ಅಂಕಣ ಬರಹ ಹಾಡು ಹಳೆಯದಾದರೇನು ಹಳೆಯ ಹಾಡುಗಳನ್ನು ಕೇಳುವಾಗಲೆಲ್ಲಾ ಎಂಥದೋ ಭಾವುಕತೆಗೆ ಒಳಗಾಗುವುದು, ಏನೋ ಒಂದು ರೀತಿ ಹೊಟ್ಟೆ ಚುಳ್ ಎನ್ನುವುದು, ಆ ಹಳೇ ದಿನಗಳ ನೆನಪುಗಳೆಲ್ಲಾ ಹಿಂದಿನ ಜನ್ಮದ ನೆನಪುಗಳೇನೋ ಎನ್ನುವಂತೆ ಕಾಡುವುದು… ಹೀಗೆಲ್ಲಾ ನನಗೆ ಮಾತ್ರ ಅನಿಸುತ್ತದಾ? ಬೇರೆಯವರಿಗೂ ಹೀಗೆಲ್ಲಾ ಆಗುತ್ತದಾ? ಗೊತ್ತಿಲ್ಲ. ಆದರೆ ನನಗೆ ಇದರ ಜೊತೆಗೆ ಇನ್ನೂ ವಿಚ್ ವಿಚಿತ್ರವಾಗೆಲ್ಲ ಏನೇನೋ ಅನ್ನಿಸುವುದಿದೆ. ಹಳೇ ಫೋಟೋಗಳನ್ನು ನೋಡುವಾಗ ಅದರಲ್ಲಿನ ಅಪರಿಚಿತರ ಬಗ್ಗೆ ಏನೇನೋ ಅನಿಸುತ್ತದೆ. ಅವರನ್ನು ನಾನೆಲ್ಲೋ ಭೇಟಿ ಮಾಡಿರುವೆ, ಮಾತಾಡಿಸಿರುವೆ, […]
ಅಂಕಣ ಬರಹ ಹೊಸ ದನಿ – ಹೊಸ ಬನಿ-೧೩. ಸಿದ್ಧಾಂತದ ಚೌಕಟ್ಟಿನಲ್ಲೇ ಉಳಿದೂ ಬೆಳಕಿಗೆ ತಡಕುವ ವಸಂತ ಬನ್ನಾಡಿ ಕವಿತೆಗಳು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪಾಠ ಕಲಿಸುತ್ತಿದ್ದ ಶ್ರೀ ವಸಂತ ಬನ್ನಾಡಿ ಅಲ್ಲಿನ ರಂಗ ಅಧ್ಯಯನ ಕೇಂದ್ರದ ಸಂಚಾಲಕರಾಗಿಯೂ ಪ್ರಸಿದ್ಧರು. ಶಬ್ದಗುಣ ಹೆಸರಿನ ಅರ್ಧವಾರ್ಷಿಕ ಸಾಹಿತ್ಯ ಪತ್ರಿಕೆಯನ್ನು ಅತ್ಯಂತ ಶ್ರೀಮಂತವಾಗಿ ಸಂಪಾದಿಸುತ್ತಿದ್ದವರು ಅವರು. ಶಬ್ದಗುಣ ಕೂಡ ಉಳಿದೆಲ್ಲ ಹಲವು ಸಾಹಿತ್ಯ ಪತ್ರಿಕೆಗಳ ಹಾಗೇ ಪ್ರಾರಂಭದಲ್ಲಿ ಅತಿ ಉತ್ಸಾಹ ತೋರುತ್ತಲೇ ಮೂರು ಸಂಚಿಕೆಗಳನ್ನು ಸಂಪಾದಿಸುವಷ್ಟರಲ್ಲೇ ಅಕಾಲಿಕ ಮರಣಕ್ಕೆ […]
ಸೋಜಿಗವಲ್ಲ ಈ ಜಗವು
ಕವಿತೆ ಸೋಜಿಗವಲ್ಲ ಈ ಜಗವು ರೇಷ್ಮಾ ಕಂದಕೂರ. ಸೋಜಿಗವಲ್ಲ ಈ ಜಗವುಪೇಚಿಗೆ ಸಿಲುಕದಿರಿ ನಿರ್ಲಕ್ಷ್ಯ ತನದಿಉನ್ನತ ವಿಚಾರ ಧಾರೆ ಅನುಕರಿಸಿ ಭಾಜನಾರಾಗುವೆವು ಸುಕೃತಿಗಳ ಔತಣಕೆಶೂದ್ರತನವು ಏಕೆ ತೃಣಮಾತ್ರಕೆಭದ್ರವಾಗಿರಿಸಿ ಕಾಮನೆಗಳ ಕೀಲಿಕೈ ತದ್ರೂಪ ಮೋಹಕೆ ಬಲಿಯಾಗದೇಬದ್ಧತೆಯಲಿರಲಿ ಜೀವಯಾನದ ನೌಕೆಅರಳಲು ಬಿಡಿ ಸುಕೋಮಲ ಮನ ಪುಷ್ಪವ ವ್ಯವಹಾರದಲಿ ವ್ಯವಧಾನದ ನಂಟಿರಲಿಬಿದ್ದವನು ಮರುಘಳಿಗೆ ಏಳಲೇಬೇಕುಕದ್ದ ಮನೋಭಾವ ನರಳುವುದು ಶುದ್ಧ ಸರಳತನಕೆ ಬೆಲೆ ಕೊಡಿಅರಿಯಿರಿ ವಿರಳವಾದುದು ಮಾನವ ಜನ್ಮಕಲಹ ಕೋಲಾಹಲದಲಿ ಬೇಡ ಕಾಲಹರಣದ ಕುರೂಪತೆ ನಡೆಬಡಿವಾರದ ಕೂಗು ಬೇಕೆಹಗೆತನದ ಮತ್ತಿನ ಸುತ್ತ ಚರ್ಮದ […]
ಗಝಲ್
ಮಕ್ಕಳಿಗಾಗಿ ಗಝಲ್ ಲಕ್ಷ್ಮೀದೇವಿ ಪತ್ತಾರ ಜೇಡ ತುಂಬಿದ ನಿಮ್ಮ ಮನದ ಮನೆಯ ಜಾಡಿಸಿ ಶುಭ್ರವಾಗಿಸುವ ಜಾಡು ನಾನಾಗುವೆ ಮಕ್ಕಳೆಪದೇಪದೇ ದೂಳು ತುಂಬಿದ ಜೀವನ ನಿಮ್ಮದಾಗಿಸಿ ಕೊಳ್ಳಬೇಡಿ ಮಕ್ಕಳೆ ನಿಮ್ಮ ಮಬ್ಬಾದ ಬಾಳ ಬಾನಿನಲ್ಲಿ ಬಣ್ಣ ಬಣ್ಣದ ತಾರೆಗಳನ್ನು ಇರಿಸಿ ಬೆಳಗಿಸುವೆ ಮತ್ತೆ ಮತ್ತೆ ಕಾರ್ಮೋಡಗಳ ಮುಂದಿರಿಸಿ ಕತ್ತಲಲ್ಲಿ ಮೂಳಗಬೇಡಿ ಮಕ್ಕಳೇ ನಿಂತ ನೀರಾಗಿ ಕೊಳೆಯುತ್ತಿರುವ ನಿಮ್ಮ ಬಾಳ ಹೊಳೆಗೆ ಮಳೆ ನಾನಾಗಿ ಚೈತನ್ಯ ಚಿಲುಮೆಯಾಗಿ ಹರಿವಂತೆ ಮಾಡುವೆಮತ್ತೆ ಜಡತೆಯ ಬಂಡೆ ಅಡ್ಡವಿರಿಸಿ ನಿಸ್ತೇಜರಾಗಿ ಕೂಡಬೇಡ ಮಕ್ಕಳೆ ಹಸಿರಾಡದ […]
ನಮ್ಮೂರ ಕೆರೆಯ ವೃತ್ತಾಂತ
ಪದ್ಯ/ಗದ್ಯ ನಮ್ಮೂರ ಕೆರೆಯ ವೃತ್ತಾಂತ ಡಾ. ಅರಕಲಗೂಡು ನೀಲಕಂಠ ಮೂರ್ತಿ ನಮ್ಮೂರ ವಿಶಾಲ ತಬ್ಬಿಅಲೆಯಲೆಯಾಗಿ ಹಬ್ಬಿಹರಿದಿದ್ದ ಸಾಗರದಂಥ ಕೆರೆಈಗ ಬಸ್ ನಿಲ್ದಾಣ! ಹೇಮಾವತಿಯ ಚಿತ್ತಹರಿಯುವ ಮುನ್ನನಮ್ಮೂರಿನತ್ತಆ ‘ದೊಡ್ಡ ಕೆರೆ’ಯೇಕೋಟೆ ಪೇಟೆಯಬಂಗಾರ ಜೀವಜಲ!ಅದೀಗ ನಮ್ಮೂರ ‘ಹೆಮ್ಮ’ಯಬಸ್ ಸ್ಟ್ಯಾಂಡ್! ಒಂದೊಮ್ಮೆ ಮೊಗೆಮೊಗೆದಷ್ಟೂಉಗ್ಗಿದ್ದ ನೀರು…ಎಂದೆಂದೂ ಬತ್ತಿ ಬರಡಾಗದೆನಿತ್ಯ ಹರಿದಿದ್ದ ತೇರು!ಶತಮಾನಗಳ ತಲೆಮಾರುಗಳಮೈ-ಮನ ತೊಳೆದಿದ್ದನೀರಡಿಕೆ ನಿರಂತರ ನೀಗಿದ್ದವರುಷ ವರುಷ ಗಜಗಾತ್ರಗಣೇಶ ಮೂರ್ತಿಗಳನೆಆಪೋಶಿಸಿದ್ದಆ ನೀರ ಮಹಾರಾಶಿಈಗಸೆಲೆಯೂ ಇಲ್ಲದ ಅಪರಂಜಿ –ಬರಡು!ಯಾರ ಚಿಂತನೆಯಅದೆಂಥ ಬೆರಗು!ಆ ನೀರ ಜೊತೆಜೊತೆಗೆಪ್ರತಿಫಲಿಸಿದ್ದಇನ್ನುಳಿದ ಕೆರೆಗಳೂ ಕೂಡಈಗ ನೆಲಸಮ…ಬರೀ ನೆನಪು! ಅಂದಿನ ಆ […]
ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ
ಲೇಖನ ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ ಡಾ. ಎಸ್.ಬಿ. ಬಸೆಟ್ಟಿ ಒಂದು ಶತಮಾನದ ಹಿಂದಿನ ಕಾಲ ಬ್ರಿಟಿಷ್ ಆಳ್ವಿಕೆಯ ಅತಿರೇಕಗಳಿಂದ ಇಡೀ ಭಾರತವೇ ರೋಸಿಹೋಗಿತ್ತು. ಕಳೆದ ಶತಮಾನದ ಪೂರ್ವಾರ್ಧದಲ್ಲಿ ಪ್ಲೇಗ್, ಕಾಲರಾ, ಸಿಡುಬು, ಸ್ಪಾನಿಶ್ ಪ್ಲೂ ಇತ್ಯಾದಿ ಸಾಂಕ್ರಾಮಿಕ ಸೋಂಕುಗಳು ಜಗತ್ತನ್ನು ಕಂಗೆಡಿಸಿದ್ದವು. ಪ್ಲೇಗ್, ಕಾಲರಾ, ಸಿಡುಬು ಆಗಾಗ ಬರುತ್ತಲೇ ಇದ್ದರೂ ಸ್ಪಾನಿಶ್ ಪ್ಲೂ ಮಾತ್ರ ೧೯೧೮-೧೯ ರ ವೇಳೆ ಒಮ್ಮೆಲೆ ವ್ಯಾಪಕವಾಗಿ ಹರಡಿತು. ಇದು ಹರಡಿದ್ದು ಒಂದನೇ ಮಹಾಯುದ್ಧದಲ್ಲಿ ಪಾಲ್ಗೊಂಡ […]
ಕನ್ನಡದ ದಿವ್ಯೋತ್ಸವ
ಕವಿತೆ ಕನ್ನಡದ ದಿವ್ಯೋತ್ಸವ ವೀಣಾ. ಎನ್. ರಾವ್ ಕನ್ನಡದಾ ಮನಗಳೆ ಎದ್ದು ನಿಲ್ಲಿಹರಿಸೋಣ ಅಮೃತದ ಸುಧೆಯನ್ನಿಲ್ಲಿಸಿರಿಗನ್ನಡದ ಶರಧಿಯೊಳಗಿನ ಮಾಧುರ್ಯಸವಿದು ನೋಡಲು ಬೇಕು ಔದಾರ್ಯ ! ಬೆನ್ನೀರ್ ಮುನ್ನೀರ್ ಪನ್ನೀರ ಸಿಂಚನಕೆಧ್ಯಾನಸ್ಥ ತುಷಾರ ಗಿರಿಯ ಸಿಂಚನಕೆಕನ್ನಡದಾ ಮಣ್ಣಲಿ ಚಿಗುರೊಡೆದಾ ಹಸಿರೇಶತಮಾನದ ಸಂಸ್ಕೃತಿಗೆ ನೀನಿದ್ದರೆ ಊಸಿರೇ ! ಮೈಲಿ ಮೈಲಿಗೂ ಕನ್ನಡದಾ ಶೈಲಿಯುಮೂಡಿದೆ, ಕೂಡಿದೆ ಪೃಥ್ವಿಯ ಕೈಯಲ್ಲಿಯುಮುಕುಟ ಮಣಿಯು ಎಂದೂ ನರ್ತಿಸುತ್ತಿರುವುದಲ್ಲಿಹೊನ್ನುಡಿಯ ಪಾಂಚಜನ್ಯ ಮೊಳಗುತಿಹುದಲ್ಲಿ ! ಮರೆಮಾಡದಿರು ಪರಕೀಯರೆದುರು ನಿನ್ನ ಕನ್ನಡಸರಳ ವಿರಳವಾಗಲು ಬಿಡದಿರು ನಿನ್ನ ಕನ್ನಡಕಾವ್ಯದ ಕಲೆಗಳಿಗೆ ರಸಸೃಷ್ಟಿ […]
ಗಝಲ್
ಗಝಲ್ ವತ್ಸಲಾ ಶ್ರೀಶ ಹೃದಯ ಶ್ರೀಮಂತನಲ್ಲ ಪ್ರೀತಿಯ ಮರಳಿಸದ ಸಾಲಗಾರನಾಗಿದ್ದೆ ನೀನುಕಾರಣಗಳ ಓರಣದಿ ಜೋಡಿಸುತ್ತಲೇ ದಾರಿ ಬದಲಿಸಿದ್ದೆ ನೀನು ತಾರೆಗಳನೇ ತಂದಿರಿಸಿದೆಯೆಂಬ ಭ್ರಮೆಯ ಬಾನಲಿ ವಿಹರಿಸುತಲಿದ್ದೆಕಲ್ಲು ಮುಳ್ಳಿನ ಬಯಲಲಿ ನಿಂತ ಸತ್ಯವನು ಕೊನೆಗೂ ತೋರಿಸಿದ್ದೆ ನೀನು ಕಲ್ಪನೆಯ ಕಣ್ಣಲ್ಲಿನ ಸುಂದರ ಚಿತ್ರಗಳು ಬದುಕ ರಂಗೋಲಿಯಾಗಲಿಲ್ಲರಂಗು ರಂಗಿನ ಕನಸುಗಳಿಗೆ ಕಪ್ಪುರಂಗನು ಎರಚಿ ಕೆಡಿಸಿದ್ದೆ ನೀನು ಪ್ರೇಮದ ಪರಿಚಯವಿರದ ಹೃದಯ ಮಧುರ ಭಾವಕ್ಕೆ ಸಿಲುಕಿ ಮಗುವಂತಾಗಿತ್ತಂದುಮುಗ್ಧ ಮನಕೆ ಪ್ರೀತಿಯನು ಬಣ್ಣದಾಟಿಕೆ ಮಾಡಿ ಮರುಳುಗೊಳಿಸಿದ್ದೆ ನೀನು ಮೋಸವ ಅಸಹಾಯಕತೆಯೆಂಬ ನೆಪದಿ ಶೃಂಗರಿಸಿ […]
ಕನಸುಗಳು ಖಾಸಗಿ
ಪುಸ್ತಕ ಪರಿಚಯ ಕನಸುಗಳು ಖಾಸಗಿ ಕತ್ತಲದಾರಿಯ ಸಂದಿಗೊಂದಿಗಳಲ್ಲಿ ಕರೆದೊಯ್ಯುವ ‘ಕನಸುಗಳು ಖಾಸಗಿ’ ಆಧುನಿಕ ಜಗತ್ತಿನ ಕರಾಳ ಮುಖಗಳನ್ನು ‘ಕನಸುಗಳು ಖಾಸಗಿ’ ಎಂಬ ತಮ್ಮ ಒಂಬತ್ತು ಕಥೆಗಳ ಸಂಕಲನದ ಮೂಲಕ ನರೇಂದ್ರ ಪೈಯವರು ಕಾಣಿಸಿಕೊಟ್ಟಿದ್ದಾರೆ.. ಇಲ್ಲಿರುವುದು ಕನಸುಗಳು ಅನ್ನುವುದಕ್ಕಿಂತ ಕಥೆಗಳನ್ನು ಓದುತ್ತಿರುವಾಗ ಕಣ್ಣ ಮುಂದೆ ರುದ್ರ ನರ್ತನ ಮಾಡುವ ದುಸ್ವಪ್ನಗಳು ಅನ್ನುವುದು ಹೆಚ್ಚು ಸೂಕ್ತ . ವೇಗದ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳು ತ್ತಿರುವ ಇಂದಿನ ಜಗತ್ತಿನಲ್ಲಿ ಸಂಬಂಧಗಳು ಛಿದ್ರಗೊಂಡಿವೆ, ಸ್ವಾರ್ಥ ಮೇರೆ ಮೀರಿದೆ, ಹಿಂಸೆ ಹದ್ದು ಮೀರಿದೆ, […]
ಕಾದಂಬರಿ ಕುರಿತು ಚೋಮನದುಡಿ. ಡಾ.ಶಿವರಾಮ ಕಾರಂತ ಭಾರತೀಯ ಸಾರಸ್ವತ ಲೋಕದಲ್ಲಿ ದಲಿತರು , ಅದರಲ್ಲಿಯೂ ಅಸ್ಪೃಶ್ಯರು ಎದುರಿಸುತಿದ್ದ ಸಾಮಾಜಿಕ ಅನ್ಯಾಯಗಳ ವಿರುದ್ಧ ಶಾಂತವಾಗಿಯೇ ಪ್ರಥಮ ಬಾರಿಗೆ ದನಿಯೆತ್ತಿದ ಸಾಮಾಜಿಕ ಕಾದಂಬರಿ ಹಾಗೂ ಮೊದಲ ದಲಿತ ಕಾದಂಬರಿ ಎಂದು ಗುರುತಿಸಲ್ಪಡುವ ಶಿವರಾಮ ಕಾರಂತರ “ಚೋಮನ ದುಡಿ” ನನ್ನ ನೆಚ್ಚಿನ ಕಾದಂಬರಿ. ಸ್ವಾತಂತ್ರ್ಯದ ತರುವಾಯ ಪ್ರಜಾಪ್ರಭುತ್ತದ ಕೋಟೆಯಲ್ಲಿ ಹಲವಾರು ಸಂವೇದನಶೀಲ ಬರಹಗಾರರು ದಲಿತ ಲೋಕದ ಒಳಹರಿವು ಕುರಿತು ಅನನ್ಯವು, ಅನುಪಮವೂ ಆದ ಕೃತಿಗಳು ಬಂದಿವೆ. ಆದರೆ ಸ್ವಾತಂತ್ರ್ಯ ಪೂರ್ವದಲ್ಲಿ, ಆಂಗ್ಲರ […]