತರ ಎಂದಿದ್ದರೆ […]

Back To Top